ಕರ್ನಾಟಕ ವಿಧಾನ ಪರಿಷತ್ತಿನ ಸಚಿವಾಲಯದಲ್ಲಿ ನೇಮಕಾತಿ 2024 – KLC Karnataka Legislative Council Recruitment 2024

KLC Karnataka Legislative Council Recruitment 2024 : ಕರ್ನಾಟಕ ವಿಧಾನ ಪರಿಷತ್ತಿನ ಸಚಿವಾಲಯದಲ್ಲಿ ಅಗತ್ಯವಿರುವ ವಾಹನ ಚಾಲಕರು ಹಾಗೂ ಗ್ರೂಪ್-ಡಿ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಶೈಕ್ಷಣಿಕ ಅರ್ಹತೆ, ವಯೋಮಾನ, ವೇತನ, ಅರ್ಜಿ ಸಲ್ಲಿಕೆ ದಿನಾಂಕ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

KLC Karnataka Legislative Council Recruitment 2024 : Details of Vacancies

ಹುದ್ದೆ : ವಾಹನ ಚಾಲಕರು, ಗ್ರೂಪ್-ಡಿ (ದಲಾಯತ್/ಕಾವಲುಗಾರರು/ ಸ್ವೀಪರ್-ಕಮ್-ಸ್ಕ್ಯಾವೆಂಜರ್/ ಸೆಕ್ಯೂರಿಟಿ ಗಾರ್ಡ್)

ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳು ಬೆಂಗಳೂರಿನಲ್ಲಿ ಕೆಲಸ ನಿರ್ವಹಿಸಬೇಕು.

ಖಾಲಿಯಿರುವ ಹುದ್ದೆಗಳ ಸಂಖ್ಯೆ : ಒಟ್ಟು 32 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.

ಹುದ್ದೆಹುದ್ದೆಗಳ ಸಂಖ್ಯೆ ವೇತನ
ವಾಹನ ಚಾಲಕರು321,400 – 42,000
ಗ್ರೂಪ್-ಡಿ2917,000 28,950

ಶೈಕ್ಷಣಿಕ ಅರ್ಹತೆ :
ವಾಹನ ಚಾಲಕರು – ಎಸ್.ಎಸ್.ಎಲ್.ಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿರಬೇಕು. ವಾಹನ ಚಾಲಕರು ಹುದ್ದೆಗೆ ಮೋಟಾರು ಕಾರು/ ಭಾರಿ ವಾಹನಗಳ ಚಾಲನೆಯ ಅಧಿಕೃತ ಚಾಲನಾ ಪರವಾನಗಿ ಹೊಂದಿರಬೇಕು. ಮೋಟಾರು ಕಾರುಗಳ ಚಾಲನೆಯಲ್ಲಿ ಮೂರು ವರ್ಷಗಳಿಗೆ ಕಡಿಮೆಯಿಲ್ಲದಂತೆ ಪ್ರಾಯೋಗಿಕ ಅನುಭವ ಹೊಂದಿರಬೇಕು.

ಗ್ರೂಪ್-ಡಿ – ಎಸ್.ಎಸ್.ಎಲ್.ಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿರಬೇಕು.

ಉದ್ಯೋಗ ಮಾಹಿತಿ : KPSC ಇಂದ ಭೂಮಾಪಕರ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ವಯೋಮಾನ : ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕಕ್ಕೆ ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷ ಪೂರೈಸಿರಬೇಕು.
• ಸಾಮಾನ್ಯ ವರ್ಗಕ್ಕೆ ಸೇರಿದ ಅಭ್ಯರ್ಥಿಗಳಿಗೆ – ಗರಿಷ್ಠ 35 ವರ್ಷ
• ಪ್ರವರ್ಗ 2ಎ, 2ಬಿ, 3ಎ, 3ಬಿ ಸೇರಿದ ಅಭ್ಯರ್ಥಿಗಳಿಗೆ – ಗರಿಷ್ಠ 38 ವರ್ಷ
• ಪ.ಜಾತಿ/ ಪ.ಪಂ/ ಪ್ರವರ್ಗ 1ರ ಅಭ್ಯರ್ಥಿಗಳಿಗೆ – ಗರಿಷ್ಠ 40 ವರ್ಷ

ಆಯ್ಕೆ ವಿಧಾನ : ವಾಹನ ಚಾಲಕರ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅರ್ಹ ಅಭ್ಯರ್ಥಿಗಳಿಗೆ ಪ್ರಾದೇಶಿಕ ಸಾರಿಗೆ ಅಧಿಕಾರಿ (R.T.O) ಅವರಿಂದ ವಾಹನ ಚಾಲನಾ ಪರೀಕ್ಷೆಯನ್ನು ನಡೆಸಿ, ಅದರಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳಿಗೆ ಸಂದರ್ಶನ ನಡೆಸಿ ಆಯ್ಕೆ ಮಾಡಲಾಗುವುದು ಹಾಗೂ “ಡಿ” ಗುಂಪು ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅರ್ಹ ಅಭ್ಯರ್ಥಿಗಳಿಗೆ ಸಂದರ್ಶನ ನಡೆಸಿ ಆಯ್ಕೆ ಮಾಡಲಾಗುವುದು.

ಉದ್ಯೋಗ ಮಾಹಿತಿ : ಕೆಇಎ ಯಿಂದ ಕಂದಾಯ ಇಲಾಖೆಯಲ್ಲಿ ಖಾಲಿಯಿರುವ ವಿಲೇಜ್ ಅಕೌಂಟೆಂಟ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ಅರ್ಜಿ ಸಲ್ಲಿಕೆಯ ವಿಧಾನ : ಅಭ್ಯರ್ಥಿಯು ಈ ಹುದ್ದೆಗೆ ಆಫ್‌ಲೈನ್‌ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು.
ಹಂತ 1 : ಆಫ್‌ಲೈನ್‌ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 2 : ಅಭ್ಯರ್ಥಿಗಳು ಅರ್ಜಿ ನಮೂನೆ-1ರ ದ್ವಿಪ್ರತಿಯಲ್ಲಿ ಅರ್ಜಿಗಳನ್ನು ಸರ್ಕಾರಿ ಪುಸ್ತಕ ಮಳಿಗೆಯಿಂದ ಪಡೆದುಕೊಳ್ಳಬೇಕು. (ಅರ್ಜಿ ನಮೂನೆಯು ಸರ್ಕಾರಿ ಮುದ್ರಣಾಲಯದಲ್ಲಿ ದೊರೆಯುವುದು)
ಹಂತ 3 : ಅಪ್ಲಿಕೇಷನ್ ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಪುನಃ ಒಮ್ಮೆ ಪರಿಶೀಲಿಸಿ.
ಹಂತ 4 : ಅಪ್ಲಿಕೇಷನ್ ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಲಗತ್ತಿಸಲು ಸೂಚಿಸಿದ್ದರೆ, ಅವುಗಳನ್ನು ಲಗತ್ತಿಸಿ (ಅಗತ್ಯವಿದ್ದರೆ ಮಾತ್ರ).
ಹಂತ 5 : ಕೊನೆಯದಾಗಿ, ಅರ್ಜಿ ಶುಲ್ಕ ಪಾವತಿಸಿ, ಭರ್ತಿ ಮಾಡಿದ ಅರ್ಜಿಯನ್ನು ಈ ಕೆಳಗಡೆ ನೀಡಲಾದ ಕಚೇರಿಯ ವಿಳಾಸಕ್ಕೆ ಖುದ್ದಾಗಿ/ ಅಂಚೆ ಮೂಲಕ ಸಲ್ಲಿಸಬಹುದಾಗಿದೆ.

ಅಂಚೆ ಮೂಲಕ ಅರ್ಜಿ ಸಲ್ಲಿಸುವ ವಿಳಾಸ : ಕಾರ್ಯದರ್ಶಿ, ಕರ್ನಾಟಕ ವಿಧಾನ ಪರಿಷತ್ತಿನ ಸಚಿವಾಲಯ, ಅಂಚೆ ಪೆಟ್ಟಿಗೆ ಸಂಖ್ಯೆ 5079, ಮೊದಲನೇ ಮಹಡಿ, ವಿಧಾನಸೌಧ, ಬೆಂಗಳೂರು – 560001

ಖುದ್ದಾಗಿ ಹಾಜರಾಗಿ ಅರ್ಜಿ ಸಲ್ಲಿಸುವ ವಿಳಾಸ : ವಿಧಾನ ಸೌಧದ 2ನೇ ಮಹಡಿಯಲ್ಲಿರುವ ಕೊಠಡಿ ಸಂಖ್ಯೆ : 216, ಪತ್ರ ಸ್ವೀಕಾರ ಮತ್ತು ರವಾನೆ ಶಾಖೆ

ನಿಗದಿತ ಅರ್ಜಿ ಶುಲ್ಕದ ವಿವರ :
• ಸಾಮಾನ್ಯ ಅಭ್ಯರ್ಥಿಗಳಿಗೆ – ರೂ. 600
• 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ – ರೂ. 300
•ಮಾಜಿ ಸೈನಿಕ ಅಭ್ಯರ್ಥಿಗಳಿಗೆ – ರೂ. 50
• ಪ. ಜಾತಿ, ಪ. ಪಂ, ಪ್ರ1, ಅಂಗವಿಕಲ ಅಭ್ಯರ್ಥಿಗಳಿಗೆ ಶುಲ್ಕ ಇರುವುದಿಲ್ಲ.

ಶುಲ್ಕ ಪಾವತಿಸುವ ವಿಧಾನ : ಅಭ್ಯರ್ಥಿಗಳು ಡಿ.ಡಿ. ಅಥವಾ ಇಂಡಿಯನ್ ಪೋಸ್ಟಲ್ ಆರ್ಡರ್ ಅನ್ನು ಅಧಿಸೂಚನೆ ಹೊರಡಿಸಿರುವ ದಿನಾಂಕದಿಂದ ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದೊಳಗಿರುವಂತೆ ಖರೀದಿಸಿ, ಕಾರ್ಯದರ್ಶಿ, ಕರ್ನಾಟಕ ವಿಧಾನ ಪರಿಷತ್ತಿನ ಸಚಿವಾಲಯ, ಅಂಚೆ ಪೆಟ್ಟಿಗೆ ಸಂಖ್ಯೆ:5079, ವಿಧಾನಸೌಧ, ಬೆಂಗಳೂರು 560001 ಈ ವಿಳಾಸಕ್ಕೆ ಪಾವತಿ ಮಾಡಬೇಕು.

ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿರುವ ದಿನಾಂಕದ ವಿವರ :
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ಮಾರ್ಚ್ 04, 2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಏಪ್ರಿಲ್ 05, 2024

KLC Karnataka Legislative Council Recruitment 2024 : Important Links

NOTIFICATIONCLICK HERE
Telegram Join Link Click Here
WhatsApp Group Link Click Here

ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.

4 thoughts on “ಕರ್ನಾಟಕ ವಿಧಾನ ಪರಿಷತ್ತಿನ ಸಚಿವಾಲಯದಲ್ಲಿ ನೇಮಕಾತಿ 2024 – KLC Karnataka Legislative Council Recruitment 2024”

Leave a Comment