KMF KOMUL Recruitment 2023 Apply Online at komul.coop

KMF KOMUL Recruitment 2023 : ಕೋಲಾರ-ಚಿಕ್ಕಬಳ್ಳಾಪುರ ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ನಿಯಮಿತ, ಕೋಲಾರ ಇದರಲ್ಲಿ ಖಾಲಿ ಇರುವ ವಿವಿಧ ವೃಂದಗಳಲ್ಲಿನ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ವಯೋಮಾನ, ವೇತನ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

KMF KOMUL Recruitment 2023 – KMF Kolar Recruitment 2023 : Details of Vacancies

ಹುದ್ದೆ : ಸಹಾಯಕ ವ್ಯವಸ್ಥಾಪಕರು (ಎ.ಹೆಚ್& ಎ.ಐ), ಸಹಾಯಕ ವ್ಯವಸ್ಥಾಪಕರು (ವಿತ್ತ), ತಾಂತ್ರಿಕ ಅಧಿಕಾರಿ (ಡಿಟಿ), ಮಾರುಕಟ್ಟೆ ಅಧಿಕಾರಿ, ಸಿಸ್ಟಮ್ ಆಫೀಸರ್, ತಾಂತ್ರಿಕ ಅಧಿಕಾರಿ (ಗು.ನಿ.), ಕೃಷಿ ಅಧಿಕಾರಿ, ಆಡಳಿತಾಧಿಕಾರಿ, ತಾಂತ್ರಿಕ ಅಧಿಕಾರಿ (ಇಂಜಿ), ಲೆಕ್ಕಾಧಿಕಾರಿ

ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾಗುವ ಅರ್ಹ ಅಭ್ಯರ್ಥಿಗಳು ಕೋಲಾರ-ಚಿಕ್ಕಬಳ್ಳಾಪುರ ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟದಲ್ಲಿ ಕೆಲಸ ನಿರ್ವಹಿಸಬೇಕು.

ಖಾಲಿಯಿರುವ ಹುದ್ದೆಗಳ ಸಂಖ್ಯೆ : ಒಟ್ಟು 53 ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.

ಹುದ್ದೆಹುದ್ದೆಗಳ ಸಂಖ್ಯೆ ವೇತನ
ಸಹಾಯಕ ವ್ಯವಸ್ಥಾಪಕರು (ಎ.ಹೆಚ್& ಎ.ಐ)2652650-97100
ಸಹಾಯಕ ವ್ಯವಸ್ಥಾಪಕರು (ವಿತ್ತ)152650-97100
ತಾಂತ್ರಿಕ ಅಧಿಕಾರಿ (ಡಿಟಿ)1543100-83900
ಮಾರುಕಟ್ಟೆ ಅಧಿಕಾರಿ143100-83900
ಸಿಸ್ಟಮ್ ಆಫೀಸರ್143100-83900
ತಾಂತ್ರಿಕ ಅಧಿಕಾರಿ (ಗು.ನಿ.)143100-83900
ಕೃಷಿ ಅಧಿಕಾರಿ343100-83900
ಆಡಳಿತಾಧಿಕಾರಿ143100-83900
ತಾಂತ್ರಿಕ ಅಧಿಕಾರಿ (ಇಂಜಿ)343100-83900
ಲೆಕ್ಕಾಧಿಕಾರಿ143100-83900

ನಿಗದಿಪಡಿಸಿರುವ ಶೈಕ್ಷಣಿಕ ಅರ್ಹತೆ :
ಸಹಾಯಕ ವ್ಯವಸ್ಥಾಪಕರು (ಎ.ಹೆಚ್& ಎ.ಐ) – ಬಿವಿಎಸ್‌ಸಿ ಮತ್ತು ಎ.ಹೆಚ್ ಪದವಿ ವಿದ್ಯಾರ್ಹತೆ ಹೊಂದಿರಬೇಕು.

ಸಹಾಯಕ ವ್ಯವಸ್ಥಾಪಕರು (ವಿತ್ತ) – ಎಂ.ಕಾಂ ಸ್ನಾತಕೋತ್ತರ ಪದವಿಯಲ್ಲಿ ಪ್ರಥಮ ದರ್ಜೆ ಅಥವಾ ವಾಣಿಜ್ಯ ಪದವಿಯೊಂದಿಗೆ ಪ್ರಥಮ ದರ್ಜೆಯಲ್ಲಿ ಎಂ.ಬಿ.ಎ (ಫೈನಾನ್ಸ್) ಸ್ನಾತಕೋತ್ತರ ಪದವಿಯೊಂದಿಗೆ ಗಣಕಯಂತ್ರ ಕಾರ್ಯನಿರ್ವಹಣೆಯ ಜ್ಞಾನ ಹೊಂದಿರಬೇಕು. ಕನಿಷ್ಠ 5 ವರ್ಷಗಳ ಸೇವಾ ಅನುಭವ ಹೊಂದಿರಬೇಕು.

ತಾಂತ್ರಿಕ ಅಧಿಕಾರಿ (ಡಿಟಿ) – ಬಿ.ಎಸ್ಸಿ (ಡಿ.ಟಿ)/ ಬಿ.ಟೆಕ್ (ಡಿ.ಟೆಕ್) ಪದವಿ ಜೊತೆಗೆ ಗಣಕಯಂತ್ರ ಕಾರ್ಯನಿರ್ವಹಣೆಯ ಜ್ಞಾನ ಹೊಂದಿರಬೇಕು.

ಮಾರುಕಟ್ಟೆ ಅಧಿಕಾರಿ – ಬಿ.ಬಿ.ಎಂ/ ಬಿ.ಕಾಂ ಪದವಿಯೊಂದಿಗೆ ಮಾರ್ಕೆಟಿಂಗ್ ಮ್ಯಾನೇಜ್ಮೆಂಟ್ ಎಂ.ಬಿ.ಎ ಸ್ನಾತಕೋತ್ತರ ಪದವಿ ಜೊತೆಗೆ ಗಣಕಯಂತ್ರ ಕಾರ್ಯನಿರ್ವಹಣೆಯ ಜ್ಞಾನ ಹೊಂದಿರಬೇಕು. ಕನಿಷ್ಠ 3 ವರ್ಷಗಳ ಅನುಭವ ಹೊಂದಿರಬೇಕು.

ಉದ್ಯೋಗ ಮಾಹಿತಿ : ಬೆಳಗಾವಿ ಜಿಲ್ಲಾ ಹಾಲು ಉತ್ಪಾದಕರ ಒಕ್ಕೂಟ ನೇಮಕಾತಿ 2023

ಸಿಸ್ಟಮ್ ಆಫೀಸರ್ – ಬಿ.ಇ (ಕಂಪ್ಯೂಟರ್ ಸೈನ್ಸ್) ವಿದ್ಯಾರ್ಹತೆ ಹೊಂದಿರಬೇಕು.

ತಾಂತ್ರಿಕ ಅಧಿಕಾರಿ (ಗು.ನಿ.) – ಬಿ.ಎಸ್ಸಿ (ಡಿ.ಟಿ)/ ಬಿ.ಟೆಕ್ (ಡಿ.ಟೆಕ್) ಅಥವಾ ಎಂ.ಎಸ್ಸಿ (ಮೈಕ್ರೋಬಯಾಲಜಿ) ಸ್ನಾತಕೋತ್ತರ ಪದವಿ ಜೊತೆಗೆ ಗಣಕಯಂತ್ರ ಕಾರ್ಯನಿರ್ವಹಣೆಯ ಜ್ಞಾನ ಹೊಂದಿರಬೇಕು.

ಕೃಷಿ ಅಧಿಕಾರಿ – ಬಿ.ಎಸ್ಸಿ (ಕೃಷಿ) ಪದವಿ ಹೊಂದಿರುವುದರ ಜೊತೆಗೆ ಗಣಕಯಂತ್ರ ಕಾರ್ಯನಿರ್ವಹಣೆಯ ಜ್ಞಾನ ಹೊಂದಿರಬೇಕು.

ಆಡಳಿತಾಧಿಕಾರಿ – ಬಿ.ಬಿ.ಎಂ/ ಬಿ.ಕಾಂ./ ಬಿ.ಬಿ.ಎ ಪದವಿಯೊಂದಿಗೆ ಪರ್ಸನಲ್ ಮ್ಯಾನೇಜ್ಮೆಂಟ್/ ಹೆಚ್.ಆರ್.ಡಿ/ ಹೆಚ್.ಆರ್.ಎಂ ನಲ್ಲಿ ಎಂ.ಬಿ.ಎ ಸ್ನಾತಕೋತ್ತರ ಪದವಿ ಹೊಂದಿರಬೇಕು. ಗಣಕಯಂತ್ರ ಕಾರ್ಯನಿರ್ವಹಣೆಯ ಜ್ಞಾನ ಹೊಂದಿರಬೇಕು ಮತ್ತು ಕನಿಷ್ಠ 2 ವರ್ಷಗಳ ಸೇವಾನುಭವ ಹೊಂದಿರಬೇಕು.

ತಾಂತ್ರಿಕ ಅಧಿಕಾರಿ (ಇಂಜಿ) – ಬಿ.ಇ (ಕಂಪ್ಯೂಟರ್ ಸೈನ್ಸ್) ಪದವಿ ಹೊಂದಿರಬೇಕು.

ಲೆಕ್ಕಾಧಿಕಾರಿ – ಎಂ.ಕಾಂ. ಸ್ನಾತಕೋತ್ತರ ಪದವಿ ಅಥವಾ ವಾಣಿಜ್ಯ ಪದವಿಯೊಂದಿಗೆ ಎಂ.ಬಿ.ಎ (ಫೈನಾನ್ಸ್) ಸ್ನಾತಕೋತ್ತರ ಪದವಿ ಜೊತೆಗೆ ಗಣಕಯಂತ್ರ ಕಾರ್ಯನಿರ್ವಹಣೆಯ ಜ್ಞಾನ ಹೊಂದಿರಬೇಕು. ಕನಿಷ್ಠ 2 ವರ್ಷಗಳ ಸೇವಾ ಅನುಭವ ಹೊಂದಿರಬೇಕು.

ವಯೋಮಾನ : ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕಕ್ಕೆ ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷ ವಯೋಮಾನ ಪೂರೈಸಿರಬೇಕು.
ಪ.ಜಾತಿ, ಪ.ಪಂಗಡ, ಪ್ರವರ್ಗ 1 ಅಭ್ಯರ್ಥಿಗಳಿಗೆ – ಗರಿಷ್ಠ 40 ವರ್ಷ
ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ – ಗರಿಷ್ಠ 38 ವರ್ಷ
ಸಾಮಾನ್ಯ ಅಭ್ಯರ್ಥಿಗಳಿಗೆ – ಗರಿಷ್ಠ 35 ವರ್ಷ

ಉದ್ಯೋಗ ಮಾಹಿತಿ : ಹಾಸನ ಜಿಲ್ಲಾ ನ್ಯಾಯಾಲಯದಲ್ಲಿ ಆದೇಶ ಜಾರಿಕಾರರು ಮತ್ತು ಜವಾನ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ಆಯ್ಕೆ ವಿಧಾನ : ಅಭ್ಯರ್ಥಿಗಳು ಲಿಖಿತ ಪರೀಕ್ಷೆಯಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ 1:5ರ ಅನುಪಾತದಲ್ಲಿ ಮೌಖಿಕ ಸಂದರ್ಶನಕ್ಕೆ ಕರೆಯಲಾಗುವುದು. ಮೌಖಿಕ ಸಂದರ್ಶನಕ್ಕೆ ಗರಿಷ್ಠ 15 ಅಂಕಗಳನ್ನು ನಿಗದಿಪಡಿಸಲಾಗಿದೆ.

ಅರ್ಜಿ ಸಲ್ಲಿಕೆಯ ವಿಧಾನ : ಅಭ್ಯರ್ಥಿಯು ಈ ಹುದ್ದೆಗೆ ಆನ್‌ಲೈನ್‌ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು.
ಹಂತ 1 : ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 2 : ಇಲಾಖೆಯ ವೆಬ್‌ಸೈಟ್ ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ ಅಪ್ಲೈ ಆನ್‌ಲೈನ್‌ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಪ್ಲಿಕೇಷನ್ ತೆರೆದುಕೊಳ್ಳಿ.
ಹಂತ 3 : ಅಪ್ಲಿಕೇಷನ್ ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಮುಂದಿನ ಹಂತಕ್ಕೆ ತೆರಳುವ ಮುನ್ನ ಪುನಃ ಒಮ್ಮೆ ಪರಿಶೀಲಿಸಿ.
ಹಂತ 4 : ಅಪ್ಲಿಕೇಷನ್ ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಅಪ್ಲೋಡ್ ಮಾಡಲು ಸೂಚಿಸಿದ್ದರೆ, ಅವುಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಿ (ಅಗತ್ಯವಿದ್ದರೆ ಮಾತ್ರ).
ಹಂತ 5 : ಕೊನೆಯದಾಗಿ, ಅಭ್ಯರ್ಥಿಗೆ ಅರ್ಜಿ ಶುಲ್ಕ ಪಾವತಿಸಲು ಸೂಚಿಸಿದ್ದರೆ, ಶುಲ್ಕ ಪಾವತಿಸಿ ಅರ್ಜಿ ಸಲ್ಲಿಕೆ ಪೂರ್ಣಗೊಳಿಸಿ.

ನಿಗದಿತ ಅರ್ಜಿ ಶುಲ್ಕದ ವಿವರ :
• ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1, ಅಂಗವಿಕಲ ಅಭ್ಯರ್ಥಿಗಳು – ರೂ. 500
• ಇತರೆ ವರ್ಗದ ಅಭ್ಯರ್ಥಿಗಳು – ರೂ. 1000

ಶುಲ್ಕ ಪಾವತಿಸುವ ವಿಧಾನ : ಅರ್ಜಿ ಶುಲ್ಕವನ್ನು ಆನ್‌ಲೈನ್‌ನಲ್ಲಿ ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ನೆಟ್ ಬ್ಯಾಂಕಿಂಗ್ ಮೂಲಕ ಶುಲ್ಕ ಪಾವತಿಸಬಹುದು.

ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿರುವ ದಿನಾಂಕದ ವಿವರ :
ಅರ್ಜಿ ಸಲ್ಲಿಕೆಗೆ ಪ್ರಾರಂಭದ ದಿನಾಂಕ : ಸೆಪ್ಟೆಂಬರ್ 05, 2023
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ : ಅಕ್ಟೋಬರ್ 04, 2023

KMF KOMUL Recruitment 2023 : Important Links

NOTIFICATIONCLICK HERE
APPLY ONLINE CLICK HERE
Telegram Join Link Click Here
WhatsApp Channel Link Click Here

ಇತರೆ ಮಾಹಿತಿ : ಲಿಖಿತ ಪರೀಕ್ಷೆಯ ಪ್ರವೇಶ ಪತ್ರ, ದಿನಾಂಕ ಹಾಗೂ ಪರೀಕ್ಷೆಯ ಕಾಲಾವಧಿಯನ್ನು ಅರ್ಹ ಅಭ್ಯರ್ಥಿಗಳಿಗೆ ಅಂಚೆ ಮೂಲಕ/ ನೊಂದಾಯಿತ ಇ-ಮೇಲ್ ಮೂಲಕ ಹಾಗೂ ಒಕ್ಕೂಟದ ವೆಬ್‌ಸೈಟ್ ನಲ್ಲಿ ತಿಳಿಸಲಾಗುವುದು.

ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.

WhatsApp
Telegram
Facebook

Leave a Comment