KMF Rbkmul Recruitment 2023 – Rbkmul 2023 Recruitment : ರಾಯಚೂರು, ಬಳ್ಳಾರಿ, ಕೊಪ್ಪಳ ಮತ್ತು ವಿಜಯನಗರ ಜಿಲ್ಲಾ ಹಾಲು ಉತ್ಪಾದಕರ ಸಹಕಾರ ಸಂಘಗಳ ಒಕ್ಕೂಟ ನಿಯಮಿತದಲ್ಲಿ ಅಗತ್ಯ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ವಯೋಮಾನ, ಅರ್ಜಿ ಸಲ್ಲಿಕೆ ವಿಧಾನ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.
KMF Rbkmul Recruitment 2023 : Details of Vacancies
ಹುದ್ದೆ : ಡೇರಿ ಮೇಲ್ವಿಚಾರಕರು ದರ್ಜೆ-1, ಆಡಳಿತ ಸಹಾಯಕ ದರ್ಜೆ-3, ಲೆಕ್ಕ ಸಹಾಯಕ ದರ್ಜೆ-3, ಕಿರಿಯ ತಾಂತ್ರಿಕರು (ಬಾಯ್ಲರ್), ಕಿರಿಯ ತಾಂತ್ರಿಕರು ( ಎಲೆಕ್ಟ್ರಾನಿಕ್ಸ್ ಮೆಕಾನಿಕಲ್), ಕಿರಿಯ ತಾಂತ್ರಿಕರು (ಎಲೆಕ್ಟ್ರಾನಿಕ್ಸ್ & ಎಲೆಕ್ಟ್ರಿಕಲ್), ಕಿರಿಯ ತಾಂತ್ರಿಕರು (ರೆಫ್ರಿಜರೇಶನ್ & ಎ.ಸಿ)
ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾಗುವ ಅರ್ಹ ಅಭ್ಯರ್ಥಿಗಳು ರಾಯಚೂರು, ಬಳ್ಳಾರಿ, ಕೊಪ್ಪಳ ಮತ್ತು ವಿಜಯನಗರ ಜಿಲ್ಲಾ ಹಾಲು ಉತ್ಪಾದಕರ ಸಹಕಾರ ಸಂಘಗಳ ಒಕ್ಕೂಟ ನಿ. ಬಳ್ಳಾರಿಯಲ್ಲಿ ಕೆಲಸ ನಿರ್ವಹಿಸಬೇಕು.
ಖಾಲಿಯಿರುವ ಹುದ್ದೆಗಳ ಸಂಖ್ಯೆ : ಒಟ್ಟು 24 ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.
ಹುದ್ದೆ | ಹುದ್ದೆಗಳ ಸಂಖ್ಯೆ | ವೇತನ |
ಡೇರಿ ಮೇಲ್ವಿಚಾರಕರು ದರ್ಜೆ-1 | 6 | 40900-78200 |
ಆಡಳಿತ ಸಹಾಯಕ ದರ್ಜೆ-3 | 6 | 21400-42000 |
ಲೆಕ್ಕ ಸಹಾಯಕ ದರ್ಜೆ-3 | 2 | 21400-42000 |
ಕಿರಿಯ ತಾಂತ್ರಿಕರು (ಬಾಯ್ಲರ್) | 5 | 21400-42000 |
ಕಿರಿಯ ತಾಂತ್ರಿಕರು ( ಎಲೆಕ್ಟ್ರಾನಿಕ್ಸ್ ಮೆಕಾನಿಕಲ್) | 2 | 21400-42000 |
ಕಿರಿಯ ತಾಂತ್ರಿಕರು (ಎಲೆಕ್ಟ್ರಾನಿಕ್ಸ್ & ಎಲೆಕ್ಟ್ರಿಕಲ್) | 2 | 21400-42000 |
ಕಿರಿಯ ತಾಂತ್ರಿಕರು (ರೆಫ್ರಿಜರೇಶನ್ & ಎ.ಸಿ) | 1 | 21400-42000 |
ಶೈಕ್ಷಣಿಕ ಅರ್ಹತೆ :
• ಡೇರಿ ಮೇಲ್ವಿಚಾರಕರು ದರ್ಜೆ 1 – ಅಂಗೀಕೃತ ವಿಶ್ವವಿದ್ಯಾಲಯದಿಂದ ಬಿ.ಇ. (ಎಲೆಕ್ಟ್ರಾನಿಕ್ಸ್/ಎಲೆಕ್ಟ್ರಿಕಲ್/ಮೆಕ್ಯಾನಿಕಲ್)ನಲ್ಲಿ ಪ್ರಥಮ ದರ್ಜೆ ಪದವಿ ಪಡೆದಿರಬೇಕು. ಕಂಪ್ಯೂಟರ್ ಜ್ಞಾನ ಹೊಂದಿರಬೇಕು.
• ಆಡಳಿತ ಸಹಾಯಕ ದರ್ಜೆ 3 – ಮಾನ್ಯತೆ ಪಡೆದ ಅಂಗೀಕೃತ ವಿಶ್ವವಿದ್ಯಾಲಯದಿಂದ ಯಾವುದೇ ಪದವಿ ಹೊಂದಿರಬೇಕು. ಕನಿಷ್ಠ 6 ತಿಂಗಳ ಅವಧಿಯ ಕಂಪ್ಯೂಟರ್ ಅಪ್ಲಿಕೇಷನ್ ನಲ್ಲಿ ಡಿಪ್ಲೊಮಾ ತಂತ್ರಜ್ಞಾನ ಪಡೆದಿರಬೇಕು.
• ಲೆಕ್ಕ ಸಹಾಯಕ ದರ್ಜೆ 3 – ಮಾನ್ಯತೆ ಪಡೆದ ಅಂಗೀಕೃತ ವಿಶ್ವವಿದ್ಯಾಲಯದಿಂದ ಬಿ.ಕಾಂ. ಪದವಿ ಹೊಂದಿರಬೇಕು. 6 ತಿಂಗಳ ಅವಧಿಯ ಕಂಪ್ಯೂಟರ್ ಅಪ್ಲಿಕೇಷನ್ ನಲ್ಲಿ ಡಿಪ್ಲೊಮಾ ಪಡೆದಿರಬೇಕು.
• ಕಿರಿಯ ತಾಂತ್ರಿಕರು (ಬಾಯ್ಲರ್) – ಎಸ್.ಎಸ್.ಎಲ್.ಸಿ ವಿದ್ಯಾರ್ಹತೆಯೊಂದಿಗೆ ಕರ್ನಾಟಕ ಸರ್ಕಾರ ಬಾಯ್ಲರ್ ಅಟೆಂಡೆಂಟ್ ಪರೀಕ್ಷಾ ಮಂಡಳಿಯಿಂದ ದ್ವಿತೀಯ ಬಾಯ್ಲರ್ ಅಟೆಂಡೆಂಟ್ ದರ್ಜೆ 2 ಪ್ರಮಾಣ ಪತ್ರ ಹೊಂದಿರಬೇಕು.
• ಕಿರಿಯ ತಾಂತ್ರಿಕರು ( ಎಲೆಕ್ಟ್ರಾನಿಕ್ಸ್ ಮೆಕಾನಿಕಲ್) – ಎಸ್.ಎಸ್.ಎಲ್.ಸಿ ವಿದ್ಯಾರ್ಹತೆಯೊಂದಿಗೆ ಕರ್ನಾಟಕ ಉದ್ಯೋಗ ಮತ್ತು ತರಬೇತಿ ಇಲಾಖೆ/ ರಾಜ್ಯ ಪರೀಕ್ಷಾ ಮಂಡಳಿಯಿಂದ ಐ.ಟಿ.ಐ ವಿದ್ಯಾರ್ಹತೆ ಎಲೆಕ್ಟ್ರಾನಿಕ್ಸ್ ಮೆಕಾನಿಕಲ್ ವಿಷಯಗಳಲ್ಲಿ ಎರಡು ವರ್ಷದ ಕೋರ್ಸ್ ಉತ್ತೀರ್ಣರಾಗಿರಬೇಕು.
• ಕಿರಿಯ ತಾಂತ್ರಿಕರು ( ಎಲೆಕ್ಟ್ರಾನಿಕ್ಸ್ & ಎಲೆಕ್ಟ್ರಿಕಲ್) – ಎಸ್.ಎಸ್.ಎಲ್.ಸಿ ವಿದ್ಯಾರ್ಹತೆಯೊಂದಿಗೆ ಕರ್ನಾಟಕ ಉದ್ಯೋಗ ಮತ್ತು ತರಬೇತಿ ಇಲಾಖೆ/ ರಾಜ್ಯ ಪರೀಕ್ಷಾ ಮಂಡಳಿಯಿಂದ ಐ.ಟಿ.ಐ ವಿದ್ಯಾರ್ಹತೆ ಎಲೆಕ್ಟ್ರಾನಿಕ್ಸ್ & ಎಲೆಕ್ಟ್ರಿಕಲ್ ವಿಷಯಗಳಲ್ಲಿ ಎರಡು ವರ್ಷದ ಕೋರ್ಸ್ ಉತ್ತೀರ್ಣರಾಗಿರಬೇಕು.
• ಕಿರಿಯ ತಾಂತ್ರಿಕರು (ರೆಫ್ರಿಜರೇಶನ್ & ಎ.ಸಿ) – ಎಸ್.ಎಸ್.ಎಲ್.ಸಿ ವಿದ್ಯಾರ್ಹತೆಯೊಂದಿಗೆ ಕರ್ನಾಟಕ ಉದ್ಯೋಗ ಮತ್ತು ತರಬೇತಿ ಇಲಾಖೆ/ ರಾಜ್ಯ ಪರೀಕ್ಷಾ ಮಂಡಳಿಯಿಂದ ಐ.ಟಿ.ಐ ವಿದ್ಯಾರ್ಹತೆ ರೆಫ್ರಿಜರೇಶನ್ & ಎ.ಸಿ ವಿಷಯಗಳಲ್ಲಿ ಎರಡು ವರ್ಷದ ಕೋರ್ಸ್ ಉತ್ತೀರ್ಣರಾಗಿರಬೇಕು.
ಉದ್ಯೋಗ ಮಾಹಿತಿ : ಸ್ಟಾಫ್ ಸೆಲೆಕ್ಷನ್ ಕಮಿಷನ್ ನಿಂದ 11409 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ
ವಯೋಮಾನ : ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕಕ್ಕೆ ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷ ವಯೋಮಾನ ಪೂರೈಸಿರಬೇಕು.
• ಎಸ್ಸಿ, ಎಸ್ಟಿ, ಪ್ರವರ್ಗ 1 ಅಭ್ಯರ್ಥಿಗಳಿಗೆ – ಗರಿಷ್ಠ 40 ವರ್ಷ
• ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ – ಗರಿಷ್ಠ 38 ವರ್ಷ
• ಸಾಮಾನ್ಯ ಅಭ್ಯರ್ಥಿಗಳಿಗೆ – ಗರಿಷ್ಠ 35 ವರ್ಷ
ಆಯ್ಕೆ ವಿಧಾನ : ಅಭ್ಯರ್ಥಿಗಳು ಲಿಖಿತ ಪರೀಕ್ಷೆಯಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ ಅಭ್ಯರ್ಥಿಗಳನ್ನು 1:5ರ ಅನುಪಾತದಲ್ಲಿ ಮೌಖಿಕ ಸಂದರ್ಶನಕ್ಕೆ ಕರೆಯಲಾಗುವುದು. ಮೌಖಿಕ ಸಂದರ್ಶನಕ್ಕೆ ಗರಿಷ್ಠ 15 ಅಂಕಗಳನ್ನು ನಿಗದಿಪಡಿಸಲಾಗಿದೆ. ಅಭ್ಯರ್ಥಿಯು ಲಿಖಿತ ಪರೀಕ್ಷೆಯಲ್ಲಿ ಗಳಿಸಿದ ಅಂಕಗಳನ್ನು ಶೇ.85ಕ್ಕೆ ಇಳಿಸಿ ಹಾಗೆ ಪ್ರಾಪ್ತವಾಗುವ ಅಂಕಗಳಿಗೆ ಮೌಖಿಕ ಸಂದರ್ಶನದಲ್ಲಿ ಗಳಿಸುವ ಅಂಕಗಳನ್ನು ಒಟ್ಟುಗೂಡಿಸಿ ಅಂತಿಮ ಮೆರಿಟ್ ಪಟ್ಟಿಯನ್ನು ತಯಾರಿಸಿ ಮೆರಿಟ್ ಹಾಗೂ ಮೀಸಲಾತಿ ಆಧಾರದಲ್ಲಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ
ಅರ್ಜಿ ಸಲ್ಲಿಕೆಯ ವಿಧಾನ : ಅಭ್ಯರ್ಥಿಯು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 1 : ಇಲಾಖೆಯ ವೆಬ್‌ಸೈಟ್ ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ ಅಪ್ಲೈ ಆನ್‌ಲೈನ್ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಪ್ಲಿಕೇಷನ್ ತೆರೆದುಕೊಳ್ಳಿ.
ಹಂತ 2 : ಅಪ್ಲಿಕೇಷನ್ ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಮುಂದಿನ ಹಂತಕ್ಕೆ ತೆರಳುವ ಮುನ್ನ ಪುನಃ ಒಮ್ಮೆ ಪರಿಶೀಲಿಸಿ.
ಹಂತ 3 : ಅಪ್ಲಿಕೇಷನ್ ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಅಪ್ಲೋಡ್ ಮಾಡಲು ಸೂಚಿಸಿದ್ದರೆ, ಅವುಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಿ (ಅಗತ್ಯವಿದ್ದರೆ ಮಾತ್ರ).
ಹಂತ 4 : ಕೊನೆಯದಾಗಿ, ಅಭ್ಯರ್ಥಿಗೆ ಅರ್ಜಿ ಶುಲ್ಕ ಪಾವತಿಸಲು ಸೂಚಿಸಿದ್ದರೆ, ಶುಲ್ಕ ಪಾವತಿಸಿ ಅರ್ಜಿ ಸಲ್ಲಿಕೆ ಪೂರ್ಣಗೊಳಿಸಿ.
ನಿಗದಿತ ಅರ್ಜಿ ಶುಲ್ಕದ ವಿವರ :
• ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1 ಹಾಗೂ ಅಂಗವಿಕಲ ಅಭ್ಯರ್ಥಿಗಳು – ರೂ. 500
• ಇತರೆ ವರ್ಗದ ಅಭ್ಯರ್ಥಿಗಳು – ರೂ. 1000
ಶುಲ್ಕ ಪಾವತಿಸುವ ವಿಧಾನ : ಅಭ್ಯರ್ಥಿಗಳು ಅರ್ಜಿ ಶುಲ್ಕವನ್ನು ಡೆಬಿಟ್ ಕಾರ್ಡ್/ ಕ್ರೆಡಿಟ್ ಕಾರ್ಡ್/ ಆನ್‌ಲೈನ್ ಮೂಲಕ ನಿಗದಿತ ಶುಲ್ಕ ಹಾಗೂ ಅನ್ವಯಿಸುವ ಬ್ಯಾಂಕ್ ಶುಲ್ಕ ಪಾವತಿಸಬೇಕು.
ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿರುವ ದಿನಾಂಕದ ವಿವರ :
ಅರ್ಜಿ ಸಲ್ಲಿಕೆಗೆ ಪ್ರಾರಂಭದ ದಿನಾಂಕ : ಜನವರಿ 26, 2023
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ : ಫೆಬ್ರವರಿ 15, 2023
KMF Rbkmul Recruitment 2023 : Important Links
Short Notification | Click Here |
Detailed Notification | Click Here |
Apply Online | Click Here |
Telegram Join Link | Click Here |
ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.