KMF VIMUL Recruitment 2021 – Apply Online for 39 Manager, Assistant Post

KMF VIMUL Recruitment 2021 : ವಿಜಯಪುರ ಮತ್ತು ಬಾಗಲಕೋಟೆ ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ನಿಯಮಿತದಲ್ಲಿ ಅಗತ್ಯವಿರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ವಯೋಮಾನ, ಅರ್ಜಿ ಸಲ್ಲಿಕೆ ವಿಧಾನ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

KMF VIMUL Recruitment 2021 : Details of Vacancies

ಹುದ್ದೆ :
1) ಸಹಾಯಕ ವ್ಯವಸ್ಥಾಪಕರು (ಎಹೆಚ್/ಎಐ) – 03 ಹುದ್ದೆ
ಬಿ.ವಿ.ಎಸ್ಸಿ ಪದವಿ ಶೈಕ್ಷಣಿಕ ಅರ್ಹತೆ ಹೊಂದಿರಬೇಕು. ಕಹಾಮ ಮತ್ತು ಇದರ ಹಾಲು ಒಕ್ಕೂಟಗಳಲ್ಲಿ ಪಶು ವೈದ್ಯಕೀಯ ಸಮಾಲೋಚಕರಾಗಿ ಕನಿಷ್ಠ 3 ವರ್ಷ ಸೇವೆ ಸಲ್ಲಿಸಿದವರಿಗೆ ಆದ್ಯತೆ ನೀಡಲಾಗುವುದು.

2) ಸಹಾಯಕ ವ್ಯವಸ್ಥಾಪಕರು (ಎಫ್ & ಎಫ್) – 02 ಹುದ್ದೆ
ಬಿ.ಎಸ್ಸಿ (ಕೃಷಿ) ಪದವಿ ಶೈಕ್ಷಣಿಕ ಅರ್ಹತೆ ಹೊಂದಿರಬೇಕು. ಕಹಾಮ ಮತ್ತು ಇದರ ಹಾಲು ಒಕ್ಕೂಟಗಳಲ್ಲಿ ಕನಿಷ್ಠ 4 ವರ್ಷ ಸಮಾಲೋಚಕರಾಗಿ ಸೇವೆ ಸಲ್ಲಿಸಿದವರಾಗಿರಬೇಕು.

3) ಸಿಸ್ಟಂ ಅಧಿಕಾರಿ – 01 ಹುದ್ದೆ
ಬಿ.ಇ (Information Science) ಪದವಿ ಅರ್ಹತೆ ಹೊಂದಿರಬೇಕು. ಕಹಾಮ ಮತ್ತು ಇದರ ಹಾಲು ಒಕ್ಕೂಟಗಳಲ್ಲಿ ಪಶು ಕನಿಷ್ಠ 3 ವರ್ಷ ಮಾಹಿತಿ ನಿರ್ವಹಣೆ ವ್ಯವಸ್ಥೆ ವಿಭಾಗದಲ್ಲಿ ಸೇವೆ ಸಲ್ಲಿಸಿರಬೇಕು.

4) ತಾಂತ್ರಿಕ ಅಧಿಕಾರಿ (ಡಿ.ಟಿ) – 01 ಹುದ್ದೆ
ಬಿ.ಎಸ್ಸಿ (ಡಿ.ಟಿ)/ ಬಿ.ಟೆಕ್ (ಡಿ.ಟೆಕ್)/ಬಿ.ಟೆಕ್ (ಪುಡ್ ಟೆಕ್ನಾಲಜಿ) ಪದವಿ ಅರ್ಹತೆ ಹೊಂದಿರಬೇಕು.

5) ತಾಂತ್ರಿಕ ಅಧಿಕಾರಿ (ಅಭಿಯಂತರ) – 01 ಹುದ್ದೆ
ಬಿಇ (ಮೆಕಾನಿಕಲ್) ಪದವಿ ಶೈಕ್ಷಣಿಕ ಅರ್ಹತೆ ಹೊಂದಿರಬೇಕು.

6) ಮಾರುಕಟ್ಟೆ ಅಧೀಕ್ಷಕರು – 01 ಹುದ್ದೆ
ಬಿ.ಬಿ.ಎ/ ಬಿ.ಬಿ.ಎಮ್/ ಬಿ.ಕಾಂ/ ಬಿ.ಎಸ್ಸಿ (ಅಗ್ರಿಕಲ್ಚರ್ ಮಾರ್ಕೆಟಿಂಗ್ & ಕೋಆಪರೇಶನ್) ಪದವಿ ಜೊತೆಗೆ ಎಂ.ಬಿ.ಎ (ಮಾರ್ಕೆಟಿಂಗ್) ಸ್ನಾತಕೋತ್ತರ ಪದವಿ ಪಡೆದಿರಬೇಕು.

7) ವಿಸ್ತರಣಾಧಿಕಾರಿ ದರ್ಜೆ 3 – 08 ಹುದ್ದೆ
ಬಿ.ಕಾಂ./ ಬಿ.ಎಸ್ಸಿ/ ಬಿ.ಬಿ.ಎ/ ಬಿ.ಬಿ.ಎಂ/ ಬಿ.ಎ/ ಬಿ.ಎಸ್ಸಿ (ಕೃಷಿ) ಪದವಿಯಲ್ಲಿ ಕನಿಷ್ಠ ಶೇ. 60 ಅಂಕಗಳೊಂದಿಗೆ ಉತ್ತೀರ್ಣರಾಗಿರಬೇಕು.

8) ಮಾರುಕಟ್ಟೆ ಸಹಾಯಕರು ದರ್ಜೆ 2 – 02 ಹುದ್ದೆ
ಬಿ.ಕಾಂ/ ಬಿ.ಬಿ.ಎ ಪದವಿ ಜೊತೆಗೆ ಟ್ಯಾಲಿ ಪ್ರಮಾಣ ಪತ್ರ ಮತ್ತು ಎಂಎಸ್ ಆಫೀಸ್ ಪ್ಯಾಕೇಜ್ ಜ್ಞಾನ ಹೊಂದಿರಬೇಕು.

9) ಕೆಮಿಸ್ಟ್ ದರ್ಜೆ 2 – 2 ಹುದ್ದೆ
ಕೆಮೆಸ್ಟ್ರಿ ಅಥವಾ ಮೈಕ್ರೋಬೈಯಾಲಾಜಿಯನ್ನು ಒಂದು ಐಚ್ಛಿಕ ವಿಷಯವಾಗಿ ಬಿ.ಎಸ್ಸಿ ಪದವಿಯನ್ನು ಹೊಂದಿರಬೇಕು.

10) ಆಡಳಿತ ಸಹಾಯಕ ದರ್ಜೆ 2 – 01 ಹುದ್ದೆ
ಯಾವುದೇ ಪದವಿ ಶೈಕ್ಷಣಿಕ ಅರ್ಹತೆ ಹೊಂದಿರಬೇಕು.

11) ಲೆಕ್ಕ ಸಹಾಯಕ ದರ್ಜೆ 2 – 04 ಹುದ್ದೆ
ಬಿ.ಕಾಂ ಪದವಿ ಜೊತೆಗೆ ಟ್ಯಾಲಿ ಪ್ರಮಾಣ ಪತ್ರ ಮತ್ತು ಎಂಎಸ್ ಆಫೀಸ್ ಪ್ಯಾಕೇಜ್ ಜ್ಞಾನ ಹೊಂದಿರಬೇಕು.

12) ಕಿರಿಯ ಸಿಸ್ಟಂ ಆಫರೇಟರ್ – 02 ಹುದ್ದೆ
ಬಿ.ಎಸ್ಸಿ (ಕಂಪ್ಯೂಟರ್ ಸೈನ್ಸ್/ ಕಂಪ್ಯೂಟರ್ ಅಪ್ಲಿಕೇಷನ್) ಅಥವಾ ಬಿಸಿಎ ಪದವಿ ಪಡೆದಿರಬೇಕು

13) ಕಿರಿಯ ತಾಂತ್ರಿಕ (ಬಾಯ್ಲರ್ ಅಟೆಂಡೆಂಟ್) – 02 ಹುದ್ದೆ
ಎಸ್.ಎಸ್.ಎಲ್.ಸಿ ಉತ್ತೀರ್ಣತೆ ಜೊತೆಗೆ ಬಾಯ್ಲರ್ ಅಟೆಂಡೆಂಟ್ ಸರ್ಟಿಫಿಕೇಟ್ ಹೊಂದಿರಬೇಕು.

14) ಕಿರಿಯ ತಾಂತ್ರಿಕ (ಎಲೆಕ್ಟ್ರಿಷಿಯನ್) – 03 ಹುದ್ದೆ
ಎಸ್.ಎಸ್.ಎಲ್.ಸಿ ಉತ್ತೀರ್ಣತೆ ಜೊತೆಗೆ ಐಟಿಐ ನಲ್ಲಿ ಇಲೆಕ್ಟ್ರಿಕಲ್ ಟ್ರೇಡ್ ಸರ್ಟಿಫಿಕೇಟ್ ಹೊಂದಿರಬೇಕು.

15) ಕಿರಿಯ ತಾಂತ್ರಿಕ (ರೆಪ್ರೀಜಿರೇಷನ್) – 01 ಹುದ್ದೆ
ಎಸ್.ಎಸ್.ಎಲ್.ಸಿ ಉತ್ತೀರ್ಣತೆ ಜೊತೆಗೆ ಐಟಿಐ ನಲ್ಲಿ ರೆಪ್ರೀಜಿರೇಷನ್ ಟ್ರೇಡ್ ಸರ್ಟಿಫಿಕೇಟ್ ಹೊಂದಿರಬೇಕು.

16) ಕಿರಿಯ ತಾಂತ್ರಿಕ (ಫಿಟ್ಟರ್) – 01 ಹುದ್ದೆ
ಎಸ್.ಎಸ್.ಎಲ್.ಸಿ ಉತ್ತೀರ್ಣತೆ ಜೊತೆಗೆ ಐಟಿಐ ನಲ್ಲಿ ಫಿಟ್ಟರ್ ಟ್ರೇಡ್ ಸರ್ಟಿಫಿಕೇಟ್ ಹೊಂದಿರಬೇಕು.

17) ಹಾಲು ರವಾನೆಗಾರರು – 04 ಹುದ್ದೆ
ಕನಿಷ್ಠ ಎಸ್.ಎಸ್.ಎಲ್.ಸಿ ಪಾಸಾಗಿರಬೇಕು.

ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾಗುವ ಅರ್ಹ ಅಭ್ಯರ್ಥಿಗಳು ವಿಜಯಪುರ, ಕರ್ನಾಟಕದಲ್ಲಿ ಕೆಲಸ ನಿರ್ವಹಿಸಬೇಕು.

ವೇತನ : ಆಯ್ಕೆಯಾದ ಅಭ್ಯರ್ಥಿಗಳಿಗೆ ಪ್ರತಿ ತಿಂಗಳು ರೂ. 21,400 ರಿಂದ ರೂ. 97,100ವರೆಗೂ ವೇತನ ನೀಡಲಾಗುತ್ತದೆ.

ವಯೋಮಾನ : ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕಕ್ಕೆ ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷ ವಯೋಮಾನ ನಿಗದಿಪಡಿಸಲಾಗಿದೆ ಹಾಗೂ
ಎಸ್ಸಿ, ಎಸ್ಟಿ, ಪ್ರವರ್ಗ 1 ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷ
ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ ಗರಿಷ್ಠ 38 ವರ್ಷ
ಸಾಮಾನ್ಯ ಅಭ್ಯರ್ಥಿಗಳಿಗೆ ಗರಿಷ್ಠ 35 ವರ್ಷ

ಉದ್ಯೋಗ ಮಾಹಿತಿ : ಶಿವಮೊಗ್ಗ ಜಿಲ್ಲಾ ನ್ಯಾಯಾಲಯದಲ್ಲಿ ಆದೇಶ ಜಾರಿಕಾರ ಹುದ್ದೆಗಳ ನೇರ ನೇಮಕಾತಿ

ಆಯ್ಕೆ ವಿಧಾನ : ಹುದ್ದೆಗೆ ನಿಗದಿಪಡಿಸಿದ ವಿದ್ಯಾರ್ಹತೆ ಮತ್ತು ಅಗತ್ಯ ದಾಖಲೆಗಳ ಆಧಾರದ ಮೇಲೆ ಪರಿಶೀಲಿಸಿ ಅರ್ಹ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ ನಡೆಸಲಾಗುತ್ತದೆ ನಂತರ ಲಿಖಿತ ಪರೀಕ್ಷೆಯಲ್ಲಿ ಗಳಿಸಿದ ಅಂಕಗಳ ಶೇಕಡವಾರು ಆಧಾರದ ಮೇಲೆ (ಮೆರಿಟ್) 1:5ರ ಅನುಪಾತದಲ್ಲಿ ಅರ್ಹ ಅಭ್ಯರ್ಥಿಗಳಿಗೆ ಮೌಖಿಕ ಸಂದರ್ಶನ ನಡೆಸಿ ಹುದ್ದೆಗಳಿಗೆ ಆಯ್ಕೆ ಮಾಡಲಾಗುತ್ತದೆ.

ವಿಜಯಪುರ ಮತ್ತು ಬಾಗಲಕೋಟೆ ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಒಕ್ಕೂಟದಲ್ಲಿ ಖಾಲಿಯಿರುವ ಹುದ್ದೆಗೆ ಅರ್ಜಿ ಸಲ್ಲಿಕೆಯ ವಿಧಾನ :
• ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್‌ಲೈನ್‌ ಮೂಲಕವೇ ಅರ್ಜಿಯನ್ನು ಸಲ್ಲಿಸಬೇಕು.
• ಅಭ್ಯರ್ಥಿಗಳು ಒಕ್ಕೂಟದ ಅಧಿಕೃತ ವೆಬ್‌ಸೈಟ್ ವಿಳಾಸಕ್ಕೆ ಭೇಟಿ ನೀಡಿ, ಆನ್‌ಲೈನ್‌ ಅರ್ಜಿಯಲ್ಲಿ ಹುದ್ದೆಗೆ ಅಗತ್ಯವಿರುವ ಎಲ್ಲಾ ಮಾಹಿತಿಯನ್ನು ಭರ್ತಿ ಮಾಡಿ ( ಉದಾಹರಣೆಗೆ : ಅಭ್ಯರ್ಥಿಯ ಹೆಸರು, ವಿದ್ಯಾರ್ಹತೆ, ಇಮೇಲ್ ವಿಳಾಸ, ದೂರವಾಣಿ ಸಂಖ್ಯೆ ಇತ್ಯಾದಿ) ನಂತರ ನಿಗದಿತ ಅರ್ಜಿ ಶುಲ್ಕ ಪಾವತಿಸಿ ಅರ್ಜಿಯನ್ನು ಸಲ್ಲಿಸಬೇಕು.

ನಿಗದಿತ ಅರ್ಜಿ ಶುಲ್ಕದ ವಿವರ : ಎಸ್ಸಿ, ಎಸ್ಟಿ, ಪ್ರವರ್ಗ 1 ಹಾಗೂ ಅಂಗವಿಕಲ ಅಭ್ಯರ್ಥಿಗಳು ರೂ. 500 ಹಾಗೂ ಇತರೆ ಅಭ್ಯರ್ಥಿಗಳು ರೂ. 1000 ಪಾವತಿಸಬೇಕು

ಶುಲ್ಕ ಪಾವತಿಸುವ ವಿಧಾನ : ಅರ್ಜಿ ಶುಲ್ಕವನ್ನು ಆನ್‌ಲೈನ್‌ನಲ್ಲಿ ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ನೆಟ್ ಬ್ಯಾಂಕಿಂಗ್ ಮೂಲಕ ಶುಲ್ಕ ಪಾವತಿಸಬಹುದು.

ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿರುವ ದಿನಾಂಕದ ವಿವರ :
ಅರ್ಜಿ ಸಲ್ಲಿಕೆಗೆ ಪ್ರಾರಂಭದ ದಿನಾಂಕ : ಡಿಸೆಂಬರ್ 18, 2021
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ : ಜನವರಿ 20, 2022

KMF VIMUL Recruitment 2021 : Important Links

ಅಧಿಸೂಚನೆ : Click Here
ಅರ್ಜಿಸಲ್ಲಿಸಿ : Click Here

ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.

3 thoughts on “KMF VIMUL Recruitment 2021 – Apply Online for 39 Manager, Assistant Post”

Leave a Comment