
Kodagu District Court Recruitment 2026 : ಕೊಡಗು ಜಿಲ್ಲಾ ನ್ಯಾಯಾಂಗ ಘಟಕದಲ್ಲಿ ಖಾಲಿ ಇರುವ ಬೆರಳಚ್ಚುಗಾರರು, ಚಾಲಕರು, ಆದೇಶಿಕ ಜಾರಿಕಾರರು ಹಾಗೂ ಜವಾನ/ಸೇವಕ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ವೇತನ, ಶೈಕ್ಷಣಿಕ ಅರ್ಹತೆ, ಕರ್ತವ್ಯ ಸ್ಥಳ, ಅರ್ಜಿ ಶುಲ್ಕ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.
Kodagu District Court Recruitment 2026 : Details of Vacancies
ಹುದ್ದೆ :
ಬೆರಳಚ್ಚುಗಾರರು, ಚಾಲಕರು, ಆದೇಶಿಕ ಜಾರಿಕಾರರು ಹಾಗೂ ಜವಾನ/ಸೇವಕ
ಕರ್ತವ್ಯ ಸ್ಥಳ :
ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಕೊಡಗು ಜಿಲ್ಲೆ, ಕರ್ನಾಟಕದಲ್ಲಿ ಕರ್ತವ್ಯ ನಿರ್ವಹಿಸಬೇಕು.
ಖಾಲಿಯಿರುವ ಹುದ್ದೆಗಳ ಸಂಖ್ಯೆ :
ಒಟ್ಟು 39 ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.
| ಹುದ್ದೆ | ಹುದ್ದೆಗಳ ಸಂಖ್ಯೆ |
| ಬೆರಳಚ್ಚುಗಾರರು | 8 |
| ಚಾಲಕರು | 2 |
| ಆದೇಶಿಕ ಜಾರಿಕಾರರು | 6 |
| ಜವಾನ/ಸೇವಕ | 23 |
ಶೈಕ್ಷಣಿಕ ಅರ್ಹತೆ :
ಬೆರಳಚ್ಚುಗಾರರು –
- ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣತೆ ಅಥವಾ ಕಮರ್ಷಿಯಲ್ ಪ್ರಾಕ್ಟೀಸ್ ನಲ್ಲಿ ಮೂರು ವರ್ಷಗಳ ಡಿಪ್ಲೊಮಾ ಪರೀಕ್ಷೆಯಲ್ಲಿ ಉತ್ತೀರ್ಣತೆ ಅಥವಾ ತತ್ಸಮಾನ ವಿದ್ಯಾರ್ಹತೆಯನ್ನು ಹೊಂದಿರಬೇಕು.
- ಕನ್ನಡ ಮತ್ತು ಆಂಗ್ಲ ಭಾಷೆಗಳಲ್ಲಿ ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿಯವರು ನಡೆಸುವ ಪ್ರೌಢದರ್ಜೆ ಬೆರಳಚ್ಚು ಪರೀಕ್ಷೆಯಲ್ಲಿ ಅಥವಾ ಸೆಕ್ರೆಟರಿಯಲ್ ಪ್ರಾಕ್ಟೀಸ್ ಡಿಪ್ಲೊಮಾ ಪರೀಕ್ಷೆಯಲ್ಲಿ ಉತ್ತೀರ್ಣತೆ ಅಥವಾ ತತ್ಸಮಾನ ವಿದ್ಯಾರ್ಹತೆಯನ್ನು ಹೊಂದಿರಬೇಕು.
ಚಾಲಕರು –
- ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಉತ್ತೀರ್ಣತೆ ಅಥವಾ ತತ್ಸಮಾನ ವಿದ್ಯಾರ್ಹತೆಯನ್ನು ಹೊಂದಿರಬೇಕು.
- ಚಾಲ್ತಿಯಲ್ಲಿರುವ ಭಾರಿ ವಾಹನ ಚಾಲನಾ ಪರವಾನಗಿಯನ್ನು ಹೊಂದಿರಬೇಕು.
ಆದೇಶಿಕ ಜಾರಿಕಾರರು –
- ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಉತ್ತೀರ್ಣತೆ ಅಥವಾ ತತ್ಸಮಾನ ವಿದ್ಯಾರ್ಹತೆಯನ್ನು ಹೊಂದಿರಬೇಕು.
- ಭಾರಿ/ ಹಗುರ ವಾಹನ ಚಾಲನಾ ಪರವಾನಗಿಯನ್ನು ಹೊಂದಿದವರಿಗೆ ಆದ್ಯತೆ ನೀಡಲಾಗುವುದು.
ಸೇವಕರು –
- ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಉತ್ತೀರ್ಣತೆ ಅಥವಾ ತತ್ಸಮಾನ ವಿದ್ಯಾರ್ಹತೆಯನ್ನು ಹೊಂದಿರಬೇಕು.
- ಕನ್ನಡ ಓದುವ ಮತ್ತು ಬರೆಯುವ ಸಾಮರ್ಥ್ಯ ಹೊಂದಿರಬೇಕು.
ಉದ್ಯೋಗ ಮಾಹಿತಿ : ಯಾದಗಿರಿ ಜಿಲ್ಲಾ ನ್ಯಾಯಾಲಯದಲ್ಲಿ ನೇಮಕಾತಿ 2026
ವಯೋಮಾನ (ದಿನಾಂಕ 03/10/2026ಕ್ಕೆ) :
- ಕನಿಷ್ಠ 18 ವರ್ಷ ಪೂರೈಸಿರಬೇಕು
- ಸಾಮಾನ್ಯ ಅಭ್ಯರ್ಥಿಗಳಿಗೆ – ಗರಿಷ್ಠ 40 ವರ್ಷ
- ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ – ಗರಿಷ್ಠ 43 ವರ್ಷ
- ಪ.ಜಾತಿ, ಪ.ಪಂ, ಪ್ರವರ್ಗ 1 ಅಭ್ಯರ್ಥಿಗಳಿಗೆ – ಗರಿಷ್ಠ 45 ವರ್ಷ
ವೇತನ :
| ಹುದ್ದೆ | ವೇತನ |
| ಬೆರಳಚ್ಚುಗಾರರು | ರೂ. 34,100 – ರೂ. 67,600 |
| ಚಾಲಕರು | ರೂ. 34,100 – ರೂ. 67,600 |
| ಆದೇಶಿಕ ಜಾರಿಕಾರರು | ರೂ. 31,775 – ರೂ. 61,300 |
| ಜವಾನ/ಸೇವಕ | ರೂ. 27,000 – ರೂ. 46,675 |
ಆಯ್ಕೆ ವಿಧಾನ :
- ಬೆರಳಚ್ಚುಗಾರ ಹುದ್ದೆಗೆ ಶೈಕ್ಷಣಿಕ ಅರ್ಹತಾ ಪರೀಕ್ಷೆಗಳಲ್ಲಿ ಗಳಿಸಿರುವ ಶೇಕಡಾವಾರು ಅಂಕಗಳು ಮತ್ತು ಬೆರಳಚ್ಚು ಮಾಡುವ ಕೌಶಲ್ಯ ಪರೀಕ್ಷೆಯಲ್ಲಿ ಗಳಿಸುವ ಶೇಕಡಾವಾರು ಅಂಕಗಳು ಹಾಗೂ ಸಂದರ್ಶನದಲ್ಲಿ ಗಳಿಸುವ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು.
- ಆದೇಶ ಜಾರಿಕಾರ ಮತ್ತು ಜವಾನ/ಸೇವಕ ಹುದ್ದೆಗೆ ಶೈಕ್ಷಣಿಕ ಅರ್ಹತಾ ಪರೀಕ್ಷೆಗಳಲ್ಲಿ ಗಳಿಸಿರುವ ಶೇಕಡಾವಾರು ಅಂಕಗಳ ಆಧಾರದ ಮೇಲೆ ಅತಿ ಹೆಚ್ಚು ಅಂಕ ಪಡೆದ ಅಭ್ಯರ್ಥಿಗಳನ್ನು ಸಂದರ್ಶನ ನಡೆಸಿ ಆಯ್ಕೆ ಮಾಡಲಾಗುವುದು.
ಉದ್ಯೋಗ ಮಾಹಿತಿ : ಹಾಸನ ಜಿಲ್ಲಾ ನ್ಯಾಯಾಲಯದಲ್ಲಿ ನೇಮಕಾತಿ 2026
ಅರ್ಜಿ ಸಲ್ಲಿಕೆಯ ವಿಧಾನ :
ಅಭ್ಯರ್ಥಿಯು ಈ ಹುದ್ದೆಗೆ ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು.
ಹಂತ 1 : ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಮೊದಲು ಜಿಲ್ಲಾ ನ್ಯಾಯಾಲಯವು ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 2 : ಜಿಲ್ಲಾ ನ್ಯಾಯಾಲಯದ ವೆಬ್‌ಸೈಟ್ ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ ಅಪ್ಲೈ ಆನ್‌ಲೈನ್ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಪ್ಲಿಕೇಷನ್ ತೆರೆದುಕೊಳ್ಳಿ.
ಹಂತ 3 : ಅಪ್ಲಿಕೇಷನ್ ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಮುಂದಿನ ಹಂತಕ್ಕೆ ತೆರಳುವ ಮುನ್ನ ಪುನಃ ಒಮ್ಮೆ ಪರಿಶೀಲಿಸಿ.
ಹಂತ 4 : ಅಪ್ಲಿಕೇಷನ್ ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಅಪ್ಲೋಡ್ ಮಾಡಲು ಸೂಚಿಸಿದ್ದರೆ, ಅವುಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಿ (ಅಗತ್ಯವಿದ್ದರೆ ಮಾತ್ರ).
ಹಂತ 5 : ಕೊನೆಯದಾಗಿ, ಅಭ್ಯರ್ಥಿಗೆ ಅರ್ಜಿ ಶುಲ್ಕ ಪಾವತಿಸಲು ಸೂಚಿಸಿದ್ದರೆ, ಶುಲ್ಕ ಪಾವತಿಸಿ ಅರ್ಜಿ ಸಲ್ಲಿಕೆ ಪೂರ್ಣಗೊಳಿಸಿ.
ನಿಗದಿತ ಅರ್ಜಿ ಶುಲ್ಕದ ವಿವರ :
- ಸಾಮಾನ್ಯ ಅಭ್ಯರ್ಥಿಗಳು – ರೂ. 300
- ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳು – ರೂ. 150
- ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ 1, ಅಂಗವಿಕಲ ಅಭ್ಯರ್ಥಿಗಳು – ಶುಲ್ಕ ವಿನಾಯಿತಿ ನೀಡಲಾಗಿದೆ
ಶುಲ್ಕ ಪಾವತಿಸುವ ವಿಧಾನ :
ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ನೆಟ್ ಬ್ಯಾಂಕಿಂಗ್, ಯುಪಿಐ ಮೂಲಕ ಶುಲ್ಕ ಪಾವತಿಸಬಹುದು.
ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿದ ದಿನಾಂಕದ ವಿವರ :
- ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ಸೆಪ್ಟೆಂಬರ್ 03, 2026
- ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಅಕ್ಟೋಬರ್ 03, 2026
- ಶುಲ್ಕ ಪಾವತಿಸಲು ಕೊನೆಯ ದಿನಾಂಕ : ಅಕ್ಟೋಬರ್ 03, 2026
Kodagu District Court Recruitment 2026 : Important Links
| TYPIST NOTIFICATION | CLICK HERE |
| DRIVER NOTIFICATION | CLICK HERE |
| PROCESS SERVER NOTIFICATION | CLICK HERE |
| PEON NOTIFICATION | CLICK HERE |
| APPLY ONLINE | CLICK HERE |
| Telegram Join Link | Click Here |
| WhatsApp Group Link | Click Here |
ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.