Kodagu VA Recruitment 2022 – Apply Online for 35 Village Accountant Posts

Kodagu VA Recruitment 2022 : ಕೊಡಗು ಜಿಲ್ಲೆಯ ಕಂದಾಯ ಘಟಕದಲ್ಲಿ ಖಾಲಿ ಇರುವ ಗ್ರಾಮಲೆಕ್ಕಿಗರ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ವೇತನ, ಅರ್ಜಿ ಶುಲ್ಕ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

Kodagu VA Recruitment 2022 : Details of Vacancies

ಹುದ್ದೆ : ಗ್ರಾಮ ಲೆಕ್ಕಿಗರು

ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಕೊಡಗು ಜಿಲ್ಲೆಯಲ್ಲಿ ಕರ್ತವ್ಯ ನಿರ್ವಹಿಸಬೇಕು.

ಖಾಲಿಯಿರುವ ಹುದ್ದೆಗಳ ಸಂಖ್ಯೆ : ಒಟ್ಟು 35 ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.

Kodagu VA Recruitment 2022 – Apply Online for 35 Village Accountant Posts

ಶೈಕ್ಷಣಿಕ ಅರ್ಹತೆ : ಕರ್ನಾಟಕ ಪದವಿ ಪೂರ್ವ ಶಿಕ್ಷಣ ಮಂಡಳಿ ನಡೆಸುವ ದ್ವಿತೀಯ ಪಿ.ಯು.ಸಿ. ಪರೀಕ್ಷೆ ಅಥವಾ ಸೆಂಟ್ರಲ್ ಬೋರ್ಡ್ ಆಪ್ ಸೆಕೆಂಡರಿ ಎಜುಕೇಷನ್ (CBSE) ಅಥವಾ ಐ.ಸಿ.ಎಸ್.ಇ (ICSE) ನಡೆಸುವ 12 ನೇ ತರಗತಿ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿರಬೇಕು.

ವಯೋಮಾನ : ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಗಳು ಕನಿಷ್ಠ 18 ವರ್ಷ ಪೂರೈಸಿರಬೇಕು. ಹಾಗೂ,
ಎಸ್ಸಿ, ಎಸ್ಟಿ, ಪ್ರವರ್ಗ 1 ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷ
ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ ಗರಿಷ್ಠ 38 ವರ್ಷ
ಸಾಮಾನ್ಯ ಅಭ್ಯರ್ಥಿಗಳಿಗೆ ಗರಿಷ್ಠ 35 ವರ್ಷ

ವೇತನ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 21,400 ರಿಂದ ರೂ. 42,000 ಶ್ರೇಣಿಯಲ್ಲಿ ವೇತನ ನೀಡಲಾಗುತ್ತದೆ.

ಆಯ್ಕೆ ವಿಧಾನ : ದ್ವಿತೀಯ ಪಿ.ಯು.ಸಿ. ಪರೀಕ್ಷೆ ಅಥವಾ CBSE ಅಥವಾ ICSE ನಡೆಸುವ 12ನೇ ತರಗತಿ ಪರೀಕ್ಷೆಯಲ್ಲಿ ಪಡೆದ ಅಂಕಗಳ (On Merit) ಆಧಾರದ ಮೇಲೆ ಆಯಾ ಮೀಸಲಾತಿ ಪ್ರವರ್ಗಕ್ಕೆ ಸಂಬಂಧಿಸಿದಂತೆ ಆಯ್ಕೆ ಮಾಡಲಾಗುವುದು.

ಉದ್ಯೋಗ ಮಾಹಿತಿ : ಉತ್ತರ ಕನ್ನಡ ಜಿಲ್ಲೆಯಲ್ಲಿ ಗ್ರಾಮಲೆಕ್ಕಿಗರ ಹುದ್ದೆಗಳ ನೇರ ನೇಮಕಾತಿ 2022

ಕೊಡಗು ಜಿಲ್ಲಾ ಕಂದಾಯ ಘಟಕದಲ್ಲಿ ಖಾಲಿಯಿರುವ ಹುದ್ದೆಗೆ ಅರ್ಜಿ ಸಲ್ಲಿಕೆಯ ವಿಧಾನ :
• ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್‌ಲೈನ್‌ ಮೂಲಕವೇ ಅರ್ಜಿಯನ್ನು ಸಲ್ಲಿಸಬೇಕು.
• ಅಭ್ಯರ್ಥಿಗಳು ಇಲಾಖೆಯ ಅಧಿಕೃತ ವೆಬ್‌ಸೈಟ್ ವಿಳಾಸಕ್ಕೆ ಭೇಟಿ ನೀಡಿ, ಆನ್‌ಲೈನ್‌ ಅರ್ಜಿಯಲ್ಲಿ ಹುದ್ದೆಗೆ ಅಗತ್ಯವಿರುವ ಎಲ್ಲಾ ಮಾಹಿತಿಯನ್ನು ಭರ್ತಿ ಮಾಡಿ ( ಉದಾಹರಣೆಗೆ : ಅಭ್ಯರ್ಥಿಯ ಹೆಸರು, ವಿದ್ಯಾರ್ಹತೆ, ಇಮೇಲ್ ವಿಳಾಸ ಇತ್ಯಾದಿ) ನಂತರ ನಿಗದಿತ ಅರ್ಜಿ ಶುಲ್ಕ ಪಾವತಿಸಿ ಅರ್ಜಿಯನ್ನು ಸಲ್ಲಿಸಬೇಕು

ನಿಗದಿತ ಅರ್ಜಿ ಶುಲ್ಕದ ವಿವರ :
• ಪ.ಜಾತಿ/ಪ.ಪಂ/ಪ್ರ1 ರ ಅಭ್ಯರ್ಥಿಗಳು ರೂ. 200
• ಸಾಮಾನ್ಯ ವರ್ಗ, 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳು ರೂ. 400

ಶುಲ್ಕ ಪಾವತಿಸುವ ವಿಧಾನ : ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ನೆಟ್ ಬ್ಯಾಂಕಿಂಗ್ ಮೂಲಕ ಶುಲ್ಕ ಪಾವತಿಸಬಹುದು ಅಥವಾ ಇಲಾಖೆಯ ವೆಬ್‌ಸೈಟ್ ನಿಂದ ಚಲನ್ ಪ್ರಿಂಟ್ ತೆಗೆದು ಎಸ್.ಬಿ.ಐ ಬ್ಯಾಂಕಿನ ಯಾವುದೇ ಶಾಖೆಗಳಲ್ಲಿ ಶುಲ್ಕ ಪಾವತಿಸಬಹುದು.

ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿದ ದಿನಾಂಕದ ವಿವರ :
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ಏಪ್ರಿಲ್ 19, 2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಮೇ 19, 2022
ಶುಲ್ಕ ಪಾವತಿಸಲು ಕೊನೆಯ ದಿನಾಂಕ : ಮೇ 19, 2022

Kodagu VA Recruitment 2022 : Important Links

ಅಧಿಸೂಚನೆClick Here
ಅರ್ಜಿ ಸಲ್ಲಿಸಿClick Here
1:5 Verification ListClick Here

ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.

Leave a Comment