Kodagu Zilla Panchayat Recruitment 2023 : ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಕೊಡಗು ಜಿಲ್ಲಾ ಪಂಚಾಯಿತಿಯಲ್ಲಿ ಅಗತ್ಯವಿರುವ ತಾಂತ್ರಿಕ ಸಹಾಯಕರು ಹಾಗೂ ಐ.ಇ.ಸಿ ಸಂಯೋಜಕ ಹುದ್ದೆಗಳ ಭರ್ತಿ ಮಾಡಲು ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ವಯೋಮಾನ, ವೇತನ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.
Kodagu Zilla Panchayat Recruitment 2023 : Details of Vacancies
ಹುದ್ದೆ : ತಾಂತ್ರಿಕ ಸಹಾಯಕರು (ಕೃಷಿ), ತಾಂತ್ರಿಕ ಸಹಾಯಕರು (ತೋಟಗಾರಿಕೆ), ತಾಲ್ಲೂಕು ಐ.ಇ.ಸಿ ಸಂಯೋಜಕರು
ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಕೊಡಗು ಜಿಲ್ಲೆಯಲ್ಲಿ ಕರ್ತವ್ಯ ನಿರ್ವಹಿಸಬೇಕು.
ಖಾಲಿಯಿರುವ ಹುದ್ದೆಗಳ ಸಂಖ್ಯೆ : ಒಟ್ಟು 05 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.
ಹುದ್ದೆ | ಹುದ್ದೆಗಳ ಸಂಖ್ಯೆ |
ತಾಂತ್ರಿಕ ಸಹಾಯಕರು (ಕೃಷಿ) | 2 |
ತಾಂತ್ರಿಕ ಸಹಾಯಕರು (ತೋಟಗಾರಿಕೆ) | 2 |
ತಾಲ್ಲೂಕು ಐ.ಇ.ಸಿ ಸಂಯೋಜಕರು | 1 |
ಶೈಕ್ಷಣಿಕ ಅರ್ಹತೆ :
• ತಾಂತ್ರಿಕ ಸಹಾಯಕರು (ಕೃಷಿ) – ಬಿ.ಎಸ್.ಸಿ/ ಎಂ.ಎಸ್.ಸಿ (ಅಗ್ರಿಕಲ್ಚರ್)
• ತಾಂತ್ರಿಕ ಸಹಾಯಕರು (ತೋಟಗಾರಿಕೆ) – ಬಿ.ಎಸ್.ಸಿ/ ಎಂ.ಎಸ್.ಸಿ (ಹೊರ್ಟಿಕಲ್ಚರ್)
• ತಾಲ್ಲೂಕು ಐ.ಇ.ಸಿ ಸಂಯೋಜಕರು – ಸ್ನಾತಕೋತ್ತರ ಪದವಿ ಜೊತೆಗೆ ಕಂಪ್ಯೂಟರ್ ಜ್ಞಾನ ಹೊಂದಿರಬೇಕು.
ವಯೋಮಾನ : ಅಭ್ಯರ್ಥಿಗಳಿಗೆ ಕನಿಷ್ಠ 21 ವರ್ಷ, ಗರಿಷ್ಠ 40 ವರ್ಷ ವಯೋಮಾನ ನಿಗದಿಪಡಿಸಲಾಗಿದೆ.
ಉದ್ಯೋಗ ಮಾಹಿತಿ : ರೈಲ್ವೆ ನೇಮಕಾತಿ 2023
ವೇತನ : ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 24,000 ಸಂಭಾವನೆ ಹಾಗೂ ಪ್ರಯಾಣ ಭತ್ಯೆ ರೂ. 2000 ನೀಡಲಾಗುವುದು.
ಆಯ್ಕೆ ವಿಧಾನ : ದಾಖಲಾತಿ ಪರಿಶೀಲನೆಯಲ್ಲಿ ಅರ್ಹಗೊಂಡ ಅಭ್ಯರ್ಥಿಗಳನ್ನು ವಿದ್ಯಾರ್ಹತೆ ಹೊಂದಿದ ಅಂಕಗಳು ಹಾಗೂ ಅನುಭವದ ಆಧಾರದ ಮೇಲೆ ಅರ್ಹತಾ ಪಟ್ಟಿಯನ್ನು ತಯಾರಿಸಿ ಹುದ್ದೆಗೆ ನೇಮಕ ಮಾಡಲಾಗುವುದು.
ಅನುಭವ : ಅಭ್ಯರ್ಥಿಗಳು ಹುದ್ದೆಗೆ ಸಂಬಂಧಿಸಿದ ಕಾರ್ಯಕ್ಷೇತ್ರದಲ್ಲಿ ಕನಿಷ್ಠ 2 ವರ್ಷಗಳ ಅನುಭವ ಹೊಂದಿರಬೇಕು.
ಅರ್ಜಿ ಸಲ್ಲಿಕೆಯ ವಿಧಾನ : ಅಭ್ಯರ್ಥಿಯು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 1 : ಇಲಾಖೆಯ Official Site ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ Apply Online Link ಮೇಲೆ ಕ್ಲಿಕ್ ಮಾಡಿ Application ತೆರೆದುಕೊಳ್ಳಿ.
ಹಂತ 2 : Application ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಮುಂದಿನ ಹಂತಕ್ಕೆ ತೆರಳುವ ಮುನ್ನ ಪುನಃ ಒಮ್ಮೆ ಪರಿಶೀಲಿಸಿ.
ಹಂತ 3 : ಕೊನೆಯದಾಗಿ, Application ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು Upload ಮಾಡಲು ಸೂಚಿಸಿದ್ದರೆ, ಅವುಗಳನ್ನು ಸ್ಕ್ಯಾನ್ ಮಾಡಿ Upload ಮಾಡಿ (ಅಗತ್ಯವಿದ್ದರೆ ಮಾತ್ರ).
ನಿಗದಿತ ಅರ್ಜಿ ಶುಲ್ಕದ ವಿವರ : ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ
ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿರುವ ದಿನಾಂಕದ ವಿವರ :
ಅರ್ಜಿ ಸಲ್ಲಿಕೆಗೆ ಪ್ರಾರಂಭದ ದಿನಾಂಕ : ಜನವರಿ 07, 2023
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ : ಜನವರಿ 23, 2023
Kodagu Zilla Panchayat Recruitment 2023 : Important Links
NOTIFICATION | CLICK HERE |
APPLY ONLINE | CLICK HERE |
Telegram Join Link | Click Here |
ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಬೇಕಾದ ದೂರವಾಣಿ ಸಂಖ್ಯೆ – Mega Agency 9980001309, DIEC 6363994142
ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.