KOF Chitradurga Recruitment 2021 : ಪ್ರಾದೇಶಿಕ ಎಣ್ಣೆಬೀಜ ಬೆಳೆಗಾರರ ಸಹಕಾರ ಸಂಘಗಳ ಒಕ್ಕೂಟದಲ್ಲಿ ಖಾಲಿಯಿರುವ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ವೇತನ, ಶೈಕ್ಷಣಿಕ ಅರ್ಹತೆ, ಅರ್ಜಿ ಸಲ್ಲಿಕೆ ವಿಧಾನ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.
KOF Chitradurga Recruitment 2021 : Details of Vacancies
ಹುದ್ದೆ :
• ಸೀಡ್ಸ್ ಆಫೀಸರ್,
• ಕೆಮಿಸ್ಟ್~1,
• ಅಸಿಸ್ಟೆಂಟ್ ಎಕ್ಸಿಕ್ಯೂಟಿವ್ (ಕಮರ್ಶಿಯಲ್),
• ಅಸಿಸ್ಟೆಂಟ್ ಎಕ್ಸಿಕ್ಯೂಟಿವ್ (ಫೀಲ್ಡ್),
• ಅಸಿಸ್ಟೆಂಟ್ ಎಕ್ಸಿಕ್ಯೂಟಿವ್ (ಅಕೌಂಟ್ಸ್)
ಕರ್ತವ್ಯ ಸ್ಥಳ :
ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಚಿತ್ರದುರ್ಗ ಜಿಲ್ಲೆಯಲ್ಲಿ ಕರ್ತವ್ಯ ನಿರ್ವಹಿಸಬೇಕು.
ಖಾಲಿಯಿರುವ ಹುದ್ದೆಗಳ ಸಂಖ್ಯೆ :
ಒಟ್ಟು 06 ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.
ಶೈಕ್ಷಣಿಕ ಅರ್ಹತೆ :
ಹುದ್ದೆ | ಶೈಕ್ಷಣಿಕ ಅರ್ಹತೆ |
ಸೀಡ್ಸ್ ಆಫೀಸರ್ | ಕೃಷಿ ಪದವಿ |
ಕೆಮಿಸ್ಟ್~1 | ಕೆಮಿಸ್ಟ್ರಿಯಲ್ಲಿ ಬಿ.ಎಸ್ಸಿ ಪದವಿ |
ಅಸಿಸ್ಟೆಂಟ್ ಎಕ್ಸಿಕ್ಯೂಟಿವ್ (ಕಮರ್ಶಿಯಲ್) | ಬಿಬಿಎಂ/ಬಿಬಿಎ ಪದವಿ |
ಅಸಿಸ್ಟೆಂಟ್ ಎಕ್ಸಿಕ್ಯೂಟಿವ್ (ಫೀಲ್ಡ್) | ಯಾವುದೇ ಪದವಿ |
ಅಸಿಸ್ಟೆಂಟ್ ಎಕ್ಸಿಕ್ಯೂಟಿವ್ (ಅಕೌಂಟ್ಸ್) | ಬಿ.ಕಾಂ ಪದವಿ, ಟ್ಯಾಲಿ ಜ್ಞಾನ |
ವಯೋಮಾನ :
ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಗೆ ಕನಿಷ್ಠ 18 ವರ್ಷ ಪೂರೈಸಿರಬೇಕು ಹಾಗೂ
ಸಾಮಾನ್ಯ ವರ್ಗ ಗರಿಷ್ಠ 35 ವರ್ಷ
ಪ.ಜಾ/ಪ.ಪಂ/ಪ್ರ~1 ಗರಿಷ್ಠ 40 ವರ್ಷ
2ಎ, 2ಬಿ, 3ಎ, 3ಬಿ ಗರಿಷ್ಠ 38 ವರ್ಷ
ವೇತನ :
ಸೀಡ್ಸ್ ಆಫೀಸರ್ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. ರೂ. 33,450 ~ ರೂ. 62,600 ಹಾಗೂ ಉಳಿದ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ರೂ. 21,400 ~ ರೂ. 42,000 ಶ್ರೇಣಿಯಲ್ಲಿ ವೇತನ ನೀಡಲಾಗುತ್ತದೆ
ಆಯ್ಕೆ ವಿಧಾನ :
ಅರ್ಹ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ ನಡೆಸಿ, ಲಿಖಿತ ಪರೀಕ್ಷೆಯಲ್ಲಿ ಗಳಿಸಿದ ಅಂಕಗಳ ಮೆರಿಟ್ ಆಧಾರದ ಮೇಲೆ ಮೌಖಿಕ ಸಂದರ್ಶನಕ್ಕೆ ಕರೆಯಲಾಗುವುದು. ಅಭ್ಯರ್ಥಿಯು ಲಿಖಿತ ಪರೀಕ್ಷೆಯಲ್ಲಿ ಗಳಿಸಿದ ಅಂಕಗಳನ್ನು ಶೇಕಡಾ 85ಕ್ಕೆ ಇಳಿಸಿ ಪ್ರಾಪ್ತವಾಗುವ ಅಂಕಗಳ ಜೊತೆಗೆ ಮತ್ತು ಮೌಖಿಕ ಪರೀಕ್ಷೆಯಲ್ಲಿ ಗಳಿಸುವ ಅಂಕಗಳನ್ನು ಒಟ್ಟುಗೂಡಿಸಿ ಹೆಚ್ಚಿನ ಅಂಕ ಪಡೆದ ಅಭ್ಯರ್ಥಿಗಳನ್ನು ಹುದ್ದೆಗಳಿಗೆ ಆಯ್ಕೆ ಮಾಡಲಾಗುತ್ತದೆ.
ಉದ್ಯೋಗ ಮಾಹಿತಿ : NYKS Recruitment 2021 : 13206 ರಾಷ್ಟ್ರೀಯ ಯುವ ಸ್ವಯಂಸೇವಕರ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ
ಪ್ರಾದೇಶಿಕ ಎಣ್ಣೆಬೀಜ ಬೆಳೆಗಾರರ ಸಹಕಾರ ಸಂಘಗಳ ಒಕ್ಕೂಟದಲ್ಲಿ ಅಗತ್ಯವಿರುವ ಹುದ್ದೆಗೆ ಅರ್ಜಿ ಸಲ್ಲಿಕೆಯ ವಿಧಾನ :
• ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಅಂಚೆ ಮೂಲಕವೇ ಅರ್ಜಿಯನ್ನು ಸಲ್ಲಿಸಬೇಕು.
• ಅಭ್ಯರ್ಥಿಗಳು ಪ್ರಾದೇಶಿಕ ಎಣ್ಣೆಬೀಜ ಬೆಳೆಗಾರರ ಸಹಕಾರ ಸಂಘಗಳ ಒಕ್ಕೂಟದ ಅಧಿಕೃತ ವೆಬ್‌ಸೈಟ್ ವಿಳಾಸಕ್ಕೆ ಭೇಟಿ ನೀಡಿ ಅರ್ಜಿ ನಮೂನೆಯನ್ನು ಡೌನ್ಲೋಡ್ ಮಾಡಿ ನಂತರ ಅರ್ಜಿ ನಮೂನೆಯಲ್ಲಿ ಅಗತ್ಯವಿರುವ ಎಲ್ಲಾ ಮಾಹಿತಿಯನ್ನು ಭರ್ತಿ ಮಾಡಿ ( ಉದಾಹರಣೆಗೆ : ಅಭ್ಯರ್ಥಿಯ ಹೆಸರು, ವಿದ್ಯಾರ್ಹತೆ, ಇಮೇಲ್ ವಿಳಾಸ ಇತ್ಯಾದಿ) ಕೊನೆಯಲ್ಲಿ ಭರ್ತಿ ಮಾಡಿದ ಅರ್ಜಿಯನ್ನು ಅಗತ್ಯ ದಾಖಲೆಗಳೊಂದಿಗೆ ಅಂಚೆ ಮೂಲಕ ಕಛೇರಿಯ ವಿಳಾಸಕ್ಕೆ ಕಳುಹಿಸಬೇಕು.
ಅರ್ಜಿ ಸಲ್ಲಿಸುವ ವಿಳಾಸ :
ವ್ಯವಸ್ಥಾಪಕ ನಿರ್ದೇಶಕರು,
ಪ್ರಾದೇಶಿಕ ಎಣ್ಣೆಬೀಜ ಬೆಳೆಗಾರರ ಸಹಕಾರ ಸಂಘಗಳ ಒಕ್ಕೂಟ ನಿಯಮಿತ, ಪ್ಲಾಟ್ ಸಂಖ್ಯೆ 74/ಎ, ಕೆಳಗೋಟೆ ಇಂಡಸ್ಟ್ರಿಯಲ್ ಏರಿಯಾ, ಚಿತ್ರದುರ್ಗ 577501
ನಿಗದಿತ ಅರ್ಜಿ ಶುಲ್ಕದ ವಿವರ :
ಪ.ಜಾತಿ, ಪ.ಪಂ, ಪ್ರವರ್ಗ 1, ಅಂಗವಿಕಲ ಅಭ್ಯರ್ಥಿಗಳು ರೂ. 500 ಹಾಗೂ ಇತರೆ ವರ್ಗದ ಅಭ್ಯರ್ಥಿಗಳು ರೂ. 1,000 ಪಾವತಿಸಬೇಕು
ಶುಲ್ಕ ಪಾವತಿಸುವ ವಿಧಾನ :
ನಿಗದಿ ಪಡಿಸಿದ ಶುಲ್ಕವನ್ನು ಅರ್ಜಿಯೊಂದಿಗೆ ಡಿಡಿ/ಪೇ ಆರ್ಡರ್ ನ್ನು ಚಿತ್ರದುರ್ಗದಲ್ಲಿ ಸಂದಾಯವಾಗುವಂತೆ Managing Director, ROGCSU Ltd, Chitradurga ಇವರ ಹೆಸರಿನಲ್ಲಿ ಪಡೆದು ಲಗತ್ತಿಸಬೇಕು
ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿದ ದಿನಾಂಕದ ವಿವರ :
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ಫೆಬ್ರುವರಿ 05, 2021,
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಮಾರ್ಚ್ 08, 2021
KOF Chitradurga Recruitment 2021 : Important Links
ಅಧಿಸೂಚನೆ : Click Here
ಅರ್ಜಿ ನಮೂನೆ : Click Here
ಕೊನೆಯ ಪದಗಳು :
ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.