KOF Hubli Recruitment 2021 : 15 ಲೆಕ್ಕಾಧಿಕಾರಿ, ಚಾಲಕ ಹಾಗೂ ವಿವಿಧ ಹುದ್ದೆಗಳ ಭರ್ತಿ

KOF Hubli Recruitment 2021 : ಪ್ರಾದೇಶಿಕ ಎಣ್ಣೆಬೀಜ ಬೆಳೆಗಾರರ ಸಹಕಾರಿ ಸಂಘಗಳ ಒಕ್ಕೂಟದಲ್ಲಿ ಖಾಲಿಯಿರುವ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ವೇತನ, ಅರ್ಜಿ ಸಲ್ಲಿಕೆ ದಿನಾಂಕ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

KOF Hubli Recruitment 2021 : Details of Vacancies

ಹುದ್ದೆ : ಸಾಮಾನ್ಯ ಕೆಲಸಗಾರ, ಚಾಲಕ, ಸಹಾಯಕ ಮಾರಾಟಾಧಿಕಾರಿ, ಸಹಾಯಕ ಲೆಕ್ಕಾಧಿಕಾರಿ, ಸಹಾಯಕ ಆಡಳಿತಾಧಿಕಾರಿ ಹಾಗೂ ಕ್ಷೇತ್ರಾಧಿಕಾರಿ

ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಹುಬ್ಬಳ್ಳಿಯಲ್ಲಿ ಕೆಲಸ ನಿರ್ವಹಿಸಬೇಕು

ಖಾಲಿಯಿರುವ ಹುದ್ದೆಗಳ ಸಂಖ್ಯೆ : ಒಟ್ಟು 15 ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.

ಹುದ್ದೆಹುದ್ದೆಗಳ ಸಂಖ್ಯೆವೇತನ
ಸಾಮಾನ್ಯ ಕೆಲಸಗಾರ0417,000-28950
ಚಾಲಕ0117,000-28950
ಸಹಾಯಕ ಮಾರಾಟಾಧಿಕಾರಿ0427650-52650
ಸಹಾಯಕ ಲೆಕ್ಕಾಧಿಕಾರಿ0327650-52650
ಸಹಾಯಕ ಆಡಳಿತಾಧಿಕಾರಿ0127650-52650
ಕ್ಷೇತ್ರಾಧಿಕಾರಿ0237900-70850

ಶೈಕ್ಷಣಿಕ ಅರ್ಹತೆ :
• ಸಾಮಾನ್ಯ ಕೆಲಸಗಾರ ಹುದ್ದೆಗೆ ಎಸ್.ಎಸ್.ಎಲ್.ಸಿ ಉತ್ತೀರ್ಣರಾಗಿರಬೇಕು
• ಚಾಲಕ ಹುದ್ದೆಗೆ ಎಸ್.ಎಸ್.ಎಲ್.ಸಿ ಪಾಸಾಗಿರಬೇಕು ಹಾಗೂ ಲಘು ಮತ್ತು ಭಾರಿ ವಾಹನ ಚಾಲನೆ ಪರವಾನಿಗೆ ಹೊಂದಿರಬೇಕು
• ಸಹಾಯಕ ಮಾರಾಟಾಧಿಕಾರಿ ಹಾಗೂ ಸಹಾಯಕ ಆಡಳಿತಾಧಿಕಾರಿ ಹುದ್ದೆಗೆ ಅಂಗೀಕೃತ ವಿದ್ಯಾ‌ಸಂಸ್ಥೆಯಿಂದ ಪಡೆದ ಪದವಿ ಜೊತೆಗೆ ಕಂಪ್ಯೂಟರ್ ಜ್ಞಾನ ಹೊಂದಿರಬೇಕು
• ಸಹಾಯಕ ಲೆಕ್ಕಾಧಿಕಾರಿ ಹುದ್ದೆಗೆ ಅಂಗೀಕೃತ ವಿದ್ಯಾ‌ಸಂಸ್ಥೆಯಿಂದ ಬಿ.ಕಾಂ ಪದವಿ ಜೊತೆಗೆ ಟ್ಯಾಲಿ ಅಕೌಂಟಿಂಗ್ ಹಾಗೂ ಕಂಪ್ಯೂಟರ್ ಜ್ಞಾನ ಹೊಂದಿರಬೇಕು
• ಕ್ಷೇತ್ರಾಧಿಕಾರಿ ಹುದ್ದೆಗೆ ಅಂಗೀಕೃತ ವಿದ್ಯಾ‌ಸಂಸ್ಥೆಯಿಂದ ಪಡೆದ ಕೃಷಿ ಪದವಿ ಹೊಂದಿರಬೇಕು

ವಯೋಮಾನ : ಅರ್ಜಿ ಸಲ್ಲಿಸುವ ಕೊನೆಯ ದಿನಾಂಕಕ್ಕೆ ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷ ಹಾಗೂ ಗರಿಷ್ಠ 35 ವರ್ಷ ಮೀರಿರಬಾರದು

ವಯೋಮಿತಿ ಸಡಿಲಿಕೆ : ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ಎಸ್ಸಿ, ಎಸ್ಟಿ, ಪ್ರವರ್ಗ 1 ಅಭ್ಯರ್ಥಿಗಳಿಗೆ 5 ವರ್ಷ ಸಡಿಲಿಕೆ ಇದೆ

ಆಯ್ಕೆ ವಿಧಾನ : ಸ್ವೀಕರಿಸಲಾದ ಅರ್ಜಿಗಳನ್ನು ನಿಗದಿಪಡಿಸಿದ ವಿದ್ಯಾರ್ಹತೆ ಹಾಗೂ ಅಗತ್ಯ ದಾಖಲೆಗಳ ಆಧಾರದ ಮೇಲೆ ಪರಿಶೀಲಿಸಿ ಅರ್ಹ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ ನಡೆಸಲಾಗುವುದು ನಂತರ ಲಿಖಿತ ಪರೀಕ್ಷೆಯಲ್ಲಿ ಗಳಿಸಿದ ಅಂಕಗಳ ಮೆರಿಟ್ ಆಧಾರದ ಮೇಲೆ ಅಭ್ಯರ್ಥಿಗಳಿಗೆ ಮೌಖಿಕ ಸಂದರ್ಶನ ನಡೆಸಿ ಹುದ್ದೆಗಳಿಗೆ ಆಯ್ಕೆ ಮಾಡಲಾಗುತ್ತದೆ.

ಉದ್ಯೋಗ ಮಾಹಿತಿ : Anganwadi Recruitment 2021 | 204 ಕಾರ್ಯಕರ್ತೆ ಹಾಗೂ ಸಹಾಯಕಿ ಹುದ್ದೆಗಳ ಭರ್ತಿ

ಪ್ರಾದೇಶಿಕ ಎಣ್ಣೆಬೀಜ ಬೆಳೆಗಾರರ ಸಹಕಾರಿ ಸಂಘಗಳ ಒಕ್ಕೂಟದಲ್ಲಿ ಖಾಲಿಯಿರುವ ಹುದ್ದೆಗೆ ಅರ್ಜಿ ಸಲ್ಲಿಕೆಯ ವಿಧಾನ :
• ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಖುದ್ದಾಗಿ ಹಾಜರಾಗಿ ಅಥವಾ ಅಂಚೆ ಮೂಲಕವೇ ಅರ್ಜಿಯನ್ನು ಸಲ್ಲಿಸಬೇಕು.
• ಅಭ್ಯರ್ಥಿಗಳು ಪ್ರಾದೇಶಿಕ ಎಣ್ಣೆಬೀಜ ಬೆಳೆಗಾರರ ಸಹಕಾರಿ ಸಂಘಗಳ ಒಕ್ಕೂಟದ ಅಧಿಸೂಚನೆಯಲ್ಲಿ ನೀಡಲಾಗಿರುವ ಅರ್ಜಿ ನಮೂನೆಯನ್ನು ಡೌನ್ಲೋಡ್ ಮಾಡಿ ನಂತರ ಅರ್ಜಿ ನಮೂನೆಯಲ್ಲಿ ಅಗತ್ಯವಿರುವ ಎಲ್ಲಾ ಮಾಹಿತಿಯನ್ನು ಭರ್ತಿ ಮಾಡಿ ( ಉದಾಹರಣೆಗೆ : ಅಭ್ಯರ್ಥಿಯ ಹೆಸರು, ವಿದ್ಯಾರ್ಹತೆ, ಇಮೇಲ್ ವಿಳಾಸ ಇತ್ಯಾದಿ) ಕೊನೆಯಲ್ಲಿ ಭರ್ತಿ ಮಾಡಿದ ಅರ್ಜಿಯನ್ನು ಅಗತ್ಯ ದಾಖಲೆಗಳೊಂದಿಗೆ ಅಂಚೆ ಮೂಲಕ ಅಥವಾ ಖುದ್ದಾಗಿ ಹಾಜರಾಗಿ ಕಛೇರಿಗೆ ಸಲ್ಲಿಸಬೇಕು.

ಅರ್ಜಿ ಸಲ್ಲಿಸುವ ವಿಳಾಸ : ವ್ಯವಸ್ಥಾಪಕ ನಿರ್ದೇಶಕರು, ಪ್ರಾದೇಶಿಕ ಎಣ್ಣೆಬೀಜ ಬೆಳೆಗಾರರ ಸಹಕಾರಿ ಸಂಘಗಳ ಒಕ್ಕೂಟ ನಿಯಮಿತ,
ಹೆಬ್ಬಳ್ಳಿ ರಸ್ತೆ, ತಾಜನಗರ, ಹುಬ್ಬಳ್ಳಿ ~ 580031

ಅರ್ಜಿ ಶುಲ್ಕ : ಪ.ಜಾತಿ, ಪ.ಪಂ, ಪ್ರವರ್ಗ 1, ಅಂಗವಿಕಲ ಅಭ್ಯರ್ಥಿಗಳು ರೂ. 500 ಹಾಗೂ ಇತರೆ ವರ್ಗದ ಅಭ್ಯರ್ಥಿಗಳು ರೂ. 1000 ಅರ್ಜಿ ಶುಲ್ಕ ಪಾವತಿಸಬೇಕು

ಶುಲ್ಕ ಪಾವತಿಸುವ ವಿಧಾನ : ನಿಗದಿಪಡಿಸಿದ ಶುಲ್ಕವನ್ನು ಅರ್ಜಿಯೊಂದಿಗೆ ಡಿಡಿ/ಪೇ ಆರ್ಡರ್ ನ್ನು ಹುಬ್ಬಳ್ಳಿಯಲ್ಲಿ ಸಂದಾಯವಾಗುವಂತೆ Managing Director, ROGCSU Ltd., Hubli ಇವರ ಹೆಸರಿನಲ್ಲಿ ಪಡೆದು ಲಗತ್ತಿಸಬೇಕು

ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿದ ದಿನಾಂಕದ ವಿವರ :
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ಏಪ್ರಿಲ್ 09, 2021
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಮೇ 08, 2021

KOF Hubli Recruitment 2021 : Important Links

ಅಧಿಸೂಚನೆ & ಅರ್ಜಿ ನಮೂನೆ : Click Here

ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.

WhatsApp
Telegram
Facebook