KOF Hubli Recruitment 2023 – Apply for 8 Executive, Assistant Executive Accounts Posts

KOF Hubli Recruitment 2023 : ಪ್ರಾದೇಶಿಕ ಎಣ್ಣೆಬೀಜ ಬೆಳೆಗಾರರ ಸಹಕಾರ ಸಂಘಗಳ ಒಕ್ಕೂಟ ನಿಯಮಿತ, ಹುಬ್ಬಳ್ಳಿ ಇದರಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಕರ್ತವ್ಯ ಸ್ಥಳ, ವಯೋಮಾನ, ವೇತನ, ಅರ್ಜಿ ಸಲ್ಲಿಕೆ ದಿನಾಂಕ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

KOF Hubli Recruitment 2023 : Details of Vacancies

ಹುದ್ದೆ : ಎಕ್ಸಿಕ್ಯೂಟಿವ್ (ಪಿ&ಐ), ಅಸಿಸ್ಟಂಟ್ ಎಕ್ಸಿಕ್ಯೂಟಿವ್ ಅಕೌಂಟ್ಸ್, ಅಸಿಸ್ಟಂಟ್ ಎಕ್ಸಿಕ್ಯೂಟಿವ್ ಕಮರ್ಷಿಯಲ್/ ಮಾರ್ಕೆಟಿಂಗ್

ಖಾಲಿಯಿರುವ ಹುದ್ದೆಗಳ ಸಂಖ್ಯೆ : ಒಟ್ಟು 8 ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.

ಹುದ್ದೆಹುದ್ದೆಗಳ ಸಂಖ್ಯೆ ವೇತನ
ಎಕ್ಸಿಕ್ಯೂಟಿವ್ (ಪಿ&ಐ)233450-62600
ಅಸಿಸ್ಟಂಟ್ ಎಕ್ಸಿಕ್ಯೂಟಿವ್ ಅಕೌಂಟ್ಸ್221400-42000
ಅಸಿಸ್ಟಂಟ್ ಎಕ್ಸಿಕ್ಯೂಟಿವ್ ಕಮರ್ಷಿಯಲ್/ ಮಾರ್ಕೆಟಿಂಗ್421400-42000

ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಹುಬ್ಬಳ್ಳಿಯಲ್ಲಿ ಕರ್ತವ್ಯ ನಿರ್ವಹಿಸಬೇಕು

ಶೈಕ್ಷಣಿಕ ಅರ್ಹತೆ :
• ಎಕ್ಸಿಕ್ಯೂಟಿವ್ (ಪಿ&ಐ) – ಕೃಷಿ ಪದವಿ ಹೊಂದಿರಬೇಕು.
• ಅಸಿಸ್ಟಂಟ್ ಎಕ್ಸಿಕ್ಯೂಟಿವ್ ಅಕೌಂಟ್ಸ್ – ಬಿಕಾಂ ಪದವಿ ಜೊತೆಗೆ ಟ್ಯಾಲಿ ಅಕೌಂಟಿಗ್ ಹಾಗೂ ಕಂಪ್ಯೂಟರ್ ಜ್ಞಾನ ಅವಶ್ಯಕ.
• ಅಸಿಸ್ಟಂಟ್ ಎಕ್ಸಿಕ್ಯೂಟಿವ್ ಕಮರ್ಷಿಯಲ್/ ಮಾರ್ಕೆಟಿಂಗ್ – ಪದವಿ ಜೊತೆಗೆ ಕಂಪ್ಯೂಟರ್ ಜ್ಞಾನ ಹೊಂದಿರಬೇಕು.

ವಯೋಮಾನ : ಅರ್ಜಿ ಸಲ್ಲಿಸುವ ಕೊನೆಯ ದಿನಾಂಕಕ್ಕೆ ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷ ಪೂರೈಸಿರಬೇಕು.
• ಎಸ್ಸಿ, ಎಸ್ಟಿ, ಪ್ರವರ್ಗ 1 ಅಭ್ಯರ್ಥಿಗಳಿಗೆ – ಗರಿಷ್ಠ 40 ವರ್ಷ
• ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ – ಗರಿಷ್ಠ 38 ವರ್ಷ
• ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ – ಗರಿಷ್ಠ 35 ವರ್ಷ

ಆಯ್ಕೆ ವಿಧಾನ : ಲಿಖಿತ ಪರೀಕ್ಷೆಯಲ್ಲಿ ಗಳಿಸಿದ ಅಂಕಗಳ ಮೆರಿಟ್ ಆಧಾರದ ಮೇಲೆ ಅಭ್ಯರ್ಥಿಗಳನ್ನು 1:5ರ ಅನುಪಾತದಲ್ಲಿ ಮೌಖಿಕ ಸಂದರ್ಶನಕ್ಕೆ ಕರೆಯಲಾಗುವುದು. ಮೌಖಿಕ ಸಂದರ್ಶನಕ್ಕೆ ಗರಿಷ್ಠ 15 ಅಂಕಗಳನ್ನು ನಿಗದಿಪಡಿಸಲಾಗಿದೆ, ಅಭ್ಯರ್ಥಿಯು ಲಿಖಿತ ಪರೀಕ್ಷೆಯಲ್ಲಿ ಗಳಿಸಿದ ಅಂಕಗಳನ್ನು ಶೇಕಡಾ 85ಕ್ಕೆ ಇಳಿಸಿ ಪ್ರಾಪ್ತವಾಗುವ ಅಂಕಗಳ ಜೊತೆಗೆ ಮತ್ತು ಮೌಖಿಕ ಪರೀಕ್ಷೆಯಲ್ಲಿ ಗಳಿಸುವ ಅಂಕಗಳನ್ನು ಒಟ್ಟುಗೂಡಿಸಿ ಅಂತಿಮ ಅರ್ಹತಾ ಪಟ್ಟಿಯನ್ನು ತಯಾರಿಸಿ ಅರ್ಹತೆಯ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು.

ಉದ್ಯೋಗ ಮಾಹಿತಿ : KOF ರಾಯಚೂರು ನೇಮಕಾತಿ 2023

ಅರ್ಜಿ ಸಲ್ಲಿಕೆಯ ವಿಧಾನ : ಅಭ್ಯರ್ಥಿಯು ಆಫ್‌ಲೈನ್‌ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 1 : ಇಲಾಖೆಯ ವೆಬ್‌ಸೈಟ್ ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ ಅಪ್ಲಿಕೇಷನ್ ಫಾರ್ಮ್ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಪ್ಲಿಕೇಷನ್ ಡೌನ್ಲೋಡ್ ಮಾಡಿಕೊಳ್ಳಿ.
ಹಂತ 2 : ಅಪ್ಲಿಕೇಷನ್ ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಪುನಃ ಒಮ್ಮೆ ಪರಿಶೀಲಿಸಿ.
ಹಂತ 3 : ಅಪ್ಲಿಕೇಷನ್ ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಲಗತ್ತಿಸಲು ಸೂಚಿಸಿದ್ದರೆ, ಅವುಗಳನ್ನು ಲಗತ್ತಿಸಿ (ಅಗತ್ಯವಿದ್ದರೆ ಮಾತ್ರ).
ಹಂತ 4 : ಕೊನೆಯದಾಗಿ, ಅಭ್ಯರ್ಥಿಗೆ ಅರ್ಜಿ ಶುಲ್ಕ ಪಾವತಿಸಲು ಸೂಚಿಸಿದ್ದರೆ ಶುಲ್ಕ ಪಾವತಿಸಿ, ಭರ್ತಿ ಮಾಡಿದ ಅರ್ಜಿಯನ್ನು ಈ ಕೆಳಗಡೆ ನೀಡಲಾದ ಕಚೇರಿಯ ವಿಳಾಸಕ್ಕೆ ಕಳುಹಿಸಿ.

ಅರ್ಜಿ ಸಲ್ಲಿಸುವ ವಿಳಾಸ : ವ್ಯವಸ್ಥಾಪಕ ನಿರ್ದೇಶಕರು, ಪ್ರಾದೇಶಿಕ ಎಣ್ಣೆಬೀಜ ಬೆಳೆಗಾರರ ಸಹಕಾರ ಸಂಘಗಳ ಒಕ್ಕೂಟ ನಿಯಮಿತ,
ಹೆಬ್ಬಳ್ಳಿ ರಸ್ತೆ, ತಾಜನಗರ, ಹುಬ್ಬಳ್ಳಿ – 580031

ಅರ್ಜಿ ಶುಲ್ಕ :
• ಪ.ಜಾತಿ, ಪ.ಪಂ, ಪ್ರವರ್ಗ 1, ಅಂಗವಿಕಲ – ರೂ. 500
• ಇತರೆ ವರ್ಗದ ಅಭ್ಯರ್ಥಿಗಳು – ರೂ. 1000

ಶುಲ್ಕ ಪಾವತಿಸುವ ವಿಧಾನ : ನಿಗದಿಪಡಿಸಿದ ಶುಲ್ಕವನ್ನು ಅರ್ಜಿಯೊಂದಿಗೆ ಡಿಡಿ ಯನ್ನು ಹುಬ್ಬಳ್ಳಿಯಲ್ಲಿ ಸಂದಾಯವಾಗುವಂತೆ Managing Director, ROGCSU Ltd., Hubli ಇವರ ಹೆಸರಿನಲ್ಲಿ ಪಡೆದು ಲಗತ್ತಿಸಬೇಕು.

ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿದ ದಿನಾಂಕದ ವಿವರ :
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ಮಾರ್ಚ್ 17, 2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಏಪ್ರಿಲ್ 10, 2023

KOF Hubli Recruitment 2023 : Important Links

NOTIFICATION & APPLICATION FORM CLICK HERE
Telegram Join Link Click Here

ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.

WhatsApp
Telegram
Facebook

Leave a Comment