KOF Raichur Recruitment 2021 : 17 ಸಹಾಯಕರು, ಚಾಲಕ ಹಾಗೂ ವಿವಿಧ ಹುದ್ದೆಗಳ ಭರ್ತಿ

KOF Raichur Recruitment 2021 : ಪ್ರಾದೇಶಿಕ ಎಣ್ಣೆಬೀಜ ಬೆಳೆಗಾರರ ಸಹಕಾರ ಸಂಘಗಳ ಒಕ್ಕೂಟದಲ್ಲಿ ಖಾಲಿಯಿರುವ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಕರ್ತವ್ಯ ಸ್ಥಳ, ವಯೋಮಾನ, ವೇತನ, ಅರ್ಜಿ ಸಲ್ಲಿಕೆ ದಿನಾಂಕ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

KOF Raichur Recruitment 2021 : Details of Vacancies

ಹುದ್ದೆ : ಸಹಾಯಕ ವ್ಯವಸ್ಥಾಪಕರು (ಸೀಡ್ಸ್), ಸಹಾಯಕ ವ್ಯವಸ್ಥಾಪಕರು (ವಿತ್ತ), ಮಾರಾಟ ಸಹಾಯಕರು, ಟೆಕ್ನಿಕಲ್ ಅಸಿಸ್ಟೆಂಟ್, ಬೆರಳಚ್ಚುಗಾರರು, ಚಾಲಕರು

ಖಾಲಿಯಿರುವ ಹುದ್ದೆಗಳ ಸಂಖ್ಯೆ : ಒಟ್ಟು 17 ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.

ಹುದ್ದೆಹುದ್ದೆಗಳ ಸಂಖ್ಯೆವೇತನ
ಸಹಾಯಕ ವ್ಯವಸ್ಥಾಪಕರು (ಸೀಡ್ಸ್)0140900-78200
ಸಹಾಯಕ ವ್ಯವಸ್ಥಾಪಕರು (ವಿತ್ತ)0140900-78200
ಮಾರಾಟ ಸಹಾಯಕರು1221400-42000
ಟೆಕ್ನಿಕಲ್ ಅಸಿಸ್ಟೆಂಟ್0121400-42000
ಬೆರಳಚ್ಚುಗಾರರು0121400-42000
ಚಾಲಕರು0121400-42000

ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ರಾಯಚೂರಿನಲ್ಲಿ ಕರ್ತವ್ಯ ನಿರ್ವಹಿಸಬೇಕು

ಶೈಕ್ಷಣಿಕ ಅರ್ಹತೆ :
• ಸಹಾಯಕ ವ್ಯವಸ್ಥಾಪಕರು (ಸೀಡ್ಸ್) ಹುದ್ದೆಗೆ ಅಂಗೀಕೃತ ಕೃಷಿ ವಿಶ್ವವಿದ್ಯಾಲಯದಿಂದ ಬೀಜ ತಂತ್ರಜ್ಞಾನ/ ಪ್ಲಾಂಟ್ ಬ್ರೀಡಿಂಗ್ ಅಂಡ್ ಜೆನೆಟಿಕ್ಸ್ ನಲ್ಲಿ ಸ್ನಾತಕೋತ್ತರ ಪದವಿ ಹೊಂದಿರಬೇಕು.
• ಸಹಾಯಕ ವ್ಯವಸ್ಥಾಪಕರು (ವಿತ್ತ) ಹುದ್ದೆಗೆ ಎಂಕಾಂ ಪದವಿ/ ಎಂಬಿಎ ಫೈನಾನ್ಸ್ ಜೊತೆಗೆ ಟ್ಯಾಲಿ ಕೋರ್ಸಿನ ತೇರ್ಗಡೆ ಪತ್ರ ಹೊಂದಿರಬೇಕು.
• ಮಾರಾಟ ಸಹಾಯಕರು ಹುದ್ದೆಗೆ ಬಿಕಾಂ/ ಬಿಬಿಎಂ/ (ಮಾರುಕಟ್ಟೆ) ಪದವಿ ಜೊತೆಗೆ ಕಂಪ್ಯೂಟರ್ ಜ್ಞಾನ ಹೊಂದಿರಬೇಕು.
• ಟೆಕ್ನಿಕಲ್ ಅಸಿಸ್ಟೆಂಟ್ ಹುದ್ದೆಗೆ ಐಟಿಐ ಫಿಟ್ಟರ್ ನಲ್ಲಿ ತೇರ್ಗಡೆ ಹೊಂದಿರಬೇಕು.
• ಬೆರಳಚ್ಚುಗಾರರು ಹುದ್ದೆಗೆ ಅಂಗೀಕೃತ ವಿದ್ಯಾ‌ಸಂಸ್ಥೆಯಿಂದ ಪಡೆದ ಪದವಿ ಜೊತೆಗೆ ಕಂಪ್ಯೂಟರ್ ನಲ್ಲಿ ಕನ್ನಡ ಮತ್ತು ಇಂಗ್ಲಿಷ್ ಟೈಪಿಂಗ್ ಪರಿಣಿತರಿರಬೇಕು.
• ಚಾಲಕ ಹುದ್ದೆಗೆ ಎಸ್.ಎಸ್.ಎಲ್.ಸಿ ಪಾಸಾಗಿರಬೇಕು ಹಾಗೂ ಭಾರಿ ವಾಹನ ಚಾಲನೆ ಪರವಾನಿಗೆ ಹೊಂದಿರಬೇಕು

ವಯೋಮಾನ : ಅರ್ಜಿ ಸಲ್ಲಿಸುವ ಕೊನೆಯ ದಿನಾಂಕಕ್ಕೆ ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷ ಹಾಗೂ ಗರಿಷ್ಠ 35 ವರ್ಷ ಮೀರಿರಬಾರದು

ವಯೋಮಿತಿ ಸಡಿಲಿಕೆ : ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ಎಸ್ಸಿ, ಎಸ್ಟಿ, ಪ್ರವರ್ಗ 1 ಅಭ್ಯರ್ಥಿಗಳಿಗೆ 5 ವರ್ಷ ಸಡಿಲಿಕೆ ಇದೆ

ಆಯ್ಕೆ ವಿಧಾನ : ಸ್ವೀಕರಿಸಲಾದ ಅರ್ಜಿಗಳನ್ನು ನಿಗದಿಪಡಿಸಿದ ವಿದ್ಯಾರ್ಹತೆ ಹಾಗೂ ಅಗತ್ಯ ದಾಖಲೆಗಳ ಆಧಾರದ ಮೇಲೆ ಪರಿಶೀಲಿಸಿ ಅರ್ಹ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ ನಡೆಸಲಾಗುವುದು ನಂತರ ಲಿಖಿತ ಪರೀಕ್ಷೆಯಲ್ಲಿ ಗಳಿಸಿದ ಅಂಕಗಳ ಮೆರಿಟ್ ಆಧಾರದ ಮೇಲೆ ಅಭ್ಯರ್ಥಿಗಳಿಗೆ ಮೌಖಿಕ ಸಂದರ್ಶನ ನಡೆಸಿ ಹುದ್ದೆಗಳಿಗೆ ಆಯ್ಕೆ ಮಾಡಲಾಗುತ್ತದೆ.

ಉದ್ಯೋಗ ಮಾಹಿತಿ : ಚಿಕ್ಕಮಗಳೂರು ಜಿಲ್ಲಾ ಪಂಚಾಯತ ನೇಮಕಾತಿ

ಪ್ರಾದೇಶಿಕ ಎಣ್ಣೆಬೀಜ ಬೆಳೆಗಾರರ ಸಹಕಾರ ಸಂಘಗಳ ಒಕ್ಕೂಟದಲ್ಲಿ ಖಾಲಿಯಿರುವ ಹುದ್ದೆಗೆ ಅರ್ಜಿ ಸಲ್ಲಿಕೆಯ ವಿಧಾನ :
• ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಖುದ್ದಾಗಿ ಹಾಜರಾಗಿ ಅಥವಾ ಅಂಚೆ ಮೂಲಕವೇ ಅರ್ಜಿಯನ್ನು ಸಲ್ಲಿಸಬೇಕು.
• ಅಭ್ಯರ್ಥಿಗಳು ಪ್ರಾದೇಶಿಕ ಎಣ್ಣೆಬೀಜ ಬೆಳೆಗಾರರ ಸಹಕಾರಿ ಸಂಘಗಳ ಒಕ್ಕೂಟದ ಅಧಿಸೂಚನೆಯಲ್ಲಿ ನೀಡಲಾಗಿರುವ ಅರ್ಜಿ ನಮೂನೆಯನ್ನು ಡೌನ್ಲೋಡ್ ಮಾಡಿ ನಂತರ ಅರ್ಜಿ ನಮೂನೆಯಲ್ಲಿ ಅಗತ್ಯವಿರುವ ಎಲ್ಲಾ ಮಾಹಿತಿಯನ್ನು ಭರ್ತಿ ಮಾಡಿ ( ಉದಾಹರಣೆಗೆ : ಅಭ್ಯರ್ಥಿಯ ಹೆಸರು, ವಿದ್ಯಾರ್ಹತೆ, ಇಮೇಲ್ ವಿಳಾಸ ಇತ್ಯಾದಿ) ಕೊನೆಯಲ್ಲಿ ಭರ್ತಿ ಮಾಡಿದ ಅರ್ಜಿಯನ್ನು ಅಗತ್ಯ ದಾಖಲೆಗಳೊಂದಿಗೆ ಅಂಚೆ ಮೂಲಕ ಅಥವಾ ಖುದ್ದಾಗಿ ಹಾಜರಾಗಿ ಕಛೇರಿಯ ವಿಳಾಸಕ್ಕೆ ಸಲ್ಲಿಸಬೇಕು.

ಅರ್ಜಿ ಸಲ್ಲಿಸುವ ವಿಳಾಸ : ವ್ಯವಸ್ಥಾಪಕ ನಿರ್ದೇಶಕರು, ಪ್ರಾದೇಶಿಕ ಎಣ್ಣೆಬೀಜ ಬೆಳೆಗಾರರ ಸಹಕಾರ ಸಂಘಗಳ ಒಕ್ಕೂಟ ನಿಯಮಿತ,
ಪೋಸ್ಟ್ ಬಾಕ್ಸ್ ಸಂಖ್ಯೆ : 358, ಇಂಡಸ್ಟ್ರೀಯಲ್ ಏರಿಯಾ, ಹೈದ್ರಾಬಾದ್ ರೋಡ್, ರಾಯಚೂರು – 584 102

ಅರ್ಜಿ ಶುಲ್ಕ : ಪ.ಜಾತಿ, ಪ.ಪಂ, ಪ್ರವರ್ಗ 1, ಅಂಗವಿಕಲ ಅಭ್ಯರ್ಥಿಗಳು ರೂ. 500 ಹಾಗೂ ಇತರೆ ವರ್ಗದ ಅಭ್ಯರ್ಥಿಗಳು ರೂ. 1000 ಅರ್ಜಿ ಶುಲ್ಕ ಪಾವತಿಸಬೇಕು

ಶುಲ್ಕ ಪಾವತಿಸುವ ವಿಧಾನ : ನಿಗದಿಪಡಿಸಿದ ಶುಲ್ಕವನ್ನು ಅರ್ಜಿಯೊಂದಿಗೆ ಡಿಡಿ/ಪೇ ಆರ್ಡರ್ ನ್ನು ರಾಯಚೂರಿನಲ್ಲಿ ಸಂದಾಯವಾಗುವಂತೆ Managing Director, ROGCSU Ltd., Raichur ಇವರ ಹೆಸರಿನಲ್ಲಿ ಪಡೆದು ಲಗತ್ತಿಸಬೇಕು

ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿದ ದಿನಾಂಕದ ವಿವರ :
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ಜೂನ್ 21, 2021
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಜುಲೈ 23, 2021

KOF Raichur Recruitment 2021 : Important Links

ಅಧಿಸೂಚನೆ & ಅರ್ಜಿ ನಮೂನೆ : Click Here

ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.