ಕೋಲಾರ ಜಿಲ್ಲಾ ಆಯುಷ್ ಕಛೇರಿ ನೇಮಕಾತಿ 2023 – Kolar District Ayush Office Recruitment 2023

Kolar District Ayush Office Recruitment 2023 – Kolar Zilla Panchayat Recruitment : ಕೋಲಾರ ಜಿಲ್ಲಾ ಆಯುಷ್ ಕಛೇರಿ ವ್ಯಾಪ್ತಿಯಲ್ಲಿ ಬರುವ ಆಯುಷ್ ಆಸ್ಪತ್ರೆಗಳಲ್ಲಿ ಖಾಲಿ ಇರುವ ತಜ್ಞ ವೈದ್ಯರು ಮತ್ತು ಅರೆ ವೈದ್ಯಕೀಯ ಸಿಬ್ಬಂದಿಗಳನ್ನು ಸಂಪೂರ್ಣ ತಾತ್ಕಾಲಿಕವಾಗಿ ಭರ್ತಿ ಮಾಡಿಕೊಳ್ಳಲು ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಕರೆಯಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಶೈಕ್ಷಣಿಕ ಅರ್ಹತೆ, ವೇತನ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

Kolar District Ayush Office Recruitment 2023 : Details of Vacancies

ಹುದ್ದೆ : ಹೋಮಿಯೋಪತಿ ತಜ್ಞ ವೈದ್ಯರು, ಕ್ಷಾರಸೂತ್ರ ಅಟೆಂಡೆಂಟ್, ಮಸಾಜಿಸ್ಟ್, ಆಯುರ್ವೇದ ತಜ್ಞ ವೈದ್ಯರು, ಫಾರ್ಮಸಿಸ್ಟ್

ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಕೋಲಾರ ಜಿಲ್ಲೆಯಲ್ಲಿ ಕೆಲಸ ನಿರ್ವಹಿಸಬೇಕು.

ಖಾಲಿಯಿರುವ ಹುದ್ದೆಗಳ ಸಂಖ್ಯೆ : ಒಟ್ಟು 06 ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಕರೆಯಲಾಗಿದೆ.

ಹುದ್ದೆಹುದ್ದೆಗಳ ಸಂಖ್ಯೆ ವೇತನ
ಹೋಮಿಯೋಪತಿ ತಜ್ಞ ವೈದ್ಯರು0152,550 + 5,000 (PG Allowance)
ಕ್ಷಾರಸೂತ್ರ ಅಟೆಂಡೆಂಟ್0118,500
ಮಸಾಜಿಸ್ಟ್0118,500
ಆಯುರ್ವೇದ ತಜ್ಞ ವೈದ್ಯರು0152,550 + 5,000 (PG Allowance)
ಫಾರ್ಮಸಿಸ್ಟ್0227,550

ಶೈಕ್ಷಣಿಕ ಅರ್ಹತೆ :
ಹೋಮಿಯೋಪತಿ ತಜ್ಞ ವೈದ್ಯರು – ಹೋಮಿಯೋಪತಿಯಲ್ಲಿ ಸ್ನಾತಕೋತ್ತರ ಪದವಿ ಹೊಂದಿರಬೇಕು. ಹೋಮಿಯೋಪತಿಯಲ್ಲಿ ಸ್ನಾತಕೋತ್ತರ ಪದವಿ ಹೊಂದಿರುವ ಅಭ್ಯರ್ಥಿಗಳು ದೊರಕದಿದ್ದಲ್ಲಿ ಸದರಿ ವೈದ್ಯ ಪದ್ದತಿಯಲ್ಲಿ ಪದವಿ ಹೊಂದಿರಬೇಕು ಹಾಗೂ ಕನಿಷ್ಠ 3 ವರ್ಷಗಳ ಅನುಭವ ಹೊಂದಿರಬೇಕು (ಸ್ವಾತಕೋತ್ತರ ಭತ್ಯೆ ರಹಿತ)

ಕ್ಷಾರಸೂತ್ರ ಅಟೆಂಡೆಂಟ್ – ಕನಿಷ್ಠ 10ನೇ ತರಗತಿ ವಿದ್ಯಾರ್ಹತೆ ಹಾಗೂ ಆಯುಷ್‌ ಆಸ್ಪತ್ರೆಗಳಲ್ಲಿ ಕರ್ತವ್ಯ ನಿರ್ವಹಿಸಿರುವ ಬಗ್ಗೆ ಅನುಭವ ಹೊಂದಿರತಕ್ಕದ್ದು.

ಮಸಾಜಿಸ್ಟ್ – ಕನಿಷ್ಠ 7ನೇ ತರಗತಿ ವಿದ್ಯಾರ್ಹತೆ ಹಾಗೂ ಆಯುಷ್‌ಆಸ್ಪತ್ರೆ/ ಚಿಕಿತ್ಸಾಲಯಗಳಲ್ಲಿ ಮಸಾಜಿಸ್ಟ್ ಆಗಿ ಕರ್ತವ್ಯ ನಿರ್ವಹಿಸಿರುವ ಅನುಭವ ಹೊಂದಿರತಕ್ಕದ್ದು.

ಆಯುರ್ವೇದ ತಜ್ಞ ವೈದ್ಯರು – ಶಲ್ಯ ತಂತ್ರ/ಪಂಚಕರ್ಮ/ಕಾಯಚಿಕಿತ್ಸಾ ವಿಷಯಗಳಲ್ಲಿ ಸ್ನಾತಕೋತ್ತರ ಪದವಿ ಹೊಂದಿರಬೇಕು.

ಫಾರ್ಮಸಿಸ್ಟ್ – ಎಸ್.ಎಸ್.ಎಲ್.ಸಿ ವಿದ್ಯಾರ್ಹತೆ ಮತ್ತು ಔಷಧಿ ವಿಜ್ಞಾನದಲ್ಲಿ ಡಿಪ್ಲೊಮಾ ಹೊಂದಿರಬೇಕು.

ಉದ್ಯೋಗ ಮಾಹಿತಿ : ಮೆಸ್ಕಾಂ ನೇಮಕಾತಿ 2023

ವಯೋಮಾನ : ಅರ್ಜಿ ಸಲ್ಲಿಸುವ ದಿನಾಂಕಕ್ಕೆ ಅಭ್ಯರ್ಥಿಗಳು ಕನಿಷ್ಠ 18 ವರ್ಷ ಪೂರೈಸಿರಬೇಕು.
• ಸಾಮಾನ್ಯ ಅಭ್ಯರ್ಥಿಗಳು – ಗರಿಷ್ಠ 35 ವರ್ಷ
• ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳು – ಗರಿಷ್ಠ 38 ವರ್ಷ
• ಎಸ್ಸಿ, ಎಸ್ಟಿ, ಪ್ರವರ್ಗ 1ರ ಅಭ್ಯರ್ಥಿಗಳು – ಗರಿಷ್ಠ 40 ವರ್ಷ

ವಯೋಮಿತಿ ಸಡಿಲಿಕೆ : ಅಂಗವಿಕಲ ಅಭ್ಯರ್ಥಿ ಅಥವಾ ವಿಧವೆಯಾಗಿದ್ದಲ್ಲಿ 10 ವರ್ಷ ವಯೋಮಿತಿಯಲ್ಲಿ ಸಡಿಲಿಕೆ ಇದೆ.

ಆಯ್ಕೆ ವಿಧಾನ : ಅಭ್ಯರ್ಥಿಗಳನ್ನು ಮೆರಿಟ್, ಅನುಭವ ಹಾಗೂ ಸಂದರ್ಶನದ (ಕ್ರಮವಾಗಿ 70%, 20%, 10%) ಆಧಾರದ ಮೇಲೆ ನೇಮಕ ಮಾಡಿಕೊಳ್ಳಲಾಗುವುದು. ವೈದ್ಯರ ಹುದ್ದೆಗಳಿಗೆ ಪದವಿಯಲ್ಲಿ ಪಡೆದ ಅಂಕಗಳ ಆಧಾರದ ಮೇಲೆ ಮೆರಿಟ್ ಲಿಸ್ಟ್ ತಯಾರಿಸಲಾಗುವುದು.

ಅರ್ಜಿ ಸಲ್ಲಿಕೆಯ ವಿಧಾನ : ಅಭ್ಯರ್ಥಿಯು ಈ ಹುದ್ದೆಗೆ ಆಫ್‌ಲೈನ್‌ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು.
ಹಂತ 1 : ಆಫ್‌ಲೈನ್‌ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 2 : ಇಲಾಖೆಯ ವೆಬ್‌ಸೈಟ್ ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ ಅಪ್ಲಿಕೇಷನ್ ಫಾರ್ಮ್ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಪ್ಲಿಕೇಷನ್ ಡೌನ್ಲೋಡ್ ಮಾಡಿಕೊಳ್ಳಿ.
ಹಂತ 3 : ಅಪ್ಲಿಕೇಷನ್ ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಪುನಃ ಒಮ್ಮೆ ಪರಿಶೀಲಿಸಿ.
ಹಂತ 4 : ಕೊನೆಯದಾಗಿ, ಅಪ್ಲಿಕೇಷನ್ ನೊಂದಿಗೆ ವಿದ್ಯಾರ್ಹತೆ/ ವಯಸ್ಸು/ ವಾಸಸ್ಥಳ/ ವಾರ್ಷಿಕ ಆದಾಯದ (ಎರಡು ಪಾಸ್ ಪೋರ್ಟ್ ಸೈಜಿನ ಪೋಟೋ) ಪ್ರತಿಗಳನ್ನು ಲಗತ್ತಿಸಿ, ಭರ್ತಿ ಮಾಡಿದ ಅರ್ಜಿಯನ್ನು ಈ ಕೆಳಗಡೆ ನೀಡಲಾದ ಕಚೇರಿಯ ವಿಳಾಸಕ್ಕೆ ಖುದ್ದಾಗಿ ಅಥವಾ ನೊಂದಾಯಿಸಿ ಅಂಚೆ ಮೂಲಕ ಕಳುಹಿಸಿ.

ಅರ್ಜಿ ಸಲ್ಲಿಸುವ ವಿಳಾಸ : ಜಿಲ್ಲಾ ಆಯುಷ್ ಅಧಿಕಾರಿಗಳು, ಜಿಲ್ಲಾ ಆಯುಷ್ ಕಛೇರಿ, ಎಸ್.ಎನ್.ಆರ್ ಆಸ್ಪತ್ರೆ ಆವರಣ, ಕೋಲಾರ – 563101

ನಿಗದಿತ ಅರ್ಜಿ ಶುಲ್ಕದ ವಿವರ : ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.

ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿದ ದಿನಾಂಕದ ವಿವರ :
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ಆಗಸ್ಟ್ 17, 2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಸೆಪ್ಟೆಂಬರ್ 16, 2023

Kolar District Ayush Office Recruitment 2023 : Important Links

NOTIFICATION & APPLICATION FORM CLICK HERE
Telegram Join Link Click Here

ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.

Leave a Comment