Kolar District Court Recruitment 2022 : ಕೋಲಾರ ಜಿಲ್ಲಾ ನ್ಯಾಯಾಲಯದಲ್ಲಿ ಅಗತ್ಯವಿರುವ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ವೇತನ, ಅರ್ಜಿ ಶುಲ್ಕ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.
Kolar District Court Recruitment 2022 : Details of Vacancies
ಹುದ್ದೆ : ಶೀಘ್ರಲಿಪಿಗಾರರು ಗ್ರೇಡ್ 3 ಹಾಗೂ ಸೇವಕರು
ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಕೋಲಾರ ಜಿಲ್ಲಾ ನ್ಯಾಯಾಲಯದಲ್ಲಿ ಕರ್ತವ್ಯ ನಿರ್ವಹಿಸಬೇಕು.
ಖಾಲಿಯಿರುವ ಹುದ್ದೆಗಳ ಸಂಖ್ಯೆ : ಒಟ್ಟು 32 ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.
ಹುದ್ದೆ | ಹುದ್ದೆಗಳ ಸಂಖ್ಯೆ | ವೇತನ |
ಶೀಘ್ರಲಿಪಿಗಾರರು ಗ್ರೇಡ್ 3 | 10 | 27650-52650 |
ಸೇವಕರು | 22 | 17000-28950 |
ಶೈಕ್ಷಣಿಕ ಅರ್ಹತೆ :
ಶೀಘ್ರಲಿಪಿಗಾರರು – ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣತೆ ಅಥವಾ ತಾಂತ್ರಿಕ ಶಿಕ್ಷಣ ಮಂಡಳಿಯ ಕಮರ್ಷಿಯಲ್ ಪ್ರಾಕ್ಟೀಸ್ 3 ವರ್ಷಗಳ ಡಿಪ್ಲೋಮಾ ಪರೀಕ್ಷೆಯಲ್ಲಿ ಉತ್ತೀರ್ಣತೆ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು ಜೊತೆಗೆ ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯವರು ನಡೆಸುವ ಕನ್ನಡ ಮತ್ತು ಆಂಗ್ಲ ಎರಡೂ ಭಾಷೆಯಲ್ಲೂ ಹಿರಿಯ ಶ್ರೇಣಿ ಬೆರಳಚ್ಚು ಮತ್ತು ಶೀಘ್ರಲಿಪಿ ಅಥವಾ ಡಿಪ್ಲೋಮಾ ವಾಣಿಜ್ಯ ಪರೀಕ್ಷೆ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು.
ಜವಾನ – ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿರಬೇಕು. ಕನ್ನಡ ಓದಲು, ಬರೆಯಲು ತಿಳಿದಿರಬೇಕು.
ವಯೋಮಾನ : ಅರ್ಜಿ ಸ್ವೀಕರಿಸಲು ನಿಗದಿಪಡಿಸಿದ ಕೊನೆಯ ದಿನಾಂಕಕ್ಕೆ ಅಭ್ಯರ್ಥಿಗಳು ಕನಿಷ್ಠ 18 ವರ್ಷ ಪೂರೈಸಿರಬೇಕು. ಹಾಗೂ,
ಎಸ್ಸಿ, ಎಸ್ಟಿ, ಪ್ರವರ್ಗ 1 ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷ
ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ ಗರಿಷ್ಠ 38 ವರ್ಷ
ಸಾಮಾನ್ಯ ಅಭ್ಯರ್ಥಿಗಳಿಗೆ ಗರಿಷ್ಠ 35 ವರ್ಷ
ಆಯ್ಕೆ ವಿಧಾನ :
ಶೀಘ್ರಲಿಪಿಗಾರರು – ಅರ್ಹತಾ ಪರೀಕ್ಷೆಗಳಲ್ಲಿ ಗಳಿಸಿರುವ ಒಟ್ಟು ಶೇಕಡಾವಾರು ಅಂಕಗಳು ಮತ್ತು ನಿಮಿಷ ಒಂದಕ್ಕೆ 120 ಪದಗಳ ದರದಲ್ಲಿ 5 ನಿಮಿಷಗಳ ಉಕ್ತಲೇಖನವನ್ನು ತೆಗೆದುಕೊಂಡು, 1ಉಕ್ತಲೇಖನವನ್ನು 45 ನಿಮಿಷಗಳಲ್ಲಿ ಬೆರಳಚ್ಚು ಯಂತ್ರ ಅಥವಾ ಗಣಕಯಂತ್ರದ ಮುಖಾಂತರ ಅನುಲಿಪಿ ಮಾಡುವ ಅರ್ಹತಾ ಪರೀಕ್ಷೆಯಲ್ಲಿ ಗಳಿಸುವ ಅಂಕಗಳು ಮತ್ತು ಸಂದರ್ಶನದಲ್ಲಿ ಗಳಿಸುವ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು.
ಜವಾನ – ಅರ್ಹತಾ ಪರೀಕ್ಷೆಯಲ್ಲಿ ಗಳಿಸಿರುವ ಒಟ್ಟು ಶೇಕಡಾವಾರು ಅಂಕಗಳ ಆಧಾರದ ಮೇಲೆ 1 ಹುದ್ದೆಗೆ 10 ಅಭ್ಯರ್ಥಿಗಳಂತೆ ಅತೀ ಹೆಚ್ಚು ಅಂಕ ಪಡೆದ ಅಭ್ಯರ್ಥಿಗಳನ್ನು ಪ್ರಕಟಿಸಿರುವ ಹುದ್ದೆಗಳಿಗೆ ಅನುಗುಣವಾಗಿ ಸಂದರ್ಶನಕ್ಕೆ ಕರೆಯಲಾಗುವುದು ಮತ್ತು ಸಂದರ್ಶನದಲ್ಲಿ ಗಳಿಸುವ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು.
ಉದ್ಯೋಗ ಮಾಹಿತಿ : ವಿಜಯಪುರ ಜಿಲ್ಲಾ ನ್ಯಾಯಾಲಯದಲ್ಲಿ ನೇರ ನೇಮಕಾತಿ 2022
ಕೋಲಾರ ಜಿಲ್ಲಾ ನ್ಯಾಯಾಲಯದಲ್ಲಿ ಖಾಲಿಯಿರುವ ಹುದ್ದೆಗೆ ಅರ್ಜಿ ಸಲ್ಲಿಕೆಯ ವಿಧಾನ :
• ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕವೇ ಅರ್ಜಿಯನ್ನು ಸಲ್ಲಿಸಬೇಕು.
• ಅಭ್ಯರ್ಥಿಗಳು ಕೋಲಾರ ಜಿಲ್ಲಾ ನ್ಯಾಯಾಲಯದ ಅಧಿಕೃತ ವೆಬ್‌ಸೈಟ್ ವಿಳಾಸಕ್ಕೆ ಭೇಟಿ ನೀಡಿ, ಆನ್‌ಲೈನ್ ಅರ್ಜಿಯಲ್ಲಿ ಹುದ್ದೆಗೆ ಅಗತ್ಯವಿರುವ ಎಲ್ಲಾ ಮಾಹಿತಿಯನ್ನು ಭರ್ತಿ ಮಾಡಿ ( ಉದಾಹರಣೆಗೆ : ಅಭ್ಯರ್ಥಿಯ ಹೆಸರು, ವಿದ್ಯಾರ್ಹತೆ, ಇಮೇಲ್ ವಿಳಾಸ ಇತ್ಯಾದಿ) ನಂತರ ನಿಗದಿತ ಅರ್ಜಿ ಶುಲ್ಕ ಪಾವತಿಸಿ ಅರ್ಜಿಯನ್ನು ಸಲ್ಲಿಸಬೇಕು
ನಿಗದಿತ ಅರ್ಜಿ ಶುಲ್ಕದ ವಿವರ :
• ಸಾಮಾನ್ಯ ವರ್ಗ, ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳು ರೂ. 200
• ಎಸ್ಸಿ, ಎಸ್ಟಿ, ಪ್ರವರ್ಗ 1, ಅಂಗವಿಕಲ ಅಭ್ಯರ್ಥಿಗಳು ರೂ. 100
ಶುಲ್ಕ ಪಾವತಿಸುವ ವಿಧಾನ : ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ನೆಟ್ ಬ್ಯಾಂಕಿಂಗ್ ಮೂಲಕ ಶುಲ್ಕ ಪಾವತಿಸಬಹುದು. ಅಥವಾ ಜಿಲ್ಲಾ ನ್ಯಾಯಾಲಯದ ವೆಬ್‌ಸೈಟ್ ನಿಂದ ಚಲನ್ ಪ್ರಿಂಟ್ ತೆಗೆದು ಎಸ್.ಬಿ.ಐ ಬ್ಯಾಂಕಿನ ಯಾವುದೇ ಶಾಖೆಗಳಲ್ಲಿ ಶುಲ್ಕ ಪಾವತಿಸಬಹುದು.
ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿದ ದಿನಾಂಕದ ವಿವರ :
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ಜೂನ್ 27, 2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಜುಲೈ 26, 2022
ಶುಲ್ಕ ಪಾವತಿಸಲು ಕೊನೆಯ ದಿನಾಂಕ : ಜುಲೈ 28, 2022
Kolar District Court Recruitment 2022 : Important Links
Notification (Stenographer) | Click Here |
Notification (Peon) | Click Here |
Apply Online | Click Here |
ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.