ಕೋಲಾರ ಜಿಲ್ಲೆಯ ಗ್ರಾಮ ಪಂಚಾಯಿತಿಯಲ್ಲಿ ನೇಮಕಾತಿ 2023 – Kolar District Gram Panchayat Recruitment 2023

Kolar District Gram Panchayat Recruitment 2023 : ಕೋಲಾರ ಜಿಲ್ಲೆಯಲ್ಲಿ ವಿವಿಧ ಗ್ರಾಮ ಪಂಚಾಯಿತಿಗಳಲ್ಲಿ ಖಾಲಿ ಇರುವ ಗ್ರಾಮ ಪಂಚಾಯಿತಿ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರದ ಮೇಲ್ವಿಚಾರಕರ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ವೇತನ, ಅರ್ಜಿ ಸಲ್ಲಿಕೆ ದಿನಾಂಕ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

Kolar District Gram Panchayat Recruitment 2023 : Details of Vacancies

ಹುದ್ದೆ : ಗ್ರಾಮ ಪಂಚಾಯಿತಿ ಗ್ರಂಥಾಲಯ ಮೇಲ್ವಿಚಾರಕರು

ಕರ್ತವ್ಯ ಸ್ಥಳ : ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳು ಕೋಲಾರ ಜಿಲ್ಲೆಯ ಗ್ರಾಮ ಪಂಚಾಯಿತಿಗಳಲ್ಲಿ ಕೆಲಸ ನಿರ್ವಹಿಸಬೇಕು.

ಖಾಲಿಯಿರುವ ಹುದ್ದೆಗಳ ಸಂಖ್ಯೆ : ಒಟ್ಟು 05 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.

ಕೋಲಾರ ಜಿಲ್ಲೆಯ ಗ್ರಾಮ ಪಂಚಾಯಿತಿಯಲ್ಲಿ ನೇಮಕಾತಿ 2023 – Kolar District Gram Panchayat Recruitment 2023

ಶೈಕ್ಷಣಿಕ ಅರ್ಹತೆ : ಅಭ್ಯರ್ಥಿಯು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ಸರ್ಟಿಫಿಕೇಷನ್ ಕೋರ್ಸ್ ಇನ್ ಲೈಬ್ರರಿ ಸೈನ್ಸ್ ಪ್ರಮಾಣ ಪತ್ರ ಪಡೆದಿರತಕ್ಕದ್ದು ಹಾಗೂ ಕನಿಷ್ಠ 03 ತಿಂಗಳು ಕಂಪ್ಯೂಟರ್ ಕೋರ್ಸನಲ್ಲಿ ಉತ್ತೀರ್ಣರಾಗಿರಬೇಕು.

ಉದ್ಯೋಗ ಮಾಹಿತಿ : ಜಿಲ್ಲಾ ಪಂಚಾಯ್ತಿಯಲ್ಲಿ ಡಾಟಾ ಎಂಟ್ರಿ ಆಪರೇಟರ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ವಯಸ್ಸಿನ ಮೀತಿ : ದಿನಾಂಕ 19/11/2023ಕ್ಕೆ ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷ ನಿಗದಿಪಡಿಸಲಾಗಿದೆ
• ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ – ಗರಿಷ್ಠ 35 ವರ್ಷ
• ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ – ಗರಿಷ್ಠ 38 ವರ್ಷ
• ಪ.ಜಾತಿ/ಪ.ಪಂಗಡ/ ಪ್ರ1ರ ಅಭ್ಯರ್ಥಿಗಳಿಗೆ – ಗರಿಷ್ಠ 40 ವರ್ಷ

ವೇತನ : ಗ್ರಾಮ ಪಂಚಾಯಿತಿ ಗ್ರಂಥಾಲಯ ಮೇಲ್ವಿಚಾರಕರು ಹುದ್ದೆಗೆ ಕಾರ್ಮಿಕ ಇಲಾಖೆಯಿಂದ ಆಗಿಂದಾಗ್ಗೆ ನಿಗಧಿಪಡಿಸಿರುವ ಕನಿಷ್ಠ ವೇತನ ನೀಡಲಾಗುತ್ತದೆ.

ಉದ್ಯೋಗ ಮಾಹಿತಿ : ರಾಯಚೂರು ಜಿಲ್ಲೆಯ ಗ್ರಾಮ ಪಂಚಾಯಿತಿಗಳಲ್ಲಿ ನೇಮಕಾತಿ 2023

ಆಯ್ಕೆ ವಿಧಾನ : ಶೈಕ್ಷಣಿಕ ಅರ್ಹತೆಯಲ್ಲಿನ ಮೆರಿಟ್ ಮತ್ತು ರೋಸ್ಟರ್ ಆಧಾರದ ಮೇಲೆ ಅಭ್ಯರ್ಥಿಗಳನ್ನು ನೇಮಕ ಮಾಡಲಾಗುವುದು.

ಅರ್ಜಿ ಸಲ್ಲಿಕೆಯ ವಿಧಾನ : ಅಭ್ಯರ್ಥಿಯು ಈ ಹುದ್ದೆಗೆ ಆಫ್‌ಲೈನ್‌ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು.
ಹಂತ 1 : ಆಫ್‌ಲೈನ್‌ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 2 : ಇಲಾಖೆಯ ವೆಬ್‌ಸೈಟ್ ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ ಅಪ್ಲಿಕೇಷನ್ ಫಾರ್ಮ್ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಪ್ಲಿಕೇಷನ್ ಡೌನ್ಲೋಡ್ ಮಾಡಿಕೊಳ್ಳಿ.
ಹಂತ 3 : ಅಪ್ಲಿಕೇಷನ್ ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಪುನಃ ಒಮ್ಮೆ ಪರಿಶೀಲಿಸಿ.
ಹಂತ 4 : ಕೊನೆಯದಾಗಿ, ಅಪ್ಲಿಕೇಷನ್ ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಲಗತ್ತಿಸಲು ಸೂಚಿಸಿದ್ದರೆ, ಅವುಗಳನ್ನು ಲಗತ್ತಿಸಿ (ಅಗತ್ಯವಿದ್ದರೆ ಮಾತ್ರ) ಭರ್ತಿ ಮಾಡಿದ ಅರ್ಜಿಯನ್ನು ಈ ಕೆಳಗಡೆ ನೀಡಲಾದ ಕಚೇರಿಯ ವಿಳಾಸಕ್ಕೆ ಕಳುಹಿಸಿ.

ಅರ್ಜಿ ಸಲ್ಲಿಸುವ ವಿಳಾಸ : ಹುದ್ದೆ ಖಾಲಿ ಇರುವ ಆಯಾ ಗ್ರಾಮ ಪಂಚಾಯಿತಿ ಕಛೇರಿಗೆ ಅರ್ಜಿ ಸಲ್ಲಿಸಬೇಕು.

ಅರ್ಜಿ ಶುಲ್ಕ : ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.

ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿದ ದಿನಾಂಕದ ವಿವರ :
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ಅಕ್ಟೋಬರ್ 20, 2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ನವೆಂಬರ್ 19, 2023

Kolar Gram Panchayat Recruitment 2023 : Important Links

NOTIFICATION & APPLICATION FORMCLICK HERE
Telegram Join Link Click Here
WhatsApp Channel Link Click Here

ಇತರೆ ಮಾಹಿತಿ : ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಸಂಬಂಧಪಟ್ಟ ಗ್ರಾಮ ಪಂಚಾಯತಿ ವ್ಯಾಪ್ತಿಯ ನಿವಾಸಿಯಾಗಿರತಕ್ಕದ್ದು. ಸಂಬಂಧಪಟ್ಟ ಗ್ರಾಮ ಪಂಚಾಯತಿ ವ್ಯಾಪ್ತಿಯ ನಿವಾಸಿ ಲಭ್ಯತೆ ಇಲ್ಲದೆ ಇದ್ದಲ್ಲಿ ಆಯಾ ತಾಲೂಕು ವ್ಯಾಪ್ತಿಯಲ್ಲಿನ ಬೇರೆ ಗ್ರಾಮ ಪಂಚಾಯತಿಯ ಅಭ್ಯರ್ಥಿಗಳನ್ನು ಆಯ್ಕೆಗೆ ಪರಿಗಣಿಸಲಾಗುವುದು.

ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.

WhatsApp
Telegram
Facebook

Leave a Comment