Kolar Gram Panchayat Recruitment 2022 – Apply for 46 Bill Collector, DEO, Attendant Posts

Kolar Gram Panchayat Recruitment 2022 : ಕೋಲಾರ ಜಿಲ್ಲೆ ವ್ಯಾಪ್ತಿಯ ಗ್ರಾಮ ಪಂಚಾಯಿತಿಗಳಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿ ಮಾಡಲು ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ವಯೋಮಾನ, ವೇತನ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

Kolar Gram Panchayat Recruitment 2022 : Details of Vacancies

ಹುದ್ದೆ : ಕರವಸೂಲಿಗಾರ ಮತ್ತು ಕ್ಲರ್ಕ್ ಕಂ ಡಾಟಾ ಎಂಟ್ರಿ ಆಪರೇಟರ್, ಡಾಟಾ ಎಂಟ್ರಿ ಆಪರೇಟರ್, ಅಟೆಂಡೆಂಟ್

ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಕೋಲಾರ ಜಿಲ್ಲೆ ವ್ಯಾಪ್ತಿಯ ಗ್ರಾಮ ಪಂಚಾಯಿತಿಗಳಲ್ಲಿ ಕರ್ತವ್ಯ ನಿರ್ವಹಿಸಬೇಕು.

ಖಾಲಿಯಿರುವ ಹುದ್ದೆಗಳ ಸಂಖ್ಯೆ : ಒಟ್ಟು 46 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.

ಹುದ್ದೆಹುದ್ದೆಗಳ ಸಂಖ್ಯೆ
ಕರವಸೂಲಿಗಾರ ಮತ್ತು ಕ್ಲರ್ಕ್ ಕಂ ಡಾಟಾ ಎಂಟ್ರಿ ಆಪರೇಟರ್04
ಡಾಟಾ ಎಂಟ್ರಿ ಆಪರೇಟರ್12
ಅಟೆಂಡೆಂಟ್30

ಶೈಕ್ಷಣಿಕ ಅರ್ಹತೆ :

ಕರವಸೂಲಿಗಾರ – ಕನ್ನಡವನ್ನು ಒಂದು ಭಾಷೆಯನ್ನಾಗಿ ಪಿ.ಯು.ಸಿ ಅಥವಾ ತತ್ಸಮಾನ ವಿದ್ಯಾರ್ಹತೆಯಲ್ಲಿ ತೇರ್ಗಡೆ ಹೊಂದಿರಬೇಕು. ಕಂಪ್ಯೂಟರ್ ತರಬೇತಿ ಕೋರ್ಸ್ ನಲ್ಲಿ ಕೇಂದ್ರ ಅಥವಾ ರಾಜ್ಯ ಸರ್ಕಾರದಿಂದ ಮಾನ್ಯತೆ ಪಡೆದ ಯಾವುದೇ ಸಂಸ್ಥೆಯಿಂದ ಮೂರು ತಿಂಗಳು ತರಬೇತಿ ಪಡೆದಿರುವ ಪ್ರಮಾಣ ಪತ್ರ ಹೊಂದಿರಬೇಕು.
ಡಾಟಾ ಎಂಟ್ರಿ ಆಪರೇಟರ್ – ಕನ್ನಡವನ್ನು ಒಂದು ಭಾಷೆಯನ್ನಾಗಿ ಪಿ.ಯು.ಸಿ ಅಥವಾ ತತ್ಸಮಾನ ವಿದ್ಯಾರ್ಹತೆಯಲ್ಲಿ ತೇರ್ಗಡೆ ಹೊಂದಿರಬೇಕು. ಕಂಪ್ಯೂಟರ್ ತರಬೇತಿ ಕೋರ್ಸ್ ನಲ್ಲಿ ಕೇಂದ್ರ ಅಥವಾ ರಾಜ್ಯ ಸರ್ಕಾರದಿಂದ ಮಾನ್ಯತೆ ಪಡೆದ ಯಾವುದೇ ಸಂಸ್ಥೆಯಿಂದ ಆರು ತಿಂಗಳು ತರಬೇತಿ ಪಡೆದಿರುವ ಪ್ರಮಾಣ ಪತ್ರ ಹೊಂದಿರಬೇಕು.
ಅಟೆಂಡೆಂಟ್ – ಕನ್ನಡವನ್ನು ಒಂದು ವಿಷಯವನ್ನಾಗಿ ಎಸ್.ಎಸ್.ಎಲ್.ಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು.

ವೇತನ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಕಾರ್ಮಿಕ ಇಲಾಖೆಯಿಂದ ನಿಗದಿಪಡಿಸುವ ಕನಿಷ್ಠ ವೇತನ ನೀಡಲಾಗುತ್ತದೆ.

ವಯೋಮಾನ :
ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ – ಗರಿಷ್ಠ 35 ವರ್ಷ
ಹಿಂ. ವರ್ಗ ಅಭ್ಯರ್ಥಿಗಳಿಗೆ – ಗರಿಷ್ಠ 38 ವರ್ಷ
ಪ.ಜಾತಿ/ಪ.ಪಂ/ಪ್ರ1ರ ಅಭ್ಯರ್ಥಿಗಳಿಗೆ – ಗರಿಷ್ಠ 40 ವರ್ಷ

ಆಯ್ಕೆ ವಿಧಾನ : ಕರವಸೂಲಿಗಾರ, ಅಟೆಂಡೆಂಟ್ ಹುದ್ದೆಗಳಿಗೆ ನಿಗದಿಪಡಿಸಿದ ವಿದ್ಯಾರ್ಹತೆಯಲ್ಲಿ ಗಳಿಸಿದ ಗರಿಷ್ಠ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು. ಹಾಗೂ ಡಾಟಾ ಎಂಟ್ರಿ ಆಪರೇಟರ್ ಹುದ್ದೆಗೆ ನಿಗದಿಪಡಿಸಿದ ವಿದ್ಯಾರ್ಹತೆಯಲ್ಲಿ ಗಳಿಸಿದ ಗರಿಷ್ಠ ಅಂಕಗಳು ಹಾಗೂ ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆಯಲ್ಲಿ ಪಡೆದ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು.

ಉದ್ಯೋಗ ಮಾಹಿತಿ : ಅಂಗನವಾಡಿ ಟೀಚರ್ ಹುದ್ದೆಗಳ ನೇರ ನೇಮಕಾತಿ 2022

ಕೋಲಾರ ಜಿಲ್ಲೆಯ ಗ್ರಾಮ ಪಂಚಾಯಿತಿಯಲ್ಲಿ ಖಾಲಿಯಿರುವ ಹುದ್ದೆಗೆ ಅರ್ಜಿ ಸಲ್ಲಿಕೆಯ ವಿಧಾನ :
• ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಖುದ್ದಾಗಿ ಹಾಜರಾಗಿ ಅರ್ಜಿಯನ್ನು ಸಲ್ಲಿಸಬೇಕು.
• ಅಭ್ಯರ್ಥಿಗಳು ಜಿಲ್ಲಾ ಪಂಚಾಯತದ ಅಧಿಸೂಚನೆಯಲ್ಲಿ ನೀಡಲಾಗಿರುವ ಅರ್ಜಿ ನಮೂನೆಯನ್ನು ಪಡೆದು, ನಂತರ ಅರ್ಜಿ ನಮೂನೆಯಲ್ಲಿ ಹುದ್ದೆಗೆ ಅಗತ್ಯವಿರುವ ಎಲ್ಲಾ ಮಾಹಿತಿಯನ್ನು ಭರ್ತಿ ಮಾಡಿ ( ಉದಾಹರಣೆಗೆ : ಅಭ್ಯರ್ಥಿಯ ಹೆಸರು, ವಿದ್ಯಾರ್ಹತೆ, ಇಮೇಲ್ ವಿಳಾಸ ಇತ್ಯಾದಿ) ಹುದ್ದೆ ಖಾಲಿ ಇರುವ ಆಯಾ ಸಂಬಂಧಪಟ್ಟ ಗ್ರಾಮ ಪಂಚಾಯಿತಿ ಕಛೇರಿಯ ಖುದ್ದಾಗಿ ಹಾಜರಾಗಿ ಅರ್ಜಿಯನ್ನು ಸಲ್ಲಿಸಬೇಕು.

ನಿಗದಿತ ಅರ್ಜಿ ಶುಲ್ಕದ ವಿವರ : ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ

ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿರುವ ದಿನಾಂಕದ ವಿವರ :
ಅರ್ಜಿ ಸಲ್ಲಿಕೆಗೆ ಪ್ರಾರಂಭದ ದಿನಾಂಕ : ಆಗಸ್ಟ್ 10, 2022
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ : ಆಗಸ್ಟ್ 24, 2022

Kolar Gram Panchayat Recruitment 2022 : Important Links

Notification & Application Form Click Here

ಇತರೆ ಮಾಹಿತಿ : ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಆಯಾ ಗ್ರಾಮ ಪಂಚಾಯಿತಿಯ ವ್ಯಾಪ್ತಿಗೊಳಪಡುವ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ

ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.

WhatsApp
Telegram
Facebook

Leave a Comment