Konkan Railway Recruitment 2021 | 12 ವ್ಯವಸ್ಥಾಪಕ, ಲೆಕ್ಕ ಸಹಾಯಕ ಹುದ್ದೆಗಳ ಭರ್ತಿ

Konkan Railway Recruitment 2021 : ಕೊಂಕಣ ರೈಲ್ವೆಯಲ್ಲಿ ಅಗತ್ಯವಿರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಕರೆಯಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ವಯೋಮಾನ, ಅರ್ಜಿ ಸಲ್ಲಿಕೆ ವಿಧಾನ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

Konkan Railway Recruitment 2021 : Details of Vacancies

ಹುದ್ದೆ : ಡೆಪ್ಯೂಟಿ ಜನರಲ್ ಮ್ಯಾನೇಜರ್ (ಫೈನಾನ್ಸ್), ಸಹಾಯಕ ಲೆಕ್ಕ ಅಧಿಕಾರಿ, ವಿಭಾಗ ಅಧಿಕಾರಿ, ಲೆಕ್ಕ ಸಹಾಯಕ

ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾಗುವ ಅರ್ಹ ಅಭ್ಯರ್ಥಿಗಳು ಭಾರತದೆಲ್ಲೆಡೆ ಕರ್ತವ್ಯ ನಿರ್ವಹಿಸಬೇಕು.

ಖಾಲಿಯಿರುವ ಹುದ್ದೆಗಳ ಸಂಖ್ಯೆ : ಒಟ್ಟು 12 ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಹುದ್ದೆಹುದ್ದೆಗಳ ಸಂಖ್ಯೆವಿದ್ಯಾರ್ಹತೆ
ಡೆಪ್ಯೂಟಿ ಜನರಲ್ ಮ್ಯಾನೇಜರ್01ಸಿಎಂಎ/ಸಿಎ
ಸಹಾಯಕ ಲೆಕ್ಕ ಅಧಿಕಾರಿ02ಸಿಎಂಎ/ಸಿಎ
ವಿಭಾಗ ಅಧಿಕಾರಿ02ಬಿ.ಕಾಂ
ಲೆಕ್ಕ ಸಹಾಯಕ07ಬಿ.ಕಾಂ

ವಯೋಮಾನ : ದಿನಾಂಕ 01 ಜುಲೈ 2021ಕ್ಕೆ ಡೆಪ್ಯೂಟಿ ಜನರಲ್ ಮ್ಯಾನೇಜರ್ (ಫೈನಾನ್ಸ್) ಹುದ್ದೆಗೆ 45 ವರ್ಷ, ಸಹಾಯಕ ಲೆಕ್ಕ ಅಧಿಕಾರಿ ಹುದ್ದೆಗೆ 35 ವರ್ಷ, ವಿಭಾಗ ಅಧಿಕಾರಿ ಹುದ್ದೆಗೆ 40 ವರ್ಷ, ಲೆಕ್ಕ ಸಹಾಯಕ ಹುದ್ದೆಗೆ 35 ವರ್ಷ ನಿಗದಿಪಡಿಸಲಾಗಿದೆ.

ವಯೋಮಿತಿ ಸಡಿಲಿಕೆ : ಎಸ್ಸಿ, ಎಸ್ಟಿ ಅಭ್ಯರ್ಥಿಗಳಿಗೆ 05 ವರ್ಷ, ಒಬಿಸಿ ಅಭ್ಯರ್ಥಿಗಳಿಗೆ 03 ವರ್ಷ ಸಡಿಲಿಕೆ ನೀಡಲಾಗಿದೆ.

ಉದ್ಯೋಗ ಮಾಹಿತಿ : Bangalore Urban Zilla Panchayat Recruitment 2021

ವೇತನ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 34,200 ರಿಂದ ರೂ. 92,200 ವರೆಗೂ ವೇತನ ನೀಡಲಾಗುತ್ತದೆ.

ಆಯ್ಕೆ ವಿಧಾನ : ಅಭ್ಯರ್ಥಿಗಳು ವಿದ್ಯಾರ್ಹತೆಯಲ್ಲಿ ಪಡೆದಿರುವ ಅಂಕಗಳು ಹಾಗೂ ಅನುಭವದ ಆಧಾರದ ಮೇಲೆ ಸಂದರ್ಶನ ನಡೆಸಿ ಹುದ್ದೆಗಳಿಗೆ ನೇಮಕ ಮಾಡಲಾಗುವುದು.

ಅನುಭವ : ಆಯಾ ಹುದ್ದೆಗಳಿಗೆ ಅನುಗುಣವಾಗಿ ನಿಗದಿತ ಕಾರ್ಯಾನುಭವ ಹೊಂದಿರಬೇಕು

ಕೊಂಕಣ ರೈಲ್ವೆಯಲ್ಲಿ ಖಾಲಿಯಿರುವ ಹುದ್ದೆಗೆ ಅರ್ಜಿ ಸಲ್ಲಿಕೆಯ ವಿಧಾನ :
• ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಇಮೇಲ್ ಮೂಲಕವೇ ಅರ್ಜಿಯನ್ನು ಸಲ್ಲಿಸಬೇಕು.
• ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯನ್ನು ಡೌನ್ಲೋಡ್ ಮಾಡಿ, ಅರ್ಜಿ ನಮೂನೆಯಲ್ಲಿ ಹುದ್ದೆಗೆ ಅಗತ್ಯವಿರುವ ಎಲ್ಲಾ ಮಾಹಿತಿಯನ್ನು ಭರ್ತಿ ಮಾಡಿ ( ಉದಾಹರಣೆಗೆ : ಅಭ್ಯರ್ಥಿಯ ಹೆಸರು, ವಿದ್ಯಾರ್ಹತೆ, ಇಮೇಲ್ ವಿಳಾಸ ಇತ್ಯಾದಿ) ಕಛೇರಿಯ ಇಮೇಲ್ helpdskrectcell@krcl.co.in ವಿಳಾಸಕ್ಕೆ ಅರ್ಜಿ ಕಳುಹಿಸಬೇಕು

ನಿಗದಿತ ಅರ್ಜಿ ಶುಲ್ಕದ ವಿವರ : ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.

ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿರುವ ದಿನಾಂಕದ ವಿವರ :
ಅರ್ಜಿ ಸಲ್ಲಿಕೆಗೆ ಪ್ರಾರಂಭದ ದಿನಾಂಕ : ಜೂನ್ 02, 2021
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ : ಜುಲೈ 01, 2021

Konkan Railway Recruitment 2021 : Important Links

ಅಧಿಸೂಚನೆ & ಅರ್ಜಿ ನಮೂನೆ : Click Here

ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.