Koppal District Mental Health Office Recruitment 2024 : ರಾಷ್ಟ್ರೀಯ ಆರೋಗ್ಯ ಅಭಿಯಾನದಡಿಯಲ್ಲಿ ಜಿಲ್ಲಾ ಮಾನಸಿಕ ಆರೋಗ್ಯ ಅನುಷ್ಠಾನ ಕೇಂದ್ರ ಕೊಪ್ಪಳಕ್ಕೆ ರಾಷ್ಟ್ರೀಯ ಮಾನಸಿಕ ಆರೋಗ್ಯ ಕಾರ್ಯಕ್ರಮದಡಿಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಕರೆಯಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಶೈಕ್ಷಣಿಕ ಅರ್ಹತೆ, ವೇತನ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.
Koppal District Mental Health Office Recruitment 2024 : Details of Vacancies
ಹುದ್ದೆ : ಸೋಷಿಯಲ್ ವರ್ಕರ್, ಕಮ್ಯೂನಿಟಿ ನರ್ಸ್, ಸಲಹೆಗಾರರು
ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಕೊಪ್ಪಳ ಜಿಲ್ಲೆಯಲ್ಲಿ ಕೆಲಸ ನಿರ್ವಹಿಸಬೇಕು.
ಖಾಲಿಯಿರುವ ಹುದ್ದೆಗಳ ಸಂಖ್ಯೆ : ಒಟ್ಟು 4 ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಕರೆಯಲಾಗಿದೆ.
ಹುದ್ದೆ | ಹುದ್ದೆಗಳ ಸಂಖ್ಯೆ | ವೇತನ |
ಸೋಷಿಯಲ್ ವರ್ಕರ್ | 1 | 25,000 |
ಕಮ್ಯೂನಿಟಿ ನರ್ಸ್ | 1 | 14,000 |
ಸಲಹೆಗಾರರು | 2 | 4,000 |
ಶೈಕ್ಷಣಿಕ ಅರ್ಹತೆ :
• ಸೋಷಿಯಲ್ ವರ್ಕರ್ – ಸ್ನಾತಕೋತ್ತರ ಪದವಿ / ಸೋಷಿಯಲ್ ವರ್ಕ್ (ಮೆಡಿಕಲ್/ಸೈಕಿಯಾಟ್ರಿ) ನಲ್ಲಿ ಸ್ನಾತಕೋತ್ತರ ಪದವಿ/ ಸೋಷಿಯಲ್ ವರ್ಕ್ ನಲ್ಲಿ ಸ್ನಾತಕೋತ್ತರ ಪದವಿ.
• ಕಮ್ಯೂನಿಟಿ ನರ್ಸ್ – ಬಿ.ಎಸ್ಸಿ ನರ್ಸಿಂಗ್ ಅಥವಾ ತತ್ಸಮಾನ ಪದವಿ (ಅಪೇಕ್ಷಣೀಯ : 2 ವರ್ಷ ಆಸ್ಪತ್ರೆಯಲ್ಲಿ ಕೆಲಸ ಮಾಡಿದ ಅನುಭವ)
• ಸಲಹೆಗಾರರು – ಎಂ.ಎಸ್.ಡಬ್ಲ್ಯೂ
ಉದ್ಯೋಗ ಮಾಹಿತಿ : ಬೆಳಗಾವಿ ಜಿಲ್ಲಾ ನ್ಯಾಯಾಲಯದಲ್ಲಿ ನೇಮಕಾತಿ 2024
ವಯಸ್ಸಿನ ಮೀತಿ : ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕಕ್ಕೆ ಕನಿಷ್ಠ 18 ವರ್ಷ ಪೂರೈಸಿರಬೇಕು ಹಾಗೂ ಗರಿಷ್ಠ 45 ವರ್ಷ ಮೀರಿರಬಾರದು.
ಆಯ್ಕೆ ವಿಧಾನ : ಮೆರಿಟ್ ಆಧಾರದ ಮೇಲೆ ಅಭ್ಯರ್ಥಿಗಳನ್ನು ಹುದ್ದೆಗಳಿಗೆ ಆಯ್ಕೆ ಮಾಡಲಾಗುವುದು.
ಅರ್ಜಿ ಸಲ್ಲಿಕೆಯ ವಿಧಾನ : ಅಭ್ಯರ್ಥಿಯು ಈ ಹುದ್ದೆಗೆ ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು.
ಹಂತ 1 : ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 2 : ಇಲಾಖೆಯ ವೆಬ್‌ಸೈಟ್ ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ ಅಪ್ಲೈ ಆನ್‌ಲೈನ್ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಪ್ಲಿಕೇಷನ್ ತೆರೆದುಕೊಳ್ಳಿ.
ಹಂತ 3 : ಅಪ್ಲಿಕೇಷನ್ ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಮುಂದಿನ ಹಂತಕ್ಕೆ ತೆರಳುವ ಮುನ್ನ ಪುನಃ ಒಮ್ಮೆ ಪರಿಶೀಲಿಸಿ.
ಹಂತ 4 : ಕೊನೆಯದಾಗಿ, ಅಪ್ಲಿಕೇಷನ್ ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಅಪ್ಲೋಡ್ ಮಾಡಲು ಸೂಚಿಸಿದ್ದರೆ, ಅವುಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಿ (ಅಗತ್ಯವಿದ್ದರೆ ಮಾತ್ರ) ಅರ್ಜಿ ಸಲ್ಲಿಕೆ ಪೂರ್ಣಗೊಳಿಸಿ.
ನಿಗದಿತ ಅರ್ಜಿ ಶುಲ್ಕದ ವಿವರ : ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.
ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿರುವ ದಿನಾಂಕದ ವಿವರ :
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ಮಾರ್ಚ್ 14, 2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಏಪ್ರಿಲ್ 02, 2024
Koppal District Mental Health Office Recruitment 2024 : Important Links
NOTIFICATION | CLICK HERE |
APPLY ONLINE | CLICK HERE |
Telegram Join Link | Click Here |
WhatsApp Group Link | Click Here |
ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.