KPSC Group C Recruitment 2024 : ಕರ್ನಾಟಕ ಲೋಕಸೇವಾ ಆಯೋಗದಿಂದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಗ್ರೂಪ್-ಸಿ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ವೇತನ, ಅರ್ಜಿ ಶುಲ್ಕ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.
KPSC Group C Recruitment 2024 : Details of Vacancies
ಹುದ್ದೆ :
ಇಲಾಖೆ | ಹುದ್ದೆ |
ಕೈಗಾರಿಕಾ ಮತ್ತು ವಾಣಿಜ್ಯ ಇಲಾಖೆ | ಕೈಗಾರಿಕಾ ವಿಸ್ತರಣಾಧಿಕಾರಿ |
ಸಾರ್ವಜನಿಕ ಗ್ರಂಥಾಲಯ ಇಲಾಖೆ | ಗ್ರಂಥಪಾಲಕ |
ಜಲಸಂಪನ್ಮೂಲ ಇಲಾಖೆ | ಕಿರಿಯ ಇಂಜಿನಿಯರ್ (ಸಿವಿಲ್) |
ಜಲಸಂಪನ್ಮೂಲ ಇಲಾಖೆ | ಕಿರಿಯ ಇಂಜಿನಿಯರ್ (ಮೆಕ್ಯಾನಿಕಲ್) |
ಸಾರ್ವಜನಿಕ ಗ್ರಂಥಾಲಯ ಇಲಾಖೆ | ಸಹಾಯಕ ಗ್ರಂಥಪಾಲಕ |
ಅಂರ್ಜಲ ನಿರ್ದೇಶನಾಲಯ | ಕಿರಿಯ ಇಂಜಿನಿಯರ್ |
ಪೌರಾಡಳಿತ ನಿರ್ದೇಶನಾಲಯ | ಕಿರಿಯ ಇಂಜಿನಿಯರ್ (ಸಿವಿಲ್) |
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ | ಕಿರಿಯ ಇಂಜಿನಿಯರ್ |
ಪೌರಾಡಳಿತ ನಿರ್ದೇಶನಾಲಯ | ಕಿರಿಯ ಇಂಜಿನಿಯರ್ (ಎಲೆಕ್ಟ್ರಿಕಲ್) |
ಪೌರಾಡಳಿತ ನಿರ್ದೇಶನಾಲಯ (ನಗರ ಸಭೆ/ಪುರ ಸಭೆ/ಪಟ್ಟಣ ಪಂಚಾಯಿತಿ) | ನೀರು ಸರಬರಾಜುದಾರರು |
ಪೌರಾಡಳಿತ ನಿರ್ದೇಶನಾಲಯ (ನಗರ ಸಭೆ/ಪುರ ಸಭೆ/ಪಟ್ಟಣ ಪಂಚಾಯಿತಿ) | ಸಹಾಯಕ ನೀರು ಸರಬರಾಜುದಾರರು |
ಪೌರಾಡಳಿತ ನಿರ್ದೇಶನಾಲಯ (ನಗರ ಸಭೆ/ಪುರ ಸಭೆ/ಪಟ್ಟಣ ಪಂಚಾಯಿತಿ) | ಕಿರಿಯ ಆರೋಗ್ಯ ನಿರೀಕ್ಷಕರು |
ಪೌರಾಡಳಿತ ನಿರ್ದೇಶನಾಲಯ (ಮಹಾನಗರ ಪಾಲಿಕೆ) | ಕಿರಿಯ ಆರೋಗ್ಯ ನಿರೀಕ್ಷಕರು |
ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಕರ್ನಾಟಕದಲ್ಲಿ ಕೆಲಸ ನಿರ್ವಹಿಸಬೇಕು.
ಖಾಲಿಯಿರುವ ಹುದ್ದೆಗಳ ಸಂಖ್ಯೆ : ಒಟ್ಟು 486 ಹುದ್ದೆಯ ಭರ್ತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.
ಶೈಕ್ಷಣಿಕ ಅರ್ಹತೆ : ಅಭ್ಯರ್ಥಿಗಳು ಆಯಾ ಹುದ್ದೆಗಳಿಗೆ ಅನುಗುಣವಾಗಿ ಡಿಪ್ಲೊಮಾ ಇನ್ ಸಿವಿಲ್ ಇಂಜಿನಿಯರಿಂಗ್/ ಡಿಪ್ಲೊಮಾ ಇನ್ ಮೆಕ್ಯಾನಿಕಲ್ ಇಂಜಿನಿಯರ್/ ಡಿಪ್ಲೊಮಾ ಇನ್ ಲೈಬ್ರರಿ ಸೈನ್ಸ್/ ಡಿಪ್ಲೊಮಾ ಇನ್ ಇಲೆಕ್ಟ್ರಿಕಲ್ ಇಂಜಿನಿಯರಿಂಗ್/ ಸೈನ್ಸ್, ವಾಣಿಜ್ಯ, ಬಿಸಿನೆಸ್ ಅಡ್ಮಿನಿಸ್ಟ್ರೇಷನ್ ಪದವಿ/ ಎಸ್.ಎಸ್.ಎಲ್.ಸಿ ಜೊತೆಗೆ ಐಟಿಐ/ ಎಸ್.ಎಸ್.ಎಲ್.ಸಿ ಅಥವಾ ಪಿಯುಸಿ ಜೊತೆಗೆ ಡಿಪ್ಲೊಮಾ ಕೋರ್ಸ್ ಇನ್ ಸ್ಯಾನಿಟರಿ ಹೆಲ್ತ್ ಇನ್ಸ್ಪೆಕ್ಟರ್ ಅರ್ಹತೆ ಹೊಂದಿರಬೇಕು.
ಉದ್ಯೋಗ ಮಾಹಿತಿ : ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಿಂದ ಪಿಡಿಓ ಹುದ್ದೆಗಳ ನೇಮಕಾತಿ 2024
ವೇತನ :
ಹುದ್ದೆ | ವೇತನ |
ಕೈಗಾರಿಕಾ ವಿಸ್ತರಣಾಧಿಕಾರಿ | 33450-62600 |
ಗ್ರಂಥಪಾಲಕ | 37900-70850 |
ಕಿರಿಯ ಇಂಜಿನಿಯರ್ (ಸಿವಿಲ್) | 33450-62600 |
ಕಿರಿಯ ಇಂಜಿನಿಯರ್ (ಮೆಕ್ಯಾನಿಕಲ್) | 33450-62600 |
ಸಹಾಯಕ ಗ್ರಂಥಪಾಲಕ | 30350-58250 |
ಕಿರಿಯ ಇಂಜಿನಿಯರ್ | 33450-62600 |
ಕಿರಿಯ ಇಂಜಿನಿಯರ್ (ಎಲೆಕ್ಟ್ರಿಕಲ್) | 33450-62600 |
ನೀರು ಸರಬರಾಜುದಾರರು | 27650-52650 |
ಸಹಾಯಕ ನೀರು ಸರಬರಾಜುದಾರರು | 21400-42000 |
ಕಿರಿಯ ಆರೋಗ್ಯ ನಿರೀಕ್ಷಕರು | 23500-47650 |
ವಯೋಮಾನ : ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕಕ್ಕೆ ಅಭ್ಯರ್ಥಿಗಳು ಕನಿಷ್ಠ 18 ವರ್ಷ ಪೂರೈಸಿರಬೇಕು.
• ಸಾಮಾನ್ಯ ಅರ್ಹತೆ ಅಭ್ಯರ್ಥಿಗಳಿಗೆ – 35 ವರ್ಷ
• ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ – ಗರಿಷ್ಠ 38 ವರ್ಷ
• ಪ.ಜಾತಿ, ಪ.ಪಂ, ಪ್ರವರ್ಗ 1 ಅಭ್ಯರ್ಥಿಗಳಿಗೆ – ಗರಿಷ್ಠ 40 ವರ್ಷ
ಆಯ್ಕೆ ವಿಧಾನ : ಸ್ಪರ್ಧಾತ್ಮಕ ಪರೀಕ್ಷೆ ನಡೆಸಿ ಅಭ್ಯರ್ಥಿಗಳನ್ನು ಹುದ್ದೆಗಳಿಗೆ ಆಯ್ಕೆ ಮಾಡಲಾಗುವುದು.
ಉದ್ಯೋಗ ಮಾಹಿತಿ : KPSC ಇಂದ ಸಾರಿಗೆ ಇಲಾಖೆಯಲ್ಲಿನ ಮೋಟಾರು ವಾಹನ ನಿರೀಕ್ಷಕರು ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ
ಅರ್ಜಿ ಸಲ್ಲಿಕೆಯ ವಿಧಾನ : ಅಭ್ಯರ್ಥಿಯು ಈ ಹುದ್ದೆಗೆ ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು.
ಹಂತ 1 : ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 2 : ಇಲಾಖೆಯ ವೆಬ್‌ಸೈಟ್ ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ ಅಪ್ಲೈ ಆನ್‌ಲೈನ್ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಪ್ಲಿಕೇಷನ್ ತೆರೆದುಕೊಳ್ಳಿ.
ಹಂತ 3 : ಅಪ್ಲಿಕೇಷನ್ ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಮುಂದಿನ ಹಂತಕ್ಕೆ ತೆರಳುವ ಮುನ್ನ ಪುನಃ ಒಮ್ಮೆ ಪರಿಶೀಲಿಸಿ.
ಹಂತ 4 : ಅಪ್ಲಿಕೇಷನ್ ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಅಪ್ಲೋಡ್ ಮಾಡಲು ಸೂಚಿಸಿದ್ದರೆ, ಅವುಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಿ (ಅಗತ್ಯವಿದ್ದರೆ ಮಾತ್ರ).
ಹಂತ 5 : ಕೊನೆಯದಾಗಿ, ಅಭ್ಯರ್ಥಿಗೆ ಅರ್ಜಿ ಶುಲ್ಕ ಪಾವತಿಸಲು ಸೂಚಿಸಿದ್ದರೆ, ಶುಲ್ಕ ಪಾವತಿಸಿ ಅರ್ಜಿ ಸಲ್ಲಿಕೆ ಪೂರ್ಣಗೊಳಿಸಿ.
ನಿಗದಿತ ಅರ್ಜಿ ಶುಲ್ಕದ ವಿವರ :
• ಸಾಮಾನ್ಯ ಅಭ್ಯರ್ಥಿಗಳು – ರೂ. 600
• ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳು – ರೂ. 300
• ಮಾಜಿ ಸೈನಿಕ ಅಭ್ಯರ್ಥಿಗಳು – ರೂ. 50
• ಪ.ಜಾತಿ, ಪ.ಪಂ, ಪ್ರವರ್ಗ 1, ಅಂಗವಿಕಲ ಅಭ್ಯರ್ಥಿಗಳಿಗೆ ಶುಲ್ಕ ಇರುವುದಿಲ್ಲ.
ಶುಲ್ಕ ಪಾವತಿಸುವ ವಿಧಾನ : ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ನೆಟ್ ಬ್ಯಾಂಕಿಂಗ್, ಯುಪಿಐ ಮೂಲಕ ಶುಲ್ಕ ಪಾವತಿಸಬಹುದು.
ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿದ ದಿನಾಂಕದ ವಿವರ :
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ಏಪ್ರಿಲ್ 29, 2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಮೇ 28, 2024
KPSC Recruitment 2024 : Important Links
NOTIFICATION (Degree – RPC) | CLICK HERE |
NOTIFICATION (Degree – HK) | CLICK HERE |
NOTIFICATION (Below Degree – RPC) | CLICK HERE |
NOTIFICATION (Below Degree – HK) | CLICK HERE |
APPLY ONLINE | CLICK HERE |
Telegram Join Link | Click Here |
WhatsApp Group Link | Click Here |
ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.