ಕರ್ನಾಟಕ ಲೋಕಸೇವಾ ಆಯೋಗದ ನೇಮಕಾತಿ 2026 – KPSC KAS Recruitment 2026

KPSC KAS Recruitment 2026

KPSC KAS Recruitment 2026 : ಕರ್ನಾಟಕ ಲೋಕಸೇವಾ ಆಯೋಗದಿಂದ ಕೆಎಎಸ್ ಗ್ರೂಪ್-ಎ ಹಾಗೂ ಗ್ರೂಪ್-ಬಿ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ಅರ್ಜಿ ಶುಲ್ಕ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

KPSC KAS Recruitment 2026 : Details of Vacancies

ಹುದ್ದೆ :

ಗ್ರೂಪ್-ಎ ಹುದ್ದೆಗಳು –

  • ಸಹಾಯಕ ಆಯುಕ್ತರು (ಕಿರಿಯ ಶ್ರೇಣಿ), ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ
  • ವಾಣಿಜ್ಯ ತೆರಿಗೆಗಳ ಸಹಾಯಕ ಆಯುಕ್ತರು, ವಾಣಿಜ್ಯ ತೆರಿಗೆ ಇಲಾಖೆ
  • ಸಹಾಯಕ ನಿರ್ದೇಶಕರು, ಖಜಾನೆ ಇಲಾಖೆ
  • ಕಾರ್ಯನಿರ್ವಾಹಕ ಅಧಿಕಾರಿ/ ಸಹಾಯಕ ಕಾರ್ಯದರ್ಶಿ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
  • ಸಹಾಯಕ ನಿರ್ದೇಶಕರು ಗ್ರೇಡ್-1, ಸಮಾಜ ಕಲ್ಯಾಣ ಇಲಾಖೆ

ಗ್ರೂಪ್-ಬಿ ಹುದ್ದೆಗಳು –

  • ತಹಶೀಲ್ದಾರ್ (ಗ್ರೇಡ್-2), ಕಂದಾಯ ಇಲಾಖೆ
  • ವಾಣಿಜ್ಯ ತೆರಿಗೆ ಅಧಿಕಾರಿ, ವಾಣಿಜ್ಯ ತೆರಿಗೆ ಇಲಾಖೆ
  • ಸಹಾಯಕ ಅಧೀಕ್ಷಕರು, ಒಳಾಡಳಿತ ಇಲಾಖೆ (ಕಾರಾಗೃಹ)
  • ಸಹಕಾರ ಸಂಘಗಳ ಸಹಾಯಕ ನಿಬಂಧಕರು, ಸಹಕಾರ ಇಲಾಖೆ
  • ಸಹಾಯಕ ನಿರ್ದೇಶಕರು, ಕೃಷಿ ಮಾರಾಟ ಇಲಾಖೆ (ಸಹಕಾರ ಇಲಾಖೆ)
  • ಅಬಕಾರಿ ಉಪ ಅಧೀಕ್ಷಕರು, ಆರ್ಥಿಕ ಇಲಾಖೆ (ಅಬಕಾರಿ ಇಲಾಖೆ)
  • ಉದ್ಯೋಗಾಧಿಕಾರಿ, ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ
  • ಮುಖ್ಯಾಧಿಕಾರಿ (ಗ್ರೇಡ್-1), ನಗರಾಭಿವೃದ್ಧಿ ಇಲಾಖೆ
  • ಸಹಾಯಕ ಖಜಾನಾಧಿಕಾರಿ, ಆರ್ಥಿಕ ಇಲಾಖೆ, (ಖಜಾನೆ)
  • ಸಹಾಯಕ ನಿರ್ದೇಶಕರು, ಆಹಾರ ನಾಗರೀಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ
  • ಶಾಖಾಧಿಕಾರಿ, ಕರ್ನಾಟಕ ಸರ್ಕಾರದ ಸಚಿವಾಲಯ
  • ಶಾಖಾಧಿಕಾರಿ, ಕರ್ನಾಟಕ ಲೋಕಸೇವಾ ಆಯೋಗ
  • ಸಹಾಯಕ ನಿರ್ದೇಶಕರು (ಗ್ರೇಡ್-2), ಸಮಾಜ ಕಲ್ಯಾಣ ಇಲಾಖೆ

ಕರ್ತವ್ಯ ಸ್ಥಳ :

ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಕರ್ನಾಟಕದಲ್ಲಿ ಕೆಲಸ ನಿರ್ವಹಿಸಬೇಕು.

ಖಾಲಿಯಿರುವ ಹುದ್ದೆಗಳ ಸಂಖ್ಯೆ :

ಒಟ್ಟು 319 ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.

ಹುದ್ದೆಉಳಿಕೆ ಮೂಲ ವೃಂದ ಹೈದ್ರಾಬಾದ್ ಕರ್ನಾಟಕ ವೃಂದ
ಗ್ರೂಪ್-ಎ11205
ಗ್ರೂಪ್-ಬಿ18517

ಶೈಕ್ಷಣಿಕ ಅರ್ಹತೆ :

ಅಭ್ಯರ್ಥಿಯು ಭಾರತದಲ್ಲಿ ಕಾನೂನು ರೀತ್ಯಾ ಸ್ಥಾಪಿತವಾದ ಯಾವುದೇ ವಿಶ್ವವಿದ್ಯಾಲಯದ ಸ್ನಾತಕ ಅಥವಾ ಸ್ನಾತಕೋತ್ತರ ಪದವಿಯನ್ನು ಹೊಂದಿರಬೇಕು ಅಥವಾ ತತ್ಸಮಾನ ವಿದ್ಯಾರ್ಹತೆಯನ್ನು ಹೊಂದಿರಬೇಕು

ಉದ್ಯೋಗ ಮಾಹಿತಿ : ಐಬಿಪಿಎಸ್‌ನಿಂದ ಕಸ್ಟಮರ್ ಸರ್ವೀಸ್ ಅಸೋಸಿಯೇಟ್ಸ್ ಹುದ್ದೆಗಳ ಬೃಹತ್ ನೇಮಕಾತಿ 2026

ವಯೋಮಿತಿ :

ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕಕ್ಕೆ ಅಭ್ಯರ್ಥಿಗಳು ಈ ಕೆಳಗಿನಂತೆ ವಯೋಮಿತಿ ಹೊಂದಿರಬೇಕು.
• ಕನಿಷ್ಠ 21 ವರ್ಷ
• ಸಾಮಾನ್ಯ ಅರ್ಹತೆ ಅಭ್ಯರ್ಥಿಗಳಿಗೆ – ಗರಿಷ್ಠ 40 ವರ್ಷ
• ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ – ಗರಿಷ್ಠ 43 ವರ್ಷ
• ಪ.ಜಾತಿ, ಪ.ಪಂ, ಪ್ರವರ್ಗ 1 ಅಭ್ಯರ್ಥಿಗಳಿಗೆ – ಗರಿಷ್ಠ 45 ವರ್ಷ

ಆಯ್ಕೆ ವಿಧಾನ :

• ಪೂರ್ವಭಾವಿ ಪರೀಕ್ಷೆ
• ಮುಖ್ಯ ಪರೀಕ್ಷೆ (ಲಿಖಿತ ಪರೀಕ್ಷೆ ಮತ್ತು ವ್ಯಕ್ತಿತ್ವ ಪರೀಕ್ಷೆ)

ಉದ್ಯೋಗ ಮಾಹಿತಿ : ಜಿಲ್ಲಾ ನ್ಯಾಯಾಲಯದಲ್ಲಿ ನೇಮಕಾತಿ 2026

ಅರ್ಜಿ ಸಲ್ಲಿಕೆಯ ವಿಧಾನ :

ಅಭ್ಯರ್ಥಿಯು ಈ ಹುದ್ದೆಗೆ ಆನ್‌ಲೈನ್‌ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು.
ಹಂತ 1 : ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 2 : ಇಲಾಖೆಯ ವೆಬ್‌ಸೈಟ್ ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ ಅಪ್ಲೈ ಆನ್‌ಲೈನ್‌ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಪ್ಲಿಕೇಷನ್ ತೆರೆದುಕೊಳ್ಳಿ.
ಹಂತ 3 : ಅಪ್ಲಿಕೇಷನ್ ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಮುಂದಿನ ಹಂತಕ್ಕೆ ತೆರಳುವ ಮುನ್ನ ಪುನಃ ಒಮ್ಮೆ ಪರಿಶೀಲಿಸಿ.
ಹಂತ 4 : ಅಪ್ಲಿಕೇಷನ್ ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಅಪ್ಲೋಡ್ ಮಾಡಲು ಸೂಚಿಸಿದ್ದರೆ, ಅವುಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಿ (ಅಗತ್ಯವಿದ್ದರೆ ಮಾತ್ರ).
ಹಂತ 5 : ಕೊನೆಯದಾಗಿ, ಅಭ್ಯರ್ಥಿಗೆ ಅರ್ಜಿ ಶುಲ್ಕ ಪಾವತಿಸಲು ಸೂಚಿಸಿದ್ದರೆ, ಶುಲ್ಕ ಪಾವತಿಸಿ ಅರ್ಜಿ ಸಲ್ಲಿಕೆ ಪೂರ್ಣಗೊಳಿಸಿ.

ನಿಗದಿತ ಅರ್ಜಿ ಶುಲ್ಕದ ವಿವರ :

• ಸಾಮಾನ್ಯ ಅಭ್ಯರ್ಥಿಗಳು – ರೂ. 600
• ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳು – ರೂ. 300
• ಮಾಜಿ ಸೈನಿಕ ಅಭ್ಯರ್ಥಿಗಳು – ರೂ. 50
• ಪ.ಜಾತಿ, ಪ.ಪಂ, ಪ್ರವರ್ಗ 1, ಅಂಗವಿಕಲ ಅಭ್ಯರ್ಥಿಗಳಿಗೆ ಶುಲ್ಕ ಇರುವುದಿಲ್ಲ.

ಶುಲ್ಕ ಪಾವತಿಸುವ ವಿಧಾನ :

ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ನೆಟ್ ಬ್ಯಾಂಕಿಂಗ್, ಯುಪಿಐ ಮೂಲಕ ಶುಲ್ಕ ಪಾವತಿಸಬಹುದು.

ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿದ ದಿನಾಂಕದ ವಿವರ :

• ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ಆಗಸ್ಟ್ 01, 2026
• ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಆಗಸ್ಟ್ 31, 2026
• ಪೂರ್ವಭಾವಿ ಪರೀಕ್ಷಾ ದಿನಾಂಕ (ತಾತ್ಕಾಲಿಕ) : ನವೆಂಬರ್ 15, 2026

KPSC KAS Recruitment 2026 : Important Links

NOTIFICATIONCLICK HERE
APPLY ONLINE CLICK HERE
Telegram Join Link Click Here
WhatsApp Group Link Click Here

ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.

WhatsApp
Telegram
Facebook

Leave a Comment