KPSC Recruitment 2022 – Apply Online for 08 Assistant Director of Fisheries Posts

KPSC Recruitment 2022 : ಕರ್ನಾಟಕ ಲೋಕಸೇವಾ ಆಯೋಗದಿಂದ ಮೀನುಗಾರಿಕೆ ಇಲಾಖೆಯಲ್ಲಿ ಖಾಲಿ ಇರುವ ಹೈದರಾಬಾದ್-ಕರ್ನಾಟಕ ವೃಂದದಲ್ಲಿನ ಗ್ರೂಪ್-ಬಿ ವೃಂದದ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ವೇತನ, ಅರ್ಜಿ ಶುಲ್ಕ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

KPSC Recruitment 2022 : Details of Vacancies

ಹುದ್ದೆ : ಮೀನುಗಾರಿಕೆ ಸಹಾಯಕ ನಿರ್ದೇಶಕರು (ಗ್ರೂಪ್-ಬಿ)

ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಕರ್ನಾಟಕದಲ್ಲಿ ಕೆಲಸ ನಿರ್ವಹಿಸಬೇಕು.

ಖಾಲಿಯಿರುವ ಹುದ್ದೆಗಳ ಸಂಖ್ಯೆ : ಒಟ್ಟು 08 ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.

ಶೈಕ್ಷಣಿಕ ಅರ್ಹತೆ : ಭಾರತದಲ್ಲಿ ಕಾನೂನಿನಿಂದ ಸ್ಥಾಪಿಸಲ್ಪಟ್ಟ ವಿಶ್ವವಿದ್ಯಾಲಯದಿಂದ ಮೀನುಗಾರಿಕೆ ವಿಜ್ಞಾನದಲ್ಲಿ ಪದವಿಯನ್ನು (B.F.Sc) ಹೊಂದಿರಬೇಕು. Must be a holder of Bachelor Degree in Fisheries Sciences (B.F.Sc) from an University established by Law in India.

ವೇತನ : ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 40,900 ರಿಂದ ರೂ. 78,200 ಶ್ರೇಣಿಯಲ್ಲಿ ವೇತನ ನೀಡಲಾಗುತ್ತದೆ.

ಉದ್ಯೋಗ ಮಾಹಿತಿ : ಬಳ್ಳಾರಿ ಜಿಲ್ಲಾ ನ್ಯಾಯಾಲಯದಲ್ಲಿ ಡ್ರೈವರ್ ಹುದ್ದೆಗಳ ನೇರ ನೇಮಕಾತಿ 2022

ವಯೋಮಾನ : ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕಕ್ಕೆ ಅಭ್ಯರ್ಥಿಗಳು ಕನಿಷ್ಠ 18 ವರ್ಷ ಪೂರೈಸಿರಬೇಕು ಹಾಗೂ ಗರಿಷ್ಠ 35 ವರ್ಷ ಮೀರಿರಬಾರದು.
ಎಸ್ಸಿ, ಎಸ್ಟಿ, ಪ್ರವರ್ಗ 1 ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷ
ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ ಗರಿಷ್ಠ 38 ವರ್ಷ

ಆಯ್ಕೆ ವಿಧಾನ : ಸ್ಪರ್ಧಾತ್ಮಕ ಪರೀಕ್ಷೆ ನಡೆಸಿ ಅಭ್ಯರ್ಥಿಗಳನ್ನು ಹುದ್ದೆಗಳಿಗೆ ಆಯ್ಕೆ ಮಾಡಲಾಗುವುದು.

ಉದ್ಯೋಗ ಮಾಹಿತಿ : ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ ನೇರ ನೇಮಕಾತಿ 2022

ಮೀನುಗಾರಿಕೆ ಇಲಾಖೆಯಲ್ಲಿ ಖಾಲಿಯಿರುವ ಹುದ್ದೆಗೆ ಅರ್ಜಿ ಸಲ್ಲಿಕೆಯ ವಿಧಾನ :
• ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್‌ಲೈನ್‌ ಮೂಲಕವೇ ಅರ್ಜಿಯನ್ನು ಸಲ್ಲಿಸಬೇಕು.
• ಅಭ್ಯರ್ಥಿಗಳು ಕರ್ನಾಟಕ ಲೋಕಸೇವಾ ಆಯೋಗದ ಅಧಿಕೃತ ವೆಬ್‌ಸೈಟ್ ವಿಳಾಸಕ್ಕೆ ಭೇಟಿ ನೀಡಿ, ಆನ್‌ಲೈನ್‌ ಅರ್ಜಿಯಲ್ಲಿ ಹುದ್ದೆಗೆ ಅಗತ್ಯವಿರುವ ಎಲ್ಲಾ ಮಾಹಿತಿಯನ್ನು ಭರ್ತಿ ಮಾಡಿ ( ಉದಾಹರಣೆಗೆ : ಅಭ್ಯರ್ಥಿಯ ಹೆಸರು, ವಿದ್ಯಾರ್ಹತೆ, ಇಮೇಲ್ ವಿಳಾಸ ಇತ್ಯಾದಿ) ನಂತರ ನಿಗದಿತ ಅರ್ಜಿ ಶುಲ್ಕ ಪಾವತಿಸಿ ಅರ್ಜಿಯನ್ನು ಸಲ್ಲಿಸಬೇಕು

ನಿಗದಿತ ಅರ್ಜಿ ಶುಲ್ಕದ ವಿವರ :
ಸಾಮಾನ್ಯ ಅಭ್ಯರ್ಥಿಗಳು – ರೂ. 600
2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳು – ರೂ. 300
ಮಾಜಿ ಸೈನಿಕ ಅಭ್ಯರ್ಥಿಗಳು – ರೂ. 50
ಎಸ್ಸಿ, ಎಸ್ಟಿ, ಪ್ರ 1, ಅಂಗವಿಕಲ ಅಭ್ಯರ್ಥಿಗಳಿಗೆ ಶುಲ್ಕ ಇರುವುದಿಲ್ಲ.

ಶುಲ್ಕ ಪಾವತಿಸುವ ವಿಧಾನ : ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ನೆಟ್ ಬ್ಯಾಂಕಿಂಗ್ ಮೂಲಕ ಶುಲ್ಕ ಪಾವತಿಸಬಹುದು.

ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿದ ದಿನಾಂಕದ ವಿವರ :
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ಸೆಪ್ಟೆಂಬರ್ 20, 2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಅಕ್ಟೋಬರ್ 19, 2022
ಶುಲ್ಕ ಪಾವತಿಸಲು ಕೊನೆಯ ದಿನಾಂಕ : ಅಕ್ಟೋಬರ್ 20, 2022

KPSC Recruitment 2022 : Important Links

NotificationClick Here
Apply Online Click Here ಸೆಪ್ಟೆಂಬರ್ 20 ರಿಂದ ಪ್ರಾರಂಭ

ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.

WhatsApp
Telegram
Facebook

Leave a Comment