KPSC Recruitment 2022 – Apply Online for 105 Statistical Inspector Posts

KPSC Recruitment 2022 : ಕರ್ನಾಟಕ ಲೋಕಸೇವಾ ಆಯೋಗದಿಂದ ಆರ್ಥಿಕ ಮತ್ತು ಸಾಂಖ್ಯಿಕ ನಿರ್ದೇಶನಾಲಯದ ಉಳಿಕೆ ಮೂಲ ವೃಂದದ ಸಾಂಖ್ಯಿಕ ನಿರೀಕ್ಷಕರು (ಗ್ರೂಪ್-ಸಿ) ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ವೇತನ, ಅರ್ಜಿ ಶುಲ್ಕ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

KPSC Recruitment 2022 : Details of Vacancies

ಹುದ್ದೆ : ಸಾಂಖ್ಯಿಕ ನಿರೀಕ್ಷಕರು (ಗ್ರೂಪ್-ಸಿ)

ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಕರ್ನಾಟಕದಲ್ಲಿ ಕೆಲಸ ನಿರ್ವಹಿಸಬೇಕು.

ಖಾಲಿಯಿರುವ ಹುದ್ದೆಗಳ ಸಂಖ್ಯೆ : ಒಟ್ಟು 105 ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.

ಶೈಕ್ಷಣಿಕ ಅರ್ಹತೆ : ಅಭ್ಯರ್ಥಿಗಳು ಕೆಳಗಿನ ಯಾವುದಾದರೂ ಒಂದು ವಿಷಯದೊಂದಿಗೆ ಪದವಿ ವಿದ್ಯಾರ್ಹತೆ ಹೊಂದಿರಬೇಕು.
1.Economics, 2.Statistics, 3.Mathematics, 4.Computer Science

ವೇತನ : ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 27,650 ರಿಂದ ರೂ. 52,650 ಶ್ರೇಣಿಯಲ್ಲಿ ವೇತನ ನೀಡಲಾಗುತ್ತದೆ.

ಉದ್ಯೋಗ ಮಾಹಿತಿ : ಜಲ ಸಂಪನ್ಮೂಲ ಇಲಾಖೆಯಲ್ಲಿ ಗ್ರೂಪ್ ’ಸಿ’ ಹುದ್ದೆಗಳ ನೇಮಕಾತಿ

ವಯೋಮಾನ : ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕಕ್ಕೆ ಅಭ್ಯರ್ಥಿಗಳು ಕನಿಷ್ಠ 18 ವರ್ಷ ಪೂರೈಸಿರಬೇಕು ಹಾಗೂ
ಸಾಮಾನ್ಯ ಅರ್ಹತೆ ಅಭ್ಯರ್ಥಿಗಳಿಗೆ ಗರಿಷ್ಠ 35 ವರ್ಷ
ಎಸ್ಸಿ, ಎಸ್ಟಿ, ಪ್ರವರ್ಗ 1 ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷ
ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ ಗರಿಷ್ಠ 38 ವರ್ಷ

ಉದ್ಯೋಗ ಮಾಹಿತಿ : ಕರ್ನಾಟಕ ಲೋಕಸೇವಾ ಆಯೋಗದಿಂದ ಡಾಟಾ ಎಂಟ್ರಿ ಆಪರೇಟರ್ ಹುದ್ದೆಗಳ ನೇಮಕಾತಿ

ಆಯ್ಕೆ ವಿಧಾನ : ಸ್ಪರ್ಧಾತ್ಮಕ ಪರೀಕ್ಷೆ ನಡೆಸಿ ಅಭ್ಯರ್ಥಿಗಳನ್ನು ಹುದ್ದೆಗಳಿಗೆ ಆಯ್ಕೆ ಮಾಡಲಾಗುವುದು.

ಆರ್ಥಿಕ ಮತ್ತು ಸಾಂಖ್ಯಿಕ ನಿರ್ದೇಶನಾಲಯದಲ್ಲಿ ಖಾಲಿಯಿರುವ ಹುದ್ದೆಗೆ ಅರ್ಜಿ ಸಲ್ಲಿಕೆಯ ವಿಧಾನ :
• ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್‌ಲೈನ್‌ ಮೂಲಕವೇ ಅರ್ಜಿಯನ್ನು ಸಲ್ಲಿಸಬೇಕು.
• ಅಭ್ಯರ್ಥಿಗಳು ಕರ್ನಾಟಕ ಲೋಕಸೇವಾ ಆಯೋಗದ ಅಧಿಕೃತ ವೆಬ್‌ಸೈಟ್ ವಿಳಾಸಕ್ಕೆ ಭೇಟಿ ನೀಡಿ, ಆನ್‌ಲೈನ್‌ ಅರ್ಜಿಯಲ್ಲಿ ಹುದ್ದೆಗೆ ಅಗತ್ಯವಿರುವ ಎಲ್ಲಾ ಮಾಹಿತಿಯನ್ನು ಭರ್ತಿ ಮಾಡಿ ( ಉದಾಹರಣೆಗೆ : ಅಭ್ಯರ್ಥಿಯ ಹೆಸರು, ವಿದ್ಯಾರ್ಹತೆ, ಇಮೇಲ್ ವಿಳಾಸ ಇತ್ಯಾದಿ) ನಂತರ ನಿಗದಿತ ಅರ್ಜಿ ಶುಲ್ಕ ಪಾವತಿಸಿ ಅರ್ಜಿಯನ್ನು ಸಲ್ಲಿಸಬೇಕು

ನಿಗದಿತ ಅರ್ಜಿ ಶುಲ್ಕದ ವಿವರ :
ಸಾಮಾನ್ಯ ಅಭ್ಯರ್ಥಿಗಳು – ರೂ. 600
2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳು – ರೂ. 300
ಮಾಜಿ ಸೈನಿಕ ಅಭ್ಯರ್ಥಿಗಳು – ರೂ. 50
ಎಸ್ಸಿ, ಎಸ್ಟಿ, ಪ್ರ 1, ಅಂಗವಿಕಲ ಅಭ್ಯರ್ಥಿಗಳಿಗೆ ಶುಲ್ಕ ಇರುವುದಿಲ್ಲ.

ಶುಲ್ಕ ಪಾವತಿಸುವ ವಿಧಾನ : ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ನೆಟ್ ಬ್ಯಾಂಕಿಂಗ್ ಮೂಲಕ ಶುಲ್ಕ ಪಾವತಿಸಬಹುದು.

ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿದ ದಿನಾಂಕದ ವಿವರ :
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ಅಕ್ಟೋಬರ್ 19, 2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ನವೆಂಬರ್ 17, 2022
ಶುಲ್ಕ ಪಾವತಿಸಲು ಕೊನೆಯ ದಿನಾಂಕ : ನವೆಂಬರ್ 18, 2022

KPSC Recruitment 2022 : Important Links

NotificationClick Here
Apply Online Click Here

ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.

WhatsApp
Telegram
Facebook

Leave a Comment