KPSC Recruitment 2022 – Apply Online for 13 Enumerator Cum Data Entry Operator Posts

KPSC Recruitment 2022 : ಕರ್ನಾಟಕ ಲೋಕಸೇವಾ ಆಯೋಗದಿಂದ ಆರ್ಥಿಕ ಮತ್ತು ಸಾಂಖ್ಯಿಕ ನಿರ್ದೇಶನಾಲಯದಲ್ಲಿ ಖಾಲಿ ಇರುವ ಹೈದರಾಬಾದ್ ಕರ್ನಾಟಕ ವೃಂದದ ಗ್ರೂಪ್-ಸಿ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ವೇತನ, ಅರ್ಜಿ ಶುಲ್ಕ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

KPSC Recruitment 2022 : Details of Vacancies

ಹುದ್ದೆ : ಗಣತಿದಾರರು ಕಂ ಡಾಟಾ ಎಂಟ್ರಿ ಆಪರೇಟರ್ (ಗ್ರೂಪ್-ಸಿ)

ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಕರ್ನಾಟಕದಲ್ಲಿ ಕೆಲಸ ನಿರ್ವಹಿಸಬೇಕು.

ಖಾಲಿಯಿರುವ ಹುದ್ದೆಗಳ ಸಂಖ್ಯೆ : ಒಟ್ಟು 13 ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.

ಶೈಕ್ಷಣಿಕ ಅರ್ಹತೆ : ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ ದ್ವಿತೀಯ ಪಿಯುಸಿ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು.

ವೇತನ : ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 21,400 ರಿಂದ ರೂ. 42,000 ಶ್ರೇಣಿಯಲ್ಲಿ ವೇತನ ನೀಡಲಾಗುತ್ತದೆ.

ಉದ್ಯೋಗ ಮಾಹಿತಿ : ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಆಯೋಗದ ನೇಮಕಾತಿ 2022

ವಯೋಮಾನ : ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕಕ್ಕೆ ಅಭ್ಯರ್ಥಿಗಳು ಕನಿಷ್ಠ 18 ವರ್ಷ ಪೂರೈಸಿರಬೇಕು ಹಾಗೂ
ಸಾಮಾನ್ಯ ವರ್ಗಕ್ಕೆ ಸೇರಿದ ಅಭ್ಯರ್ಥಿಗಳಿಗೆ ಗರಿಷ್ಠ 35 ವರ್ಷ
ಎಸ್ಸಿ, ಎಸ್ಟಿ, ಪ್ರವರ್ಗ 1 ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷ
ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ ಗರಿಷ್ಠ 38 ವರ್ಷ

ಆಯ್ಕೆ ವಿಧಾನ : ಸ್ಪರ್ಧಾತ್ಮಕ ಪರೀಕ್ಷೆ ನಡೆಸಿ ಅಭ್ಯರ್ಥಿಗಳನ್ನು ಹುದ್ದೆಗಳಿಗೆ ಆಯ್ಕೆ ಮಾಡಲಾಗುವುದು.

ಉದ್ಯೋಗ ಮಾಹಿತಿ : ಕಾರ್ಮಿಕ ಇಲಾಖೆಯಲ್ಲಿ ಕಾರ್ಮಿಕ ನಿರೀಕ್ಷಕರು ಹುದ್ದೆಗಳ ನೇಮಕಾತಿ

ಆರ್ಥಿಕ ಮತ್ತು ಸಾಂಖ್ಯಿಕ ನಿರ್ದೇಶನಾಲಯದಲ್ಲಿ ಖಾಲಿಯಿರುವ ಹುದ್ದೆಗೆ ಅರ್ಜಿ ಸಲ್ಲಿಕೆಯ ವಿಧಾನ :
• ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್‌ಲೈನ್‌ ಮೂಲಕವೇ ಅರ್ಜಿಯನ್ನು ಸಲ್ಲಿಸಬೇಕು.
• ಅಭ್ಯರ್ಥಿಗಳು ಕರ್ನಾಟಕ ಲೋಕಸೇವಾ ಆಯೋಗದ ಅಧಿಕೃತ ವೆಬ್‌ಸೈಟ್ ವಿಳಾಸಕ್ಕೆ ಭೇಟಿ ನೀಡಿ, ಆನ್‌ಲೈನ್‌ ಅರ್ಜಿಯಲ್ಲಿ ಹುದ್ದೆಗೆ ಅಗತ್ಯವಿರುವ ಎಲ್ಲಾ ಮಾಹಿತಿಯನ್ನು ಭರ್ತಿ ಮಾಡಿ ( ಉದಾಹರಣೆಗೆ : ಅಭ್ಯರ್ಥಿಯ ಹೆಸರು, ವಿದ್ಯಾರ್ಹತೆ, ಇಮೇಲ್ ವಿಳಾಸ ಇತ್ಯಾದಿ) ನಂತರ ನಿಗದಿತ ಅರ್ಜಿ ಶುಲ್ಕ ಪಾವತಿಸಿ ಅರ್ಜಿಯನ್ನು ಸಲ್ಲಿಸಬೇಕು

ನಿಗದಿತ ಅರ್ಜಿ ಶುಲ್ಕದ ವಿವರ :
ಸಾಮಾನ್ಯ ಅಭ್ಯರ್ಥಿಗಳು – ರೂ. 600
2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳು – ರೂ. 300
ಮಾಜಿ ಸೈನಿಕ ಅಭ್ಯರ್ಥಿಗಳು – ರೂ. 50
ಎಸ್ಸಿ, ಎಸ್ಟಿ, ಪ್ರ 1, ಅಂಗವಿಕಲ ಅಭ್ಯರ್ಥಿಗಳಿಗೆ ಶುಲ್ಕ ಇರುವುದಿಲ್ಲ.

ಶುಲ್ಕ ಪಾವತಿಸುವ ವಿಧಾನ : ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ನೆಟ್ ಬ್ಯಾಂಕಿಂಗ್ ಮೂಲಕ ಶುಲ್ಕ ಪಾವತಿಸಬಹುದು.

ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿದ ದಿನಾಂಕದ ವಿವರ :
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ಅಕ್ಟೋಬರ್ 07, 2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ನವೆಂಬರ್ 05, 2022
ಶುಲ್ಕ ಪಾವತಿಸಲು ಕೊನೆಯ ದಿನಾಂಕ : ನವೆಂಬರ್ 07, 2022

KPSC Recruitment 2022 : Important Links

NotificationClick Here
Apply Online Click Here

ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.

Leave a Comment