KPSC Recruitment 2022 – Apply Online for 410 Group C Posts

KPSC Recruitment 2022 : ಪೌರಾಡಳಿತ ನಿರ್ದೇಶನಾಲಯದ ನಗರ ಸ್ಥಳೀಯ ಸಂಸ್ಥೆಗಳಲ್ಲಿ (ನಗರಸಭೆ/ಪುರಸಭೆ/ಪಟ್ಟಣ ಪಂಚಾಯಿತಿ) ಅಗತ್ಯವಿರುವ ಗ್ರೂಪ್ ‘ಸಿ’ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ವೇತನ, ಅರ್ಜಿ ಶುಲ್ಕ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

KPSC Recruitment 2022 : Details of Vacancies

ಹುದ್ದೆ : ಕಿರಿಯ ಅಭಿಯಂತರರು (ಸಿವಿಲ್), ಕಿರಿಯ ಆರೋಗ್ಯ ನಿರೀಕ್ಷಕರು, ಎಲೆಕ್ಟ್ರೀಷಿಯನ್ ಗ್ರೇಡ್ 1, ಎಲೆಕ್ಟ್ರೀಷಿಯನ್ ಗ್ರೇಡ್ 2, ನೀರು ಸರಬರಾಜು ಆಪರೇಟರ್, ಸಹಾಯಕ ನೀರು ಸರಬರಾಜು ಆಪರೇಟರ್.

ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಕರ್ನಾಟಕದಲ್ಲಿ ಕೆಲಸ ನಿರ್ವಹಿಸಬೇಕು.

ಖಾಲಿಯಿರುವ ಹುದ್ದೆಗಳ ಸಂಖ್ಯೆ : ಒಟ್ಟು 410 ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.

ಹುದ್ದೆಹುದ್ದೆಗಳ ಸಂಖ್ಯೆವೇತನ
ಕಿರಿಯ ಅಭಿಯಂತರರು (ಸಿವಿಲ್)8933,400-62,600
ಕಿರಿಯ ಆರೋಗ್ಯ ನಿರೀಕ್ಷಕರು5723,500-47,650
ಎಲೆಕ್ಟ್ರೀಷಿಯನ್ ಗ್ರೇಡ್ 10223,500-47,650
ಎಲೆಕ್ಟ್ರೀಷಿಯನ್ ಗ್ರೇಡ್ 21021,400-42,000
ನೀರು ಸರಬರಾಜು ಆಪರೇಟರ್8923,500-47,650
ಸಹಾಯಕ ನೀರು ಸರಬರಾಜು ಆಪರೇಟರ್16321,400-42,000

ಶೈಕ್ಷಣಿಕ ಅರ್ಹತೆ :
• ಕಿರಿಯ ಅಭಿಯಂತರರು (ಸಿವಿಲ್) ಹುದ್ದೆಗೆ ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ Diploma in Civil Engineering/ Diploma in Civil Engineering (Draughtsmanship) ಅರ್ಹತೆ ಹೊಂದಿರಬೇಕು.
• ಕಿರಿಯ ಆರೋಗ್ಯ ನಿರೀಕ್ಷಕರು ಹುದ್ದೆಗೆ ಎಸ್.ಎಸ್.ಎಲ್.ಸಿ ವಿದ್ಯಾರ್ಹತೆ ಜೊತೆಗೆ ಮೂರು ವರ್ಷಗಳ ಡಿಪ್ಲೊಮಾ ಕೋರ್ಸ್‌ನಲ್ಲಿ ಉತ್ತೀರ್ಣರಾಗಿರಬೇಕು. OR ಪಿಯುಸಿ ವಿದ್ಯಾರ್ಹತೆ ಜೊತೆಗೆ ಎರಡು ವರ್ಷಗಳ ಡಿಪ್ಲೊಮಾ ಕೋರ್ಸ್‌ನಲ್ಲಿ ಉತ್ತೀರ್ಣರಾಗಿರಬೇಕು. (Diploma Course in Sanitary Health Inspector/Health Inspector Conducted by Para Medical Board of Govt. of Karnataka)
• ಎಲೆಕ್ಟ್ರೀಷಿಯನ್ ಗ್ರೇಡ್ 1 ಮತ್ತು ಗ್ರೇಡ್ 2 ಹುದ್ದೆಗೆ ಎಸ್.ಎಸ್.ಎಲ್.ಸಿ ವಿದ್ಯಾರ್ಹತೆ ಜೊತೆಗೆ ಐಟಿಐ ನಲ್ಲಿ ಎರಡು ವರ್ಷಗಳ ಎಲೆಕ್ಟ್ರಿಕಲ್ ಟ್ರೇಡ್ ಕೋರ್ಸ್ ಉತ್ತೀರ್ಣರಾಗಿರಬೇಕು ಮತ್ತು ಎಲೆಕ್ಟ್ರೀಷನ್ ಗ್ರೇಡ್ 1 ಹುದ್ದೆಗೆ ಒಂದು ವರ್ಷದ ಅಪ್ರೆಂಟಿಸ್ ತರಬೇತಿ ಪಡೆದಿರಬೇಕು.
• ನೀರು ಸರಬರಾಜು ಆಪರೇಟರ್ ಹುದ್ದೆಗೆ ಎಸ್.ಎಸ್.ಎಲ್.ಸಿ ವಿದ್ಯಾರ್ಹತೆ ಜೊತೆಗೆ ಐಟಿಐ ನಲ್ಲಿ ಎರಡು ವರ್ಷಗಳ ಎಲೆಕ್ಟ್ರಿಕಲ್ ಅಥವಾ ಫಿಟ್ಟರ್ ಟ್ರೇಡ್ ಕೋರ್ಸ್ ಸರ್ಟಿಫಿಕೇಟ್ ಪಡೆದಿರಬೇಕು ಹಾಗೂ ಒಂದು ವರ್ಷದ ಅಪ್ರೆಂಟಿಸ್ ತರಬೇತಿ ಪಡೆದಿರಬೇಕು.
• ಸಹಾಯಕ ನೀರು ಸರಬರಾಜು ಆಪರೇಟರ್ ಹುದ್ದೆಗೆ ಎಸ್.ಎಸ್.ಎಲ್.ಸಿ ವಿದ್ಯಾರ್ಹತೆ ಜೊತೆಗೆ ಐಟಿಐ ನಲ್ಲಿ ಎರಡು ವರ್ಷಗಳ ಎಲೆಕ್ಟ್ರಿಕಲ್ ಅಥವಾ ಫಿಟ್ಟರ್ ಟ್ರೇಡ್ ಕೋರ್ಸ್ ಉತ್ತೀರ್ಣರಾಗಿರಬೇಕು.

ವಯೋಮಾನ : ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕಕ್ಕೆ ಅಭ್ಯರ್ಥಿಗಳು ಕನಿಷ್ಠ 18 ವರ್ಷ ಪೂರೈಸಿರಬೇಕು ಹಾಗೂ ಗರಿಷ್ಠ 35 ವರ್ಷ ಮೀರಿರಬಾರದು.
ಎಸ್ಸಿ, ಎಸ್ಟಿ, ಪ್ರವರ್ಗ 1 ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷ
ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ ಗರಿಷ್ಠ 38 ವರ್ಷ

ಆಯ್ಕೆ ವಿಧಾನ : ಅಭ್ಯರ್ಥಿಗಳಿಗೆ ಕನ್ನಡ ಭಾಷಾ ಪರೀಕ್ಷೆ ನಡೆಸಿ ನಂತರ ಕನ್ನಡ ಭಾಷಾ ಪರೀಕ್ಷೆಯಲ್ಲಿ ಅರ್ಹರಾದ ಅಭ್ಯರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆ ನಡೆಸಿ ಹುದ್ದೆಗಳಿಗೆ ಆಯ್ಕೆ ಮಾಡಲಾಗುವುದು.

ಉದ್ಯೋಗ ಮಾಹಿತಿ : ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಲ್ಲಿ ನೇಮಕಾತಿ 2022

ಪೌರಾಡಳಿತ ನಿರ್ದೇಶನಾಲಯದ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಖಾಲಿಯಿರುವ ಹುದ್ದೆಗೆ ಅರ್ಜಿ ಸಲ್ಲಿಕೆಯ ವಿಧಾನ :
• ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್‌ಲೈನ್‌ ಮೂಲಕವೇ ಅರ್ಜಿಯನ್ನು ಸಲ್ಲಿಸಬೇಕು.
• ಅಭ್ಯರ್ಥಿಗಳು ಕೆ.ಪಿ.ಎಸ್.ಸಿಯ ಅಧಿಕೃತ ವೆಬ್‌ಸೈಟ್ ವಿಳಾಸಕ್ಕೆ ಭೇಟಿ ನೀಡಿ, ಆನ್‌ಲೈನ್‌ ಅರ್ಜಿಯಲ್ಲಿ ಹುದ್ದೆಗೆ ಅಗತ್ಯವಿರುವ ಎಲ್ಲಾ ಮಾಹಿತಿಯನ್ನು ಭರ್ತಿ ಮಾಡಿ ( ಉದಾಹರಣೆಗೆ : ಅಭ್ಯರ್ಥಿಯ ಹೆಸರು, ವಿದ್ಯಾರ್ಹತೆ, ಇಮೇಲ್ ವಿಳಾಸ ಇತ್ಯಾದಿ) ನಂತರ ನಿಗದಿತ ಅರ್ಜಿ ಶುಲ್ಕ ಪಾವತಿಸಿ ಅರ್ಜಿಯನ್ನು ಸಲ್ಲಿಸಬೇಕು

ನಿಗದಿತ ಅರ್ಜಿ ಶುಲ್ಕದ ವಿವರ :
ಸಾಮಾನ್ಯ ಅಭ್ಯರ್ಥಿಗಳು – ರೂ. 600
2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳು – ರೂ. 300
ಮಾಜಿ ಸೈನಿಕ ಅಭ್ಯರ್ಥಿಗಳು – ರೂ. 50
ಎಸ್ಸಿ, ಎಸ್ಟಿ, ಪ್ರ 1, ಅಂಗವಿಕಲ ಅಭ್ಯರ್ಥಿಗಳಿಗೆ ಶುಲ್ಕ ಇರುವುದಿಲ್ಲ.

ಶುಲ್ಕ ಪಾವತಿಸುವ ವಿಧಾನ : ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ನೆಟ್ ಬ್ಯಾಂಕಿಂಗ್ ಮೂಲಕ ಶುಲ್ಕ ಪಾವತಿಸಬಹುದು.

ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿದ ದಿನಾಂಕದ ವಿವರ :
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ಮಾರ್ಚ್ 31, 2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಏಪ್ರಿಲ್ 29, 2022
ಶುಲ್ಕ ಪಾವತಿಸಲು ಕೊನೆಯ ದಿನಾಂಕ : ಏಪ್ರಿಲ್ 30, 2021

KPSC Recruitment 2022 : Important Links

ಅಧಿಸೂಚನೆClick Here
ಅರ್ಜಿ ಸಲ್ಲಿಸಿClick Here (ಮಾರ್ಚ್ 31 ರಿಂದ ಪ್ರಾರಂಭ)

ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.

Leave a Comment