KPSC ಇಂದ ಸಾರಿಗೆ ಇಲಾಖೆಯಲ್ಲಿನ ಹುದ್ದೆಗಳ ನೇಮಕಾತಿ 2024 – KPSC Transport Department Recruitment 2024

KPSC Transport Department Recruitment 2024 : ಸಾರಿಗೆ ಇಲಾಖೆಯಲ್ಲಿ ಖಾಲಿ ಇರುವ ಮೋಟಾರು ವಾಹನ ನಿರೀಕ್ಷಕರು (Motor Vehicle Inspector) ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ವೇತನ, ಅರ್ಜಿ ಶುಲ್ಕ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

KPSC Transport Department Recruitment 2024 : Details of Vacancies

ಹುದ್ದೆ : ಮೋಟಾರು ವಾಹನ ನಿರೀಕ್ಷಕರು (ಗ್ರೂಪ್ ‘ಸಿ’)

ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಕರ್ನಾಟಕದಲ್ಲಿ ಕೆಲಸ ನಿರ್ವಹಿಸಬೇಕು.

ಖಾಲಿಯಿರುವ ಹುದ್ದೆಗಳ ಸಂಖ್ಯೆ : ಒಟ್ಟು 76 ಹುದ್ದೆಯ ಭರ್ತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.

ವೃಂದಹುದ್ದೆಗಳ ಸಂಖ್ಯೆ
ಉಳಿಕೆ ಮೂಲ ವೃಂದ 70
ಹೈ-ಕ ವೃಂದ 6

ಶೈಕ್ಷಣಿಕ ಅರ್ಹತೆ :
• ಎಸ್.ಎಸ್.ಎಲ್.ಸಿ ಅಥವಾ ತತ್ಸಮಾನ ಅರ್ಹತೆ ಹೊಂದಿರಬೇಕು.
• ಮೂರು ವರ್ಷಗಳ ಡಿಪ್ಲೊಮಾ ಇನ್ ಆಟೋಮೊಬೈಲ್ ಇಂಜಿನಿಯರಿಂಗ್ ಅಥವಾ ಡಿಪ್ಲೊಮಾ ಇನ್ ಮೆಕ್ಯಾನಿಕಲ್ ಇಂಜಿನಿಯರ್ ಅರ್ಹತೆ ಹೊಂದಿರಬೇಕು. ಅಥವಾ ಆಟೋಮೊಬೈಲ್ ಇಂಜಿನಿಯರಿಂಗ್ ಅಥವಾ ಮೆಕ್ಯಾನಿಕಲ್ ಇಂಜಿನಿಯರ್ ಪದವಿ ಹೊಂದಿರಬೇಕು.
• ಲಘು ಮೋಟಾರು ವಾಹನ ಮತ್ತು ಮೋಟಾರು ಸೈಕಲ್ (ಗಿಯರ್) ವಾಹನ ಚಾಲನಾ ಪರವಾನಿಗೆ ಹೊಂದಿರಬೇಕು.

ಉದ್ಯೋಗ ಮಾಹಿತಿ : ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರದಲ್ಲಿ ನೇಮಕಾತಿ 2024

ವೇತನ : ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 33,450 ರಿಂದ ರೂ. 62,600 ಶ್ರೇಣಿಯಲ್ಲಿ ವೇತನ ನೀಡಲಾಗುತ್ತದೆ.

ವಯೋಮಾನ : ಅಭ್ಯರ್ಥಿಗಳು ಕನಿಷ್ಠ 18 ವರ್ಷ ಪೂರೈಸಿರಬೇಕು.
• ಸಾಮಾನ್ಯ ಅರ್ಹತೆ ಅಭ್ಯರ್ಥಿಗಳಿಗೆ – 35 ವರ್ಷ
• ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ – ಗರಿಷ್ಠ 38 ವರ್ಷ
• ಪ.ಜಾತಿ, ಪ.ಪಂ, ಪ್ರವರ್ಗ 1 ಅಭ್ಯರ್ಥಿಗಳಿಗೆ – ಗರಿಷ್ಠ 40 ವರ್ಷ

ಆಯ್ಕೆ ವಿಧಾನ : ಸ್ಪರ್ಧಾತ್ಮಕ ಪರೀಕ್ಷೆ ನಡೆಸಿ ಅಭ್ಯರ್ಥಿಗಳನ್ನು ಹುದ್ದೆಗಳಿಗೆ ಆಯ್ಕೆ ಮಾಡಲಾಗುವುದು.

ಫಿಸಿಕಲ್ ಸ್ಟ್ಯಾಂಡರ್ಡ್ಪುರುಷಮಹಿಳೆ
ಎತ್ತರ168 ಸೆ.ಮೀ157 ಸೆ.ಮೀ.
ಎದೆ ಸುತ್ತಳತೆ/ತೂಕ86 ಸೆ.ಮೀ ಪೂರ್ತಿ ವಿಸ್ತರಿಸಿದಾಗ (ಕನಿಷ್ಠ ವಿಸ್ತರಣೆ 5 ಸೆ.ಮೀ.)49 ಕೆ.ಜಿ.

ಉದ್ಯೋಗ ಮಾಹಿತಿ : ಬಿಬಿಎಂಪಿ ಬೃಹತ್ ನೇಮಕಾತಿ 2024

ಅರ್ಜಿ ಸಲ್ಲಿಕೆಯ ವಿಧಾನ : ಅಭ್ಯರ್ಥಿಯು ಈ ಹುದ್ದೆಗೆ ಆನ್‌ಲೈನ್‌ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು.
ಹಂತ 1 : ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 2 : ಇಲಾಖೆಯ ವೆಬ್‌ಸೈಟ್ ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ ಅಪ್ಲೈ ಆನ್‌ಲೈನ್‌ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಪ್ಲಿಕೇಷನ್ ತೆರೆದುಕೊಳ್ಳಿ.
ಹಂತ 3 : ಅಪ್ಲಿಕೇಷನ್ ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಮುಂದಿನ ಹಂತಕ್ಕೆ ತೆರಳುವ ಮುನ್ನ ಪುನಃ ಒಮ್ಮೆ ಪರಿಶೀಲಿಸಿ.
ಹಂತ 4 : ಅಪ್ಲಿಕೇಷನ್ ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಅಪ್ಲೋಡ್ ಮಾಡಲು ಸೂಚಿಸಿದ್ದರೆ, ಅವುಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಿ (ಅಗತ್ಯವಿದ್ದರೆ ಮಾತ್ರ).
ಹಂತ 5 : ಕೊನೆಯದಾಗಿ, ಅಭ್ಯರ್ಥಿಗೆ ಅರ್ಜಿ ಶುಲ್ಕ ಪಾವತಿಸಲು ಸೂಚಿಸಿದ್ದರೆ, ಶುಲ್ಕ ಪಾವತಿಸಿ ಅರ್ಜಿ ಸಲ್ಲಿಕೆ ಪೂರ್ಣಗೊಳಿಸಿ.

ನಿಗದಿತ ಅರ್ಜಿ ಶುಲ್ಕದ ವಿವರ :
• ಸಾಮಾನ್ಯ ಅಭ್ಯರ್ಥಿಗಳು – ರೂ. 600
• ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳು – ರೂ. 300
• ಮಾಜಿ ಸೈನಿಕ ಅಭ್ಯರ್ಥಿಗಳು – ರೂ. 50
• ಪ.ಜಾತಿ, ಪ.ಪಂ, ಪ್ರವರ್ಗ 1, ಅಂಗವಿಕಲ ಅಭ್ಯರ್ಥಿಗಳಿಗೆ ಶುಲ್ಕ ಇರುವುದಿಲ್ಲ.

ಶುಲ್ಕ ಪಾವತಿಸುವ ವಿಧಾನ : ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ನೆಟ್ ಬ್ಯಾಂಕಿಂಗ್, ಯುಪಿಐ ಮೂಲಕ ಶುಲ್ಕ ಪಾವತಿಸಬಹುದು.

ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿದ ದಿನಾಂಕದ ವಿವರ :
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ಏಪ್ರಿಲ್ 22, 2024 ಮೇ 02, 2024 ಮೇ 30, 2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಮೇ 21, 2024 ಜೂನ್ 01, 2024 ಜೂನ್ 30, 2024

Transport Department Motor Vehicle Inspector Recruitment 2024 : Important Links

NEW DATE EXTENDED NOTIFICATIONCLICK HERE
DATE EXTENDED NOTIFICATION CLICK HERE
NOTIFICATION (RPC)CLICK HERE
NOTIFICATION (HK)CLICK HERE
APPLY ONLINE CLICK HERE
Telegram Join Link Click Here
WhatsApp Group Link Click Here

ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.

Leave a Comment