KRIDL Recruitment 2022 – Apply Online for 76 FDA, SDA And Various Posts

KRIDL Recruitment 2022 : ಕರ್ನಾಟಕ ಗ್ರಾಮೀಣ ಮೂಲ ಸೌಕರ್ಯ ಅಭಿವೃದ್ಧಿ ನಿಯಮಿತ (ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ) ಇಲ್ಲಿ ಅಗತ್ಯವಿರುವ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ವೇತನ, ಅರ್ಜಿ ಶುಲ್ಕ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

KRIDL Recruitment 2022 : Details of Vacancies

ಹುದ್ದೆ : ಕಿರಿಯ ಅಭಿಯಂತರರು ಗ್ರೇಡ್ 1 (ಸಿವಿಲ್), ಕಿರಿಯ ಅಭಿಯಂತರರು (ಸಿವಿಲ್), ಪ್ರಥಮ ದರ್ಜೆ ಸಹಾಯಕರು, ದ್ವಿತೀಯ ದರ್ಜೆ ಸಹಾಯಕರು.

ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಕರ್ನಾಟಕದಲ್ಲಿ ಕೆಲಸ ನಿರ್ವಹಿಸಬೇಕು.

ಖಾಲಿಯಿರುವ ಹುದ್ದೆಗಳ ಸಂಖ್ಯೆ : ಒಟ್ಟು 76 ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.

ಹುದ್ದೆಹುದ್ದೆಗಳ ಸಂಖ್ಯೆವೇತನ
ಸಹಾಯಕ ಅಭಿಯಂತರರು (ಸಿವಿಲ್)4543100-83900
ಕಿರಿಯ ಅಭಿಯಂತರರು (ಸಿವಿಲ್)1833450-62600
ಪ್ರಥಮ ದರ್ಜೆ ಸಹಾಯಕರು0527650-52650
ದ್ವಿತೀಯ ದರ್ಜೆ ಸಹಾಯಕರು1021400-42000

ಶೈಕ್ಷಣಿಕ ಅರ್ಹತೆ :
• ಸಹಾಯಕ ಅಭಿಯಂತರರು ಗ್ರೇಡ್ 1 (ಸಿವಿಲ್) ಹುದ್ದೆಗೆ Degree in Civil Engineering or Construction Technology and Management ಅರ್ಹತೆ ಹೊಂದಿರಬೇಕು.
• ಕಿರಿಯ ಅಭಿಯಂತರರು (ಸಿವಿಲ್) ಹುದ್ದೆಗೆ ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ Diploma in Civil Engineering ಅರ್ಹತೆ ಹೊಂದಿರಬೇಕು.
• ಪ್ರಥಮ ದರ್ಜೆ ಸಹಾಯಕರು ಹುದ್ದೆಗೆ ಯಾವುದೇ ಪದವಿ ಜೊತೆಗೆ ಕಂಪ್ಯೂಟರ್ ಜ್ಞಾನ ಹೊಂದಿರಬೇಕು.
• ದ್ವಿತೀಯ ದರ್ಜೆ ಸಹಾಯಕರು ಹುದ್ದೆಗೆ ದ್ವಿತೀಯ ಪಿಯುಸಿ ಜೊತೆಗೆ ಕಂಪ್ಯೂಟರ್ ಜ್ಞಾನ ಹೊಂದಿರಬೇಕು.

ವಯೋಮಾನ : ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕಕ್ಕೆ ಅಭ್ಯರ್ಥಿಗಳು ಕನಿಷ್ಠ 18 ವರ್ಷ ಪೂರೈಸಿರಬೇಕು ಹಾಗೂ,
ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ಗರಿಷ್ಠ 35 ವರ್ಷ
ಎಸ್ಸಿ, ಎಸ್ಟಿ, ಪ್ರವರ್ಗ 1 ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷ
ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ ಗರಿಷ್ಠ 38 ವರ್ಷ

ಆಯ್ಕೆ ವಿಧಾನ : ಅಭ್ಯರ್ಥಿಗಳಿಗೆ ಕನ್ನಡ ಭಾಷಾ ಪರೀಕ್ಷೆ ಹಾಗೂ ಸ್ಪರ್ಧಾತ್ಮಕ ಪರೀಕ್ಷೆ ನಡೆಸಿ ಹುದ್ದೆಗಳಿಗೆ ಆಯ್ಕೆ ಮಾಡಲಾಗುವುದು.

ಸ್ಪರ್ಧಾತ್ಮಕ ಪರೀಕ್ಷೆ ವಿವರಗಳು : ಸ್ಪರ್ಧಾತ್ಮಕ ಪರೀಕ್ಷೆಯನ್ನು ಬೆಂಗಳೂರು, ಮೈಸೂರು, ದಾವಣಗೆರೆ, ಬೆಳಗಾವಿ ಮತ್ತು ಕಲಬುರ್ಗಿ ಸ್ಥಳಗಳಲ್ಲಿ ನಡೆಸಲಾಗುವುದು.

KRIDL Recruitment 2022 – Apply Online for 76 FDA, SDA And Various Posts

ಉದ್ಯೋಗ ಮಾಹಿತಿ : ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಲ್ಲಿ ನೇಮಕಾತಿ 2022

ಕರ್ನಾಟಕ ಗ್ರಾಮೀಣ ಮೂಲ ಸೌಕರ್ಯ ಅಭಿವೃದ್ಧಿ ನಿಯಮಿತದಲ್ಲಿ ಖಾಲಿಯಿರುವ ಹುದ್ದೆಗೆ ಅರ್ಜಿ ಸಲ್ಲಿಕೆಯ ವಿಧಾನ :
• ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್‌ಲೈನ್‌ ಮೂಲಕವೇ ಅರ್ಜಿಯನ್ನು ಸಲ್ಲಿಸಬೇಕು.
• ಅಭ್ಯರ್ಥಿಗಳು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಅಧಿಕೃತ ವೆಬ್‌ಸೈಟ್ ವಿಳಾಸಕ್ಕೆ ಭೇಟಿ ನೀಡಿ, ಆನ್‌ಲೈನ್‌ ಅರ್ಜಿಯಲ್ಲಿ ಹುದ್ದೆಗೆ ಅಗತ್ಯವಿರುವ ಎಲ್ಲಾ ಮಾಹಿತಿಯನ್ನು ಭರ್ತಿ ಮಾಡಿ ( ಉದಾಹರಣೆಗೆ : ಅಭ್ಯರ್ಥಿಯ ಹೆಸರು, ವಿದ್ಯಾರ್ಹತೆ, ಇಮೇಲ್ ವಿಳಾಸ ಇತ್ಯಾದಿ) ನಂತರ ನಿಗದಿತ ಅರ್ಜಿ ಶುಲ್ಕ ಪಾವತಿಸಿ ಅರ್ಜಿಯನ್ನು ಸಲ್ಲಿಸಬೇಕು

ನಿಗದಿತ ಅರ್ಜಿ ಶುಲ್ಕದ ವಿವರ :
ಸಾಮಾನ್ಯ ವರ್ಗ, ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳು – ರೂ. 750
ಎಸ್ಸಿ, ಎಸ್ಟಿ, ಪ್ರ 1 ಅಭ್ಯರ್ಥಿಗಳು – ರೂ. 375

ಶುಲ್ಕ ಪಾವತಿಸುವ ವಿಧಾನ : ಅಭ್ಯರ್ಥಿಗಳು ಕಂಪ್ಯೂಟರೈಸ್ಡ್ ಅಂಚೆ ಕಚೇರಿಯಲ್ಲಿ ಶುಲ್ಕ ಪಾವತಿಸಬೇಕು.

ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿದ ದಿನಾಂಕದ ವಿವರ :
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ಮಾರ್ಚ್ 28, 2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಏಪ್ರಿಲ್ 20, 2022
ಶುಲ್ಕ ಪಾವತಿಸಲು ಕೊನೆಯ ದಿನಾಂಕ : ಏಪ್ರಿಲ್ 22, 2022

KRIDL Recruitment 2022 : Important Links

ಪ್ರಕಟಣೆClick Here
ಅಧಿಸೂಚನೆClick Here
ಅರ್ಜಿ ಸಲ್ಲಿಸಿClick Here

ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.

WhatsApp
Telegram
Facebook

Leave a Comment