KSAT Recruitment 2022 – Apply for 02 Driver Posts

KSAT Recruitment 2022 : ಕರ್ನಾಟಕ ರಾಜ್ಯ ಆಡಳಿತ ನ್ಯಾಯಮಂಡಳಿ ಕಛೇರಿಯಲ್ಲಿ ಖಾಲಿ ಇರುವ ಉಳಿದ ಮೂಲ ವೃಂದದ ಎರಡು ವಾಹನ ಚಾಲಕ ಹುದ್ದೆಯ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಶೈಕ್ಷಣಿಕ ಅರ್ಹತೆ, ವಯೋಮಾನ, ಅರ್ಜಿ ಸಲ್ಲಿಕೆ ದಿನಾಂಕ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

KSAT Recruitment 2022 : Details of Vacancies

ಹುದ್ದೆ : ವಾಹನ ಚಾಲಕರು

ಕರ್ತವ್ಯ ಸ್ಥಳ : ಆಯ್ಕೆಯಾದ ಅಭ್ಯರ್ಥಿಗಳು ಕರ್ನಾಟಕ ರಾಜ್ಯ ಆಡಳಿತ ನ್ಯಾಯಮಂಡಳಿಯ ಮೂರು ಪೀಠಗಳಾದ ಬೆಂಗಳೂರಿನ ಪ್ರಧಾನ ಪೀಠ, ಬೆಳಗಾವಿ ಪೀಠ, ಬೆಳಗಾವಿ ಮತ್ತು ಕಲಬುರಗಿ ಪೀಠ, ಕಲಬುರಗಿ ಇಲ್ಲಿ ಕಾರ್ಯನಿರ್ವಹಿಸಲು ಸಿದ್ಧರಿರಬೇಕು.

ಖಾಲಿಯಿರುವ ಹುದ್ದೆಗಳ ಸಂಖ್ಯೆ : ಒಟ್ಟು 02 ಹುದ್ದೆಯ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.

ಮೀಸಲಾತಿ ವಿವರಹುದ್ದೆಯ ಸಂಖ್ಯೆ
ಸಾಮಾನ್ಯ ಅರ್ಹತೆ (ಮಹಿಳೆ)1
ಪರಿಶಿಷ್ಟ ಜಾತಿ (ಮಹಿಳೆ)1

ಮೇಲ್ಕಂಡ ಮೀಸಲಾತಿಯಡಿ ಯಾವುದೇ ಮಹಿಳಾ ಅಭ್ಯರ್ಥಿಗಳು ನೇಮಕಾತಿಗೆ ಅರ್ಹರಿಲ್ಲದ ಪಕ್ಷದಲ್ಲಿ ಆಯಾ ಮೀಸಲಾತಿಯ ಅರ್ಹ ಪುರುಷ ಅಭ್ಯರ್ಥಿಗಳನ್ನು ಆಯ್ಕೆ ಪ್ರಕ್ರಿಯೆಗೆ ಪರಿಗಣಿಸಲಾಗುವುದು.

ಶೈಕ್ಷಣಿಕ ಅರ್ಹತೆ : 10ನೇ ತರಗತಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ತೇರ್ಗಡೆಯಾಗಿರಬೇಕು. ಸಂಬಂಧಪಟ್ಟ ಪ್ರಾಧಿಕಾರದಿಂದ ಪಡೆದಿರುವ ಚಾಲ್ತಿಯಲ್ಲಿರುವ ಲಘು/ಭಾರಿ ವಾಹನ ಚಾಲನ ಪರವಾನಗಿಯನ್ನು ಹೊಂದಿರಬೇಕು.

ವಯೋಮಾನ : ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕಕ್ಕೆ ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷ ನಿಗದಿಪಡಿಸಲಾಗಿದೆ ಹಾಗೂ ಸಾಮಾನ್ಯ ವರ್ಗಕ್ಕೆ ಸೇರಿದ ಅಭ್ಯರ್ಥಿಗಳಿಗೆ ಗರಿಷ್ಠ 35 ವರ್ಷ, ಹಿಂದುಳಿದ ವರ್ಗಕ್ಕೆ ಸೇರಿದ ಅಭ್ಯರ್ಥಿಗಳಿಗೆ ಗರಿಷ್ಠ 38 ವರ್ಷ, ಪ.ಜಾತಿ/ ಪ.ಪಂ/ ಪ್ರವರ್ಗ 1ರ ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷ ವಯೋಮಾನ ನಿಗದಿಪಡಿಸಲಾಗಿದೆ.

ವೇತನ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 21,400 ದಿಂದ ರೂ. 42,000 ವರೆಗೂ ವೇತನ ನೀಡಲಾಗುತ್ತದೆ.

ಆಯ್ಕೆ ವಿಧಾನ : ಸಂದರ್ಶನ ನಡೆಸಿ ಅಭ್ಯರ್ಥಿಗಳನ್ನು ಹುದ್ದೆಗಳಿಗೆ ಆಯ್ಕೆ ಮಾಡಲಾಗುವುದು. ಸಂದರ್ಶನವು ಗರಿಷ್ಠ 30 ಅಂಕಗಳನ್ನು ಒಳಗೊಂಡಿರುತ್ತದೆ. ಸದರಿ ಆಯ್ಕೆಯು ಪೊಲೀಸ್ ವಾಹನ ಚಾಲನ ಮತ್ತು ನಿರ್ವಹಣಾ ಶಾಖೆಯು ನಡೆಸುವ ವಾಹನ ಚಾಲನ ಪರೀಕ್ಷೆಗೆ ಒಳಪಟ್ಟಿರುತ್ತದೆ.

ಉದ್ಯೋಗ ಮಾಹಿತಿ : ಆದೇಶ ಜಾರಿಕಾರ ಮತ್ತು ಜವಾನ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ಕರ್ನಾಟಕ ರಾಜ್ಯ ಆಡಳಿತ ನ್ಯಾಯಮಂಡಳಿ ಕಚೇರಿಯಲ್ಲಿ ಖಾಲಿಯಿರುವ ಹುದ್ದೆಗೆ ಅರ್ಜಿ ಸಲ್ಲಿಕೆಯ ವಿಧಾನ :
• ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಖುದ್ದಾಗಿ ಅಥವಾ ಅಂಚೆ ಮೂಲಕ ಅರ್ಜಿಯನ್ನು ಸಲ್ಲಿಸಬೇಕು.
• ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಇಲಾಖೆಯ ಅಧಿಕೃತ ವೆಬ್‌ಸೈಟ್ ವಿಳಾಸಕ್ಕೆ ಭೇಟಿ ನೀಡಿ, ಅರ್ಜಿ ನಮೂನೆಯನ್ನು ಡೌನ್ಲೋಡ್ ಮಾಡಿ, ನಂತರ ಅರ್ಜಿ ನಮೂನೆಯಲ್ಲಿ ಅಗತ್ಯವಿರುವ ಎಲ್ಲಾ ಮಾಹಿತಿಯನ್ನು ಭರ್ತಿ ಮಾಡಿ ( ಉದಾಹರಣೆಗೆ : ಅಭ್ಯರ್ಥಿಯ ಹೆಸರು, ವಿದ್ಯಾರ್ಹತೆ, ಇಮೇಲ್ ವಿಳಾಸ ಇತ್ಯಾದಿ) ಕೊನೆಯಲ್ಲಿ ಭರ್ತಿ ಮಾಡಿದ ಅರ್ಜಿಗೆ ಅವಶ್ಯ ದಾಖಲೆಗಳನ್ನು ಲಗತ್ತಿಸಿ ಕಚೇರಿಗೆ ಖುದ್ದಾಗಿ ಹಾಜರಾಗಿ ಅಥವಾ ಅಂಚೆ ಮೂಲಕ ಸಲ್ಲಿಸಬೇಕು.

ಅರ್ಜಿ ಸಲ್ಲಿಸುವ ವಿಳಾಸ : ವಿಲೇಖನಾಧಿಕಾರಿ, ಕರ್ನಾಟಕ ರಾಜ್ಯ ಆಡಳಿತ ನ್ಯಾಯಮಂಡಳಿ,
ಕಂದಾಯ ಭವನ, 7ನೇ ಮಹಡಿ, ಕೆ.ಜಿ. ರಸ್ತೆ, ಬೆಂಗಳೂರು – 560009

ನಿಗದಿತ ಅರ್ಜಿ ಶುಲ್ಕದ ವಿವರ : ಪ.ಜಾತಿ, ಪ.ಪಂ., ಪ್ರ 1ರ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ ವಿನಾಯಿತಿಸಿದೆ. ಇತರೆ ಅಭ್ಯರ್ಥಿಗಳು ರೂ. 150 ಗಳನ್ನು ಐಪಿಒ/ಡಿಡಿ ಮೂಲಕ “ವಿಲೇಖನಾಧಿಕಾರಿ, ಕರ್ನಾಟಕ ರಾಜ್ಯ ಆಡಳಿತ ನ್ಯಾಯಮಂಡಳಿ, ಕಂದಾಯ ಭವನ, 7ನೇ ಮಹಡಿ, ಕೆ.ಜಿ.ರಸ್ತೆ, ಬೆಂಗಳೂರು – 560009” ಇವರ ಹೆಸರಿಗೆ ಸಂದಾಯವಾಗುವಂತೆ ಪಡೆದು ಅರ್ಜಿಯೊಂದಿಗೆ ಸಲ್ಲಿಸತಕ್ಕದ್ದು.

ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿರುವ ದಿನಾಂಕದ ವಿವರ :
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ಜೂನ್ 07, 2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಜೂನ್ 22, 2022

KSAT Recruitment 2022 : Important Links

NotificationClick Here
Application FormClick Here

ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.

Leave a Comment