ಕರ್ನಾಟಕ ರಾಜ್ಯ ಆಡಳಿತ ನ್ಯಾಯಮಂಡಳಿ ಕಚೇರಿಯಲ್ಲಿ ನೇಮಕಾತಿ – KSAT Typist Recruitment 2023

KSAT Typist Recruitment 2023 : ಕರ್ನಾಟಕ ರಾಜ್ಯ ಆಡಳಿತ ನ್ಯಾಯಮಂಡಳಿ ಕಛೇರಿಯಲ್ಲಿ ಉಳಿದ ಮೂಲ ವೃಂದದಲ್ಲಿ ಖಾಲಿ ಇರುವ ಬೆರಳಚ್ಚುಗಾರ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಶೈಕ್ಷಣಿಕ ಅರ್ಹತೆ, ವಯೋಮಾನ, ಅರ್ಜಿ ಸಲ್ಲಿಕೆ ದಿನಾಂಕ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

KSAT Typist Recruitment 2023 : Details of Vacancies

ಹುದ್ದೆ : ಬೆರಳಚ್ಚುಗಾರರು

ಕರ್ತವ್ಯ ಸ್ಥಳ : ಆಯ್ಕೆಯಾದ ಅಭ್ಯರ್ಥಿಗಳು ಕರ್ನಾಟಕ ರಾಜ್ಯ ಆಡಳಿತ ನ್ಯಾಯಮಂಡಳಿಯ ಬೆಂಗಳೂರಿನ ಪ್ರಧಾನ ಪೀಠ, ಬೆಳಗಾವಿ ಅಥವಾ ಕಲಬುರಗಿ ಪೀಠಗಳಲ್ಲಿ ಕಾರ್ಯನಿರ್ವಹಿಸಲು ಸಿದ್ಧರಿರಬೇಕು.

ಖಾಲಿಯಿರುವ ಹುದ್ದೆಗಳ ಸಂಖ್ಯೆ : ಒಟ್ಟು 06 ಹುದ್ದೆಯ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.

ಕರ್ನಾಟಕ ರಾಜ್ಯ ಆಡಳಿತ ನ್ಯಾಯಮಂಡಳಿ ಕಚೇರಿಯಲ್ಲಿ ನೇಮಕಾತಿ – KSAT Typist Recruitment 2023

ಶೈಕ್ಷಣಿಕ ಅರ್ಹತೆ :
• ಎಸ್.ಎಸ್.ಎಲ್.ಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ತೇರ್ಗಡೆಯಾಗಿರಬೇಕು.
• ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ನಡೆಸುವ ಕನ್ನಡ ಮತ್ತು ಆಂಗ್ಲ ಭಾಷೆಯ ಬೆರಳಚ್ಚು ಪರೀಕ್ಷೆ ಪ್ರೌಢದರ್ಜೆ (ಸೀನಿಯರ್ ಗ್ರೇಡ್) ಅಥವಾ ತತ್ಸಮಾನ ಪರೀಕ್ಷೆಗಳಲ್ಲಿ ಉತ್ತೀರ್ಣರಾಗಿರಬೇಕು.

ಉದ್ಯೋಗ ಮಾಹಿತಿ : ಗ್ರಾಮ ಪಂಚಾಯಿತಿಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ವಯೋಮಾನ : ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕಕ್ಕೆ ಅಭ್ಯರ್ಥಿಯು ಕನಿಷ್ಠ 18 ವರ್ಷ ವಯಸ್ಸನ್ನು ಪೂರೈಸಿರಬೇಕು.
• ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ – ಗರಿಷ್ಠ 35 ವರ್ಷ
• 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ – ಗರಿಷ್ಠ 38 ವರ್ಷ
• ಪ.ಜಾತಿ/ ಪ.ಪಂ/ ಪ್ರವರ್ಗ 1ರ ಅಭ್ಯರ್ಥಿಗಳಿಗೆ – ಗರಿಷ್ಠ 40 ವರ್ಷ

ವೇತನ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 21,400 ದಿಂದ ರೂ. 42,000 ಶ್ರೇಣಿಯಲ್ಲಿ ವೇತನ ನೀಡಲಾಗುತ್ತದೆ.

ಆಯ್ಕೆ ವಿಧಾನ : ಅಭ್ಯರ್ಥಿಯು ನಿಗದಿಪಡಿಸಿದ ಪರೀಕ್ಷೆಗಳಲ್ಲಿ ಪಡೆದ ಶೇಕಡ ಒಟ್ಟು ಅಂಕಗಳ ಮತ್ತು ಸಂದರ್ಶನದಲ್ಲಿ ಪಡೆದ ಒಟ್ಟು ಅಂಕಗಳ ಸರಾಸರಿ ಆಧಾರದ ಮೇಲೆ ಮತ್ತು ಚಾಲ್ತಿಯಲ್ಲಿರುವ ಮೀಸಲಾತಿ ನಿಯಮಗಳನ್ವಯ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು. ಸಂದರ್ಶನವು ಗರಿಷ್ಠ 50 ಅಂಕಗಳನ್ನು ಒಳಗೊಂಡಿರುತ್ತದೆ.

ಅರ್ಜಿ ಸಲ್ಲಿಕೆಯ ವಿಧಾನ : ಅಭ್ಯರ್ಥಿಯು ಈ ಹುದ್ದೆಗೆ ಆಫ್‌ಲೈನ್‌ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು.
ಹಂತ 1 : ಆಫ್‌ಲೈನ್‌ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 2 : ಇಲಾಖೆಯ ವೆಬ್‌ಸೈಟ್ ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ ಅಪ್ಲಿಕೇಷನ್ ಫಾರ್ಮ್ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಪ್ಲಿಕೇಷನ್ ಡೌನ್ಲೋಡ್ ಮಾಡಿಕೊಳ್ಳಿ.
ಹಂತ 3 : ಅಪ್ಲಿಕೇಷನ್ ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಪುನಃ ಒಮ್ಮೆ ಪರಿಶೀಲಿಸಿ.
ಹಂತ 4 : ಅಪ್ಲಿಕೇಷನ್ ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಲಗತ್ತಿಸಲು ಸೂಚಿಸಿದ್ದರೆ, ಅವುಗಳನ್ನು ಲಗತ್ತಿಸಿ (ಅಗತ್ಯವಿದ್ದರೆ ಮಾತ್ರ).
ಹಂತ 5 : ಕೊನೆಯದಾಗಿ, ಅಭ್ಯರ್ಥಿಗೆ ಅರ್ಜಿ ಶುಲ್ಕ ಪಾವತಿಸಲು ಸೂಚಿಸಿದ್ದರೆ ಶುಲ್ಕ ಪಾವತಿಸಿ, ಭರ್ತಿ ಮಾಡಿದ ಅರ್ಜಿಯನ್ನು ಈ ಕೆಳಗಡೆ ನೀಡಲಾದ ಕಚೇರಿಯ ವಿಳಾಸಕ್ಕೆ ಅಂಚೆ ಮೂಲಕ ಅಥವಾ ಖುದ್ದಾಗಿ ಹಾಜರಾಗಿ ಸಲ್ಲಿಸಬೇಕು.

ಅರ್ಜಿ ಸಲ್ಲಿಸುವ ವಿಳಾಸ : ವಿಲೇಖನಾಧಿಕಾರಿ, ಬೆರಳಚ್ಚುಗಾರ ಹುದ್ದೆಗಳ ನೇಮಕಾತಿ ಪ್ರಾಧಿಕಾರ, ಕರ್ನಾಟಕ ರಾಜ್ಯ ಆಡಳಿತ ನ್ಯಾಯಮಂಡಳಿ, ಕಂದಾಯ ಭವನ, 7ನೇ ಮಹಡಿ, ಕೆ.ಜಿ. ರಸ್ತೆ, ಬೆಂಗಳೂರು – 560009

ನಿಗದಿತ ಅರ್ಜಿ ಶುಲ್ಕದ ವಿವರ : ಪ.ಜಾತಿ, ಪ.ಪಂ., ಪ್ರ 1ರ ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ ವಿನಾಯಿತಿಸಿದೆ. ಇತರೆ ಪ್ರವರ್ಗದ ಅಭ್ಯರ್ಥಿಗಳು ರೂ. 150 ಗಳನ್ನು ಐಪಿಒ/ಡಿಡಿ ಮೂಲಕ “Registrar, KSAT, 7th Floor, Kandaya Bhavana, K.G.Road, Bengaluru” ಇವರ ಹೆಸರಿಗೆ ಬೆಂಗಳೂರಿನಲ್ಲಿ ಸಂದಾಯವಾಗುವಂತೆ ಪಡೆದು ಅರ್ಜಿಯೊಂದಿಗೆ ಲಗತ್ತಿಸತಕ್ಕದ್ದು.

ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿರುವ ದಿನಾಂಕದ ವಿವರ :
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ಸೆಪ್ಟೆಂಬರ್ 26, 2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಅಕ್ಟೋಬರ್ 31, 2023

KSAT Recruitment 2023 : Important Links

NOTIFICATIONCLICK HERE
APPLICATION FORM CLICK HERE
Telegram Join Link Click Here
WhatsApp Channel Link Click Here

ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.

Leave a Comment