KSCCF Recruitment 2021 : 45 ಲೆಕ್ಕಿಗರು, ಜವಾನರು ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

KSCCF Recruitment 2021 : ಕರ್ನಾಟಕ ರಾಜ್ಯ ಸಹಕಾರ ಗ್ರಾಹಕರ ಮಹಾಮಂಡಳ ನಿಯಮಿತದಲ್ಲಿ ಖಾಲಿಯಿರುವ ಲೆಕ್ಕಿಗರು, ಗುಮಾಸ್ತ, ಜವಾನರು ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ವೇತನ, ಅರ್ಜಿ ಸಲ್ಲಿಕೆ ದಿನಾಂಕ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

KSCCF Recruitment 2021 : Details of Vacancies

ಹುದ್ದೆ : ಲೆಕ್ಕಿಗರು, ಪ್ರಥಮ ದರ್ಜೆ ಗುಮಾಸ್ತರು, ವಿಕ್ರಯ ಸಹಾಯಕರು, ಬೆರಳಚ್ಚುಗಾರರು, ಜವಾನರು, ಕಿರಿಯ ಫಾರ್ಮಾಸಿಸ್ಟ್ (ಬ್ಯಾಕ್‌ಲಾಗ್‌)

ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಬೆಂಗಳೂರಿನಲ್ಲಿ ಕರ್ತವ್ಯ ನಿರ್ವಹಿಸಬೇಕು

ಖಾಲಿಯಿರುವ ಹುದ್ದೆಗಳ ಸಂಖ್ಯೆ : ಒಟ್ಟು 45 ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.

ಹುದ್ದೆಹುದ್ದೆಗಳ ಸಂಖ್ಯೆವೇತನ
ಲೆಕ್ಕಿಗರು0519000-34500
ಪ್ರಥಮ ದರ್ಜೆ ಗುಮಾಸ್ತರು1013600-26000
ವಿಕ್ರಯ ಸಹಾಯಕರು1012500-24000
ಬೆರಳಚ್ಚುಗಾರರು0812500-24000
ಜವಾನರು1010400-16400
ಕಿರಿಯ ಫಾರ್ಮಾಸಿಸ್ಟ್0214550-26700

ಶೈಕ್ಷಣಿಕ ಅರ್ಹತೆ :
• ಲೆಕ್ಕಿಗರು ಹುದ್ದೆಗೆ ಬಿ.ಕಾಂ/ ಸಹಕಾರ/ ನಿರ್ವಹಣೆ ಪದವೀಧರರಾಗಿರಬೇಕು
• ಪ್ರಥಮ ದರ್ಜೆ ಗುಮಾಸ್ತ ಹುದ್ದೆಗೆ ಯಾವುದೇ ಪದವಿ ತೇರ್ಗಡೆ ಹೊಂದಿರಬೇಕು
• ವಿಕ್ರಯ ಸಹಾಯಕರು ಹುದ್ದೆಗೆ ದ್ವಿತೀಯ ಪಿಯುಸಿ ಉತ್ತೀರ್ಣರಾಗಿರಬೇಕು
• ಬೆರಳಚ್ಚುಗಾರ ಹುದ್ದೆಗೆ ದ್ವಿತೀಯ ಪಿಯುಸಿ ಜೊತೆಗೆ ಸೀನಿಯರ್ ಕನ್ನಡ ಮತ್ತು ಇಂಗ್ಲಿಷ್ ಟೈಪ್ ರೈಟಿಂಗ್ ನಲ್ಲಿ ಉತ್ತೀರ್ಣರಾಗಿರಬೇಕು
• ಜವಾನರು ಹುದ್ದೆಗೆ ಎಸ್.ಎಸ್.ಎಲ್.ಸಿಯಲ್ಲಿ ಉತ್ತೀರ್ಣರಾಗಿರಬೇಕು
• ಕಿರಿಯ ಫಾರ್ಮಾಸಿಸ್ಟ್ ಹುದ್ದೆಗೆ ಡಿಪ್ಲೊಮಾ ಇನ್ ಫಾರ್ಮಾಸಿ ಪರೀಕ್ಷೆಯಲ್ಲಿ ಪಾಸಾಗಿರಬೇಕು.

ವಯೋಮಾನ : ಅರ್ಜಿ ಸಲ್ಲಿಸುವ ಕೊನೆಯ ದಿನಾಂಕಕ್ಕೆ ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷ ಹಾಗೂ ಸಾಮಾನ್ಯ ವರ್ಗ ಗರಿಷ್ಠ 35 ವರ್ಷ, 2ಎ, 2ಬಿ, 3ಎ, 3ಬಿ ಗರಿಷ್ಠ 38 ವರ್ಷ, ಪ.ಜಾ/ಪ.ಪಂ/ಪ್ರ1 ಗರಿಷ್ಠ 40 ವರ್ಷ ವಯೋಮಾನ ನಿಗದಿಪಡಿಸಲಾಗಿದೆ.

ಆಯ್ಕೆ ವಿಧಾನ : ಲೆಕ್ಕಿಗರು, ಗುಮಾಸ್ತ ಹಾಗೂ ವಿಕ್ರಯ ಸಹಾಯಕರು ಹುದ್ದೆಗೆ ಲಿಖಿತ ಪರೀಕ್ಷೆ ಜೊತೆಗೆ ಸಂದರ್ಶನ, ಬೆರಳಚ್ಚುಗಾರರು ಹುದ್ದೆಗೆ ಲಿಖಿತ ಪರೀಕ್ಷೆ ಜೊತೆಗೆ ಕಂಪ್ಯೂಟರ್ ಹಾಗೂ ಬೆರಳಚ್ಚು ವಿಷಯಗಳಿಗೆ ಪರೀಕ್ಷೆ, ಜವಾನರು ಹುದ್ದೆಗೆ ಮೆರಿಟ್ ಆಧಾರದ ಮೇಲೆ ಹುದ್ದೆಗಳಿಗೆ ಆಯ್ಕೆ ಮಾಡಲಾಗುತ್ತದೆ.

ಉದ್ಯೋಗ ಮಾಹಿತಿ : ESIC UDC Recruitment 2021 : 6552 ಕ್ಲರ್ಕ್, ಸ್ಟೆನೋಗ್ರಾಫರ್ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಪ್ರಕಟ

ಕರ್ನಾಟಕ ರಾಜ್ಯ ಸಹಕಾರ ಗ್ರಾಹಕರ ಮಹಾಮಂಡಳ ನಿಯಮಿತದಲ್ಲಿ ಖಾಲಿಯಿರುವ ಹುದ್ದೆಗೆ ಅರ್ಜಿ ಸಲ್ಲಿಕೆಯ ವಿಧಾನ :
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್‌ಲೈನ್‌ ಮೂಲಕವೇ ಅರ್ಜಿಯನ್ನು ಸಲ್ಲಿಸಬೇಕು.
• ಅಭ್ಯರ್ಥಿಗಳು ಕರ್ನಾಟಕ ರಾಜ್ಯ ಸಹಕಾರ ಗ್ರಾಹಕರ ಮಹಾಮಂಡಳ ನಿಯಮಿತದ ಅಧಿಕೃತ ವೆಬ್‌ಸೈಟ್ ವಿಳಾಸಕ್ಕೆ ಭೇಟಿ ನೀಡಿ, ಆನ್‌ಲೈನ್‌ ಅರ್ಜಿಯಲ್ಲಿ ಹುದ್ದೆಗೆ ಅಗತ್ಯವಿರುವ ಎಲ್ಲಾ ಮಾಹಿತಿಯನ್ನು ಭರ್ತಿ ಮಾಡಿ ( ಉದಾಹರಣೆಗೆ : ಅಭ್ಯರ್ಥಿಯ ಹೆಸರು, ವಿದ್ಯಾರ್ಹತೆ, ಇಮೇಲ್ ವಿಳಾಸ ಇತ್ಯಾದಿ) ನಂತರ ನಿಗದಿತ ಅರ್ಜಿ ಶುಲ್ಕ ಪಾವತಿಸಿ ಅರ್ಜಿಯನ್ನು ಸಲ್ಲಿಸಬೇಕು

ಅರ್ಜಿ ಶುಲ್ಕ : ಎಸ್ಸಿ, ಎಸ್ಟಿ, ಪ್ರವರ್ಗ 1, ಅಂಗವಿಕಲ ಅಭ್ಯರ್ಥಿಗಳು ರೂ. 530, ಇತರೆ ವರ್ಗದ ಅಭ್ಯರ್ಥಿಗಳು ರೂ. 1030 ಶುಲ್ಕವನ್ನು ಅಂಚೆ ಕಛೇರಿಯಲ್ಲಿ ಪಾವತಿಸಬೇಕು.

ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿದ ದಿನಾಂಕದ ವಿವರ :
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ಮಾರ್ಚ್ 03, 2021
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಏಪ್ರಿಲ್ 05, 2021
ಚಲನ್ ಮೂಲಕ ಶುಲ್ಕ ಪಾವತಿಸಲು ಕೊನೆಯ ದಿನಾಂಕ : ಏಪ್ರಿಲ್ 06, 2021

KSCCF Recruitment 2021 : Important Links

ಅಧಿಸೂಚನೆ : Click Here
ಅರ್ಜಿ ಸಲ್ಲಿಸಿ : Click Here

ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.