KSDA Recruitment 2021 | 10 ಗುಮಾಸ್ತ, ಡೇಟಾ ಎಂಟ್ರಿ ಆಪರೇಟರ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

KSDA Recruitment 2021 : ಕರ್ನಾಟಕ ರಾಜ್ಯ ಕೃಷಿ ಇಲಾಖೆಯಲ್ಲಿ ಖಾಲಿಯಿರುವ ಗುಮಾಸ್ತ, ಡೇಟಾ ಎಂಟ್ರಿ ಆಪರೇಟರ್ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ವೇತನ, ಅರ್ಜಿ ಸಲ್ಲಿಕೆ ದಿನಾಂಕ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

KSDA Recruitment 2021 : Details of Vacancies

ಹುದ್ದೆ : ರಾಜ್ಯ ತಾಂತ್ರಿಕ ಘಟಕದ ಮುಖ್ಯಸ್ಥರು, ಕಾರ್ಯಕ್ರಮ ಸಂಯೋಜಕರು, ಸಂವಹನ ಅಧಿಕಾರಿ, ಸಾಮರ್ಥ್ಯವೃದ್ದಿ ಅಧಿಕಾರಿ, ಮಾಹಿತಿ ತಂತ್ರಜ್ಞಾನ ಮತ್ತು ನಿರ್ವಹಣಾ ವ್ಯವಸ್ಥೆ ತಜ್ಞರು, ದತ್ತಾಂಶ ವಿಶ್ಲೇಷಕರು, ಮೇಲ್ವಿಚಾರಣೆ ಮತ್ತು ಮೌಲ್ಯಮಾಪನ ತಜ್ಞರು, ತೋಟಗಾರಿಕಾ ತಜ್ಞರು, ಗುಮಾಸ್ತ, ಡೇಟಾ ಎಂಟ್ರಿ ಆಪರೇಟರ್.

ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಬೆಂಗಳೂರಿನಲ್ಲಿ ಕರ್ತವ್ಯ ನಿರ್ವಹಿಸಬೇಕು

ಖಾಲಿಯಿರುವ ಹುದ್ದೆಗಳ ಸಂಖ್ಯೆ : ಒಟ್ಟು 10 ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.

ಶೈಕ್ಷಣಿಕ ಅರ್ಹತೆ : ಆಯಾ ಹುದ್ದೆಗಳಿಗೆ ಅನುಗುಣವಾಗಿ ಪದವಿ/ ಸ್ನಾತಕೋತ್ತರ ಪದವಿ/ ಬಿ.ಎಸ್ಸಿ ಅಗ್ರಿಕಲ್ಚರ್ /ಎಂಎಸ್ಸಿ ಅಗ್ರಿಕಲ್ಚರ್/ ಬಿ.ಟೆಕ್/ ಎಂ.ಟೆಕ್ ವಿದ್ಯಾರ್ಹತೆಯ ಜೊತೆಗೆ ನಿಗದಿತ ಅನುಭವ ಹೊಂದಿರಬೇಕು

ವೇತನ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 20,000 ರಿಂದ ರೂ. 70,000ವರೆಗೂ ವೇತನ ನೀಡಲಾಗುತ್ತದೆ

ಆಯ್ಕೆ ವಿಧಾನ : ಅಭ್ಯರ್ಥಿಗಳನ್ನು ನೇರ ಸಂದರ್ಶನ ನಡೆಸಿ ಹುದ್ದೆಗಳಿಗೆ ಆಯ್ಕೆ ಮಾಡಲಾಗುತ್ತದೆ.

ಉದ್ಯೋಗ ಮಾಹಿತಿ : Graduate Cooperative Society Shivamogga Recruitment 2021

ಕರ್ನಾಟಕ ರಾಜ್ಯ ಕೃಷಿ ಇಲಾಖೆಯಲ್ಲಿ ಖಾಲಿಯಿರುವ ಹುದ್ದೆಗೆ ಅರ್ಜಿ ಸಲ್ಲಿಕೆಯ ವಿಧಾನ :
• ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಖುದ್ದಾಗಿ ಅಥವಾ ಇಮೇಲ್ ಮೂಲಕವೇ ಅರ್ಜಿಯನ್ನು ಸಲ್ಲಿಸಬೇಕು.
• ಅಭ್ಯರ್ಥಿಗಳು ಕೃಷಿ ಇಲಾಖೆಯ ಅಧಿಕೃತ ವೆಬ್‌ಸೈಟ್ ವಿಳಾಸಕ್ಕೆ ಭೇಟಿ ನೀಡಿ ಅರ್ಜಿ ನಮೂನೆಯನ್ನು ಡೌನ್ಲೋಡ್ ಮಾಡಿ ನಂತರ ಅರ್ಜಿ ನಮೂನೆಯಲ್ಲಿ ಅಗತ್ಯವಿರುವ ಎಲ್ಲಾ ಮಾಹಿತಿಯನ್ನು ಭರ್ತಿ ಮಾಡಿ ( ಉದಾಹರಣೆಗೆ : ಅಭ್ಯರ್ಥಿಯ ಹೆಸರು, ವಿದ್ಯಾರ್ಹತೆ, ಇಮೇಲ್ ವಿಳಾಸ ಇತ್ಯಾದಿ) ಕೊನೆಯಲ್ಲಿ ಭರ್ತಿ ಮಾಡಿದ ಅರ್ಜಿಯನ್ನು ಅಗತ್ಯ ದಾಖಲೆಗಳೊಂದಿಗೆ ಖುದ್ದಾಗಿ ಕಛೇರಿಗೆ ಹಾಜರಾಗಿ ಸಲ್ಲಿಸಬೇಕು ಅಥವಾ ಭರ್ತಿ ಮಾಡಿದ ಅರ್ಜಿ ಹಾಗೂ ಮೂಲ ದಾಖಲೆಗಳನ್ನು ಸ್ಕ್ಯಾನ್ ಮಾಡಿ ಕಛೇರಿಯ ಇಮೇಲ್ stsuagri2020@gmail.com ವಿಳಾಸಕ್ಕೆ ಕಳುಹಿಸಬಹುದು.

ಅರ್ಜಿ ಸಲ್ಲಿಸುವ ವಿಳಾಸ : ಕೃಷಿ ಆಯುಕ್ತರು, ಕೃಷಿ ಆಯುಕ್ತಾಲಯ,
ಶೇಷಾದ್ರಿ ರಸ್ತೆ, ಬೆಂಗಳೂರು ~ 560001

ಅರ್ಜಿ ಶುಲ್ಕ : ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.

ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿದ ದಿನಾಂಕದ ವಿವರ :
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ಮೇ 07, 2021
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಮೇ 17, 2021

KSDA Recruitment 2021 : Important Links

ಅಧಿಸೂಚನೆ : Click Here
(ವಿದ್ಯಾರ್ಹತೆ) ಅಧಿಸೂಚನೆ : Click Here
ಅರ್ಜಿ ನಮೂನೆ : Click Here

ಹೆಚ್ಚಿನ ಮಾಹಿತಿಗಾಗಿ ಕಛೇರಿಯನ್ನು ಸಂಪರ್ಕಿಸಿ. ದೂರವಾಣಿ ಸಂಖ್ಯೆ : 080 22074188

ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.