ಕರ್ನಾಟಕ ರಾಜ್ಯ ಹಣಕಾಸು ಸಂಸ್ಥೆ ನೇಮಕಾತಿ 2023 – KSFC Recruitment 2023

KSFC Recruitment 2023 : ಕರ್ನಾಟಕ ರಾಜ್ಯ ಹಣಕಾಸು ಸಂಸ್ಥೆಯಲ್ಲಿ ಅಗತ್ಯವಿರುವ ಉಪ ವ್ಯವಸ್ಥಾಪಕರ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ವೇತನ, ಆಯ್ಕೆ ವಿಧಾನ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

KSFC Recruitment 2023 : Details of Vacancies

ಹುದ್ದೆ : ಉಪ ವ್ಯವಸ್ಥಾಪಕರು (ತಾಂತ್ರಿಕ, ಕಾನೂನು, ಹಣಕಾಸು ಮತ್ತು ಲೆಕ್ಕಪತ್ರ)

ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ರಾಜ್ಯದ ಕೆಎಸ್‌ಎಫ್‌ಸಿಯ ಯಾವುದೇ ಶಾಖೆ ಅಥವಾ ಬೆಂಗಳೂರಿನ ಪ್ರಧಾನ ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸಬೇಕು.

ಖಾಲಿಯಿರುವ ಹುದ್ದೆಗಳ ಸಂಖ್ಯೆ : ಒಟ್ಟು 41 ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಹುದ್ದೆವೃಂದಹುದ್ದೆಗಳ ಸಂಖ್ಯೆ
ಉಪ ವ್ಯವಸ್ಥಾಪಕರು (ತಾಂತ್ರಿಕ)ಮಿಕ್ಕುಳಿದ ವೃಂದ8
ಉಪ ವ್ಯವಸ್ಥಾಪಕರು (ಕಾನೂನು)ಮಿಕ್ಕುಳಿದ ವೃಂದ18
ಉಪ ವ್ಯವಸ್ಥಾಪಕರು (ಹಣಕಾಸು ಮತ್ತು ಲೆಕ್ಕಪತ್ರ)ಮಿಕ್ಕುಳಿದ ವೃಂದ10
ಉಪ ವ್ಯವಸ್ಥಾಪಕರು (ತಾಂತ್ರಿಕ)ಕಲ್ಯಾಣ ಕರ್ನಾಟಕ ಪ್ರದೇಶ 3
ಉಪ ವ್ಯವಸ್ಥಾಪಕರು (ಹಣಕಾಸು ಮತ್ತು ಲೆಕ್ಕಪತ್ರ)ಕಲ್ಯಾಣ ಕರ್ನಾಟಕ ಪ್ರದೇಶ 2

ನಿಗದಿಪಡಿಸಿರುವ ಶೈಕ್ಷಣಿಕ ಅರ್ಹತೆ :
• ಉಪ ವ್ಯವಸ್ಥಾಪಕರು (ತಾಂತ್ರಿಕ) – ಇಂಜಿನಿಯರಿಂಗ್ ಪದವಿಯನ್ನು (ಸಾಮಾನ್ಯ ಮತ್ತು ಒಬಿಸಿ ಅಭ್ಯರ್ಥಿಗಳು 60% ಹಾಗೂ ಹೆಚ್ಚಿನ ಅಂಕಗಳೊಂದಿಗೆ, ಎಸ್ಸಿ, ಎಸ್ಟಿ ಅಭ್ಯರ್ಥಿಗಳು 55% ಹಾಗೂ ಹೆಚ್ಚಿನ ಅಂಕಗಳೊಂದಿಗೆ) ಸಿವಿಲ್/ ಮೆಕ್ಯಾನಿಕಲ್/ ಇಲೆಕ್ಟ್ರಿಕಲ್/ ಇನ್ಫರ್ಮೇಷನ್ ಸೈನ್ಸ್/ ಇ&ಸಿ ಟೆಕ್ನಾಲಜಿ ವಿಭಾಗದಲ್ಲಿ ಹೊಂದಿರಬೇಕು.

• ಉಪ ವ್ಯವಸ್ಥಾಪಕರು (ಕಾನೂನು) – ಕಾನೂನು ಪದವಿಯನ್ನು (ಸಾಮಾನ್ಯ ಮತ್ತು ಒಬಿಸಿ ಅಭ್ಯರ್ಥಿಗಳು 60% ಹಾಗೂ ಹೆಚ್ಚಿನ ಅಂಕಗಳೊಂದಿಗೆ, ಎಸ್ಸಿ, ಎಸ್ಟಿ ಅಭ್ಯರ್ಥಿಗಳು 55% ಹಾಗೂ ಹೆಚ್ಚಿನ ಅಂಕಗಳೊಂದಿಗೆ) ಹೊಂದಿರಬೇಕು.

• ಉಪ ವ್ಯವಸ್ಥಾಪಕರು (ಹಣಕಾಸು ಮತ್ತು ಲೆಕ್ಕಪತ್ರ) – ಎಸಿಎ/ ಐಸಿಡಬ್ಬ್ಯೂಎ/ ಎಂಬಿಎ ಅಥವಾ ಎಂ.ಕಾಂ ಪದವಿಯನ್ನು (ಸಾಮಾನ್ಯ ಮತ್ತು ಒಬಿಸಿ ಅಭ್ಯರ್ಥಿಗಳು 60% ಹಾಗೂ ಹೆಚ್ಚಿನ ಅಂಕಗಳೊಂದಿಗೆ, ಎಸ್ಸಿ, ಎಸ್ಟಿ ಅಭ್ಯರ್ಥಿಗಳು 55% ಹಾಗೂ ಹೆಚ್ಚಿನ ಅಂಕಗಳೊಂದಿಗೆ) ಹೊಂದಿರಬೇಕು.

ಅನುಭವ : ಅಭ್ಯರ್ಥಿಗಳು ಆಯಾ ಹುದ್ದೆಗೆ ಸಂಸ್ಥೆ ನಿಗದಿಪಡಿಸಿದ ಅನುಭವ ಹೊಂದಿರಬೇಕು.

ಉದ್ಯೋಗ ಮಾಹಿತಿ : ಭಾರತೀಯ ರೈಲ್ವೆ ಇಲಾಖೆ ನೇಮಕಾತಿ 2023

ವಯೋಮಾನ : ಅಭ್ಯರ್ಥಿಗಳು ಕನಿಷ್ಠ 25 ವರ್ಷ ವಯೋಮಾನ ಹೊಂದಿರಬೇಕು.
• ಎಸ್ಸಿ, ಎಸ್ಟಿ, ಪ್ರ1ರ ಅಭ್ಯರ್ಥಿಗಳು – ಗರಿಷ್ಠ 40 ವರ್ಷ
• 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳು – ಗರಿಷ್ಠ 38 ವರ್ಷ
• ಸಾಮಾನ್ಯ ಅಭ್ಯರ್ಥಿಗಳು – ಗರಿಷ್ಠ 35 ವರ್ಷ

ವೇತನ : ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 52,650 ರಿಂದ 97,100 ಶ್ರೇಣಿಯಲ್ಲಿ ವೇತನ ನೀಡಲಾಗುತ್ತದೆ.

ಆಯ್ಕೆ ವಿಧಾನ : ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ ಹಾಗೂ ಸಂದರ್ಶನ ನಡೆಸಿ ಆಯ್ಕೆ ಮಾಡಲಾಗುವುದು.

ಉದ್ಯೋಗ ಮಾಹಿತಿ : ಕೋ-ಆಪರೇಟಿವ್ ಬ್ಯಾಂಕ್ ನೇಮಕಾತಿ 2023

ಅರ್ಜಿ ಸಲ್ಲಿಕೆಯ ವಿಧಾನ : ಅಭ್ಯರ್ಥಿಯು ಆಫ್‌ಲೈನ್‌ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 1 : ಇಲಾಖೆಯ ವೆಬ್‌ಸೈಟ್ ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ ಅಪ್ಲಿಕೇಷನ್ ಫಾರ್ಮ್ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಪ್ಲಿಕೇಷನ್ ಡೌನ್ಲೋಡ್ ಮಾಡಿಕೊಳ್ಳಿ.
ಹಂತ 2 : ಅಪ್ಲಿಕೇಷನ್ ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಪುನಃ ಒಮ್ಮೆ ಪರಿಶೀಲಿಸಿ.
ಹಂತ 3 : ಅಪ್ಲಿಕೇಷನ್ ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಲಗತ್ತಿಸಲು ಸೂಚಿಸಿದ್ದರೆ, ಅವುಗಳನ್ನು ಲಗತ್ತಿಸಿ (ಅಗತ್ಯವಿದ್ದರೆ ಮಾತ್ರ).
ಹಂತ 4 : ಕೊನೆಯದಾಗಿ, ಅಭ್ಯರ್ಥಿಗೆ ಅರ್ಜಿ ಶುಲ್ಕ ಪಾವತಿಸಲು ಸೂಚಿಸಿದ್ದರೆ ಶುಲ್ಕ ಪಾವತಿಸಿ, ಭರ್ತಿ ಮಾಡಿದ ಅರ್ಜಿಯನ್ನು ಈ ಕೆಳಗಡೆ ನೀಡಲಾದ ಕಚೇರಿಯ ವಿಳಾಸಕ್ಕೆ ಅಂಚೆ ಮೂಲಕ ಕಳುಹಿಸಿ.

ಅರ್ಜಿ ಸಲ್ಲಿಸುವ ವಿಳಾಸ : ವ್ಯವಸ್ಥಾಪಕ ನಿರ್ದೇಶಕರು, ಪ್ರಧಾನ ಕಛೇರಿ : ಕೆ.ಎಸ್.ಎಫ್.ಸಿ ಭವನ, # 1/1, ತಿಮ್ಮಯ್ಯ ರಸ್ತೆ, ದಂಡು ರೈಲ್ವೆ ನಿಲ್ದಾಣದ ಬಳಿ, ಬೆಂಗಳೂರು – 560 052

ನಿಗದಿತ ಅರ್ಜಿ ಶುಲ್ಕದ ವಿವರ :
• ಎಸ್ಸಿ, ಎಸ್ಟಿ ಅಭ್ಯರ್ಥಿಗಳು – ರೂ. 1500
• ಪ್ರ1, 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳು – ರೂ. 2000

ಶುಲ್ಕ ಪಾವತಿಸುವ ವಿಧಾನ : ಅರ್ಜಿ ಶುಲ್ಕವನ್ನು ಡಿಡಿ ಮೂಲಕ ಕೆಎಸ್‌ಎಫ್‌ಸಿ, ಬೆಂಗಳೂರು ಇದರ ಹೆಸರಿನಲ್ಲಿ ಪಡೆದು ಅರ್ಜಿಯೊಂದಿಗೆ ಲಗತ್ತಿಸಿ ಸಲ್ಲಿಸಬೇಕು.

ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿರುವ ದಿನಾಂಕದ ವಿವರ :
ಅರ್ಜಿ ಸಲ್ಲಿಕೆಗೆ ಪ್ರಾರಂಭದ ದಿನಾಂಕ : ಜೂನ್ 14, 2023
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ : ಜುಲೈ 07, 2023

KSFC Recruitment 2023 : Important Links

NOTIFICATIONCLICK HERE
ಪ್ರಕಟಣೆCLICK HERE
APPLICATION FORM CLICK HERE
Telegram Join Link Click Here

ವಿಶೇಷ ಸೂಚನೆ : ಈ ನೇಮಕಾತಿಗೆ ಈಗಾಗಲೇ ದಿನಾಂಕ 13/02/2023ರಲ್ಲಿ ಅರ್ಜಿ ಆಹ್ವಾನಿಸಲಾಗಿತ್ತು. ಕೆಲವೊಂದು ಪ್ರವರ್ಗದ ಹುದ್ದೆಗಳಿಗೆ ಸಾಕಷ್ಟು ಅರ್ಹ ಅಭ್ಯರ್ಥಿಗಳು ಲಭ್ಯವಿಲ್ಲದ ಕಾರಣ ಈಗ ಮತ್ತೊಮ್ಮೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಈಗಾಗಲೇ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳು ಮತ್ತೊಮ್ಮೆ ಅರ್ಜಿ ಸಲ್ಲಿಸುವ ಅವಶ್ಯಕತೆ ಇರುವುದಿಲ್ಲ.

ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.

Leave a Comment