KSHRC Recruitment 2021 – ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಆಯೋಗದಲ್ಲಿ ಖಾಲಿಯಿರುವ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ಅರ್ಜಿ ಸಲ್ಲಿಕೆ ದಿನಾಂಕ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.
KSHRC Recruitment 2021 : Details of Vacancies
ಹುದ್ದೆ : ಅಪರ ನಿಬಂಧಕರು, ಸಹಾಯಕ ನಿಬಂಧಕರು, ಕೋರ್ಟ್ ಅಧಿಕಾರಿ, ತೀರ್ಪು ಬರಹಗಾರರು, ಕಾನೂನು ಸಹಾಯಕರು/ಸಂಶೋಧನಾ ಸಹಾಯಕರು, ಶೀಘ್ರಲಿಪಿಗಾರರು, ಸಹಾಯಕರು, ವಾಹನ ಚಾಲಕರು
ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಬೆಂಗಳೂರಿನಲ್ಲಿ ಕೆಲಸ ನಿರ್ವಹಿಸಬೇಕು
ಖಾಲಿಯಿರುವ ಹುದ್ದೆಗಳ ಸಂಖ್ಯೆ : ಒಟ್ಟು 10 ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.
ವೇತನ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 21,400 ರಿಂದ ರೂ. 52,650 ವರೆಗೂ ವೇತನ ನೀಡಲಾಗುತ್ತದೆ.
ಶೈಕ್ಷಣಿಕ ಅರ್ಹತೆ :
• ಅಪರ ನಿಬಂಧಕರು, ಸಹಾಯಕ ನಿಬಂಧಕರು, ಕೋರ್ಟ್ ಅಧಿಕಾರಿ, ತೀರ್ಪು ಬರಹಗಾರರು, ಕಾನೂನು ಸಹಾಯಕರು ಹುದ್ದೆಗೆ ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯದಿಂದ ಕಾನೂನು ಪದವಿ ಪಡೆದವರಾಗಿರಬೇಕು ಜೊತೆಗೆ ಕಂಪ್ಯೂಟರ್ ವಿಷಯದಲ್ಲಿ ಜ್ಞಾನ ಹೊಂದಿರಬೇಕು.
• ಶೀಘ್ರಲಿಪಿಗಾರರು ಹುದ್ದೆಗೆ ಪದವಿ ಜೊತೆಗೆ ಕನ್ನಡ ಮತ್ತು ಆಂಗ್ಲ ಭಾಷೆಯಲ್ಲಿ ಸೀನಿಯರ್ ಗ್ರೇಡ್ ನಲ್ಲಿ ಶೀಘ್ರಲಿಪಿ ಹಾಗೂ ಬೆರಳಚ್ಚು ಪರೀಕ್ಷೆ ಉತ್ತೀರ್ಣರಾಗಿರಬೇಕು.
• ಸಹಾಯಕರು ಹುದ್ದೆಗೆ ಕಂಪ್ಯೂಟರ್ ಸೈನ್ಸ್ ನಲ್ಲಿ ಪದವಿ ಪಡೆದಿರಬೇಕು.
• ವಾಹನ ಚಾಲಕ ಹುದ್ದೆಗೆ 10ನೇ ತರಗತಿ ಜೊತೆಗೆ ಲಘು ಮೋಟಾರು ವಾಹನ ಚಾಲನಾ ಪರವಾನಗಿ ಹೊಂದಿರಬೇಕು.
ವಯೋಮಾನ : ದಿನಾಂಕ ಜುಲೈ 01, 2021ಕ್ಕೆ 62 ವರ್ಷ ವಯೋಮಾನ ಒಳಗಿನ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸಬಹುದು.
ಆಯ್ಕೆ ವಿಧಾನ : ಸೂಕ್ತ ಅಭ್ಯರ್ಥಿಗಳನ್ನು ಸಂದರ್ಶನ ನಡೆಸಿ ಹುದ್ದೆಗಳಿಗೆ ಆಯ್ಕೆ ಮಾಡಲಾಗುತ್ತದೆ.
ಉದ್ಯೋಗ ಮಾಹಿತಿ : ಪೊಲೀಸ್ ಇಲಾಖೆಯಲ್ಲಿ ಅನುಯಾಯಿ ಹುದ್ದೆಗಳ ನೇಮಕಾತಿ
ಅನುಭವ : ಕೆಲಸದ ಅನುಭವ ಹೊಂದಿದವರಿಗೆ ಹೆಚ್ಚಿನ ಆದ್ಯತೆ ನೀಡಲಾಗುವುದು
ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಆಯೋಗದಲ್ಲಿ ಖಾಲಿಯಿರುವ ಹುದ್ದೆಗೆ ಅರ್ಜಿ ಸಲ್ಲಿಕೆಯ ವಿಧಾನ :
• ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಇಮೇಲ್ ಅಥವಾ ಅಂಚೆ ಮೂಲಕವೇ ಅರ್ಜಿಯನ್ನು ಸಲ್ಲಿಸಬೇಕು.
• ಅರ್ಹ ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯನ್ನು ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಆಯೋಗದ ವೆಬ್‌ಸೈಟ್ ನಿಂದ ಡೌನ್ಲೋಡ್ ಮಾಡಿಕೊಂಡು, ಭರ್ತಿ ಮಾಡಿ ( ಉದಾಹರಣೆಗೆ : ಅಭ್ಯರ್ಥಿಯ ಹೆಸರು, ವಿದ್ಯಾರ್ಹತೆ, ಇಮೇಲ್ ವಿಳಾಸ ಇತ್ಯಾದಿ), ಅಗತ್ಯ ದಾಖಲಾತಿಗಳೊಂದಿಗೆ ಕಛೇರಿಯ ಇಮೇಲ್ secretary.kshrc@karnataka.gov.in ಅಥವಾ ಅಂಚೆ ಮೂಲಕ ಕಛೇರಿಯ ವಿಳಾಸಕ್ಕೆ ಕಳುಹಿಸಬೇಕು.
ಅರ್ಜಿ ಸಲ್ಲಿಸುವ ವಿಳಾಸ : ಕಾರ್ಯದರ್ಶಿಗಳು, ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಆಯೋಗ,
5ನೇ ಹಂತ, ಬಹುಮಹಡಿ ಕಟ್ಟಡ, 3ನೇ ಮಹಡಿ, ಬೆಂಗಳೂರು – 560001
ಅರ್ಜಿ ಶುಲ್ಕ : ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ
ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿದ ದಿನಾಂಕದ ವಿವರ :
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ಆಗಸ್ಟ್ 03, 2021
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಸೆಪ್ಟೆಂಬರ್ 04, 2021
KSHRC Recruitment 2021 : Important Links
ಅಧಿಸೂಚನೆ : Click Here
ಅರ್ಜಿ ನಮೂನೆ : Click Here
ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.