KSHRC Recruitment 2022 – Apply for 07 Senior Assistant, Stenographer, Assistant Posts

KSHRC Recruitment 2022 : ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಆಯೋಗದಲ್ಲಿ ಖಾಲಿಯಿರುವ ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ತಾತ್ಕಾಲಿಕವಾಗಿ ನೇಮಕಾತಿ ಮಾಡಿಕೊಳ್ಳಲು ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ವೇತನ, ಅರ್ಜಿ ಸಲ್ಲಿಕೆ ದಿನಾಂಕ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

KSHRC Recruitment 2022 : Details of Vacancies

ಹುದ್ದೆ : ಲೆಕ್ಕಾಧೀಕ್ಷಕರು, ತೀರ್ಪು ಬರಹಗಾರರು, ಹಿರಿಯ ಸಹಾಯಕರು, ಕಾನೂನು ಸಹಾಯಕರು/ ಸಂಶೋಧನಾ ಸಹಾಯಕರು, ಸಹಾಯಕರು, ಶೀಘ್ರಲಿಪಿಗಾರರು

ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಬೆಂಗಳೂರಿನಲ್ಲಿ ಕೆಲಸ ನಿರ್ವಹಿಸಬೇಕು

ಖಾಲಿಯಿರುವ ಹುದ್ದೆಗಳ ಸಂಖ್ಯೆ : ಒಟ್ಟು 07 ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.

ಹುದ್ದೆಹುದ್ದೆಗಳ ಸಂಖ್ಯೆ ವೇತನ
ಲೆಕ್ಕಾಧೀಕ್ಷಕರು140,900
ತೀರ್ಪು ಬರಹಗಾರರು137,900
ಹಿರಿಯ ಸಹಾಯಕರು137,900
ಕಾನೂನು ಸಹಾಯಕರು133,450
ಸಹಾಯಕರು130,350
ಶೀಘ್ರಲಿಪಿಗಾರರು227,650

ಶೈಕ್ಷಣಿಕ ಅರ್ಹತೆ :

• ಲೆಕ್ಕಾಧೀಕ್ಷಕರು – ವಾಣಿಜ್ಯ ಪದವಿ ಪಡೆದಿರಬೇಕು ಹಾಗೂ ಕೆಲಸದ ಅನುಭವ ಹೊಂದಿರಬೇಕು.
• ತೀರ್ಪು ಬರಹಗಾರರು – ಕಾನೂನು ಪದವಿ ಹೊಂದಿರಬೇಕು. ಎಲ್.ಎಲ್.ಎಂ ಪದವಿ ಹೊಂದಿದ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುವುದು. ಉಚ್ಛ ನ್ಯಾಯಾಲಯ ಅಥವಾ ಇತರೆ ನ್ಯಾಯಾಲಯದಲ್ಲಿ ಸೇವೆ ಸಲ್ಲಿಸಿದ ಅನುಭವ ಹೊಂದಿರಬೇಕು.
• ಹಿರಿಯ ಸಹಾಯಕರು / ಸಹಾಯಕರು – ಪದವಿ ಪಡೆದಿರಬೇಕು ಹಾಗೂ ಕೆಲಸದ ಅನುಭವ ಹೊಂದಿರುವವರಿಗೆ ಆದ್ಯತೆ ನೀಡಲಾಗುವುದು. ಕಂಪ್ಯೂಟರ್ ಜ್ಞಾನ ಹೊಂದಿರಬೇಕು.
• ಕಾನೂನು ಸಹಾಯಕರು – ಕಾನೂನು ಪದವಿ ಹೊಂದಿರಬೇಕು. ಕಾನೂನು ಕ್ಷೇತ್ರದಲ್ಲಿ ಅನುಭವ ಹೊಂದಿರುವವರಿಗೆ ಆದ್ಯತೆ ನೀಡಲಾಗುವುದು.
• ಶೀಘ್ರಲಿಪಿಗಾರರು – ಡಿಪ್ಲೋಮಾ ಇನ್ ಕಮರ್ಷಿಯಲ್ ಪ್ರ್ಯಾಕ್ಟಿಸ್ ಅಥವಾ ಪಿಯುಸಿ ಉತ್ತೀರ್ಣರಾಗಿರಬೇಕು. ಕನ್ನಡ ಮತ್ತು ಆಂಗ್ಲ ಭಾಷೆಗಳಲ್ಲಿ ಸೀನಿಯರ್ ಗ್ರೇಡ್ ಶೀಘ್ರಲಿಪಿ ಹಾಗೂ ಬೆರಳಚ್ಚು ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು.

ಉದ್ಯೋಗ ಮಾಹಿತಿ : ಕಾರ್ಮಿಕ ಇಲಾಖೆಯಲ್ಲಿ ಖಾಲಿಯಿರುವ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ವಯೋಮಾನ : ದಿನಾಂಕ 30/09/2022ಕ್ಕೆ 62 ವರ್ಷ ವಯೋಮಾನ ಒಳಗಿನ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸಬಹುದು.

ಆಯ್ಕೆ ವಿಧಾನ : ಸೂಕ್ತ ಅಭ್ಯರ್ಥಿಗಳನ್ನು ಸಂದರ್ಶನ ನಡೆಸಿ ಹುದ್ದೆಗಳಿಗೆ ಆಯ್ಕೆ ಮಾಡಲಾಗುತ್ತದೆ.

ಉದ್ಯೋಗ ಮಾಹಿತಿ : ಜಲ ಸಂಪನ್ಮೂಲ ಇಲಾಖೆಯಲ್ಲಿ ದ್ವಿತೀಯ ದರ್ಜೆ ಸಹಾಯಕ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಆಯೋಗದಲ್ಲಿ ಖಾಲಿಯಿರುವ ಹುದ್ದೆಗೆ ಅರ್ಜಿ ಸಲ್ಲಿಕೆಯ ವಿಧಾನ :
• ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಇಮೇಲ್ ಅಥವಾ ಅಂಚೆ ಮೂಲಕವೇ ಅರ್ಜಿಯನ್ನು ಸಲ್ಲಿಸಬೇಕು.
• ಅರ್ಹ ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯನ್ನು ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಆಯೋಗದ ವೆಬ್‌ಸೈಟ್ ನಿಂದ ಡೌನ್ಲೋಡ್ ಮಾಡಿಕೊಂಡು, ಭರ್ತಿ ಮಾಡಿ ( ಉದಾಹರಣೆಗೆ : ಅಭ್ಯರ್ಥಿಯ ಹೆಸರು, ವಿದ್ಯಾರ್ಹತೆ, ಇಮೇಲ್ ವಿಳಾಸ ಇತ್ಯಾದಿ), ಅಗತ್ಯ ದಾಖಲಾತಿಗಳೊಂದಿಗೆ ಕಛೇರಿಯ ಇಮೇಲ್ ಅಥವಾ ಅಂಚೆ ಮೂಲಕ ಕಛೇರಿಯ ವಿಳಾಸಕ್ಕೆ ಕಳುಹಿಸಬೇಕು.

ಅರ್ಜಿ ಸಲ್ಲಿಸುವ ವಿಳಾಸ : ಕಾರ್ಯದರ್ಶಿಗಳು, ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಆಯೋಗ,
5ನೇ ಹಂತ, ಬಹುಮಹಡಿ ಕಟ್ಟಡ, 3ನೇ ಮಹಡಿ, ಡಾ|| ಬಿ.ಆರ್.ಅಂಬೇಡ್ಕರ್ ವೀಧಿ, ಬೆಂಗಳೂರು – 560001
ಇಮೇಲ್ – secretary-kshrc@karnataka.gov.in

ಅರ್ಜಿ ಶುಲ್ಕ : ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ

ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿದ ದಿನಾಂಕದ ವಿವರ :
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ಸೆಪ್ಟೆಂಬರ್ 22, 2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಅಕ್ಟೋಬರ್ 20, 2022

KSHRC Recruitment 2022 : Important Links

Notification Click Here
Application Form Click Here

ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.

3 thoughts on “KSHRC Recruitment 2022 – Apply for 07 Senior Assistant, Stenographer, Assistant Posts”

Leave a Comment