KSMHA Karnataka Recruitment 2021 – Apply Now Legal Advisor Post

KSMHA Karnataka Recruitment 2021 : ಕರ್ನಾಟಕ ರಾಜ್ಯ ಮಾನಸಿಕ ಆರೋಗ್ಯ ಪ್ರಾಧಿಕಾರದಲ್ಲಿ ಅಗತ್ಯವಿರುವ ಕಾನೂನು ಸಲಹೆಗಾರ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ವೇತನ, ಅರ್ಜಿ ಸಲ್ಲಿಕೆ ದಿನಾಂಕ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

KSMHA Karnataka Recruitment 2021 : Details of Vacancies

ಹುದ್ದೆ : ಕಾನೂನು ಸಲಹೆಗಾರ

ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳು ಬೆಂಗಳೂರಿನಲ್ಲಿ ಕೆಲಸ ನಿರ್ವಹಿಸಬೇಕು.

ಖಾಲಿಯಿರುವ ಹುದ್ದೆಗಳ ಸಂಖ್ಯೆ : ಅಗತ್ಯವಿರುವ ಒಂದು ಹುದ್ದೆಯ ಭರ್ತಿಗೆ ಅರ್ಜಿ ಕರೆಯಲಾಗಿದೆ.

ಶೈಕ್ಷಣಿಕ ಅರ್ಹತೆ : ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾನಿಲಯದಿಂದ ಕಾನೂನು ಪದವೀಧರರಾಗಿರಬೇಕು ಹಾಗೂ 5 ವರ್ಷಗಳ ಅನುಭವ ಹೊಂದಿರಬೇಕು.
ಅಪೇಕ್ಷಣೀಯ : ಆರೋಗ್ಯ ಮತ್ತು ಮಾನಸಿಕ ಆರೋಗ್ಯ ವಿಷಯದಲ್ಲಿ 3 ವರ್ಷ ಅಥವಾ ಅದಕ್ಕಿಂತ ಹೆಚ್ಚು ಕಾಲ ವಕೀಲರಾಗಿ ಅನುಭವ ಹೊಂದಿರಬೇಕು.

ವಯೋಮಾನ : ಅಭ್ಯರ್ಥಿಗಳಿಗೆ 45 ವರ್ಷ ನಿಗದಿಪಡಿಸಲಾಗಿದೆ.

ವೇತನ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 50000 ವೇತನ ನೀಡಲಾಗುತ್ತದೆ.

ಆಯ್ಕೆ ವಿಧಾನ : ಗುತ್ತಿಗೆ ಆಧಾರದ ಮೇಲೆ ಅಭ್ಯರ್ಥಿಗಳನ್ನು ಹುದ್ದೆಗಳಿಗೆ ನೇಮಕ ಮಾಡಿಕೊಳ್ಳಲಾಗುವುದು.

ಉದ್ಯೋಗ ಮಾಹಿತಿ : ಶಿವಮೊಗ್ಗ ಜಿಲ್ಲಾ ನ್ಯಾಯಾಲಯದಲ್ಲಿ ನೇರ ನೇಮಕಾತಿ

ಕರ್ನಾಟಕ ರಾಜ್ಯ ಮಾನಸಿಕ ಆರೋಗ್ಯ ಪ್ರಾಧಿಕಾರದಲ್ಲಿ ಅಗತ್ಯವಿರುವ ಹುದ್ದೆಗೆ ಅರ್ಜಿ ಸಲ್ಲಿಕೆಯ ವಿಧಾನ :
• ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯ
ಸುವ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಅಂಚೆ ಮೂಲಕ ಅಥವಾ ಕಛೇರಿಗೆ ಖುದ್ದಾಗಿ ಹಾಜರಾಗಿ ಅರ್ಜಿಯನ್ನು ಸಲ್ಲಿಸಬೇಕು.
• ಅಭ್ಯರ್ಥಿಗಳು ಇಲಾಖೆಯ ಅಧಿಕೃತ ವೆಬ್‌ಸೈಟ್ ವಿಳಾಸಕ್ಕೆ ಭೇಟಿ ನೀಡಿ, ಅರ್ಜಿ ನಮೂನೆಯನ್ನು ಪಡೆದು, ನಂತರ ಅರ್ಜಿ ನಮೂನೆಯಲ್ಲಿ ಹುದ್ದೆಗೆ ಅಗತ್ಯವಿರುವ ಎಲ್ಲಾ ಮಾಹಿತಿಯನ್ನು ಭರ್ತಿ ಮಾಡಿ ( ಉದಾಹರಣೆಗೆ : ಅಭ್ಯರ್ಥಿಯ ಹೆಸರು, ವಿದ್ಯಾರ್ಹತೆ, ಇಮೇಲ್ ವಿಳಾಸ ಇತ್ಯಾದಿ) ಅರ್ಹತೆ ಮತ್ತು ಅನುಭವದ ದಾಖಲೆಗಳ ದೃಢೀಕೃತ ಪ್ರತಿಗಳು, ಪಾಸ್ಪೋರ್ಟ್ ಪೋಟೋ, ಆಧಾರ್ ಕಾರ್ಡ್ ಹಾಗೂ ಅಭ್ಯರ್ಥಿಗಳು ಸಹಿ ಮಾಡಿ ಕಛೇರಿಗೆ ಸಲ್ಲಿಸಬೇಕು.

ಅರ್ಜಿ ಸಲ್ಲಿಸುವ ವಿಳಾಸ : ಕರ್ನಾಟಕ ರಾಜ್ಯ ಮಾನಸಿಕ ಆರೋಗ್ಯ ಪ್ರಾಧಿಕಾರ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳು, 4ನೇ ಮಹಡಿ, ಆರೋಗ್ಯ ಸೌಧ, ಮಾಗಡಿ ರಸ್ತೆ, ಬೆಂಗಳೂರು – 560023

ಅರ್ಜಿ ಶುಲ್ಕ : ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.

ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿದ ದಿನಾಂಕದ ವಿವರ :
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ನವೆಂಬರ್ 30, 2021
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಡಿಸೆಂಬರ್ 14, 2021

KSMHA Karnataka Recruitment 2021 : Important Links

ಅಧಿಸೂಚನೆ : Click Here
ಅರ್ಜಿ ನಮೂನೆ : Click Here

ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.

WhatsApp
Telegram
Facebook

Leave a Comment