ಕರ್ನಾಟಕ ರಾಜ್ಯ ಮುಕ್ತ ವಿವಿಯಲ್ಲಿ FDA, SDA ಹುದ್ದೆಗಳ ನೇಮಕಾತಿ 2023 – KSOU Recruitment 2023

KSOU Recruitment 2023 – Karnataka State Open University Recruitment : ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದಲ್ಲಿನ ವಿವಿಧ ಹುದ್ದೆಗಳಿಗೆ ಹೈದರಾಬಾದ್-ಕರ್ನಾಟಕ ವ್ಯಾಪ್ತಿಯ ಸ್ಥಳೀಯ ಅಭ್ಯರ್ಥಿಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಿಕೊಳ್ಳಲು ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ವೇತನ, ಅರ್ಜಿ ಶುಲ್ಕ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

KSOU Recruitment 2023 : Details of Vacancies

ಹುದ್ದೆ : ಪ್ರಥಮ ದರ್ಜೆ ಸಹಾಯಕ, ಡೇಟಾ ಎಂಟ್ರಿ ಆಪರೇಟರ್, ದ್ವಿತೀಯ ದರ್ಜೆ ಸಹಾಯಕ, ಬೆರಳಚ್ಚುಗಾರ ಮತ್ತು ಸಹಾಯಕ, ವಾಹನ ಚಾಲಕ, ಎಲೆಕ್ಟ್ರಿಷಿಯನ್, ಪ್ಲಂಬರ್, ಪರಿಚಾರಕ, ಗ್ಯಾಂಗ್ ಮೆನ್, ಸೇವಕ, ಸ್ವೀಪರ್, ಹೆಲ್ಪರ್

ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಮೈಸೂರಿನಲ್ಲಿ ಕರ್ತವ್ಯ ನಿರ್ವಹಿಸಬೇಕು.

ಖಾಲಿಯಿರುವ ಹುದ್ದೆಗಳ ಸಂಖ್ಯೆ : ಒಟ್ಟು 32 ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.

ಹುದ್ದೆಹುದ್ದೆಗಳ ಸಂಖ್ಯೆ ವೇತನ
ಪ್ರಥಮ ದರ್ಜೆ ಸಹಾಯಕ430350-58250
ಡೇಟಾ ಎಂಟ್ರಿ ಆಪರೇಟರ್527650-52650
ದ್ವಿತೀಯ ದರ್ಜೆ ಸಹಾಯಕ821400-42000
ಬೆರಳಚ್ಚುಗಾರ ಮತ್ತು ಸಹಾಯಕ121400-42000
ವಾಹನ ಚಾಲಕ121400-42000
ಎಲೆಕ್ಟ್ರಿಷಿಯನ್121400-42000
ಪ್ಲಂಬರ್121400-42000
ಪರಿಚಾರಕ219950-37900
ಗ್ಯಾಂಗ್ ಮೆನ್118600-32600
ಸೇವಕ517000-28950
ಸ್ವೀಪರ್217000-28950
ಹೆಲ್ಪರ್117000-28950

ಶೈಕ್ಷಣಿಕ ಅರ್ಹತೆ :
ಪ್ರಥಮ ದರ್ಜೆ ಸಹಾಯಕ – ಯು.ಜಿ.ಸಿಯಿಂದ ಮಾನ್ಯತೆ ಪಡೆದ ವಿಶ್ವವಿದ್ಯಾನಿಲಯದಿಂದ ಯಾವುದಾದರೊಂದು ಸ್ನಾತಕ ಪದವಿಯಲ್ಲಿ ಉತ್ತೀರ್ಣರಾಗಿರಬೇಕು. ಸರ್ಕಾರದಿಂದ ಮಾನ್ಯತೆ ಪಡೆದ ಸಂಸ್ಥೆಯ ಮೂಲಕ ಕಂಪ್ಯೂಟರ್ ಕಾರ್ಯ ನಿರ್ವಹಣಾ ಪರೀಕ್ಷೆಯಲ್ಲಿ ತೇರ್ಗಡೆಯಾಗಿರಬೇಕು ಹಾಗೂ ಆಫೀಸ್ ಆಟೋಮೇಷನ್ ಟೂಲ್ಸ್ ಮೂಲಕ ಕನಿಷ್ಠ 05 ವರ್ಷಗಳ ಕಾರ್ಯನಿರ್ವಹಣಾ ಅನುಭವ ಹೊಂದಿರಬೇಕು.

ಡೇಟಾ ಎಂಟ್ರಿ ಆಪರೇಟರ್ – ಯು.ಜಿ.ಸಿ ಯಿಂದ ಮಾನ್ಯತೆ ಪಡೆದ ವಿಶ್ವವಿದ್ಯಾನಿಲಯದಿಂದ ಯಾವುದಾದರೊಂದು ಸ್ನಾತಕ ಪದವಿಯಲ್ಲಿ ಉತ್ತೀರ್ಣರಾಗಿರಬೇಕು. ಅಥವಾ ಪಿ.ಯು.ಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದು, ಡಾಟ ಎಂಟ್ರಿ ಆಪರೇಟರ್/ ಡಾಟ ಎಂಟ್ರಿ ಆಪರೇಟರ್-ಕಂ-ಅಸಿಸ್ಟಂಟ್‌ರಾಗಿ ಸರ್ಕಾರದ ವಿಶ್ವವಿದ್ಯಾನಿಲಯಗಳ/ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಕನಿಷ್ಠ ಐದು ವರ್ಷಗಳ ಕಾರ್ಯನುಭವ ಇರತಕ್ಕದ್ದು.

ದ್ವಿತೀಯ ದರ್ಜೆ ಸಹಾಯಕ – ಯು.ಜಿ.ಸಿ ಯಿಂದ ಮಾನ್ಯತೆ ಪಡೆದ ವಿಶ್ವವಿದ್ಯಾನಿಲಯದಿಂದ ಯಾವುದಾದರೊಂದು ಸ್ನಾತಕ ಪದವಿಯಲ್ಲಿ ಉತ್ತೀರ್ಣರಾಗಿರಬೇಕು. ಪಿ.ಯು.ಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿ ಕನಿಷ್ಟ ಐದು ವರ್ಷಗಳ ಸೇವೆಯನ್ನು ಸರ್ಕಾರದ/ ವಿಶ್ವವಿದ್ಯಾನಿಲಯಗಳ /ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ದ್ವಿತೀಯ ದರ್ಜೆ ಸಹಾಯಕರಾಗಿ ಕಾರ್ಯನಿರ್ವಹಿಸಿರುವ ಅನುಭವ ಹೊಂದಿರತಕ್ಕದ್ದು.

ಬೆರಳಚ್ಚುಗಾರ ಮತ್ತು ಸಹಾಯಕ – ಯು.ಜಿ.ಸಿ ಯಿಂದ ಮಾನ್ಯತೆ ಪಡೆದ ವಿಶ್ವವಿದ್ಯಾನಿಲಯದಿಂದ ಯಾವುದಾದರೊಂದು ಸ್ನಾತಕ ಪದವಿಯಲ್ಲಿ ಉತ್ತೀರ್ಣರಾಗಿರಬೇಕು. ಪಿ.ಯು.ಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿದ್ದು, ಟೈಪಿಸ್ಟ್ ಕಂ ದ್ವಿತೀಯ ದರ್ಜೆ ಸಹಾಯಕರಾಗಿ ಕನಿಷ್ಠ ಐದು ವರ್ಷಗಳ ಸೇವೆಯನ್ನು ಸರ್ಕಾರ/ವಿಶ್ವವಿದ್ಯಾನಿಲಯ ಮತ್ತು ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸಿರುವ ಅನುಭವ ಹೊಂದಿರತಕ್ಕದ್ದು. ಸರ್ಕಾರದ ಕರ್ನಾಟಕ ಪ್ರೌಢ ಶಿಕ್ಷಣ ಮಂಡಳಿಯಿಂದ ನಡೆಸಲಾಗುವ ಕನ್ನಡ ಮತ್ತು ಇಂಗ್ಲೀಷ್ ಸೀನಿಯರ್ ಗ್ರೇಡ್ ಬೆರಳಚ್ಚು ಪರೀಕ್ಷೆ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ತೇರ್ಗಡೆಯಾಗಿರತಕ್ಕದ್ದು.

ವಾಹನ ಚಾಲಕ – ಹತ್ತನೇ ತರಗತಿಯಲ್ಲಿ ತೇರ್ಗಡೆಯಾಗಿರಬೇಕು ಹಾಗೂ ಚಾಲ್ತಿಯಲ್ಲಿರುವ ಭಾರೀ ವಾಹನ ಚಾಲನೆ ಪರವಾನಿಗೆ ಹೊಂದಿದ್ದು, ಪ್ರಥಮ ಚಿಕಿತ್ಸೆ ಬಗ್ಗೆ ಮಾನ್ಯತೆ ಪಡೆದ ಸಂಸ್ಥೆಯಿಂದ ದೃಢೀಕರಣ ಪತ್ರವನ್ನು ಪಡೆದಿರಬೇಕು ಮತ್ತು ಕನಿಷ್ಠ ಮೂರು ವರ್ಷಗಳ ಭಾರೀ ವಾಹನ ಚಾಲನಾ ಅನುಭವ ಹೊಂದಿರತಕ್ಕದ್ದು.

ಎಲೆಕ್ಟ್ರಿಷಿಯನ್ – ಎಸ್.ಎಸ್‌.ಎಲ್.ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು, ಡಿಪ್ಲೋಮಾ ಇನ್ ಎಲೆಕ್ನಿಕಲ್ ಇಂಜಿನಿಯರಿಂಗ್ ಅಥವಾ ಸರ್ಕಾರದ ಉದ್ಯೋಗ ಮತ್ತು ತರಬೇತಿ ಇಲಾಖೆಯಿಂದ ನಡೆಸಲಾಗುವ ಐಟಿಐ ಎಲೆಕ್ಟಿಕಲ್ ಕೋರ್ಸನಲ್ಲಿ ತೇರ್ಗಡೆ ಹೊಂದಿರಬೇಕು ಹಾಗೂ ಎಲೆಕ್ನಿಷಿಯನ್ ಕಾರ್ಯ ನಿರ್ವಹಣೆಯಲ್ಲಿ ಕನಿಷ್ಠ ಐದು ವರ್ಷಗಳ ಸೇವಾನುಭವವನ್ನು ಹೊಂದಿರಬೇಕು.

ಪ್ಲಂಬರ್ – ಎಸ್.ಎಸ್‌.ಎಲ್.ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದು, ಪ್ಲಂಬಿಂಗ್ ಮತ್ತು ಸಿವಿಲ್ ಕಾರ್ಯ ನಿರ್ವಹಣೆಯಲ್ಲಿ ಕನಿಷ್ಠ ಎರಡು ವರ್ಷಗಳ ಸೇವಾನುಭವವನ್ನು ಹೊಂದಿರಬೇಕು ಅಥವಾ ಏಳನೇ ತರಗತಿ ಉತ್ತೀರ್ಣರಾಗಿದ್ದು, ಪ್ಲಂಬಿಂಗ್ ಮತ್ತು ಸಿವಿಲ್ ಕಾರ್ಯ ನಿರ್ವಾಹಣೆಯಲ್ಲಿ ಕನಿಷ್ಠ ಐದು ವರ್ಷಗಳ ಸೇವಾನುಭವವನ್ನು ಹೊಂದಿರತಕ್ಕದ್ದು.

ಪರಿಚಾರಕ – ಎಸ್.ಎಸ್.ಎಲ್.ಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿರಬೇಕು.

ಗ್ಯಾಂಗ್‌ ಮನ್ – ಹತ್ತನೇ ತರಗತಿ ಅಥವಾ ಏಳನೇ ತರಗತಿಯಲ್ಲಿ ತೇರ್ಗಡೆ ಹೊಂದಿ, ಗ್ಯಾಂಗ್‌ ಮನ್ ಕಾರ್ಯದಲ್ಲಿ ಕನಿಷ್ಠ ಐದು ವರ್ಷಗಳ ಅನುಭವ ಹೊಂದಿರಬೇಕು.

ಸೇವಕ, ಸ್ವೀಪರ್, ಹೆಲ್ಪರ್ – ಏಳನೇ ತರಗತಿಯಲ್ಲಿ ತೇರ್ಗಡೆ ಹೊಂದಿರಬೇಕು.

ಉದ್ಯೋಗ ಮಾಹಿತಿ : ಮೆಸ್ಕಾಂ ನೇಮಕಾತಿ 2023

ವಯೋಮಾನ : ಅಭ್ಯರ್ಥಿಗಳು ಕನಿಷ್ಠ 18 ವರ್ಷ ಪೂರೈಸಿರಬೇಕು.
• ಎಸ್ಸಿ, ಎಸ್ಟಿ, ಪ್ರವರ್ಗ 1 ಅಭ್ಯರ್ಥಿಗಳು – ಗರಿಷ್ಠ 40 ವರ್ಷ
• ಹಿಂದುಳಿದ ವರ್ಗದ ಅಭ್ಯರ್ಥಿಗಳು – ಗರಿಷ್ಠ 38 ವರ್ಷ
• ಸಾಮಾನ್ಯ ಅಭ್ಯರ್ಥಿಗಳು – ಗರಿಷ್ಠ 35 ವರ್ಷ

ಆಯ್ಕೆ ವಿಧಾನ : ಅರ್ಹತಾ ಪರೀಕ್ಷೆ ಹಾಗೂ ಸಂದರ್ಶನ ನಡೆಸಿ ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಕೆಯ ವಿಧಾನ : ಅಭ್ಯರ್ಥಿಯು ಈ ಹುದ್ದೆಗೆ ಆಫ್‌ಲೈನ್‌ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು.
ಹಂತ 1 : ಆಫ್‌ಲೈನ್‌ ಮೂಲಕ ಅರ್ಜಿ ಸಲ್ಲಿಸುವ ಮೊದಲು ವಿಶ್ವವಿದ್ಯಾನಿಲಯವು ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 2 : ವಿಶ್ವವಿದ್ಯಾನಿಲಯದ ವೆಬ್‌ಸೈಟ್ ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ ಅಪ್ಲಿಕೇಷನ್ ಫಾರ್ಮ್ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಪ್ಲಿಕೇಷನ್ ಡೌನ್ಲೋಡ್ ಮಾಡಿಕೊಳ್ಳಿ.
ಹಂತ 3 : ಅಪ್ಲಿಕೇಷನ್ ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಪುನಃ ಒಮ್ಮೆ ಪರಿಶೀಲಿಸಿ.
ಹಂತ 4 : ಅಪ್ಲಿಕೇಷನ್ ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಲಗತ್ತಿಸಲು ಸೂಚಿಸಿದ್ದರೆ, ಅವುಗಳನ್ನು ಲಗತ್ತಿಸಿ (ಅಗತ್ಯವಿದ್ದರೆ ಮಾತ್ರ).
ಹಂತ 5 : ಕೊನೆಯದಾಗಿ, ಅಭ್ಯರ್ಥಿಗೆ ಅರ್ಜಿ ಶುಲ್ಕ ಪಾವತಿಸಲು ಸೂಚಿಸಿದ್ದರೆ ಶುಲ್ಕ ಪಾವತಿಸಿ, ಭರ್ತಿ ಮಾಡಿದ ಅರ್ಜಿಯನ್ನು ಎಂಟುಯ ಸೆಟ್‌ಗಳಲ್ಲಿ ಈ ಕೆಳಗಡೆ ನೀಡಲಾದ ಕಚೇರಿಯ ವಿಳಾಸಕ್ಕೆ ನೋಂದಣಿ ಅಂಚೆ ಅಥವಾ ಖುದ್ದಾಗಿ ಹಾಜರಾಗಿ ಸಲ್ಲಿಸಬೇಕು.

ಅರ್ಜಿ ಸಲ್ಲಿಸುವ ವಿಳಾಸ : ಕುಲಸಚಿವರು, ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ, ಮುಕ್ತ ಗಂಗೋತ್ರಿ, ಮೈಸೂರು-570 006

ನಿಗದಿತ ಅರ್ಜಿ ಶುಲ್ಕದ ವಿವರ :
• ಎಸ್ಸಿ, ಎಸ್ಟಿ, ಪ್ರವರ್ಗ 1ರ ಅಭ್ಯರ್ಥಿಗಳು – ರೂ. 500
• ಉಳಿದ ಅಭ್ಯರ್ಥಿಗಳು – ರೂ. 1000

ಶುಲ್ಕ ಪಾವತಿಸುವ ವಿಧಾನ : ನಿಗದಿತ ಅರ್ಜಿ ಶುಲ್ಕವನ್ನು ವಿಶ್ವವಿದ್ಯಾನಿಲಯದ ಬ್ಯಾಂಕ್ ಖಾತೆ A/c No: 50100316845801, IFSC Code: HDFC0003733, HDFC Bank, Kuvempunagara Branch, Mysuru,ಗೆ ಆನ್‌ಲೈನ್ (Online) ಮೂಲಕ ಪಾವತಿಸಿ, ಅದರ ರಶೀದಿಯನ್ನು ಅರ್ಜಿಯ ಜೊತೆಯಲ್ಲಿ ಲಗತ್ತಿಸಿ, ಅರ್ಜಿಯೊಂದಿಗೆ ಸಲ್ಲಿಸಬೇಕು.

ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿದ ದಿನಾಂಕದ ವಿವರ :
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ಆಗಸ್ಟ್ 16, 2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಸೆಪ್ಟೆಂಬರ್ 30, 2023

KSOU Recruitment 2023 : Important Links

NOTIFICATION & APPLICATION FORM CLICK HERE
Telegram Join Link Click Here

ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.

Leave a Comment