KSP Civil Police Constable Recruitment 2022 : ಕರ್ನಾಟಕ ರಾಜ್ಯದ, ಪೊಲೀಸ್ ಇಲಾಖೆಯಲ್ಲಿ ಅಗತ್ಯವಿರುವ ಪೊಲೀಸ್ ಕಾನ್ಸ್‌ಟೇಬಲ್ ಸಿವಿಲ್ (ಪುರುಷ ಮತ್ತು ಮಹಿಳಾ) ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ವೇತನ, ಆಯ್ಕೆ ವಿಧಾನ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.
KSP Civil Police Constable Recruitment 2022 : Details of Vacancies
ಹುದ್ದೆ : ಪೊಲೀಸ್ ಕಾನ್ಸ್‌ಟೇಬಲ್ (ಸಿವಿಲ್) (ಪುರುಷ ಮತ್ತು ಮಹಿಳಾ)
ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಕರ್ನಾಟಕದಲ್ಲಿ ಕರ್ತವ್ಯ ನಿರ್ವಹಿಸಬೇಕು.
ಖಾಲಿಯಿರುವ ಹುದ್ದೆಗಳ ಸಂಖ್ಯೆ : ಒಟ್ಟು 1137+454 (HK) ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ನಿಗದಿಪಡಿಸಿರುವ ಶೈಕ್ಷಣಿಕ ಅರ್ಹತೆ : ಅಭ್ಯರ್ಥಿಗಳು ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ ಪಿಯುಸಿ ಅಥವಾ ತತ್ಸಮಾನ ವಿದ್ಯಾರ್ಹತೆಯನ್ನು ನಿಗದಿಪಡಿಸಿರುವ ಕೊನೆಯ ದಿನಾಂಕ 21/11/2022ಕ್ಕೆ ಹೊಂದಿರಬೇಕು.
ಉದ್ಯೋಗ ಮಾಹಿತಿ : ಗ್ರಾಮ ಪಂಚಾಯಿತಿಯಲ್ಲಿ ಬಿಲ್ ಕಲೆಕ್ಟರ್, ಡಾಟಾ ಎಂಟ್ರಿ ಆಪರೇಟರ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ
ವೇತನ : ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 23,500 ರಿಂದ ರೂ. 47,650 ಶ್ರೇಣಿಯಲ್ಲಿ ವೇತನ ನೀಡಲಾಗುತ್ತದೆ.
ವಯೋಮಾನ : ಅಭ್ಯರ್ಥಿಗೆ ಕನಿಷ್ಠ 19 ವರ್ಷ ವಯಸ್ಸಾಗಿರಬೇಕು ಹಾಗೂ
• ಪ.ಜಾತಿ ಮತ್ತು ಇತರೆ ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ – ಗರಿಷ್ಠ 27 ವರ್ಷ ಗರಿಷ್ಠ 29 ವರ್ಷ
• ಇತರೆ ಅಭ್ಯರ್ಥಿಗಳಿಗೆ – ಗರಿಷ್ಠ 25 ವರ್ಷ ಗರಿಷ್ಠ 27 ವರ್ಷ
• ಕರ್ನಾಟಕ ಅರಣ್ಯ ಪ್ರದೇಶಗಳಲ್ಲಿ ವಾಸಿಸುತ್ತಿರುವ ಬುಡಕಟ್ಟು ಅಭ್ಯರ್ಥಿಗಳಿಗೆ – 30 ವರ್ಷ 32 ವರ್ಷ
ಉದ್ಯೋಗ ಮಾಹಿತಿ : ಕರ್ನಾಟಕ ಲೋಕಸೇವಾ ಆಯೋಗದಿಂದ ಡಾಟಾ ಎಂಟ್ರಿ ಆಪರೇಟರ್ ಹುದ್ದೆಗಳ ನೇಮಕಾತಿ 2022
ಆಯ್ಕೆ ವಿಧಾನ : ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ ನಡೆಸಿ, ಲಿಖಿತ ಪರೀಕ್ಷೆಯಲ್ಲಿ 1:5ರ ಅನುಪಾತದಡಿ ಅರ್ಹಗೊಂಡ ಅಭ್ಯರ್ಥಿಗಳನ್ನು ದೇಹದಾರ್ಢ್ಯತೆ ಪರೀಕ್ಷೆ, ಸಹಿಷ್ಣುತೆ ಪರೀಕ್ಷೆ, ಹಾಗೂ ವೈದ್ಯಕೀಯ ಪರೀಕ್ಷೆ ನಡೆಸಿ ಹುದ್ದೆಗೆ ಆಯ್ಕೆ ಮಾಡಲಾಗುತ್ತದೆ.
ಕರ್ನಾಟಕ ಪೊಲೀಸ್ ಇಲಾಖೆಯಲ್ಲಿ ಖಾಲಿಯಿರುವ ಪೊಲೀಸ್ ಕಾನ್ಸ್‌ಟೇಬಲ್ ಸಿವಿಲ್ ಹುದ್ದೆಗೆ ಅರ್ಜಿ ಸಲ್ಲಿಕೆಯ ವಿಧಾನ :
• ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕವೇ ಅರ್ಜಿಯನ್ನು ಸಲ್ಲಿಸಬೇಕು.
• ಅಭ್ಯರ್ಥಿಗಳು ಕರ್ನಾಟಕ ಪೊಲೀಸ್ ಇಲಾಖೆಯ ಅಧಿಕೃತ ವೆಬ್‌ಸೈಟ್ ವಿಳಾಸಕ್ಕೆ ಭೇಟಿ ನೀಡಿ, ಆನ್‌ಲೈನ್ ಅರ್ಜಿಯಲ್ಲಿ ಹುದ್ದೆಗೆ ಅಗತ್ಯವಿರುವ ಎಲ್ಲಾ ಮಾಹಿತಿಯನ್ನು ಭರ್ತಿ ಮಾಡಿ ( ಉದಾಹರಣೆಗೆ : ಅಭ್ಯರ್ಥಿಯ ಹೆಸರು, ವಿದ್ಯಾರ್ಹತೆ, ಇಮೇಲ್ ವಿಳಾಸ ಇತ್ಯಾದಿ) ನಂತರ ನಿಗದಿತ ಅರ್ಜಿ ಶುಲ್ಕ ಪಾವತಿಸಿ ಅರ್ಜಿಯನ್ನು ಸಲ್ಲಿಸಬೇಕು.
ನಿಗದಿತ ಅರ್ಜಿ ಶುಲ್ಕದ ವಿವರ :
• ಸಾಮಾನ್ಯ ವರ್ಗ, ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ ರೂ. 400
• ಎಸ್ಸಿ, ಎಸ್ಟಿ, ಪ್ರವರ್ಗ 1ರ ಅಭ್ಯರ್ಥಿಗಳಿಗೆ ರೂ. 200
ಶುಲ್ಕ ಪಾವತಿಸುವ ವಿಧಾನ : ನಿಗದಿತ ಅರ್ಜಿ ಶುಲ್ಕವನ್ನು ಆನ್‌ಲೈನ್ ಮುಖಾಂತರ ಪಾವತಿಸಬಹುದು ಹಾಗೂ ಚಲನ್ ಡೌನ್ಲೋಡ್ ಮಾಡಿಕೊಂಡು ಕೆನರಾ ಬ್ಯಾಂಕ್ ಮತ್ತು ಸ್ಥಳೀಯ ಅಂಚೆ ಕಚೇರಿಗಳಲ್ಲಿ ಪಾವತಿಸಬಹುದು.
ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿರುವ ದಿನಾಂಕದ ವಿವರ :
ಅರ್ಜಿ ಸಲ್ಲಿಕೆಗೆ ಪ್ರಾರಂಭದ ದಿನಾಂಕ : ಅಕ್ಟೋಬರ್ 20, 2022
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ : ನವೆಂಬರ್ 21, 2022
ಶುಲ್ಕ ಪಾವತಿಸಲು ಕೊನೆಯ ದಿನಾಂಕ : ನವೆಂಬರ್ 23, 2022
KSP Civil Police Constable Recruitment 2022 : Important Links
Notification | Click Here |
Notification (HK) | Click Here |
2Yrs Age Relaxation Order | Click Here |
Apply Online | Click Here |
Telegram Join Link | Click Here |
ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.