
KSP Civil Police Constable Recruitment 2026 : ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಅಗತ್ಯವಿರುವ ಪೊಲೀಸ್ ಕಾನ್ಸ್‌ಟೇಬಲ್ (ಸಿವಿಲ್) ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ವೇತನ, ಆಯ್ಕೆ ವಿಧಾನ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.
KSP Civil Police Constable Recruitment 2026 : Details of Vacancies
ಹುದ್ದೆ :
ಪೊಲೀಸ್ ಕಾನ್ಸ್‌ಟೇಬಲ್ (ಸಿವಿಲ್)
ಕರ್ತವ್ಯ ಸ್ಥಳ :
ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಕರ್ನಾಟಕದಲ್ಲಿ ಕರ್ತವ್ಯ ನಿರ್ವಹಿಸಬೇಕು.
ಖಾಲಿಯಿರುವ ಹುದ್ದೆಗಳ ಸಂಖ್ಯೆ :
ಒಟ್ಟು 3991 ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
| ವೃಂದ | ಹುದ್ದೆಗಳ ಸಂಖ್ಯೆ |
| ಮಿಕ್ಕುಳಿದ ವೃಂದ | 3395 |
| ಕಲ್ಯಾಣ ಕರ್ನಾಟಕ ವೃಂದ | 596 |
ನಿಗದಿಪಡಿಸಿರುವ ಶೈಕ್ಷಣಿಕ ಅರ್ಹತೆ :
ಅಭ್ಯರ್ಥಿಗಳು ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ ಪಿಯುಸಿ ಅಥವಾ ತತ್ಸಮಾನ ವಿದ್ಯಾರ್ಹತೆಯನ್ನು ಹೊಂದಿರಬೇಕು.
ಉದ್ಯೋಗ ಮಾಹಿತಿ : ಕೆಎಂಎಫ್ ನೇಮಕಾತಿ 2026
ವಯೋಮಿತಿ :
ಅರ್ಜಿಗಳನ್ನು ಸ್ವೀಕರಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಕನಿಷ್ಠ 18 ವರ್ಷಗಳು ತುಂಬಿರತಕ್ಕದ್ದು ಹಾಗೂ ಈ ಕೆಳಗಿನಂತೆ ಗರಿಷ್ಠ ವಯೋಮಿತಿ ಮೀರಿರಬಾರದು.
ನೇರ ಪುರುಷ, ಮಹಿಳಾ ಮತ್ತು ತೃತೀಯ ಲಿಂಗ ಅಭ್ಯರ್ಥಿಗಳು –
- ಸಾಮಾನ್ಯ ಅರ್ಹತೆಯ ಅಭ್ಯರ್ಥಿಗಳಿಗೆ – ಗರಿಷ್ಠ 33 ವರ್ಷ
- ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ/ ಪ್ರವರ್ಗ -1 ಮತ್ತು ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ – ಗರಿಷ್ಠ 35 ವರ್ಷ
- ಕರ್ನಾಟಕ ಅರಣ್ಯ ಪ್ರದೇಶಗಳಲ್ಲಿ ವಾಸಿಸುತ್ತಿರುವ ಬುಡಕಟ್ಟು ಅಭ್ಯರ್ಥಿಗಳಿಗೆ – ಗರಿಷ್ಠ 38 ವರ್ಷ
ಸೇವಾನಿರತ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳು –
- ಸಾಮಾನ್ಯ ಅರ್ಹತೆಯ ಅಭ್ಯರ್ಥಿಗಳಿಗೆ – ಗರಿಷ್ಠ 38 ವರ್ಷ
- ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ/ ಪ್ರವರ್ಗ -1 ಮತ್ತು ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ – ಗರಿಷ್ಠ 40 ವರ್ಷ
ವೇತನ :
ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 37,500 ರಿಂದ ರೂ. 76,100 ಶ್ರೇಣಿಯಲ್ಲಿ ವೇತನ ನೀಡಲಾಗುತ್ತದೆ.
ಆಯ್ಕೆ ವಿಧಾನ :
- ಲಿಖಿತ ಪರೀಕ್ಷೆ (ಆಫ್‌ಲೈನ್-ಒಎಂಆರ್ ಮಾದರಿ)
- ದೇಹದಾರ್ಢ್ಯತೆ ಪರೀಕ್ಷೆ
- ಸಹಿಷ್ಣುತೆ ಪರೀಕ್ಷೆ
- ವೈದ್ಯಕೀಯ ಪರೀಕ್ಷೆ
ಲಿಖಿತ ಪರೀಕ್ಷೆ –

ದೇಹದಾರ್ಢ್ಯತೆ ಪರೀಕ್ಷೆ –

ಉದ್ಯೋಗ ಮಾಹಿತಿ : ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದಲ್ಲಿ ನೇಮಕಾತಿ 2026
ಅರ್ಜಿ ಸಲ್ಲಿಕೆಯ ವಿಧಾನ :
ಅಭ್ಯರ್ಥಿಯು ಈ ಹುದ್ದೆಗೆ ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು.
ಹಂತ 1 : ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 2 : ಇಲಾಖೆಯ ವೆಬ್‌ಸೈಟ್ ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ ಅಪ್ಲೈ ಆನ್‌ಲೈನ್ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಪ್ಲಿಕೇಷನ್ ತೆರೆದುಕೊಳ್ಳಿ.
ಹಂತ 3 : ಅಪ್ಲಿಕೇಷನ್ ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಮುಂದಿನ ಹಂತಕ್ಕೆ ತೆರಳುವ ಮುನ್ನ ಪುನಃ ಒಮ್ಮೆ ಪರಿಶೀಲಿಸಿ.
ಹಂತ 4 : ಅಪ್ಲಿಕೇಷನ್ ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಅಪ್ಲೋಡ್ ಮಾಡಲು ಸೂಚಿಸಿದ್ದರೆ, ಅವುಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಿ (ಅಗತ್ಯವಿದ್ದರೆ ಮಾತ್ರ).
ಹಂತ 5 : ಕೊನೆಯದಾಗಿ, ಅಭ್ಯರ್ಥಿಗೆ ಅರ್ಜಿ ಶುಲ್ಕ ಪಾವತಿಸಲು ಸೂಚಿಸಿದ್ದರೆ, ಶುಲ್ಕ ಪಾವತಿಸಿ ಅರ್ಜಿ ಸಲ್ಲಿಕೆ ಪೂರ್ಣಗೊಳಿಸಿ.
ನಿಗದಿತ ಅರ್ಜಿ ಶುಲ್ಕದ ವಿವರ :
- ಸಾಮಾನ್ಯ ಅರ್ಹತೆ, ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳು – ರೂ. 750
- ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರ 1, ಮಾಜಿ ಸೈನಿಕ, ತೃತೀಯ ಲಿಂಗ ಅಭ್ಯರ್ಥಿಗಳು – ರೂ. 500
ಶುಲ್ಕ ಪಾವತಿಸುವ ವಿಧಾನ :
ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಶುಲ್ಕ ಪಾವತಿಸಬಹುದು.
ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿರುವ ದಿನಾಂಕದ ವಿವರ :
- ಅರ್ಜಿ ಸಲ್ಲಿಕೆಗೆ ಪ್ರಾರಂಭದ ದಿನಾಂಕ : ಜೂನ್ 08, 2026
- ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ : ಜುಲೈ 03, 2026
- ಶುಲ್ಕ ಪಾವತಿಸಲು ಕೊನೆಯ ದಿನಾಂಕ : ಜುಲೈ 04, 2026
- ಲಿಖಿತ ಪರೀಕ್ಷೆ ದಿನಾಂಕ : ಆಗಸ್ಟ್ 02, 2026
KSP Civil Police Constable Recruitment 2026 : Important Links
| NOTIFICATION (RPC) | CLICK HERE |
| NOTIFICATION (KK) | CLICK HERE |
| APPLY ONLINE | CLICK HERE ಜೂನ್ 08 ರಿಂದ ಪ್ರಾರಂಭ |
| Telegram Join Link | Click Here |
| WhatsApp Group Link | Click Here |
ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.