KSP Police Constable Recruitment 2021 : 4000 ಪೊಲೀಸ್ ಕಾನ್ಸ್‌ಟೇಬಲ್‌ (ಸಿವಿಲ್) ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

KSP Police Constable Recruitment 2021 : ಕರ್ನಾಟಕ ಪೊಲೀಸ್ ಇಲಾಖೆಯಲ್ಲಿ ಅಗತ್ಯವಿರುವ ಪೊಲೀಸ್ ಕಾನ್ಸ್‌ಟೇಬಲ್‌ (ಸಿವಿಲ್) ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ವೇತನ, ಆಯ್ಕೆ ವಿಧಾನ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

KSP Police Constable Recruitment 2021 : Details of Vacancies

ಹುದ್ದೆ : ಪೊಲೀಸ್ ಕಾನ್ಸ್‌ಟೇಬಲ್‌ (ಸಿವಿಲ್) (ಪುರುಷ ಮತ್ತು ಮಹಿಳಾ)

ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಕರ್ನಾಟಕದಲ್ಲಿ ಕರ್ತವ್ಯ ನಿರ್ವಹಿಸಬೇಕು.

ಖಾಲಿಯಿರುವ ಹುದ್ದೆಗಳ ಸಂಖ್ಯೆ : ಒಟ್ಟು 4000 ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

KSP Police Constable Recruitment 2021 : 4000 ಪೊಲೀಸ್ ಕಾನ್ಸ್‌ಟೇಬಲ್‌ (ಸಿವಿಲ್) ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ವೇತನ : ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 23,500 ರಿಂದ ರೂ. 47,650 ಶ್ರೇಣಿಯಲ್ಲಿ ವೇತನ ನೀಡಲಾಗುತ್ತದೆ.

ವಯೋಮಾನ : ದಿನಾಂಕ 25 ಜೂನ್, 2021ಕ್ಕೆ ಅಭ್ಯರ್ಥಿಗೆ ಕನಿಷ್ಠ 19 ವರ್ಷ ವಯಸ್ಸಾಗಿರಬೇಕು ಹಾಗೂ ಪ.ಜಾತಿ/ಪ.ಪಂ/ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ ಗರಿಷ್ಠ 27 ವರ್ಷ, ಇತರೆ ಅಭ್ಯರ್ಥಿಗಳಿಗೆ ಗರಿಷ್ಠ 25 ವರ್ಷ ನಿಗದಿಪಡಿಸಲಾಗಿದೆ.

ನಿಗದಿಪಡಿಸಿರುವ ಶೈಕ್ಷಣಿಕ ಅರ್ಹತೆ : ಅಭ್ಯರ್ಥಿಗಳು ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ ಪಿಯುಸಿ ಅಥವಾ ತತ್ಸಮಾನ ವಿದ್ಯಾರ್ಹತೆಯನ್ನು ನಿಗದಿಪಡಿಸಿರುವ ಕೊನೆಯ ದಿನಾಂಕ 25/06/2021ಕ್ಕೆ ಹೊಂದಿರಬೇಕು.

ಉದ್ಯೋಗ ಮಾಹಿತಿ : Western Railway Recruitment 2021 | 3591 ಅಪ್ರೆಂಟಿಸ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ಆಯ್ಕೆ ವಿಧಾನ : ಲಿಖಿತ ಪರೀಕ್ಷೆ, ದೇಹದಾರ್ಢ್ಯತೆ ಪರೀಕ್ಷೆ, ಸಹಿಷ್ಣುತೆ ಪರೀಕ್ಷೆ, ಹಾಗೂ ವೈದ್ಯಕೀಯ ಪರೀಕ್ಷೆ ನಡೆಸಿ ಅಭ್ಯರ್ಥಿಗಳನ್ನು ಹುದ್ದೆಗೆ ಆಯ್ಕೆ ಮಾಡಲಾಗುತ್ತದೆ

ಕರ್ನಾಟಕ ಪೊಲೀಸ್ ಇಲಾಖೆಯಲ್ಲಿ ಖಾಲಿಯಿರುವ ಪೊಲೀಸ್ ಕಾನ್ಸ್‌ಟೇಬಲ್‌ (ಸಿವಿಲ್) ಹುದ್ದೆಗೆ ಅರ್ಜಿ ಸಲ್ಲಿಕೆಯ ವಿಧಾನ :
• ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್‌ಲೈನ್‌ ಮೂಲಕವೇ ಅರ್ಜಿಯನ್ನು ಸಲ್ಲಿಸಬೇಕು.
• ಅಭ್ಯರ್ಥಿಗಳು ಕರ್ನಾಟಕ ಪೊಲೀಸ್ ಇಲಾಖೆಯ ಅಧಿಕೃತ ವೆಬ್‌ಸೈಟ್ ವಿಳಾಸಕ್ಕೆ ಭೇಟಿ ನೀಡಿ, ಆನ್‌ಲೈನ್‌ ಅರ್ಜಿಯಲ್ಲಿ ಹುದ್ದೆಗೆ ಅಗತ್ಯವಿರುವ ಎಲ್ಲಾ ಮಾಹಿತಿಯನ್ನು ಭರ್ತಿ ಮಾಡಿ ( ಉದಾಹರಣೆಗೆ : ಅಭ್ಯರ್ಥಿಯ ಹೆಸರು, ವಿದ್ಯಾರ್ಹತೆ, ಇಮೇಲ್ ವಿಳಾಸ ಇತ್ಯಾದಿ) ನಂತರ ನಿಗದಿತ ಅರ್ಜಿ ಶುಲ್ಕ ಪಾವತಿಸಿ ಅರ್ಜಿಯನ್ನು ಸಲ್ಲಿಸಬೇಕು.

ನಿಗದಿತ ಅರ್ಜಿ ಶುಲ್ಕದ ವಿವರ :
• ಸಾಮಾನ್ಯ ವರ್ಗ, ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ ರೂ. 400
• ಎಸ್ಸಿ, ಎಸ್ಟಿ, ಪ್ರವರ್ಗ 1ರ ಅಭ್ಯರ್ಥಿಗಳಿಗೆ ರೂ. 200

ಶುಲ್ಕ ಪಾವತಿಸುವ ವಿಧಾನ :
ನಿಗದಿತ ಶುಲ್ಕವನ್ನು ನಗದು ಅಥವಾ ಆನ್‌ಲೈನ್‌ ರೂಪದಲ್ಲಿ ಸ್ಥಳೀಯ ಅಂಚೆ ಕಛೇರಿಗಳಲ್ಲಿ ಅಥವಾ ಹೆಚ್.ಡಿ.ಎಫ್.ಸಿ ಬ್ಯಾಂಕಿನ ಅಧಿಕೃತ ಶಾಖೆಗಳಲ್ಲಿ ಪಾವತಿಸಬೇಕು

ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿರುವ ದಿನಾಂಕದ ವಿವರ :
ಅರ್ಜಿ ಸಲ್ಲಿಕೆಗೆ ಪ್ರಾರಂಭದ ದಿನಾಂಕ : ಮೇ 25, 2021
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ : ಜೂನ್ 25, 2021 ಜುಲೈ 12, 2021
ಶುಲ್ಕ ಪಾವತಿಸಲು ಕೊನೆಯ ದಿನಾಂಕ : ಜೂನ್ 28, 2021 ಜುಲೈ 14, 2021

KSP Police Constable Recruitment 2021 : Important Links

ಅಧಿಸೂಚನೆ : Click Here
ಅರ್ಜಿ ಸಲ್ಲಿಸಿ : Click Here

ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.