KSP Recruitment 2021 : 250 ಅನುಯಾಯಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

KSP Recruitment 2021 : ಕರ್ನಾಟಕ ರಾಜ್ಯದ ಮೀಸಲು ಪೊಲೀಸ್ ಪಡೆಗಳಲ್ಲಿ ಅಗತ್ಯವಿರುವ ಅನುಯಾಯಿ ಹುದ್ದೆಗಳ ನೇರ ನೇಮಕಾತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ವೇತನ, ಆಯ್ಕೆ ವಿಧಾನ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

KSP Recruitment 2021 : Details of Vacancies

ಹುದ್ದೆ : ಅನುಯಾಯಿ (ಪುರುಷ)

ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಕರ್ನಾಟಕದಲ್ಲಿ ಕರ್ತವ್ಯ ನಿರ್ವಹಿಸಬೇಕು.

ಖಾಲಿಯಿರುವ ಹುದ್ದೆಗಳ ಸಂಖ್ಯೆ : ಒಟ್ಟು 250 ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಅನುಯಾಯಿ ಹುದ್ದೆಗಳುಹುದ್ದೆಗಳ ಸಂಖ್ಯೆ
ಅಡುಗೆಯವರು81
ಕ್ಷೌರಿಕ45
ಧೋಭಿ53
ಕಸ ಗುಡಿಸುವವರು58
ನೀರು ತರುವವರು13

ವೇತನ : ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 18,600 ರಿಂದ ರೂ. 32,600 ಶ್ರೇಣಿಯಲ್ಲಿ ವೇತನ ನೀಡಲಾಗುತ್ತದೆ.

ವಯೋಮಾನ : ದಿನಾಂಕ 30 ಆಗಸ್ಟ್, 2021ಕ್ಕೆ ಅಭ್ಯರ್ಥಿಗೆ ಕನಿಷ್ಠ 18 ವರ್ಷ ವಯಸ್ಸಾಗಿರಬೇಕು ಹಾಗೂ ಪ.ಜಾತಿ/ಪ.ಪಂ/ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ ಗರಿಷ್ಠ 35 ವರ್ಷ, ಇತರೆ ಅಭ್ಯರ್ಥಿಗಳಿಗೆ ಗರಿಷ್ಠ 30 ವರ್ಷ ನಿಗದಿಪಡಿಸಲಾಗಿದೆ.

ನಿಗದಿಪಡಿಸಿರುವ ಶೈಕ್ಷಣಿಕ ಅರ್ಹತೆ : ಅಭ್ಯರ್ಥಿಗಳು ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ ಎಸ್.ಎಸ್.ಎಲ್.ಸಿ ಅಥವಾ ತತ್ಸಮಾನ ವಿದ್ಯಾರ್ಹತೆಯನ್ನು ನಿಗದಿಪಡಿಸಿರುವ ಕೊನೆಯ ದಿನಾಂಕ 30/08/2021ಕ್ಕೆ ಹೊಂದಿರಬೇಕು.

ಉದ್ಯೋಗ ಮಾಹಿತಿ : RTO Recruitment Notification 2021

ಆಯ್ಕೆ ವಿಧಾನ : ಸಹಿಷ್ಣುತೆ ಪರೀಕ್ಷೆ, ವೃತ್ತಿಪರ ಪರೀಕ್ಷೆ, ದೇಹದಾರ್ಢತೆ ಪರೀಕ್ಷೆ ಹಾಗೂ ವೈದ್ಯಕೀಯ ಪರೀಕ್ಷೆ ನಡೆಸಿ ಅಭ್ಯರ್ಥಿಗಳನ್ನು ಹುದ್ದೆಗೆ ಆಯ್ಕೆ ಮಾಡಲಾಗುತ್ತದೆ.

ಕರ್ನಾಟಕ ಪೊಲೀಸ್ ಇಲಾಖೆಯಲ್ಲಿ ಖಾಲಿಯಿರುವ ಅನುಯಾಯಿ ಹುದ್ದೆಗೆ ಅರ್ಜಿ ಸಲ್ಲಿಕೆಯ ವಿಧಾನ :
• ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್‌ಲೈನ್‌ ಮೂಲಕವೇ ಅರ್ಜಿಯನ್ನು ಸಲ್ಲಿಸಬೇಕು.
• ಅಭ್ಯರ್ಥಿಗಳು ಕರ್ನಾಟಕ ಪೊಲೀಸ್ ಇಲಾಖೆಯ ಅಧಿಕೃತ ವೆಬ್‌ಸೈಟ್ ವಿಳಾಸಕ್ಕೆ ಭೇಟಿ ನೀಡಿ, ಆನ್‌ಲೈನ್‌ ಅರ್ಜಿಯಲ್ಲಿ ಹುದ್ದೆಗೆ ಅಗತ್ಯವಿರುವ ಎಲ್ಲಾ ಮಾಹಿತಿಯನ್ನು ಭರ್ತಿ ಮಾಡಿ ( ಉದಾಹರಣೆಗೆ : ಅಭ್ಯರ್ಥಿಯ ಹೆಸರು, ವಿದ್ಯಾರ್ಹತೆ, ಇಮೇಲ್ ವಿಳಾಸ ಇತ್ಯಾದಿ) ನಂತರ ನಿಗದಿತ ಅರ್ಜಿ ಶುಲ್ಕ ಪಾವತಿಸಿ ಅರ್ಜಿಯನ್ನು ಸಲ್ಲಿಸಬೇಕು.

ನಿಗದಿತ ಅರ್ಜಿ ಶುಲ್ಕದ ವಿವರ :
• ಸಾಮಾನ್ಯ ವರ್ಗ, ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ ರೂ. 250
• ಎಸ್ಸಿ, ಎಸ್ಟಿ, ಪ್ರವರ್ಗ 1ರ ಅಭ್ಯರ್ಥಿಗಳಿಗೆ ರೂ. 100

ಶುಲ್ಕ ಪಾವತಿಸುವ ವಿಧಾನ : ನಿಗದಿತ ಶುಲ್ಕವನ್ನು ನಗದು ಅಥವಾ ಆನ್‌ಲೈನ್‌ ರೂಪದಲ್ಲಿ ಸ್ಥಳೀಯ ಅಂಚೆ ಕಛೇರಿಗಳಲ್ಲಿ ಅಥವಾ ಹೆಚ್.ಡಿ.ಎಫ್.ಸಿ ಬ್ಯಾಂಕಿನ ಅಧಿಕೃತ ಶಾಖೆಗಳಲ್ಲಿ ಪಾವತಿಸಬೇಕು

ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿರುವ ದಿನಾಂಕದ ವಿವರ :
ಅರ್ಜಿ ಸಲ್ಲಿಕೆಗೆ ಪ್ರಾರಂಭದ ದಿನಾಂಕ : ಜುಲೈ 30, 2021
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ : ಆಗಸ್ಟ್ 30, 2021
ಶುಲ್ಕ ಪಾವತಿಸಲು ಕೊನೆಯ ದಿನಾಂಕ : ಸೆಪ್ಟೆಂಬರ್ 01, 2021

KSP Recruitment 2021 : Important Links

ಅಧಿಸೂಚನೆ : Click Here
ಅರ್ಜಿ ಸಲ್ಲಿಸಿ : Click Here

ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.