KSP Recruitment 2021 – Apply Online for 206 Scene of Crime Officer Post

KSP Recruitment 2021 : ಕರ್ನಾಟಕ ರಾಜ್ಯ ನ್ಯಾಯ ವಿಜ್ಞಾನ ಪ್ರಯೋಗಾಲಯ ಮತ್ತು ಪ್ರಾದೇಶಿಕ ನ್ಯಾಯ ವಿಜ್ಞಾನ ಪ್ರಯೋಗಾಲಯಗಳಲ್ಲಿ ಖಾಲಿ ಇರುವ ಅಪರಾಧ ಸ್ಥಳ ಪರಿಶೀಲನಾ ಅಧಿಕಾರಿ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ವೇತನ, ಆಯ್ಕೆ ವಿಧಾನ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

KSP Recruitment 2021 : Details of Vacancies

ಹುದ್ದೆ : ಅಪರಾಧ ಸ್ಥಳ ಪರಿಶೀಲನಾ ಅಧಿಕಾರಿ (ಸೀನ್ ಆಫ್ ಕ್ರೈಂ ಆಫೀಸರ್) (SOCO)

ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಕರ್ನಾಟಕದಲ್ಲಿ ಕೆಲಸ ನಿರ್ವಹಿಸಬೇಕು.

ಖಾಲಿಯಿರುವ ಹುದ್ದೆಗಳ ಸಂಖ್ಯೆ : ಒಟ್ಟು 206 ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಹುದ್ದೆಯ ಹೆಸರುಮಿಕ್ಕುಳಿದ ವೃಂದಸ್ಥಳೀಯ ವೃಂದ
ಅಪರಾಧ ಸ್ಥಳ ಪರಿಶೀಲನಾ ಅಧಿಕಾರಿ17828

ವೇತನ : ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 37,900 ರಿಂದ ರೂ. 70,850 ಶ್ರೇಣಿಯಲ್ಲಿ ವೇತನ ನೀಡಲಾಗುತ್ತದೆ.

ವಯೋಮಾನ : ದಿನಾಂಕ 15 ಜನವರಿ, 2022ಕ್ಕೆ ಅಭ್ಯರ್ಥಿಗೆ ಕನಿಷ್ಠ 21 ವರ್ಷ ವಯಸ್ಸಾಗಿರಬೇಕು ಹಾಗೂ ಪ.ಜಾತಿ/ಪ.ಪಂ/ಪ್ರವರ್ಗ1 ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷ, ಒಬಿಸಿ ಅಭ್ಯರ್ಥಿಗಳಿಗೆ ಗರಿಷ್ಠ 38 ವರ್ಷ, ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ಗರಿಷ್ಠ 35 ವರ್ಷ ನಿಗದಿಪಡಿಸಲಾಗಿದೆ.

ನಿಗದಿಪಡಿಸಿರುವ ಶೈಕ್ಷಣಿಕ ಅರ್ಹತೆ :
• ಕಾನೂನಿನ ರೀತ್ಯಾ ಸ್ಥಾಪಿತವಾದ ವಿಶ್ವವಿದ್ಯಾನಿಲಯದಿಂದ ವಿಧಿ ವಿಜ್ಞಾನ ವಿಷಯದಲ್ಲಿ ಶೇಕಡಾ 55 ರಷ್ಟು ಅಂಕಗಳೊಂದಿಗೆ ಪದವಿಯನ್ನು ಹೊಂದಿರಬೇಕು, ಅಥವಾ
• ಕಾನೂನಿನ ರೀತ್ಯಾ ಸ್ಥಾಪಿತವಾದ ವಿಶ್ವವಿದ್ಯಾನಿಲಯದಿಂದ ವಿಜ್ಞಾನ ವಿಷಯದಲ್ಲಿ ಕನಿಷ್ಠ ಶೇಕಡ 55 ರಷ್ಟು ಅಂಕಗಳೊಂದಿಗೆ ಪದವಿಯನ್ನು ಹೊಂದಿರಬೇಕು ಜೊತೆಗೆ ಮಾನ್ಯತೆ ಪಡೆದ ಸಂಸ್ಥೆಯಿಂದ ವಿಧಿ ವಿಜ್ಞಾನ ವಿಷಯದಲ್ಲಿ ಕನಿಷ್ಠ ಶೇಕಡ 55 ರಷ್ಟು ಅಂಕಗಳೊಂದಿಗೆ 01 ವರ್ಷ ಡಿಪ್ಲೋಮಾವನ್ನು ಹೊಂದಿರಬೇಕು.

ಉದ್ಯೋಗ ಮಾಹಿತಿ : ಶಿವಮೊಗ್ಗ ಜಿಲ್ಲಾ ನ್ಯಾಯಾಲಯದಲ್ಲಿ ಆದೇಶ ಜಾರಿಕಾರ ಹುದ್ದೆಗಳ ನೇರ ನೇಮಕಾತಿ

ಆಯ್ಕೆ ವಿಧಾನ : ಲಿಖಿತ ಪರೀಕ್ಷೆ ನಡೆಸಿ ಅಭ್ಯರ್ಥಿಗಳನ್ನು ಹುದ್ದೆಗೆ ಆಯ್ಕೆ ಮಾಡಲಾಗುತ್ತದೆ

ಅಪರಾಧ ಸ್ಥಳ ಪರಿಶೀಲನಾ ಅಧಿಕಾರಿ ಹುದ್ದೆಗೆ ಅರ್ಜಿ ಸಲ್ಲಿಕೆಯ ವಿಧಾನ :
• ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್‌ಲೈನ್‌ ಮೂಲಕವೇ ಅರ್ಜಿಯನ್ನು ಸಲ್ಲಿಸಬೇಕು.
• ಅಭ್ಯರ್ಥಿಗಳು ಕರ್ನಾಟಕ ಪೊಲೀಸ್ ಇಲಾಖೆಯ ಅಧಿಕೃತ ವೆಬ್‌ಸೈಟ್ ವಿಳಾಸಕ್ಕೆ ಭೇಟಿ ನೀಡಿ, ಆನ್‌ಲೈನ್‌ ಅರ್ಜಿಯಲ್ಲಿ ಹುದ್ದೆಗೆ ಅಗತ್ಯವಿರುವ ಎಲ್ಲಾ ಮಾಹಿತಿಯನ್ನು ಭರ್ತಿ ಮಾಡಿ ( ಉದಾಹರಣೆಗೆ : ಅಭ್ಯರ್ಥಿಯ ಹೆಸರು, ವಿದ್ಯಾರ್ಹತೆ, ಇಮೇಲ್ ವಿಳಾಸ ಇತ್ಯಾದಿ) ನಂತರ ನಿಗದಿತ ಅರ್ಜಿ ಶುಲ್ಕ ಪಾವತಿಸಿ ಅರ್ಜಿಯನ್ನು ಸಲ್ಲಿಸಬೇಕು.

ನಿಗದಿತ ಅರ್ಜಿ ಶುಲ್ಕದ ವಿವರ :
• ಸಾಮಾನ್ಯ ವರ್ಗ, ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ ರೂ. 500
• ಎಸ್ಸಿ, ಎಸ್ಟಿ, ಪ್ರವರ್ಗ 1ರ ಅಭ್ಯರ್ಥಿಗಳಿಗೆ ರೂ. 250

ಶುಲ್ಕ ಪಾವತಿಸುವ ವಿಧಾನ : ನಿಗದಿತ ಶುಲ್ಕವನ್ನು ನಗದು ಅಥವಾ ಆನ್‌ಲೈನ್‌ ರೂಪದಲ್ಲಿ ಸ್ಥಳೀಯ ಅಂಚೆ ಕಛೇರಿಗಳಲ್ಲಿ ಅಥವಾ ಹೆಚ್.ಡಿ.ಎಫ್.ಸಿ ಬ್ಯಾಂಕಿನ ಅಧಿಕೃತ ಶಾಖೆಗಳಲ್ಲಿ ಪಾವತಿಸಬೇಕು

ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿರುವ ದಿನಾಂಕದ ವಿವರ :
ಅರ್ಜಿ ಸಲ್ಲಿಕೆಗೆ ಪ್ರಾರಂಭದ ದಿನಾಂಕ : ಡಿಸೆಂಬರ್ 17, 2021
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ : ಜನವರಿ 15, 2022
ಶುಲ್ಕ ಪಾವತಿಸಲು ಕೊನೆಯ ದಿನಾಂಕ : ಜನವರಿ 18, 2021

KSP Recruitment 2021 : Important Links

ಅಧಿಸೂಚನೆ : Click Here
ಅರ್ಜಿ ಸಲ್ಲಿಸಿ : Click Here

ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.

Leave a Comment