KSP Recruitment 2021 : 545 ಪೊಲೀಸ್ ಸಬ್‌ ಇನ್ಸ್‌ಪೆಕ್ಟರ್ (ಸಿವಿಲ್) ಹುದ್ದೆಗಳ ಭರ್ತಿ

KSP Recruitment 2021 : ಕರ್ನಾಟಕ ಪೊಲೀಸ್ ಇಲಾಖೆಯಲ್ಲಿ ಖಾಲಿಯಿರುವ ಪೊಲೀಸ್ ಸಬ್‌ ಇನ್ಸ್‌ಪೆಕ್ಟರ್ (ಸಿವಿಲ್) ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ವಯೋಮಾನ, ಆಯ್ಕೆ ವಿಧಾನ ವಿಧಾನ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

KSP Recruitment 2021 : Details of Vacancies

ಹುದ್ದೆ :
ಪೊಲೀಸ್ ಸಬ್‌ ಇನ್ಸ್‌ಪೆಕ್ಟರ್ (ಸಿವಿಲ್) (ಪುರುಷ ಮತ್ತು ಮಹಿಳಾ)

ಕರ್ತವ್ಯ ಸ್ಥಳ :
ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಕರ್ನಾಟಕದಲ್ಲಿ ಕೆಲಸ ನಿರ್ವಹಿಸಬೇಕು.

ಖಾಲಿಯಿರುವ ಹುದ್ದೆಗಳ ಸಂಖ್ಯೆ :
ಒಟ್ಟು 545 ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ವೇತನ :
ಆಯ್ಕೆಯಾದ ಅಭ್ಯರ್ಥಿಗಳ ಮಾಸಿಕ ರೂ. 37,900 ರಿಂದ ರೂ. 70,850 ಶ್ರೇಣಿಯಲ್ಲಿ ವೇತನ ನೀಡಲಾಗುತ್ತದೆ.

ವಯೋಮಾನ :
ದಿನಾಂಕ 01/04/2020ಕ್ಕೆ ಅಭ್ಯರ್ಥಿಯು ಕನಿಷ್ಠ 21 ವರ್ಷ ಪೂರೈಸಿರಬೇಕು ಹಾಗೂ,
ಪ.ಜಾತಿ/ಪ.ಪಂ/ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ ಗರಿಷ್ಠ 32 ವರ್ಷ,
ಇತರೆ ಅಭ್ಯರ್ಥಿಗಳಿಗೆ ಗರಿಷ್ಠ 30 ವರ್ಷ ನಿಗದಿಪಡಿಸಲಾಗಿದೆ.

ನಿಗದಿಪಡಿಸಿರುವ ಶೈಕ್ಷಣಿಕ ಅರ್ಹತೆ :
ಅಭ್ಯರ್ಥಿಗಳು ಯು.ಜಿ.ಸಿ ಇಂದ ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ ಪದವಿ ಅಥವಾ ತತ್ಸಮಾನ ಶೈಕ್ಷಣಿಕ ಅರ್ಹತೆಯನ್ನು ದಿನಾಂಕ 01/04/2020ಕ್ಕೆ ಹೊಂದಿರಬೇಕು.

ಉದ್ಯೋಗ ಮಾಹಿತಿ : ಕರ್ನಾಟಕ ರಾಜ್ಯ ಆಡಳಿತ ನ್ಯಾಯಮಂಡಳಿ ಕಛೇರಿಯಲ್ಲಿ ಉದ್ಯೋಗ

ಆಯ್ಕೆ ವಿಧಾನ :
ಸಹಿಷ್ಣುತೆ ಪರೀಕ್ಷೆ, ದೇಹದಾರ್ಢ್ಯತೆ ಪರೀಕ್ಷೆ, ಲಿಖಿತ ಪರೀಕ್ಷೆ ಹಾಗೂ ವೈದ್ಯಕೀಯ ಪರೀಕ್ಷೆ ನಡೆಸಿ ಅಭ್ಯರ್ಥಿಗಳನ್ನು ಹುದ್ದೆಗಳಿಗೆ ಆಯ್ಕೆ ಮಾಡಲಾಗುತ್ತದೆ

KSP Recruitment 2021 : ಕರ್ನಾಟಕ ಪೊಲೀಸ್ ಇಲಾಖೆಯಲ್ಲಿ ಖಾಲಿಯಿರುವ ಪೊಲೀಸ್ ಸಬ್‌ ಇನ್ಸ್‌ಪೆಕ್ಟರ್ (ಸಿವಿಲ್) ಹುದ್ದೆಗೆ ಅರ್ಜಿ ಸಲ್ಲಿಕೆಯ ವಿಧಾನ :
• ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್‌ಲೈನ್‌ ಮೂಲಕವೇ ಅರ್ಜಿಯನ್ನು ಸಲ್ಲಿಸಬೇಕು.
• ಅಭ್ಯರ್ಥಿಗಳು ಕರ್ನಾಟಕ ಪೊಲೀಸ್ ಇಲಾಖೆಯ ಅಧಿಕೃತ ವೆಬ್‌ಸೈಟ್ ವಿಳಾಸಕ್ಕೆ ಭೇಟಿ ನೀಡಿ, ಆನ್‌ಲೈನ್‌ ಅರ್ಜಿಯಲ್ಲಿ ಹುದ್ದೆಗೆ ಅಗತ್ಯವಿರುವ ಎಲ್ಲಾ ಮಾಹಿತಿಯನ್ನು ಭರ್ತಿ ಮಾಡಿ ( ಉದಾಹರಣೆಗೆ : ಅಭ್ಯರ್ಥಿಯ ಹೆಸರು, ವಿದ್ಯಾರ್ಹತೆ, ಇಮೇಲ್ ವಿಳಾಸ ಇತ್ಯಾದಿ) ನಂತರ ನಿಗದಿತ ಅರ್ಜಿ ಶುಲ್ಕ ಪಾವತಿಸಿ ಅರ್ಜಿಯನ್ನು ಸಲ್ಲಿಸಬೇಕು.

ನಿಗದಿತ ಅರ್ಜಿ ಶುಲ್ಕದ ವಿವರ :
• ಸಾಮಾನ್ಯ ವರ್ಗ, ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ ರೂ. 500
• ಎಸ್ಸಿ, ಎಸ್ಟಿ, ಪ್ರವರ್ಗ 1ರ ಅಭ್ಯರ್ಥಿಗಳಿಗೆ ರೂ. 250

ಶುಲ್ಕ ಪಾವತಿಸುವ ವಿಧಾನ :
ನಿಗದಿತ ಶುಲ್ಕವನ್ನು ನಗದು ರೂಪದಲ್ಲಿ ಅಥವಾ ಆನ್‌ಲೈನ್‌ ಮೂಲಕ ಸ್ಥಳೀಯ ಅಂಚೆ ಕಛೇರಿಗಳಲ್ಲಿ ಅಥವಾ ಹೆಚ್.ಡಿ.ಎಫ್.ಸಿ ಬ್ಯಾಂಕಿನ ಅಧಿಕೃತ ಶಾಖೆಗಳಲ್ಲಿ ಪಾವತಿಸಬೇಕು

ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿರುವ ದಿನಾಂಕದ ವಿವರ :
ಅರ್ಜಿ ಸಲ್ಲಿಕೆಗೆ ಪ್ರಾರಂಭದ ದಿನಾಂಕ : ಜನವರಿ 22, 2021
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ : ಫೆಬ್ರುವರಿ 22, 2021
ಶುಲ್ಕ ಪಾವತಿಸಲು ಕೊನೆಯ ದಿನಾಂಕ : ಫೆಬ್ರುವರಿ 24, 2021

ಅಧಿಸೂಚನೆ : Click Here
ಅರ್ಜಿ ಸಲ್ಲಿಸಿ : Click Here

ಕೊನೆಯ ಪದಗಳು :
ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.