KSP Recruitment 2022 – Apply Online for 71 Armed Reserve Sub Inspector of Police Post

KSP Recruitment 2022 : ಕರ್ನಾಟಕ ಪೊಲೀಸ್ ಇಲಾಖೆಯಲ್ಲಿ ಅಗತ್ಯವಿರುವ ಸಶಸ್ತ್ರ ಮೀಸಲು ಪೊಲೀಸ್ ಸಬ್‌ ಇನ್ಸ್‌ಪೆಕ್ಟರ್ (ಸಿಎಆರ್/ಡಿಎಆರ್) (ಪುರುಷ) ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ವೇತನ, ಆಯ್ಕೆ ವಿಧಾನ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

KSP Recruitment 2022 : Details of Vacancies

ಹುದ್ದೆ : ಸಶಸ್ತ್ರ ಮೀಸಲು ಪೊಲೀಸ್ ಸಬ್‌ ಇನ್ಸ್‌ಪೆಕ್ಟರ್ (ಸಿಎಆರ್/ಡಿಎಆರ್) (ಪುರುಷ)

ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಕರ್ನಾಟಕದಲ್ಲಿ ಕರ್ತವ್ಯ ನಿರ್ವಹಿಸಬೇಕು.

ಖಾಲಿಯಿರುವ ಹುದ್ದೆಗಳ ಸಂಖ್ಯೆ : ಒಟ್ಟು 71 ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ವೇತನ : ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 37,900 ರಿಂದ ರೂ. 70,850 ಶ್ರೇಣಿಯಲ್ಲಿ ವೇತನ ನೀಡಲಾಗುತ್ತದೆ.

ವಯೋಮಾನ : ದಿನಾಂಕ 27 ಡಿಸೆಂಬರ್, 2022ಕ್ಕೆ ಅಭ್ಯರ್ಥಿಗೆ ಕನಿಷ್ಠ 21 ವರ್ಷ ವಯಸ್ಸಾಗಿರಬೇಕು ಹಾಗೂ ಪ.ಜಾತಿ/ಪ.ಪಂ/ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ ಗರಿಷ್ಠ 28 ವರ್ಷ, ಇತರೆ ಅಭ್ಯರ್ಥಿಗಳಿಗೆ ಗರಿಷ್ಠ 26 ವರ್ಷ ನಿಗದಿಪಡಿಸಲಾಗಿದೆ.

ನಿಗದಿಪಡಿಸಿರುವ ಶೈಕ್ಷಣಿಕ ಅರ್ಹತೆ : ಯು.ಜಿ.ಸಿ ಇಂದ ಮಾನ್ಯತೆ ಪಡೆದಿರುವ ಅಂಗೀಕೃತ ವಿಶ್ವವಿದ್ಯಾಲಯದಲ್ಲಿ ಪದವಿ ಅಥವಾ ತತ್ಸಮಾನ ಪದವಿಯನ್ನು ಅರ್ಜಿ ಸಲ್ಲಿಸಲು ನಿಗದಿಪಡಿಸಿರುವ ಕೊನೆಯ ದಿನಾಂಕ, ಅಂದರೆ 27/01/2022ಕ್ಕೆ ಹೊಂದಿರಬೇಕು.

ಉದ್ಯೋಗ ಮಾಹಿತಿ : ಜಿಲ್ಲಾ ನ್ಯಾಯಾಲಯದಲ್ಲಿ ನೇರ ನೇಮಕಾತಿ 2021-22

ಆಯ್ಕೆ ವಿಧಾನ : ಸಹಿಷ್ಣುತೆ ಪರೀಕ್ಷೆ, ದೇಹದಾರ್ಢ್ಯತೆ ಪರೀಕ್ಷೆ, ಲಿಖಿತ ಪರೀಕ್ಷೆ ಹಾಗೂ ವೈದ್ಯಕೀಯ ಪರೀಕ್ಷೆ ನಡೆಸಿ ಅಭ್ಯರ್ಥಿಗಳನ್ನು ಹುದ್ದೆಗೆ ಆಯ್ಕೆ ಮಾಡಲಾಗುತ್ತದೆ.

ಕರ್ನಾಟಕ ಪೊಲೀಸ್ ಇಲಾಖೆಯಲ್ಲಿ ಖಾಲಿಯಿರುವ ಹುದ್ದೆಗೆ ಅರ್ಜಿ ಸಲ್ಲಿಕೆಯ ವಿಧಾನ :
• ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್‌ಲೈನ್‌ ಮೂಲಕವೇ ಅರ್ಜಿಯನ್ನು ಸಲ್ಲಿಸಬೇಕು.
• ಅಭ್ಯರ್ಥಿಗಳು ಕರ್ನಾಟಕ ಪೊಲೀಸ್ ಇಲಾಖೆಯ ಅಧಿಕೃತ ವೆಬ್‌ಸೈಟ್ ವಿಳಾಸಕ್ಕೆ ಭೇಟಿ ನೀಡಿ, ಆನ್‌ಲೈನ್‌ ಅರ್ಜಿಯಲ್ಲಿ ಹುದ್ದೆಗೆ ಅಗತ್ಯವಿರುವ ಎಲ್ಲಾ ಮಾಹಿತಿಯನ್ನು ಭರ್ತಿ ಮಾಡಿ ( ಉದಾಹರಣೆಗೆ : ಅಭ್ಯರ್ಥಿಯ ಹೆಸರು, ವಿದ್ಯಾರ್ಹತೆ, ಇಮೇಲ್ ವಿಳಾಸ ಇತ್ಯಾದಿ) ನಂತರ ನಿಗದಿತ ಅರ್ಜಿ ಶುಲ್ಕ ಪಾವತಿಸಿ ಅರ್ಜಿಯನ್ನು ಸಲ್ಲಿಸಬೇಕು.

ನಿಗದಿತ ಅರ್ಜಿ ಶುಲ್ಕದ ವಿವರ :
• ಸಾಮಾನ್ಯ ವರ್ಗ, ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ ರೂ. 500
• ಎಸ್ಸಿ, ಎಸ್ಟಿ, ಪ್ರವರ್ಗ 1ರ ಅಭ್ಯರ್ಥಿಗಳಿಗೆ ರೂ. 250

ಶುಲ್ಕ ಪಾವತಿಸುವ ವಿಧಾನ : ನಿಗದಿತ ಶುಲ್ಕವನ್ನು ನಗದು ಅಥವಾ ಆನ್‌ಲೈನ್‌ ರೂಪದಲ್ಲಿ ಸ್ಥಳೀಯ ಅಂಚೆ ಕಛೇರಿಗಳಲ್ಲಿ ಅಥವಾ ಹೆಚ್.ಡಿ.ಎಫ್.ಸಿ ಬ್ಯಾಂಕಿನ ಅಧಿಕೃತ ಶಾಖೆಗಳಲ್ಲಿ ಪಾವತಿಸಬೇಕು

ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿರುವ ದಿನಾಂಕದ ವಿವರ :
ಅರ್ಜಿ ಸಲ್ಲಿಕೆಗೆ ಪ್ರಾರಂಭದ ದಿನಾಂಕ : ಡಿಸೆಂಬರ್ 28, 2021
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ : ಜನವರಿ 27, 2022
ಶುಲ್ಕ ಪಾವತಿಸಲು ಕೊನೆಯ ದಿನಾಂಕ : ಜನವರಿ 29, 2022

KSP Recruitment 2022 : Important Links

ಅಧಿಸೂಚನೆ : Click Here
ಅರ್ಜಿ ಸಲ್ಲಿಸಿ : Click Here

ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.

Leave a Comment