KSP Scientific Officer Recruitment 2022 – Apply Online for 16 Posts

KSP Scientific Officer Recruitment 2022 : ನ್ಯಾಯ ವಿಜ್ಞಾನ ಪ್ರಯೋಗಾಲಯ ಮತ್ತು ಪ್ರಾದೇಶಿಕ ನ್ಯಾಯ ವಿಜ್ಞಾನ ಪ್ರಯೋಗಾಲಯ ಘಟಕಗಳಲ್ಲಿ ಖಾಲಿ ಇರುವ ವೈಜ್ಞಾನಿಕ ಅಧಿಕಾರಿಗಳು ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ವೇತನ, ಆಯ್ಕೆ ವಿಧಾನ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

KSP Scientific Officer Recruitment 2022 : Details of Vacancies

ಹುದ್ದೆ : ವೈಜ್ಞಾನಿಕ ಅಧಿಕಾರಿಗಳು

ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಕರ್ನಾಟಕದಲ್ಲಿ ಕೆಲಸ ನಿರ್ವಹಿಸಬೇಕು.

ಖಾಲಿಯಿರುವ ಹುದ್ದೆಗಳ ಸಂಖ್ಯೆ : ಒಟ್ಟು 16 ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ವೇತನ : ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 40,900 ರಿಂದ ರೂ. 78,200 ಶ್ರೇಣಿಯಲ್ಲಿ ವೇತನ ನೀಡಲಾಗುತ್ತದೆ.

ವಯೋಮಾನ : ದಿನಾಂಕ 28 ಜನವರಿ, 2022ಕ್ಕೆ ಅಭ್ಯರ್ಥಿಗೆ ಕನಿಷ್ಠ 21 ವರ್ಷ ವಯಸ್ಸಾಗಿರಬೇಕು ಹಾಗೂ ಪ.ಜಾತಿ/ಪ.ಪಂ/ಪ್ರವರ್ಗ1 ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷ, ಒಬಿಸಿ ಅಭ್ಯರ್ಥಿಗಳಿಗೆ ಗರಿಷ್ಠ 38 ವರ್ಷ, ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ಗರಿಷ್ಠ 35 ವರ್ಷ ನಿಗದಿಪಡಿಸಲಾಗಿದೆ.

ನಿಗದಿಪಡಿಸಿರುವ ಶೈಕ್ಷಣಿಕ ಅರ್ಹತೆ : ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗಿ ಆಯಾ ವಿಭಾಗಕ್ಕೆ ಸಂಬಂಧಿಸಿದ ವಿಷಯಗಳಲ್ಲಿ ಸ್ನಾತಕೋತ್ತರ ಪದವಿ ಶೈಕ್ಷಣಿಕ ಅರ್ಹತೆ ಹೊಂದಿರಬೇಕು. (ವಿದ್ಯಾರ್ಹತೆಗೆ ಸಂಬಂಧಿಸಿದ ಸಂಪೂರ್ಣ ಮಾಹಿತಿ ಅಧಿಸೂಚನೆಯಲ್ಲಿ ನೀಡಲಾಗಿದೆ)

ಉದ್ಯೋಗ ಮಾಹಿತಿ : ಕರ್ನಾಟಕ ಪೊಲೀಸ್ ಇಲಾಖೆಯಿಂದ ಸಶಸ್ತ್ರ ಮೀಸಲು ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ಆಯ್ಕೆ ವಿಧಾನ : ಲಿಖಿತ ಪರೀಕ್ಷೆಯಲ್ಲಿ ಪಡೆದ ಅಂಕಗಳ ಆಧಾರದ ಮೇಲೆ ಅಭ್ಯರ್ಥಿಗಳನ್ನು ಹುದ್ದೆಗೆ ಆಯ್ಕೆ ಮಾಡಲಾಗುತ್ತದೆ

ವೈಜ್ಞಾನಿಕ ಅಧಿಕಾರಿಗಳು ಹುದ್ದೆಗೆ ಅರ್ಜಿ ಸಲ್ಲಿಕೆಯ ವಿಧಾನ :
• ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್‌ಲೈನ್‌ ಮೂಲಕವೇ ಅರ್ಜಿಯನ್ನು ಸಲ್ಲಿಸಬೇಕು.
• ಅಭ್ಯರ್ಥಿಗಳು ಕರ್ನಾಟಕ ಪೊಲೀಸ್ ಇಲಾಖೆಯ ಅಧಿಕೃತ ವೆಬ್‌ಸೈಟ್ ವಿಳಾಸಕ್ಕೆ ಭೇಟಿ ನೀಡಿ, ಆನ್‌ಲೈನ್‌ ಅರ್ಜಿಯಲ್ಲಿ ಹುದ್ದೆಗೆ ಅಗತ್ಯವಿರುವ ಎಲ್ಲಾ ಮಾಹಿತಿಯನ್ನು ಭರ್ತಿ ಮಾಡಿ ( ಉದಾಹರಣೆಗೆ : ಅಭ್ಯರ್ಥಿಯ ಹೆಸರು, ವಿದ್ಯಾರ್ಹತೆ, ಇಮೇಲ್ ವಿಳಾಸ ಇತ್ಯಾದಿ) ನಂತರ ನಿಗದಿತ ಅರ್ಜಿ ಶುಲ್ಕ ಪಾವತಿಸಿ ಅರ್ಜಿಯನ್ನು ಸಲ್ಲಿಸಬೇಕು.

ನಿಗದಿತ ಅರ್ಜಿ ಶುಲ್ಕದ ವಿವರ :
• ಸಾಮಾನ್ಯ ವರ್ಗ, ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ ರೂ. 250 (ಪ್ರತಿ ವಿಭಾಗಕ್ಕೆ)
• ಎಸ್ಸಿ, ಎಸ್ಟಿ, ಪ್ರವರ್ಗ 1ರ ಅಭ್ಯರ್ಥಿಗಳಿಗೆ ರೂ. 100 (ಪ್ರತಿ ವಿಭಾಗಕ್ಕೆ)

ಶುಲ್ಕ ಪಾವತಿಸುವ ವಿಧಾನ : ನಿಗದಿತ ಶುಲ್ಕವನ್ನು ನಗದು ಅಥವಾ ಆನ್‌ಲೈನ್‌ ರೂಪದಲ್ಲಿ ಸ್ಥಳೀಯ ಅಂಚೆ ಕಛೇರಿಗಳಲ್ಲಿ ಅಥವಾ ಹೆಚ್.ಡಿ.ಎಫ್.ಸಿ ಬ್ಯಾಂಕಿನ ಅಧಿಕೃತ ಶಾಖೆಗಳಲ್ಲಿ ಪಾವತಿಸಬೇಕು.

ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿರುವ ದಿನಾಂಕದ ವಿವರ :
ಅರ್ಜಿ ಸಲ್ಲಿಕೆಗೆ ಪ್ರಾರಂಭದ ದಿನಾಂಕ : ಡಿಸೆಂಬರ್ 30, 2021
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ : ಜನವರಿ 28, 2022
ಶುಲ್ಕ ಪಾವತಿಸಲು ಕೊನೆಯ ದಿನಾಂಕ : ಜನವರಿ 31, 2022

KSP Scientific Officer Recruitment 2022 : Important Links

ಅಧಿಸೂಚನೆ : Click Here
ಅರ್ಜಿ ಸಲ್ಲಿಸಿ : Click Here

ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.

Leave a Comment