KSRTC Driver Recruitment 2023 : ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗಳಲ್ಲಿ ಖಾಲಿಯಿರುವ ಡ್ರೈವರ್, ಕಂಡಕ್ಟರ್ ಹುದ್ದೆಗಳ ಭರ್ತಿಗೆ ಶೀಘ್ರದಲ್ಲೇ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗುವುದು. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.
KSRTC Driver Recruitment 2023 : Details of Vacancies
ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗಳಲ್ಲಿ ಪ್ರಥಮ ಹಂತದಲ್ಲಿ 6,500 ಚಾಲನಾ ಸಿಬ್ಬಂದಿ ಹಾಗೂ 300 ತಾಂತ್ರಿಕ ಸಿಬ್ಬಂದಿ ನೇಮಕಕ್ಕೆ ಸರ್ಕಾರ ಅನುಮತಿ ನೀಡಿದೆ. ಸಾರಿಗೆ ಸಂಸ್ಥೆಗಳಲ್ಲಿ 2016ರಲ್ಲಿ ನಡೆದ ನೇಮಕಾತಿ ನಂತರ ಯಾವುದೇ ನೇಮಕಾತಿ ಆಗಿರಲಿಲ್ಲ. ಈ ಸಂಬಂಧ 4 ಸಾರಿಗೆ ಸಂಸ್ಥೆಗಳಲ್ಲಿ 2016 ರಿಂದ ಈವರೆಗೆ ಸಿಬ್ಬಂದಿ ನಿವೃತ್ತಿ ಹಾಗೂ ಇತರ ಕಾರಣಗಳಿಂದ 13,669 ಖಾಲಿ ಹುದ್ದೆಗಳಿದ್ದವು. ಈ ಬಗ್ಗೆ 13,000 ಚಾಲನಾ ಮತ್ತು ತಾಂತ್ರಿಕ ಸಿಬ್ಬಂದಿ ನೇಮಕಾತಿಗೆ ಸಾರಿಗೆ ಸಂಸ್ಥೆಗಳಿಗೆ ಅನುಮತಿ ನೀಡುವಂತೆ ಸರ್ಕಾರವನ್ನು ಕೋರಲಾಗಿತ್ತು. ಸರ್ಕಾರ ಮೊದಲ ಹಂತವಾಗಿ 6,800 ಸಿಬ್ಬಂದಿ ನೇಮಕಕ್ಕೆ ಒಪ್ಪಿಗೆ ನೀಡಿದೆ.
ಶೀಘ್ರದಲ್ಲೇ ಆಯ್ಕೆ ಪಟ್ಟಿ ಪ್ರಕಟ : ಕೆಎಸ್‌ಆರ್‌ಟಿಸಿಯಲ್ಲಿ ಈಗಾಗಲೆ 1619 ಚಾಲನಾ ಸಿಬ್ಬಂದಿ ನೇಮಕಾತಿ ಪ್ರಕ್ರಿಯೆ ಆರಂಭವಾಗಿದ್ದು, ಚಾಲನಾ ಪರೀಕ್ಷೆ ನಡೆಯುತ್ತಿದೆ. 2024 ಜನವರಿ ಕೊನೆಯಲ್ಲಿ ಅಂತಿಮ ಆಯ್ಕೆಪಟ್ಟಿ ಬಿಡುಗಡೆಗೊಳ್ಳಲಿದೆ. ಕೆಕೆಆರ್‌ಟಿಸಿಯಲ್ಲಿ 300 ಕಂಡಕ್ಟರ್‌ಗಳ ನೇಮಕಾತಿಗೆ ಅನುಮತಿ ದೊರಕಿದ್ದು, ಅಧಿಸೂಚನೆ ಹೊರಡಿಸುವ ಹಂತದಲ್ಲಿದೆ.
ಹುದ್ದೆ : ಡ್ರೈವರ್ ಕಮ್ ಕಂಡಕ್ಟರ್, ಕಂಡಕ್ಟರ್, ತಾಂತ್ರಿಕ ಸಿಬ್ಬಂದಿ
ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಕರ್ನಾಟಕದಲ್ಲಿ ಕರ್ತವ್ಯ ನಿರ್ವಹಿಸಬೇಕು.
ಖಾಲಿಯಿರುವ ಹುದ್ದೆಗಳ ಸಂಖ್ಯೆ : ಒಟ್ಟು 8719 ಹುದ್ದೆಗಳು ಖಾಲಿ ಇದೆ. ಈಗಾಗಲೇ 1619 ಚಾಲನಾ ಸಿಬ್ಬಂದಿಗಳ ನೇಮಕಾತಿ ಪ್ರಕ್ರಿಯೆ ಆರಂಭವಾಗಿದ್ದು, ಶೀಘ್ರದಲ್ಲೇ ಅಂತಿಮ ಆಯ್ಕೆ ಪಟ್ಟಿ ಪ್ರಕಟವಾಗಲಿದೆ.
ಹುದ್ದೆ | ಹುದ್ದೆಗಳ ಸಂಖ್ಯೆ |
KSRTC – ಡ್ರೈವರ್ ಕಮ್ ಕಂಡಕ್ಟರ್ | 2000 |
ತಾಂತ್ರಿಕ ಸಿಬ್ಬಂದಿ | 300 |
NWKRTC – ಡ್ರೈವರ್ ಕಮ್ ಕಂಡಕ್ಟರ್ | 2000 |
BMTC – ಕಂಡಕ್ಟರ್ | 2500 |
ಉದ್ಯೋಗ ಮಾಹಿತಿ : ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ನೇಮಕಾತಿ 2023
ವಯೋಮಾನ :
• ಸಾಮಾನ್ಯ ಅಭ್ಯರ್ಥಿಗಳಿಗೆ – ಗರಿಷ್ಠ 35 ವರ್ಷ
• ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ – ಗರಿಷ್ಠ 38 ವರ್ಷ
• ಎಸ್ಸಿ, ಎಸ್ಟಿ, ಪ್ರ1ರ ಅಭ್ಯರ್ಥಿಗಳಿಗೆ – ಗರಿಷ್ಠ 40 ವರ್ಷ
ಅರ್ಜಿ ಸಲ್ಲಿಕೆಯ ವಿಧಾನ : ಈ ಹುದ್ದೆಗೆ ಅರ್ಜಿ ಸಲ್ಲಿಸಲು ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗುವುದು.
ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿದ ದಿನಾಂಕದ ವಿವರ :
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ಶೀಘ್ರದಲ್ಲೇ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಪ್ರಾರಂಭವಾಗಲಿದೆ
KSRTC Driver Recruitment 2023 : Important Links
ಪ್ರಕಟಣೆ | CLICK HERE |
Telegram Join Link | Click Here |
WhatsApp Channel Link | Click Here |
ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.