KSRTC Employees Credit Cooperative Society Recruitment 2023 : ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ನೌಕರರ ಕ್ರೆಡಿಟ್ ಸಹಕಾರ ಸಂಘ ನಿಯಮಿತ, ಬೆಂಗಳೂರು ಇದರಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಶೈಕ್ಷಣಿಕ ಅರ್ಹತೆ, ವಯೋಮಾನ, ವೇತನ, ಅರ್ಜಿ ಸಲ್ಲಿಕೆ ದಿನಾಂಕ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.
KSRTC Employees Credit Cooperative Society Recruitment 2023 : Details of Vacancies
ಹುದ್ದೆ : ಸಿಬ್ಬಂದಿ ಮೇಲ್ವಿಚಾರಕರು, ಲೆಕ್ಕಪತ್ರ ಮೇಲ್ವಿಚಾರಕ, ಪ್ರಥಮ ದರ್ಜೆ ಸಹಾಯಕರು, ದ್ವಿತೀಯ ದರ್ಜೆ ಸಹಾಯಕರು, ಕಛೇರಿ ಸಹಾಯಕರು
ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳು ಬೆಂಗಳೂರಿನಲ್ಲಿ ಕೆಲಸ ನಿರ್ವಹಿಸಬೇಕು.
ಖಾಲಿಯಿರುವ ಹುದ್ದೆಗಳ ಸಂಖ್ಯೆ : ಒಟ್ಟು 39 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.
ಹುದ್ದೆ | ಹುದ್ದೆಗಳ ಸಂಖ್ಯೆ | ವೇತನ |
ಸಿಬ್ಬಂದಿ ಮೇಲ್ವಿಚಾರಕರು | 2 | 33450-62600 |
ಲೆಕ್ಕಪತ್ರ ಮೇಲ್ವಿಚಾರಕ | 1 | 33450-62600 |
ಪ್ರಥಮ ದರ್ಜೆ ಸಹಾಯಕರು | 7 | 27650-52650 |
ದ್ವಿತೀಯ ದರ್ಜೆ ಸಹಾಯಕರು | 18 | 21400-42000 |
ಕಛೇರಿ ಸಹಾಯಕರು | 11 | 18600-32600 |
ಶೈಕ್ಷಣಿಕ ಅರ್ಹತೆ :
• ಸಿಬ್ಬಂದಿ ಮೇಲ್ವಿಚಾರಕರು & ಪ್ರಥಮ ದರ್ಜೆ ಸಹಾಯಕರು – ರಾಜ್ಯದ ಯಾವುದೇ ಅಂಗೀಕೃತ ವಿಶ್ವವಿದ್ಯಾಲಯದಿಂದ ಪದವಿ ಪಡೆದಿರಬೇಕು. ಕಂಪ್ಯೂಟರ್ ಆಪರೇಷನ್ ಮತ್ತು ಅಪ್ಲಿಕೇಷನ್ ಜ್ಞಾನ ಹೊಂದಿರಬೇಕು. ಕನ್ನಡ ಓದಲು, ಬರೆಯಲು ಬರತಕ್ಕದ್ದು.
• ಲೆಕ್ಕಪತ್ರ ಮೇಲ್ವಿಚಾರಕ – ರಾಜ್ಯದ ಯಾವುದೇ ಅಂಗೀಕೃತ ವಿಶ್ವವಿದ್ಯಾಲಯದಿಂದ ವಾಣಿಜ್ಯ ವಿಷಯದಲ್ಲಿ ಪದವಿ ಪಡೆದಿರಬೇಕು. ಕಂಪ್ಯೂಟರ್ ಆಪರೇಷನ್ ಮತ್ತು ಅಪ್ಲಿಕೇಷನ್ ಜ್ಞಾನದ ಜೊತೆಗೆ ಟ್ಯಾಲಿ ಕೋರ್ಸ್ ತೇರ್ಗಡೆ ಪ್ರಮಾಣ ಪತ್ರ ಹೊಂದಿರಬೇಕು.
• ದ್ವಿತೀಯ ದರ್ಜೆ ಸಹಾಯಕರು – ದ್ವಿತೀಯ ಪಿಯುಸಿಯಲ್ಲಿ ಉತ್ತೀರ್ಣರಾಗಿರಬೇಕು. ಕಂಪ್ಯೂಟರ್ ಆಪರೇಷನ್ ಮತ್ತು ಅಪ್ಲಿಕೇಷನ್ ಜ್ಞಾನ ಹೊಂದಿರಬೇಕು. ಕನ್ನಡ ಓದಲು, ಬರೆಯಲು ಬರತಕ್ಕದ್ದು.
• ಕಛೇರಿ ಸಹಾಯಕರು – ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ತೇರ್ಗಡೆ. ಕನ್ನಡ ಭಾಷೆಯನ್ನು ಒಂದು ವಿಷಯವನ್ನಾಗಿ ಓದಿರಬೇಕು.
ವಯೋಮಾನ : ಅರ್ಜಿ ಸಲ್ಲಿಸುವ ದಿನಕ್ಕೆ ಅಭ್ಯರ್ಥಿಗಳು ಕನಿಷ್ಠ 18 ವರ್ಷ ಪೂರೈಸಿರಬೇಕು.
• ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ – ಗರಿಷ್ಠ 35 ವರ್ಷ
• ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ – ಗರಿಷ್ಠ 38 ವರ್ಷ
• ಪ.ಜಾತಿ/ ಪ.ವರ್ಗ/ ಹಿಂದುಳಿದ ವರ್ಗಗಳ ಪ್ರವರ್ಗ1ರ ಅಭ್ಯರ್ಥಿಗಳಿಗೆ – ಗರಿಷ್ಠ 40 ವರ್ಷ
ಉದ್ಯೋಗ ಮಾಹಿತಿ : ಕರ್ನಾಟಕ ಅಂಚೆ ವೃತ್ತದಲ್ಲಿ ಬೃಹತ್ ನೇಮಕಾತಿ 2023
ಆಯ್ಕೆ ವಿಧಾನ : ಲಿಖಿತ ಪರೀಕ್ಷೆ ಹಾಗೂ ಸಂದರ್ಶನ ಮೂಲಕ ಅಭ್ಯರ್ಥಿಗಳನ್ನು ಹುದ್ದೆಗಳಿಗೆ ನೇಮಕ ಮಾಡಲಾಗುವುದು.
ಅರ್ಜಿ ಸಲ್ಲಿಕೆಯ ವಿಧಾನ : ಅಭ್ಯರ್ಥಿಯು ಆಫ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಮೊದಲು ಸಂಘವು ಹೊರಡಿಸಿರುವ ಪ್ರಕಟಣೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 1 : ಅಭ್ಯರ್ಥಿಗಳು ಸಂಘದ ಪ್ರಧಾನ ಕಛೇರಿಗೆ ಭೇಟಿ ನೀಡಿ ರೂ. 500 ಪಾವತಿಸಿ ಅರ್ಜಿ ನಮೂನೆ ಪಡೆದುಕೊಳ್ಳಬೇಕು.
ಹಂತ 2 : ಅರ್ಜಿ ನಮೂನೆಯಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಪುನಃ ಒಮ್ಮೆ ಪರಿಶೀಲಿಸಿ.
ಹಂತ 3 : Application ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಲಗತ್ತಿಸಲು ಸೂಚಿಸಿದ್ದರೆ, ಅವುಗಳನ್ನು ಲಗತ್ತಿಸಿ, ಭರ್ತಿ ಮಾಡಿದ ಅರ್ಜಿಯನ್ನು ಈ ಕೆಳಗಡೆ ನೀಡಲಾದ ಕಚೇರಿಯ ವಿಳಾಸಕ್ಕೆ ಸಲ್ಲಿಸಬೇಕು.
ಅರ್ಜಿ ಸಲ್ಲಿಸುವ ವಿಳಾಸ : ಮುಖ್ಯಕಾರ್ಯನಿರ್ವಾಹಣಾಧಿಕಾರಿಗಳು
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ನೌಕರರ ಕ್ರೆಡಿಟ್ ಸಹಕಾರ ಸಂಘ ನಿ. ಕೆ.ಹೆಚ್ ರಸ್ತೆ, ಶಾಂತಿನಗರ, ಬೆಂಗಳೂರು – 560027
ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿರುವ ದಿನಾಂಕದ ವಿವರ :
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ಜನವರಿ 28, 2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಫೆಬ್ರವರಿ 07, 2023
KSRTC Employees Credit Cooperative Society Recruitment 2023 : Important Links
NOTIFICATION | CLICK HERE |
Telegram Join Link | Click Here |
ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.
It’s good job