KSSCL Recruitment 2022 : ಕರ್ನಾಟಕ ರಾಜ್ಯ ಬೀಜ ನಿಗಮ ನಿಯಮಿತದಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ವೇತನ, ಅರ್ಜಿ ಶುಲ್ಕ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.
KSSCL Recruitment 2022 : Details of Vacancies
ಹುದ್ದೆ : ಸಹಾಯಕ ವ್ಯವಸ್ಥಾಪಕರು (ಕಾರ್ಯಾಚರಣೆ), ಹಿರಿಯ ಸಹಾಯಕರು, ಕಿರಿಯ ಸಹಾಯಕರು, ಬೀಜ ಸಹಾಯಕರು
ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಕರ್ನಾಟಕದಲ್ಲಿ ಕೆಲಸ ನಿರ್ವಹಿಸಬೇಕು.
ಖಾಲಿಯಿರುವ ಹುದ್ದೆಗಳ ಸಂಖ್ಯೆ : ಒಟ್ಟು 32 ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.
ಹುದ್ದೆ | ಹುದ್ದೆಗಳ ಸಂಖ್ಯೆ | ವೇತನ |
ಸಹಾಯಕ ವ್ಯವಸ್ಥಾಪಕರು | 16 | 40900-78200 |
ಹಿರಿಯ ಸಹಾಯಕರು | 1 | 27650-52650 |
ಕಿರಿಯ ಸಹಾಯಕರು | 9 | 21400-42000 |
ಬೀಜ ಸಹಾಯಕರು | 6 | 21400-42000 |
ಶೈಕ್ಷಣಿಕ ಅರ್ಹತೆ :
ಸಹಾಯಕ ವ್ಯವಸ್ಥಾಪಕರು (ಕಾರ್ಯಾಚರಣೆ) ಹುದ್ದೆಗೆ ಬಿಎಸ್ಸಿ (ಕೃಷಿ) ಪದವಿಯನ್ನು ಮಾನ್ಯತೆ ಪಡೆದ ಕೃಷಿ ವಿಶ್ವವಿದ್ಯಾಲಯ ಅಥವಾ ಐಸಿಎಆರ್ ಅಥವಾ ಎಐಸಿಟಿಇ ಯ ಮಾನ್ಯತೆ ಹೊಂದಿರುವ ಕಾನೂನಿನನ್ವಯ ಸ್ಥಾಪಿತವಾದ ಇತರೇ ಯಾವುದೇ ವಿಶ್ವವಿದ್ಯಾಲಯದಿಂದ ಪದವಿಯನ್ನು ಹೊಂದಿರಬೇಕು. |
ಹಿರಿಯ ಹಾಗೂ ಕಿರಿಯ ಸಹಾಯಕರು ಹುದ್ದೆಗೆ ಭಾರತದಲ್ಲಿ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಬಿ.ಕಾಂ / ಬಿಬಿಎಂ ಪದವಿಯನ್ನು ಹೊಂದಿರಬೇಕು ಜೊತೆಗೆ ಟ್ಯಾಲಿ ಸರ್ಟಿಫಿಕೇಟ್ ಹೊಂದಿರಬೇಕು. |
ಬೀಜ ಸಹಾಯಕರು ಹುದ್ದೆಗೆ ಕೃಷಿಯಲ್ಲಿ 2 ವರ್ಷದ ಡಿಪ್ಲೊಮಾ (ಕೃಷಿ)ಯನ್ನು ಮಾನ್ಯತೆ ಪಡೆದ ಕೃಷಿ ವಿಶ್ವವಿದ್ಯಾಲಯದಿಂದ ಹೊಂದಿರಬೇಕು. |
ವಯೋಮಾನ : ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕಕ್ಕೆ ಅಭ್ಯರ್ಥಿಗಳು ಕನಿಷ್ಠ 18 ವರ್ಷ ಪೂರೈಸಿರಬೇಕು ಹಾಗೂ,
ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ಗರಿಷ್ಠ 35 ವರ್ಷ
ಎಸ್ಸಿ, ಎಸ್ಟಿ, ಪ್ರವರ್ಗ 1 ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷ
ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ ಗರಿಷ್ಠ 38 ವರ್ಷ
ಆಯ್ಕೆ ವಿಧಾನ : ಸಹಾಯಕ ವ್ಯವಸ್ಥಾಪಕರು ಹುದ್ದೆಗೆ ಸ್ಪರ್ಧಾತ್ಮಕ ಪರೀಕ್ಷೆ ಹಾಗೂ ಸಂದರ್ಶನ ನಡೆಸಿ ಆಯ್ಕೆ ಮಾಡಲಾಗುವುದು. ಉಳಿದ ಹುದ್ದೆಗಳಿಗೆ ಸ್ಪರ್ಧಾತ್ಮಕ ಪರೀಕ್ಷೆ ಮೂಲಕ ಆಯ್ಕೆ ಮಾಡಲಾಗುವುದು.
ಉದ್ಯೋಗ ಮಾಹಿತಿ : ಆದೇಶ ಜಾರಿಕಾರ ಮತ್ತು ಜವಾನ ಹುದ್ದೆಗಳ ನೇರ ನೇಮಕಾತಿ
ಕರ್ನಾಟಕ ರಾಜ್ಯ ಬೀಜ ನಿಗಮ ನಿಯಮಿತದಲ್ಲಿ ಖಾಲಿಯಿರುವ ಹುದ್ದೆಗೆ ಅರ್ಜಿ ಸಲ್ಲಿಕೆಯ ವಿಧಾನ :
• ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕವೇ ಅರ್ಜಿಯನ್ನು ಸಲ್ಲಿಸಬೇಕು.
• ಅಭ್ಯರ್ಥಿಗಳು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಅಧಿಕೃತ ವೆಬ್‌ಸೈಟ್ ವಿಳಾಸಕ್ಕೆ ಭೇಟಿ ನೀಡಿ, ಆನ್‌ಲೈನ್ ಅರ್ಜಿಯಲ್ಲಿ ಹುದ್ದೆಗೆ ಅಗತ್ಯವಿರುವ ಎಲ್ಲಾ ಮಾಹಿತಿಯನ್ನು ಭರ್ತಿ ಮಾಡಿ ( ಉದಾಹರಣೆಗೆ : ಅಭ್ಯರ್ಥಿಯ ಹೆಸರು, ವಿದ್ಯಾರ್ಹತೆ, ಇಮೇಲ್ ವಿಳಾಸ ಇತ್ಯಾದಿ) ನಂತರ ನಿಗದಿತ ಅರ್ಜಿ ಶುಲ್ಕ ಪಾವತಿಸಿ ಅರ್ಜಿಯನ್ನು ಸಲ್ಲಿಸಬೇಕು
ನಿಗದಿತ ಅರ್ಜಿ ಶುಲ್ಕದ ವಿವರ :
ಸಾಮಾನ್ಯ ವರ್ಗದ ಅಭ್ಯರ್ಥಿಗಳು ರೂ. 750
ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳು ರೂ. 500
ಮಾಜಿ ಸೈನಿಕ ಅಭ್ಯರ್ಥಿಗಳು ರೂ. 250
ಎಸ್ಸಿ, ಎಸ್ಟಿ, ಪ್ರ 1, ಅಂಗವಿಕಲ ಅಭ್ಯರ್ಥಿಗಳು ರೂ. 250
ಶುಲ್ಕ ಪಾವತಿಸುವ ವಿಧಾನ : ಅರ್ಜಿ ಶುಲ್ಕವನ್ನು ಯಾವುದೇ ಇ-ಅಂಚೆ ಕಛೇರಿಯ ಮೂಲಕ ಪಾವತಿಸಬೇಕು.
ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿದ ದಿನಾಂಕದ ವಿವರ :
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ಜೂನ್ 22, 2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಜುಲೈ 20, 2022
ಶುಲ್ಕ ಪಾವತಿಸಲು ಕೊನೆಯ ದಿನಾಂಕ : ಜುಲೈ 25, 2022
KSSCL Recruitment 2022 : Important Links
Notification | Click Here |
Apply Online | Click Here |
ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.