ಕರ್ನಾಟಕ ರಾಜ್ಯ ಸಹಕಾರ ಪಟ್ಟಣ ಬ್ಯಾಂಕುಗಳ ಮಹಾಮಂಡಳ ನಿಯಮಿತ ನೇಮಕಾತಿ 2024 – Kubfed Recruitment 2024

Kubfed Recruitment 2024 : ಕರ್ನಾಟಕ ರಾಜ್ಯ ಸಹಕಾರ ಪಟ್ಟಣ ಬ್ಯಾಂಕುಗಳ ಮಹಾಮಂಡಳದಲ್ಲಿ ಖಾಲಿ ಇರುವ ಉಪ ಮುಖ್ಯಕಾರ್ಯನಿರ್ವಹಣಾಧಿಕಾರಿ ಹುದ್ದೆಯ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಶೈಕ್ಷಣಿಕ ಅರ್ಹತೆ, ವಯೋಮಾನ, ವೇತನ, ಅರ್ಜಿ ಸಲ್ಲಿಕೆ ದಿನಾಂಕ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

Kubfed Recruitment 2024 : Details of Vacancies

ಹುದ್ದೆ : ಉಪ ಮುಖ್ಯಕಾರ್ಯನಿರ್ವಹಣಾಧಿಕಾರಿ

ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳು ಬೆಂಗಳೂರಿನಲ್ಲಿ ಕೆಲಸ ನಿರ್ವಹಿಸಬೇಕು.

ಖಾಲಿಯಿರುವ ಹುದ್ದೆಗಳ ಸಂಖ್ಯೆ : ಒಟ್ಟು 01 ಹುದ್ದೆಯ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.

ಶೈಕ್ಷಣಿಕ ಅರ್ಹತೆ : ಅಂಗೀಕೃತ ವಿಶ್ವವಿದ್ಯಾಲಯದಿಂದ ಎಂ.ಬಿ.ಎ. ಅಥವಾ ಎಂ.ಸಿ.ಎ ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾಗಿರಬೇಕು.

ಉದ್ಯೋಗ ಮಾಹಿತಿ : ಜಿಲ್ಲಾ ನ್ಯಾಯಾಲಯದಲ್ಲಿ ನೇರ ನೇಮಕಾತಿ 2024

ವಯೋಮಾನ : ಅಭ್ಯರ್ಥಿಗಳು ಕನಿಷ್ಠ 18 ವರ್ಷ ಪೂರೈಸಿರಬೇಕು ಹಾಗೂ ಗರಿಷ್ಠ 38 ವರ್ಷ ಮೀರಿರಬಾರದು.

ವೇತನ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 40,900 – ರೂ. 78,200 ಶ್ರೇಣಿಯಲ್ಲಿ ವೇತನ ನೀಡಲಾಗುತ್ತದೆ.

ಆಯ್ಕೆ ವಿಧಾನ : ಲಿಖಿತ ಪರೀಕ್ಷೆ ಹಾಗೂ ಸಂದರ್ಶನ ನಡೆಸಿ ಅಭ್ಯರ್ಥಿಗಳನ್ನು ಹುದ್ದೆಗಳಿಗೆ ಆಯ್ಕೆ ಮಾಡಲಾಗುವುದು.

ಅನುಭವ : ಕನಿಷ್ಠ 4 ವರ್ಷ ಬ್ಯಾಂಕಿಂಗ್ ಕ್ಷೇತ್ರದ ಅನುಭವ ಹೊಂದಿರಬೇಕು.

ಅರ್ಜಿ ಸಲ್ಲಿಕೆಯ ವಿಧಾನ : ಅಭ್ಯರ್ಥಿಯು ಈ ಹುದ್ದೆಗೆ ಆಫ್‌ಲೈನ್‌ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು.
ಹಂತ 1 : ಆಫ್‌ಲೈನ್‌ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 2 : ಇಲಾಖೆಯ ವೆಬ್‌ಸೈಟ್ ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ ಅಪ್ಲಿಕೇಷನ್ ಫಾರ್ಮ್ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಪ್ಲಿಕೇಷನ್ ಡೌನ್ಲೋಡ್ ಮಾಡಿಕೊಳ್ಳಿ.
ಹಂತ 3 : ಅಪ್ಲಿಕೇಷನ್ ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಪುನಃ ಒಮ್ಮೆ ಪರಿಶೀಲಿಸಿ.
ಹಂತ 4 : ಅಪ್ಲಿಕೇಷನ್ ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಲಗತ್ತಿಸಲು ಸೂಚಿಸಿದ್ದರೆ, ಅವುಗಳನ್ನು ಲಗತ್ತಿಸಿ (ಅಗತ್ಯವಿದ್ದರೆ ಮಾತ್ರ).
ಹಂತ 5 : ಕೊನೆಯದಾಗಿ, ಅಭ್ಯರ್ಥಿಯು ಡಿ.ಡಿ. ಮೂಲಕ ಶುಲ್ಕ ಪಾವತಿಸಿ, ಭರ್ತಿ ಮಾಡಿದ ಅರ್ಜಿಯನ್ನು ಈ ಕೆಳಗಡೆ ನೀಡಲಾದ ಕಚೇರಿಯ ವಿಳಾಸಕ್ಕೆ ಅಂಚೆ ಮೂಲಕ ಅಥವಾ ಖುದ್ದಾಗಿ ಹಾಜರಾಗಿ ಸಲ್ಲಿಸಬೇಕು.

ಅರ್ಜಿ ಸಲ್ಲಿಸುವ ವಿಳಾಸ : ಕರ್ನಾಟಕ ರಾಜ್ಯ ಸಹಕಾರ ಪಟ್ಟಣ ಬ್ಯಾಂಕುಗಳ ಮಹಾಮಂಡಳ ನಿ., ನಂ. 132, ಕೆ.ಎಚ್.ರಸ್ತೆ, ಬೆಂಗಳೂರು – 560027

ನಿಗದಿತ ಅರ್ಜಿ ಶುಲ್ಕದ ವಿವರ : ಅಭ್ಯರ್ಥಿಗಳು ರೂ. 2,000 ಡಿ.ಡಿ.ಯನ್ನು ಕರ್ನಾಟಕ ರಾಜ್ಯ ಸಹಕಾರ ಪಟ್ಟಣ ಬ್ಯಾಂಕುಗಳ ಮಹಾಮಂಡಳ ನಿ. ಬೆಂಗಳೂರು ಹೆಸರಿನಲ್ಲಿ ಸಲ್ಲಿಸಬೇಕು.

ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿರುವ ದಿನಾಂಕದ ವಿವರ :
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ಜನವರಿ 03, 2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಜನವರಿ 20, 2024

Kubfed Recruitment 2024 : Important Links

NOTIFICATION & APPLICATION FORMCLICK HERE
Telegram Join Link Click Here
WhatsApp Channel Link Click Here

ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.

Leave a Comment