KUIDFC Recruitment 2021 – Apply Online for 30 DEO, Accountant Post

KUIDFC Recruitment 2021 : ಕರ್ನಾಟಕ ನಗರ ಮೂಲಸೌಕರ್ಯ ಅಭಿವೃದ್ದಿ ಮತ್ತು ಹಣಕಾಸು ನಿಗಮದಲ್ಲಿ ಅಗತ್ಯವಿರುವ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ವೇತನ, ಅರ್ಜಿ ಶುಲ್ಕ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

KUIDFC Recruitment 2021 : Details of Vacancies

ಹುದ್ದೆ : ಅಧೀಕ್ಷಕರ ಅಭಿಯಂತರರು, ಕಾರ್ಯನಿರ್ವಾಹಕ ಅಭಿಯಂತರರು, ಸಹಾಯಕ ಪ್ರಧಾನ ವ್ಯವಸ್ಥಾಪಕರು, ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು, ಸಾರ್ವಜನಿಕ ಸಂಪರ್ಕ ಅಧಿಕಾರಿ, ಸಹಾಯಕ ಅಭಿಯಂತರರು, ಲೆಕ್ಕಪತ್ರ ಅಧೀಕ್ಷಕರು, ಲೆಕ್ಕಿಗ, ಲೆಕ್ಕ ಸಹಾಯಕರು, ಡೇಟಾ ಎಂಟ್ರಿ ಆಪರೇಟರ್/ಕಂಪ್ಯೂಟರ್ ಆಪರೇಟರ್.

ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಕರ್ನಾಟಕದಲ್ಲಿ ಕರ್ತವ್ಯ ನಿರ್ವಹಿಸಬೇಕು.

ಖಾಲಿಯಿರುವ ಹುದ್ದೆಗಳ ಸಂಖ್ಯೆ : ಒಟ್ಟು 30 ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.

ವೇತನ :

ಹುದ್ದೆವೇತನವಯೋಮಾನ (ಗರಿಷ್ಠ)
ಅಧೀಕ್ಷಕರ ಅಭಿಯಂತರರು1,08,85262 ವರ್ಷ
ಕಾರ್ಯನಿರ್ವಾಹಕ ಅಭಿಯಂತರರು83,24462 ವರ್ಷ
ಸಹಾಯಕ ಪ್ರಧಾನ ವ್ಯವಸ್ಥಾಪಕರು77,20662 ವರ್ಷ
ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು77,20662 ವರ್ಷ
ಸಾರ್ವಜನಿಕ ಸಂಪರ್ಕ ಅಧಿಕಾರಿ66,51245 ವರ್ಷ
ಸಹಾಯಕ ಅಭಿಯಂತರರು63,31145 ವರ್ಷ
ಲೆಕ್ಕಪತ್ರ ಅಧೀಕ್ಷಕರು60,11045 ವರ್ಷ
ಲೆಕ್ಕಿಗ55,64555 ವರ್ಷ
ಲೆಕ್ಕ ಸಹಾಯಕರು40,73140 ವರ್ಷ
ಡೇಟಾ ಎಂಟ್ರಿ ಆಪರೇಟರ್31,63740 ವರ್ಷ

ಶೈಕ್ಷಣಿಕ ಅರ್ಹತೆ : ಅಭ್ಯರ್ಥಿಗಳು ಆಯಾ ಹುದ್ದೆಗಳಿಗೆ ಅನುಗುಣವಾಗಿ ದ್ವಿತೀಯ ಪಿಯುಸಿ/ ಪದವಿ/ ಸ್ನಾತಕೋತ್ತರ ಪದವಿ/ ಇಂಜಿನಿಯರಿಂಗ್ ಪದವಿ ವಿದ್ಯಾರ್ಹತೆ ಹೊಂದಿರಬೇಕು.

ಅನುಭವ : ಆಯಾ ಹುದ್ದೆಗಳಿಗೆ ಅಭ್ಯರ್ಥಿಗಳು ಇಲಾಖೆ ನಿಗದಿಪಡಿಸಿದ ಕನಿಷ್ಠ ಅನುಭವ ಹೊಂದಿರಬೇಕು.

ಹುದ್ದೆಯ ವಿಧ : ಈ ಎಲ್ಲಾ ಹುದ್ದೆಗಳಿಗೆ ಅಭ್ಯರ್ಥಿಗಳನ್ನು 2 ವರ್ಷಗಳಿಗೆ ಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಲಾಗುವುದು, ವರ್ಷವಾರು ಉದ್ಯೋಗಿಯ ಕಾರ್ಯಕ್ಷಮತೆಯನ್ನಾಧರಿಸಿ ಗುತ್ತಿಗೆ ಅವಧಿಯನ್ನು ಮುಂದುವರಿಸಲಾಗುವುದು.

ಆಯ್ಕೆ ವಿಧಾನ : ವಿದ್ಯಾರ್ಹತೆ, ಮೆರಿಟ್, ಅನುಭವದ ಆಧಾರದ ಮೇಲೆ ಮೌಖಿಕ ಸಂದರ್ಶನ ನಡೆಸಿ ಅಭ್ಯರ್ಥಿಗಳನ್ನು ಹುದ್ದೆಗಳಿಗೆ ಆಯ್ಕೆ ಮಾಡಲಾಗುವುದು.

ಉದ್ಯೋಗ ಮಾಹಿತಿ : ಶಿವಮೊಗ್ಗ ಜಿಲ್ಲಾ ನ್ಯಾಯಾಲಯದಲ್ಲಿ ನೇಮಕಾತಿ 2021

ಕರ್ನಾಟಕ ನಗರ ಮೂಲಸೌಕರ್ಯ ಅಭಿವೃದ್ಧಿ ಮತ್ತು ಹಣಕಾಸು ನಿಗಮದಲ್ಲಿ ಖಾಲಿಯಿರುವ ಹುದ್ದೆಗೆ ಅರ್ಜಿ ಸಲ್ಲಿಕೆಯ ವಿಧಾನ :
• ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್‌ಲೈನ್‌ ಮೂಲಕವೇ ಅರ್ಜಿಯನ್ನು ಸಲ್ಲಿಸಬೇಕು.
• ಅಭ್ಯರ್ಥಿಗಳು ನಿಗಮದ ಅಧಿಕೃತ ವೆಬ್‌ಸೈಟ್ ವಿಳಾಸಕ್ಕೆ ಭೇಟಿ ನೀಡಿ, ಆನ್‌ಲೈನ್‌ ಅರ್ಜಿಯಲ್ಲಿ ಹುದ್ದೆಗೆ ಅಗತ್ಯವಿರುವ ಎಲ್ಲಾ ಮಾಹಿತಿಯನ್ನು ಭರ್ತಿ ಮಾಡಿ ( ಉದಾಹರಣೆಗೆ : ಅಭ್ಯರ್ಥಿಯ ಹೆಸರು, ವಿದ್ಯಾರ್ಹತೆ, ಇಮೇಲ್ ವಿಳಾಸ ಇತ್ಯಾದಿ) ನಂತರ ನಿಗದಿತ ಅರ್ಜಿ ಶುಲ್ಕ ಪಾವತಿಸಿ ಅರ್ಜಿಯನ್ನು ಸಲ್ಲಿಸಬೇಕು

ನಿಗದಿತ ಅರ್ಜಿ ಶುಲ್ಕದ ವಿವರ : ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.

ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿದ ದಿನಾಂಕದ ವಿವರ :
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ಡಿಸೆಂಬರ್ 15, 2021
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಡಿಸೆಂಬರ್ 31, 2021

KUIDFC Recruitment 2021 : Important Links

ಅಧಿಸೂಚನೆ : Click Here
ಅರ್ಜಿ ಸಲ್ಲಿಸಿ : Click Here

ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.

Leave a Comment