Library Supervisor Recruitment 2021 – Apply Now Various Post

Library Supervisor Recruitment 2021 : ಶಿವಮೊಗ್ಗ ಜಿಲ್ಲೆಯ ವಿವಿಧ ಗ್ರಾಮ ಪಂಚಾಯ್ತಿ ಗ್ರಂಥಾಲಯದಲ್ಲಿ ಖಾಲಿ ಇರುವ ಹುದ್ದೆಯ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ವೇತನ, ಅರ್ಜಿ ಸಲ್ಲಿಕೆ ದಿನಾಂಕ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

Library Supervisor Recruitment 2021 : Details of Vacancies

ಹುದ್ದೆ : ಗ್ರಂಥಾಲಯ ಮೇಲ್ವಿಚಾರಕರು

ಕರ್ತವ್ಯ ಸ್ಥಳ : ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲ್ಲೂಕು ಬಾಂಡ್ಯಕುಕ್ಕೆ, ಹೊಸನಗರ ತಾಲ್ಲೂಕು ರಿಪ್ಪನಪೇಟೆ, ಭದ್ರಾವತಿ ತಾಲ್ಲೂಕು ಸಿಂಗನಮನೆ, ಸಾಗರ ತಾಲ್ಲೂಕು ತುಮರಿ ಗ್ರಾಮ ಪಂಚಾಯಿತಿ ಗ್ರಂಥಾಲಯಗಳಿಗೆ ಗ್ರಂಥಾಲಯ ಮೇಲ್ವಿಚಾರಕರನ್ನು ನೇಮಕ ಮಾಡಿಕೊಳ್ಳಲಾಗುತ್ತಿದೆ.

ಶೈಕ್ಷಣಿಕ ಅರ್ಹತೆ : ಅಭ್ಯರ್ಥಿಯು ಎಸ್.ಎಸ್.ಎಲ್.ಸಿ ಯಲ್ಲಿ ಉತ್ತೀರ್ಣರಾಗಿರಬೇಕು.

ವಯೋಮಾನ : ಅಭ್ಯರ್ಥಿಯು 18 ವರ್ಷ ವಯಸ್ಸನ್ನು ಪೂರೈಸಿರಬೇಕು ಹಾಗೂ ಗರಿಷ್ಠ 40 ವರ್ಷ ಮೀರಿರಬಾರದು.

ವೇತನ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 12,000 ಗೌರವಧನ ನೀಡಲಾಗುತ್ತದೆ.

ಉದ್ಯೋಗ ಮಾಹಿತಿ : ಜಿಲ್ಲಾ ನ್ಯಾಯಾಲಯದಲ್ಲಿ ನೇಮಕಾತಿ 2021

ಗ್ರಾಮ ಪಂಚಾಯ್ತಿ ಗ್ರಂಥಾಲಯದಲ್ಲಿ ಖಾಲಿಯಿರುವ ಹುದ್ದೆಗೆ ಅರ್ಜಿ ಸಲ್ಲಿಕೆಯ ವಿಧಾನ :
• ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಕಛೇರಿಗೆ ಖುದ್ದಾಗಿ ಹಾಜರಾಗಿ ಅರ್ಜಿಯನ್ನು ಸಲ್ಲಿಸಬೇಕು.
• ಅಭ್ಯರ್ಥಿಗಳು ಹುದ್ದೆ ಖಾಲಿಯಿರುವ ಗ್ರಾಮ ಪಂಚಾಯಿತಿ ಕಛೇರಿಗೆ ಭೇಟಿ ನೀಡಿ, ಅರ್ಜಿ ನಮೂನೆಯನ್ನು ಪಡೆದು, ನಂತರ ಅರ್ಜಿ ನಮೂನೆಯಲ್ಲಿ ಹುದ್ದೆಗೆ ಅಗತ್ಯವಿರುವ ಎಲ್ಲಾ ಮಾಹಿತಿಯನ್ನು ಭರ್ತಿ ಮಾಡಿ ( ಉದಾಹರಣೆಗೆ : ಅಭ್ಯರ್ಥಿಯ ಹೆಸರು, ವಿದ್ಯಾರ್ಹತೆ, ಇಮೇಲ್ ವಿಳಾಸ ಇತ್ಯಾದಿ) ಅಗತ್ಯ ದಾಖಲೆಗಳೊಂದಿಗೆ ಕಛೇರಿಗೆ ಸಲ್ಲಿಸಬೇಕು.

ಅರ್ಜಿ ಶುಲ್ಕ : ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.

ಇತರೆ ಮಾಹಿತಿ : ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಆಯಾ ಗ್ರಾಮ ಪಂಚಾಯಿತಿ ಸ್ಥಳೀಯ ನಿವಾಸಿಗಳಾಗಿರತಕ್ಕದ್ದು. ತೀರ್ಥಹಳ್ಳಿ ತಾಲ್ಲೂಕು ಬಾಂಡ್ಯಕುಕ್ಕೆ (ಪರಿಶಿಷ್ಟ ಜಾತಿ ಗ್ರಾಮೀಣ ಅಭ್ಯರ್ಥಿ), ಹೊಸನಗರ ತಾಲ್ಲೂಕು ರಿಪ್ಪನಪೇಟೆ (ಸಾಮಾನ್ಯ ಅಭ್ಯರ್ಥಿ), ಭದ್ರಾವತಿ ತಾಲ್ಲೂಕು ಸಿಂಗನಮನೆ (ಸಾಮಾನ್ಯ ಅಭ್ಯರ್ಥಿ), ಸಾಗರ ತಾಲ್ಲೂಕು ತುಮರಿ (ಸಾಮಾನ್ಯ ಅಭ್ಯರ್ಥಿ). ಈ ಮೇಲ್ವಿಚಾರಕರ ಹುದ್ದೆಯು ಪರಿಶಿಷ್ಟ ಜಾತಿ (ಗ್ರಾಮೀಣ) ಹಾಗೂ ಸಾಮಾನ್ಯ ಅಭ್ಯರ್ಥಿಗೆ ಮೀಸಲಾಗಿರುತ್ತದೆ. ಈ ಮೀಸಲಾತಿಗೆ ಒಳಪಡುವ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸತಕ್ಕದ್ದು.

ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿದ ದಿನಾಂಕದ ವಿವರ :
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ನವೆಂಬರ್ 10, 2021
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಡಿಸೆಂಬರ್ 08, 2021

Library Supervisor Recruitment 2021 : Important Links

ಪ್ರಕಟಣೆ : Click Here

ಹೆಚ್ಚಿನ ಮಾಹಿತಿಗಾಗಿ ಸಂಬಂಧಿಸಿದ ಗ್ರಾಮ ಪಂಚಾಯಿತಿ ಕಾರ್ಯಾಲಯ ಅಥವಾ ಉಪನಿರ್ದೇಶಕರ ಕಚೇರಿ, ಜಿಲ್ಲಾ ಕೇಂದ್ರ ಗ್ರಂಥಾಲಯ, ಶಿವಮೊಗ್ಗ ಇವರನ್ನು ಸಂಪರ್ಕಿಸಬಹುದು.

ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.

Leave a Comment