Library Supervisor Recruitment 2022 – ಗ್ರಂಥಾಲಯ ಮೇಲ್ವಿಚಾರಕ ಹುದ್ದೆಯ ಭರ್ತಿಗೆ ಅರ್ಜಿ ಆಹ್ವಾನ

Library Supervisor Recruitment 2022 : ಬಳ್ಳಾರಿ ಜಿಲ್ಲೆಯ ಕುರುಗೋಡು ಪುರಸಭೆ ಯಲ್ಲಾಪುರದ 19ನೇ ವಾರ್ಡ್ ನಲ್ಲಿ ನಿರ್ಮಿಸಿದ ಗ್ರಂಥಾಲಯ ನಿರ್ವಹಣೆಗೆ ಒಬ್ಬ ಗ್ರಂಥಾಲಯ ಮೇಲ್ವಿಚಾರಕ ಹುದ್ದೆಯ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ಅರ್ಜಿ ಸಲ್ಲಿಕೆ ದಿನಾಂಕ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

Library Supervisor Recruitment 2022 : Details of Vacancies

ಹುದ್ದೆ : ಗ್ರಂಥಾಲಯ ಮೇಲ್ವಿಚಾರಕರು

ಕರ್ತವ್ಯ ಸ್ಥಳ : ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳು ಬಳ್ಳಾರಿ ಜಿಲ್ಲೆಯ ಕುರುಗೋಡು ಪುರಸಭೆ ಯಲ್ಲಾಪುರದ 19ನೇ ವಾರ್ಡಿನಲ್ಲಿ ನಿರ್ಮಿಸಿದ ಗ್ರಂಥಾಲಯದಲ್ಲಿ ಕರ್ತವ್ಯ ನಿರ್ವಹಿಸಬೇಕು.

ಖಾಲಿಯಿರುವ ಹುದ್ದೆಗಳ ಸಂಖ್ಯೆ : ಅಗತ್ಯವಿರುವ 01 ಹುದ್ದೆಯ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.

ಶೈಕ್ಷಣಿಕ ಅರ್ಹತೆ : ಗ್ರಂಥಾಲಯ ನಿರ್ವಹಣೆಯಲ್ಲಿ ಅನುಭವ ಹೊಂದಿದ ಪದವಿ ಪೂರ್ಣಗೊಳಿಸಿರುವ ಸ್ಥಳೀಯ ಪದವೀಧರ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ಉದ್ಯೋಗ ಮಾಹಿತಿ : ಗ್ರಾಮ ಪಂಚಾಯಿತಿಯಲ್ಲಿ ಬಿಲ್ ಕಲೆಕ್ಟರ್, ಡಾಟಾ ಎಂಟ್ರಿ ಆಪರೇಟರ್, ಅಟೆಂಡರ್ ಹುದ್ದೆಯ ನೇರ ನೇಮಕಾತಿ

ಗ್ರಂಥಾಲಯ ಮೇಲ್ವಿಚಾರಕ ಹುದ್ದೆಗೆ ಅರ್ಜಿ ಸಲ್ಲಿಕೆಯ ವಿಧಾನ :
• ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಖುದ್ದಾಗಿ ಹಾಜರಾಗಿ ಅರ್ಜಿಯನ್ನು ಸಲ್ಲಿಸಬೇಕು.
• ಅಭ್ಯರ್ಥಿಗಳು ಕುರುಗೋಡು ಪುರಸಭೆ ಕಚೇರಿಗೆ ಭೇಟಿ ನೀಡಿ ಅರ್ಜಿ ನಮೂನೆಯನ್ನು ಪಡೆದು, ನಂತರ ಅರ್ಜಿ ನಮೂನೆಯಲ್ಲಿ ಹುದ್ದೆಗೆ ಅಗತ್ಯವಿರುವ ಎಲ್ಲಾ ಮಾಹಿತಿಯನ್ನು ಭರ್ತಿ ಮಾಡಿ ( ಉದಾಹರಣೆಗೆ : ಅಭ್ಯರ್ಥಿಯ ಹೆಸರು, ವಿದ್ಯಾರ್ಹತೆ, ದೂರವಾಣಿ ಸಂಖ್ಯೆ, ಇಮೇಲ್ ವಿಳಾಸ ಇತ್ಯಾದಿ) ಅಗತ್ಯ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಬೇಕು.

ಅರ್ಜಿ ಶುಲ್ಕ : ಈ ಹುದ್ದೆಗೆ ಅರ್ಜಿ ಸಲ್ಲಿಸಲು ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.

ಅರ್ಜಿಯೊಂದಿಗೆ ಸಲ್ಲಿಸಬೇಕಾದ ದಾಖಲೆಗಳು : ಎಸ್.ಎಸ್.ಎಲ್.ಸಿ ಅಂಕಪಟ್ಟಿ, ಪದವಿ ಪ್ರಮಾಣ ಪತ್ರ, ಜಾತಿ ಆದಾಯ ಪ್ರಮಾಣ ಪತ್ರ, ಇತ್ತೀಚಿನ ಪಾಸ್ ಪೋರ್ಟ್ ಅಳತೆಯ 2 ಭಾವಚಿತ್ರ, ಆಧಾರ್ ಕಾರ್ಡ್ ಗುರುತಿನ ಚೀಟಿ, ರೇಷನ್ ಕಾರ್ಡ್ ಜೆರಾಕ್ಸ್ ಪ್ರತಿ, ಬ್ಯಾಂಕ್ ಪಾಸ್ ಪುಸ್ತಕದ ಜೆರಾಕ್ಸ್ ಪ್ರತಿ ಹಾಗೂ ಇತರೆ ದಾಖಲೆಗಳನ್ನು ಸಲ್ಲಿಸಬೇಕು.

ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿದ ದಿನಾಂಕದ ವಿವರ :
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ಡಿಸೆಂಬರ್ 11, 2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಡಿಸೆಂಬರ್ 14, 2022

Library Supervisor Recruitment 2022 : Important Links

NOTIFICATION CLICK HERE
Telegram Join Link Click Here

ಹೆಚ್ಚಿನ ಮಾಹಿತಿಗಾಗಿ ಕುರುಗೋಡು ಪುರಸಭೆ ಕಚೇರಿ ಅಥವಾ ದೂರವಾಣಿ ಸಂಖ್ಯೆ 08392-263166 ಗೆ ಸಂಪರ್ಕಿಸಬಹುದು.

ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.

Leave a Comment