ಎಲ್ಐಸಿ ಹೌಸಿಂಗ್ ಫೈನಾನ್ಸ್ ಲಿಮಿಟೆಡ್ ನೇಮಕಾತಿ 2026 – LIC HFL Junior Assistant Recruitment 2026

LIC HFL Junior Assistant Recruitment 2026

LIC HFL Junior Assistant Recruitment 2026 : ಎಲ್ಐಸಿ ಹೌಸಿಂಗ್ ಫೈನಾನ್ಸ್ ಲಿಮಿಟೆಡ್ ಇದರಲ್ಲಿ ಅಗತ್ಯವಿರುವ ಜೂನಿಯರ್ ಅಸಿಸ್ಟಂಟ್ (ಜೆಎ) ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಯನ್ನು ಕರೆಯಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ವಯೋಮಾನ, ಅರ್ಜಿ ಸಲ್ಲಿಕೆ ವಿಧಾನ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

LIC HFL Junior Assistant Recruitment 2026 : Details of Vacancies

ಹುದ್ದೆ :

ಜೂನಿಯರ್ ಅಸಿಸ್ಟಂಟ್

ಕರ್ತವ್ಯ ಸ್ಥಳ :

ಹುದ್ದೆಗಳಿಗೆ ಆಯ್ಕೆಯಾಗುವ ಅರ್ಹ ಅಭ್ಯರ್ಥಿಗಳು ಭಾರತದೆಲ್ಲೆಡೆ ಕರ್ತವ್ಯ ನಿರ್ವಹಿಸಬೇಕು.

ಖಾಲಿಯಿರುವ ಹುದ್ದೆಗಳ ಸಂಖ್ಯೆ :

ಒಟ್ಟು 180 ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಕರ್ನಾಟಕದಲ್ಲಿ ಒಟ್ಟು 29 ಹುದ್ದೆಗಳು ಖಾಲಿ ಇದೆ.

ನಿಗದಿಪಡಿಸಿರುವ ಶೈಕ್ಷಣಿಕ ಅರ್ಹತೆ :

ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ ಯಾವುದೇ ಪದವಿ (ಕನಿಷ್ಠ ಸರಾಸರಿ ಶೇಕಡಾ 55% ಅಂಕಗಳೊಂದಿಗೆ) ವಿದ್ಯಾರ್ಹತೆ ಜೊತೆಗೆ ಕಂಪ್ಯೂಟರ್ ಜ್ಞಾನ ಹೊಂದಿರಬೇಕು.

ಉದ್ಯೋಗ ಮಾಹಿತಿ : ಕೆಇಎ ಇಂದ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದಲ್ಲಿ ನೇಮಕಾತಿ 2026

ವಯೋಮಿತಿ :

ದಿನಾಂಕ 01-04-2026ಕ್ಕೆ ಅಭ್ಯರ್ಥಿಗಳು ಈ ಕೆಳಗಿನಂತೆ ವಯೋಮಿತಿ ಹೊಂದಿರಬೇಕು.
• ಕನಿಷ್ಠ 21 ವರ್ಷ
• ಗರಿಷ್ಠ 30 ವರ್ಷ

ವೇತನ :

ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 38,709 ರಿಂದ ರೂ. 41,509 ವೇತನ ನೀಡಲಾಗುತ್ತದೆ.

ಆಯ್ಕೆ ವಿಧಾನ :

• ಆನ್‌ಲೈನ್‌ ಪರೀಕ್ಷೆ
• ಸಂದರ್ಶನ

ಉದ್ಯೋಗ ಮಾಹಿತಿ : ಕರ್ನಾಟಕ ಹೈಕೋರ್ಟ್ ಹೊಸ ನೇಮಕಾತಿ 2026

ಪರೀಕ್ಷಾ ಕೇಂದ್ರಗಳು :

ಬೆಂಗಳೂರು, ಮೈಸೂರು, ಹುಬ್ಬಳ್ಳಿ-ಧಾರವಾಡ, ಮಂಗಳೂರು.

ಅರ್ಜಿ ಸಲ್ಲಿಕೆಯ ವಿಧಾನ :

ಅಭ್ಯರ್ಥಿಯು ಈ ಹುದ್ದೆಗೆ ಆನ್‌ಲೈನ್‌ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು.
ಹಂತ 1 : ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 2 : ಇಲಾಖೆಯ ವೆಬ್‌ಸೈಟ್ ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ ಅಪ್ಲೈ ಆನ್‌ಲೈನ್‌ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಪ್ಲಿಕೇಷನ್ ತೆರೆದುಕೊಳ್ಳಿ.
ಹಂತ 3 : ಅಪ್ಲಿಕೇಷನ್ ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಮುಂದಿನ ಹಂತಕ್ಕೆ ತೆರಳುವ ಮುನ್ನ ಪುನಃ ಒಮ್ಮೆ ಪರಿಶೀಲಿಸಿ.
ಹಂತ 4 : ಅಪ್ಲಿಕೇಷನ್ ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಅಪ್ಲೋಡ್ ಮಾಡಲು ಸೂಚಿಸಿದ್ದರೆ, ಅವುಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಿ (ಅಗತ್ಯವಿದ್ದರೆ ಮಾತ್ರ).
ಹಂತ 5 : ಕೊನೆಯದಾಗಿ, ಅಭ್ಯರ್ಥಿಗೆ ಅರ್ಜಿ ಶುಲ್ಕ ಪಾವತಿಸಲು ಸೂಚಿಸಿದ್ದರೆ, ಶುಲ್ಕ ಪಾವತಿಸಿ ಅರ್ಜಿ ಸಲ್ಲಿಕೆ ಪೂರ್ಣಗೊಳಿಸಿ.

ನಿಗದಿತ ಅರ್ಜಿ ಶುಲ್ಕದ ವಿವರ :

ಅಭ್ಯರ್ಥಿಗಳು ರೂ. 800 ಶುಲ್ಕವನ್ನು ಪಾವತಿಸಬೇಕು.

ಶುಲ್ಕ ಪಾವತಿಸುವ ವಿಧಾನ :

ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ನೆಟ್ ಬ್ಯಾಂಕಿಂಗ್ ಮೂಲಕ ಶುಲ್ಕ ಪಾವತಿಸಬಹುದು.

ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿರುವ ದಿನಾಂಕದ ವಿವರ :

• ಅರ್ಜಿ ಸಲ್ಲಿಕೆಗೆ ಪ್ರಾರಂಭದ ದಿನಾಂಕ : ಏಪ್ರಿಲ್ 16, 2026
• ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ : ಏಪ್ರಿಲ್ 30, 2026
• ತಾತ್ಕಾಲಿಕ ಆನ್‌ಲೈನ್‌ ಪರೀಕ್ಷೆ ದಿನಾಂಕ : ಜೂನ್, 2026 (ಮೊದಲನೇ ವಾರ)

LIC HFL Recruitment 2026 : Important Links

NOTIFICATIONCLICK HERE
APPLY ONLINE CLICK HERE
Telegram Join Link Click Here
WhatsApp Group Link Click Here

ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.

WhatsApp
Telegram
Facebook

Leave a Comment